- ಸೇವಾ ಸಂಕಲ್ಪ ಅಭಿಯಾನಕ್ಕೆ ಮಾದರಿ ಹೆಜ್ಜೆ ಕುಲಶೇಖರ ಕಲ್ಪನೆ ಪರಿಸರದಲ್ಲಿ ನವೀಕೃತ ಬಸ್ ನಿಲ್ದಾಣ ಉದ್ಘಾಟನೆ
- ಮಾಡೂರು ಶ್ರೀ ಶಿವ ದುರ್ಗಾಂಬಾ ಮಠದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವ ವಿಶೇಷ ಪೂಜೆ, ಗಣಹೋಮ, ಮಹಾ ಚಂಡಿಕಾಯಾಗ, ಅಖಂಡ ಭಜನೆ ಹಾಗೂ ಅನ್ನಸಂತರ್ಪಣೆ
- ಗಾಂಧಿ ಜಯಂತಿ ಅಂಗವಾಗಿ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ವಿಶೇಷ ಕಾರ್ಯಕ್ರಮ ಗಾಂಧೀಜಿ ತತ್ವಗಳನ್ನು ಸ್ಮರಿಸಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ
- ಅ.5ರಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ
- MRPL ಸ್ಫೋಟ ಪ್ರಕರಣ: ನಿರ್ಲಕ್ಷ್ಯದ ಆರೋಪದಡಿ FIR ಗಂಭೀರ ಗಾಯಗೊಂಡ ಕಾರ್ಮಿಕ ಮನೀಶ್ ಕರ್ಕಡ ಸಾವು; ಸುತ್ತಮುತ್ತ 54 ಮನೆಗಳಿಗೆ ಹಾನಿ
- ಎಂಆರ್ಪಿಎಲ್ ಸ್ಫೋಟ: ಸ್ಥಳೀಯರ ಸುರಕ್ಷತೆಯೊಂದಿಗೆ ಯಾವುದೇ ರಾಜಿ ಬೇಡ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ, ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಿ ಕೈಗಾರಿಕೆ ಆರಂಭದ ವೇಳೆ ನೀಡಿದ ಭರವಸೆಗಳು ಅನುಷ್ಠಾನವಾಗಲಿ: ಯೋಗಿಶ್ ಶೆಟ್ಟಿ ಜಪ್ಪು
- ಎಂಆರ್ಪಿಎಲ್ನಲ್ಲಿ ಭಾರೀ ಸ್ಫೋಟ: ಎಂಟು ಮಂದಿ ಗಾಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಬೆಂಕಿ; ಓರ್ವನಿಗೆ ಶೇ.35ರಷ್ಟು ಸುಟ್ಟ ಗಾಯ
- ಎಂಆರ್ಪಿಎಲ್ ಘಟಕದಲ್ಲಿ ಭಾರೀ ಸ್ಫೋಟದ ಸದ್ದು: ಬೆಂಕಿ, ದಟ್ಟ ಹೊಗೆಯಿಂದ ಸ್ಥಳೀಯರಲ್ಲಿ ಆತಂಕ
Author: Tulunada Surya
ಮಂಗಳೂರು, ಜೂನ್ 29: ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ 2026ರ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿರುವ ಯುವವಾಹಿನಿ ಕ್ರೀಡೋತ್ಸವ–2026ರ ಆಹ್ವಾನ ಪತ್ರವನ್ನು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಕೇಂದ್ರ ಸಮಿತಿಯ ಮಾಸಿಕ ಸಭೆಯಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಕ್ರೀಡೋತ್ಸವದ ಯಶಸ್ವಿ ಆಯೋಜನೆ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಕ್ರೀಡಾಕೂಟದ ರೂಪುರೇಷೆ, ವಿವಿಧ ಸ್ಪರ್ಧೆಗಳ ಆಯೋಜನೆ, ಸ್ಪರ್ಧಿಗಳ ನೋಂದಣಿ, ಸ್ವಯಂಸೇವಕರ ಜವಾಬ್ದಾರಿಗಳು, ಆತಿಥ್ಯ ವ್ಯವಸ್ಥೆ ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ರಾಜ್ಯದ ವಿವಿಧ ಜಿಲ್ಲೆಗಳ ಯುವವಾಹಿನಿ ಘಟಕಗಳಿಂದ ನೂರಾರು ಸದಸ್ಯರು ಹಾಗೂ ಕ್ರೀಡಾಪಟುಗಳು ಕ್ರೀಡೋತ್ಸವದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಸಂಘಟನೆಯ ಸದಸ್ಯರ ನಡುವೆ ಬಾಂಧವ್ಯ ವೃದ್ಧಿ, ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವ ಹಾಗೂ ಸಂಘಟನಾ ಬಲವರ್ಧನೆಗೆ ಈ ಕ್ರೀಡೋತ್ಸವ ಸಹಕಾರಿಯಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪದಾಧಿಕಾರಿಗಳು, ವಿವಿಧ…
ಉಡುಪಿ, ಜೂನ್ 29: ಸಾರ್ವಜನಿಕ ಸ್ಥಳಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ಹೆಚ್ಚುತ್ತಿರುವ ಕುಡುಕರ ಹಾವಳಿ ನಿಯಂತ್ರಿಸಿ, ನಿರ್ಗತಿಕರಿಗೆ ಸೂಕ್ತ ಪರ್ಯಾಯ ಆಶ್ರಯ ಕಲ್ಪಿಸಬೇಕೆಂದು ಒತ್ತಾಯಿಸಿ ನಮ್ಮ ಕರ್ನಾಟಕ ಸೇನೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಉಡುಪಿ ನಗರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ಉಡುಪಿ ನಗರವು ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚುತ್ತಿರುವುದಾಗಿ ಉಲ್ಲೇಖಿಸಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಕುಡುಕರು ಹಾಗೂ ನಿರ್ಗತಿಕರ ಹಾವಳಿ ಹೆಚ್ಚಾಗಿರುವುದು ಸಾರ್ವಜನಿಕರಿಗೆ, ವಿಶೇಷವಾಗಿ ಮಹಿಳೆಯರಿಗೆ ಹಾಗೂ ಪ್ರವಾಸಿಗರಿಗೆ ತೀವ್ರ ಅಸೌಕರ್ಯ ಉಂಟುಮಾಡುತ್ತಿದೆ ಎಂದು ತಿಳಿಸಲಾಗಿದೆ. ಕುಡುಕರು ಸಾರ್ವಜನಿಕ ಸ್ಥಳಗಳಲ್ಲೇ ಮದ್ಯಪಾನ ಮಾಡಿ ಗಲಾಟೆ ನಡೆಸುವುದು, ಅಲ್ಲಿಯೇ ಮಲಗುವುದು ಮುಂತಾದ ಘಟನೆಗಳು ನಗರದ ಗೌರವಕ್ಕೆ ಧಕ್ಕೆಯಾಗುವಂತಿದ್ದು, ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕುಳಿತುಕೊಳ್ಳಲೂ ಅಸಹ್ಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಂಘಟನೆ ಆತಂಕ ವ್ಯಕ್ತಪಡಿಸಿದೆ. ಇದೇ ವೇಳೆ, ನಿರ್ಗತಿಕರು ಪರ್ಯಾಯ ಆಶ್ರಯದ ಕೊರತೆಯಿಂದ ಸಾರ್ವಜನಿಕ ಸ್ಥಳಗಳನ್ನೇ…
ಬಜಪೆ, ಜೂನ್ 29: ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ, ಕೊಳಂಬೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ನೋಟ್ ಪುಸ್ತಕ ಹಾಗೂ ಸಮವಸ್ತ್ರ ವಿತರಣಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಸರಿತಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ವಕೀಲರಾದ ವಿನೋಧರ ಪೂಜಾರಿ ಅವರ ಸಹಕಾರದೊಂದಿಗೆ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರಗಳನ್ನು ವಿತರಿಸಿ ಶಿಕ್ಷಣದ ಬಗ್ಗೆ ಮತ್ತಷ್ಟು ಆಸಕ್ತಿ ಮೂಡಿಸುವ ಪ್ರಯತ್ನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೋಲಿ ಮೆರಿನಾ ಲೈಸಾ ವಹಿಸಿದ್ದರು. ಅವರು ಮಾತನಾಡಿ, ಸಮಾಜದ ದಾನಿಗಳ ಸಹಕಾರದಿಂದ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೇರಣೆ ನೀಡುತ್ತವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಮಮತಾ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಶಾಂತರಾಮ್, ಹಳೆ ವಿದ್ಯಾರ್ಥಿಸಂಘದ ಅಧ್ಯಕ್ಷ ಜಯಂತ್, ನೃತ್ಯ ಶಿಕ್ಷಕಿ ನಿರ್ಮಲಾ, ಶಾಲಾ ಸಹಶಿಕ್ಷಕಿ ವನಿತಾ, ಸ್ಥಳೀಯ ಶಿಕ್ಷಣ ಸಮಿತಿಯ ಸದಸ್ಯರು,…
ಬ್ರಹ್ಮಾವರ: ಬಾಲ್ಕುದ್ರು–ಮಾಬುಕಳದ ನಿವಾಸಿಯಾಗಿದ್ದ ಶತಾಯುಷಿ ಸಿಲ್ವೆಸ್ಟರ್ ಡಯಾಸ್ (104) ಅವರು ಜೂನ್ 28, 2026ರಂದು ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಇವರು ನಿಧನರಾದ ರೋಸಿ ಡಯಾಸ್ ಅವರ ಪತಿಯಾಗಿದ್ದು, ಸೆಲಿನ್, ದಿವಂಗತ ರೋನಿ ಮೊನಿಸ್, ಲ್ಯೂಕಾಸ್, ಫ್ರೆಡ್ಡಿ, ಹ್ಯಾರಿ, ಐರಿನ್, ಗ್ಲಾಡಿಸ್, ಅಲ್ಬನ್, ಗ್ಲೋರಿಯಾ ಹಾಗೂ ನೆಲ್ಸನ್ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಲ್ಲದೆ ಅನೇಕ ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ 12 ಮಂದಿ ಮರಿ-ಮರಿಮೊಮ್ಮಕ್ಕಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯ ವಿವರ:ಜೂನ್ 30, 2026 (ಮಂಗಳವಾರ) ಬೆಳಿಗ್ಗೆ 10:30 ಗಂಟೆಗೆ ಮಾಬುಕಳದ “ಶಾಲೋಮ್” ನಿವಾಸದಿಂದ ಅಂತಿಮ ಯಾತ್ರೆ ಹೊರಡಲಿದ್ದು, ಬಳಿಕ ಬ್ರಹ್ಮಾವರದ ಸೇಂಟ್ ಮೇರೀಸ್ ಸಿರಿಯನ್ ಆರ್ಥಡಾಕ್ಸ್ ಚರ್ಚ್‌ನಲ್ಲಿ ಬೆಳಿಗ್ಗೆ 11:00 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ಸಂಪರ್ಕ: 95353 25866 ಭಾವಪೂರ್ಣ ಶ್ರದ್ಧಾಂಜಲಿ. 🙏
ಜೂನ್ 26: ಜನತಾದಳ (ಜಾತ್ಯತೀತ) ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಹಿಳಾ ಕಾರ್ಯಕರ್ತರ ಸಭೆಯು ಜೂನ್ 26, 2026ರಂದು ಪಡೀಲ್‌ನ ನಿಟ್ಟೆ ಎಜುಕೇಷನ್ ಟ್ರಸ್ಟ್ ಸಭಾಂಗಣದಲ್ಲಿ ಮಾಜಿ ಮಹಿಳಾ ಅಧ್ಯಕ್ಷೆ ಸುಮತಿ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಹಿಳಾ ಅಧ್ಯಕ್ಷೆ ವೀಣಾ ಶೆಟ್ಟಿ, ಪಕ್ಷ ಸಂಘಟನೆಯನ್ನು ತಳಮಟ್ಟದಲ್ಲಿ ಇನ್ನಷ್ಟು ಬಲಪಡಿಸುವ ಅಗತ್ಯವನ್ನು ಒತ್ತಿ ಹೇಳಿದರು. ಮಹಿಳೆಯರು ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದ ಅವರು, ಇದೇ ಸಂದರ್ಭದಲ್ಲಿ ಹಲವಾರು ಮಹಿಳೆಯರನ್ನು ಜನತಾದಳ (ಜಾತ್ಯತೀತ) ಪಕ್ಷಕ್ಕೆ ಸೇರ್ಪಡೆಗೊಳಿಸಿದರು.ಅಂದು ವಿಶ್ವ ತಂಬಾಕು ಮುಕ್ತ ದಿನದ ಅಂಗವಾಗಿ ಆಯೋಜಿಸಿದ್ದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ತಂಬಾಕು ಮುಕ್ತ ಸಮಾಜ ನಿರ್ಮಾಣದ ಅಗತ್ಯತೆ ಹಾಗೂ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನಡೆಯಿತು. ಆರೋಗ್ಯಕರ ಜೀವನಶೈಲಿಯ ಮಹತ್ವದ ಬಗ್ಗೆ ಕಾರ್ಯಕರ್ತರಿಗೆ ಅರಿವು ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎನ್.ಟಿ. ಪುಷ್ಪರಾಜನ್ ಉಪಸ್ಥಿತರಿದ್ದು,…
ಮಂಗಳೂರು, ಜೂನ್ 28: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ಶತಮಾನೋತ್ಸವದ ಅಂಗವಾಗಿ ಮಲ್ಲಾರು ಮಜೂರಿನ ಬದ್ರಿಯಾ ಜುಮುಅ ಮಸ್ಜಿದ್‌ನಲ್ಲಿ ಭಾನುವಾರ ಧ್ವಜಾರೋಹಣ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಬದ್ರಿಯಾ ಜುಮುಅ ಮಸ್ಜಿದ್ ಅಧ್ಯಕ್ಷ ಡಾ. ಎಂ. ಫಾರೂಕ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. “1926ರ ಜೂನ್ 26ರಂದು ಸ್ಥಾಪನೆಯಾದ ಸಮಸ್ತ ಉಲಮಾ ಸಂಘಟನೆ ಇಂದು ಶತಮಾನೋತ್ಸವವನ್ನು ಆಚರಿಸುತ್ತಿರುವುದು ಮುಸ್ಲಿಂ ಸಮುದಾಯಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಕಳೆದ ನೂರು ವರ್ಷಗಳಿಂದ ಧಾರ್ಮಿಕ ಮಾರ್ಗದರ್ಶನ, ಶೈಕ್ಷಣಿಕ ಪ್ರಗತಿ, ಸಾಮಾಜಿಕ ಸೇವೆ ಹಾಗೂ ದೇಶದ ಸರ್ವತೋಮುಖ ಅಭಿವೃದ್ಧಿಗೆ ಸಮಸ್ತ ನೀಡಿರುವ ಕೊಡುಗೆ ಅಪಾರವಾಗಿದೆ. ಇಂತಹ ಮಹತ್ವದ ಸಂಘಟನೆಯ ಶತಮಾನೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ವಿಷಯವಾಗಿದೆ” ಎಂದು ಅವರು ಹೇಳಿದರು. ಸ್ಥಳೀಯ ಖತೀಬ್ ಅಬ್ದುರ್ರಶೀದ್ ಸಖಾಫಿ ದುವಾ ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಮಸ್ತ ಮದರಸ ತಪಾಸಣಾಧಿಕಾರಿ ಹಸನ್ ಸಖಾಫಿ, ಸುನ್ನೀ ಅಧ್ಯಾಪಕರ ಒಕ್ಕೂಟದ ಉಡುಪಿ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ರಹಮಾನ್ ಸಅದಿ, ಆಡಳಿತ ಸಮಿತಿಯ ಉಪಾಧ್ಯಕ್ಷ ಹಸನಬ್ಬ…
ಉಳ್ಳಾಲ, ಜೂನ್ 28: 114 ವರ್ಷಗಳ ಸೇವಾ ಪರಂಪರೆಯನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ತನ್ನ 22ನೇ ಶಾಖೆಯನ್ನು ದೇರಳಕಟ್ಟೆಯಲ್ಲಿ ಆರಂಭಿಸುವ ಮೂಲಕ ಕರಾವಳಿ ಭಾಗದ ಬ್ಯಾಂಕಿಂಗ್ ಸೇವೆಯನ್ನು ಮತ್ತಷ್ಟು ವಿಸ್ತರಿಸಿದೆ. ಫಾದರ್ ಮುಲ್ಲರ್ಸ್ ಕಾಂಪ್ಲೆಕ್ಸ್‌ನ ನೆಲಮಹಡಿಯಲ್ಲಿ ಭಾನುವಾರ ನೂತನ ಶಾಖೆ, ಎಟಿಎಂ ಹಾಗೂ ಭದ್ರತಾ ಕೊಠಡಿಯನ್ನು ಉದ್ಘಾಟಿಸುವುದರೊಂದಿಗೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳಿಗೂ ಚಾಲನೆ ನೀಡಲಾಯಿತು. ಭದ್ರತಾ ಕೊಠಡಿಯನ್ನು ಉದ್ಘಾಟಿಸಿದ ಅರ್ಸುಲೈನ್ ಫ್ರಾನ್ಸಿಸ್ಕನ್ ಸಿಸ್ಟರ್ಸ್‌ನ ಸುಪೀರಿಯರ್ ಜನರಲ್ ಸಿ. ಮಿಲ್ಲಿ ಫೆರ್ನಾಂಡಿಸ್, ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಬ್ಯಾಂಕ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳಲ್ಲಿ ಉಳಿತಾಯದ ಸಂಸ್ಕೃತಿ ಬೆಳೆಸುವುದು, ಹಿರಿಯ ನಾಗರಿಕರಿಗೆ ಪಿಂಚಣಿ ಸೇವೆಗಳನ್ನು ಸುಲಭಗೊಳಿಸುವುದು ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಾಲ ಮತ್ತು ಉಳಿತಾಯ ಯೋಜನೆಗಳ ಮೂಲಕ ಬೆಂಬಲ ನೀಡುವುದು ಬ್ಯಾಂಕ್‌ಗಳ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು. ಎಟಿಎಂ ಕೇಂದ್ರವನ್ನು ಉದ್ಘಾಟಿಸಿದ ಫಾದರ್ ಮುಲ್ಲರ್ ಹೋಮಿಯೊಪತಿಕ್ ಕಾಲೇಜಿನ ಆಡಳಿತದಾರ ಫಾ. ನೀಲೆಶ್ ಕ್ರಾಸ್ತಾ, ಫಾದರ್…
ಉಡುಪಿ ಬ್ರಹ್ಮಾವರ, ಜೂನ್ 28: ತುಳುನಾಡಿನ ಆಚಾರ-ವಿಚಾರ, ಸಂಸ್ಕೃತಿ, ಭಾಷೆ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಂಘಟಿತ ಹೋರಾಟದ ಅಗತ್ಯವಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜಾ ಅಭಿಪ್ರಾಯಪಟ್ಟರು. ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ, ಬ್ರಹ್ಮಾವರ ಘಟಕದ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಭಾನುವಾರ ಬೆಳಿಗ್ಗೆ 10 ಗಂಟೆಗೆ ಆರೂರಿನ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಸಮೀಪದ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಅವರು ತುಳುನಾಡಿನ ಇತಿಹಾಸ, ಸಂಸ್ಕೃತಿ, ಸಂಪ್ರದಾಯ, ಹೋರಾಟದ ಉದ್ದೇಶ ಹಾಗೂ ಸಂಘಟನೆಯ ಕಾರ್ಯಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬ್ರಹ್ಮಾವರ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ತುಳುನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸೂರ್ಯ-ಚಂದ್ರರ ಶಾಲು ಹೊದಿಸಿ ನೂತನ ಪದಾಧಿಕಾರಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿ ಅಭಿನಂದಿಸಲಾಯಿತು. ಸಭೆಯಲ್ಲಿ ಬ್ರಹ್ಮಾವರ…
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 48ನೇ ವೆಲೆನ್ಸಿಯ ವಾರ್ಡಿನ ರೆಡ್ ಬಿಲ್ಡಿಂಗ್ ರೋಹನ್ ಕಾರ್ಪೋರೇಷನ್ ಹಿಂಭಾಗ ರಸ್ತೆಯ ಅಭಿವೃದ್ಧಿ ಕಾಮಗಾರಿಯು 20ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಈ ಭಾಗದಲ್ಲಿ ಸುಮಾರು 300 ಮನೆಗಳಿದ್ದು ಅವರೆಲ್ಲರ ಬಹುದಿನಗಳ ಬೇಡಿಕೆಯಂತೆ ಈ ರಸ್ತೆಯು ನಿರ್ಮಾಣವಾಗಲಿದ್ದು ಕಾಮಗಾರಿ ವೇಳೆ ಉಂಟಾಗುವ ಅಡಚಣೆಗೆ ಸಹಕರಿಸಿ ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರಾದ ಸಂದೀಪ್ ಗರೋಡಿ, ಪ್ರಮುಖರಾದ ಪ್ರಕಾಶ್ ಗರೋಡಿ, ಜೇಮ್ಸ್ ಡಿಸೋಜ, ಪ್ರವೀಣ್ ನಿಡ್ಡೆಲ್, ವರುಣ್ ರಾಜ್ ಅಂಬಟ್, ಪದ್ಮನಾಭ, ನಾಗರಾಜ್, ಕೃತಿಕ್ ಉಜ್ಜೋಡಿ, ಮನ್ವಿತ್, ಸೇರಿದಂತೆ ಪರಿಸರದ ನಿವಾಸಿಗಳು, ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.
ಮೈಸೂರು, ಜೂನ್ 28: ನಗರದ ಅಗ್ರಹಾರದ ಸಿಪಾಯಿ ಗ್ರ್ಯಾಂಡೆ ಪಬ್‌ನಲ್ಲಿ ಬಿಲ್ ಪಾವತಿ ವಿಚಾರವಾಗಿ ಆರಂಭವಾದ ವಾಗ್ವಾದ ಹಲ್ಲೆಗೆ ತಿರುಗಿದ ಘಟನೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಪಬ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲಭ್ಯ ಮಾಹಿತಿಯ ಪ್ರಕಾರ, ಬರ್ತ್‌ಡೇ ಪಾರ್ಟಿ ಆಚರಿಸಲು ಪಬ್‌ಗೆ ಬಂದಿದ್ದ ಏಳು ಮಂದಿ ಯುವಕರ ತಂಡ ಸುಮಾರು ₹15 ಸಾವಿರದ ಬಿಲ್ ಮಾಡಿತ್ತು. ಬಿಲ್ ಪಾವತಿ ವಿಚಾರದಲ್ಲಿ ಪಬ್ ಸಿಬ್ಬಂದಿ ಹಾಗೂ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಅದು ಬಳಿಕ ಕೈಕೈ ಮಿಲಾಯಿಸುವ ಮಟ್ಟಕ್ಕೆ ತಲುಪಿದೆ. ಈ ವೇಳೆ ಪಬ್‌ನ ಮ್ಯಾನೇಜರ್ ವಿನಯ್ ಅವರನ್ನು ಹೊರಗೆ ಕರೆಸಿಕೊಂಡು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಅಲ್ಲದೆ, ಹಲ್ಲೆಯ ವೇಳೆ ಅವರ ಕುತ್ತಿಗೆಯಲ್ಲಿದ್ದ ಸುಮಾರು 23 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದುಕೊಂಡಿರುವ ಆರೋಪವೂ ದಾಖಲಾಗಿದೆ. ಘಟನೆಯ ಕುರಿತು ಕೆ.ಆರ್. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
