- ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆ ಖಂಡನೀಯ: ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಉಡುಪಿ ಪತ್ರಕರ್ತರ ಸಂಘ ಆಗ್ರಹ
- ಆರೂರು ಅಡ್ಜಿಲು ಭಾಗದ ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಮೆಸ್ಕಾಂ ಒಂದು ತಿಂಗಳೊಳಗೆ ಹೊಸ ಟಿಸಿ ಅಳವಡಿಸುವ ಭರವಸೆ – ತುಳುನಾಡು ರಕ್ಷಣಾ ವೇದಿಕೆ ಆಗ್ರಹ
- ಆಗಸ್ಟ್ 23ರಂದು ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ “ಮರಿಯಾಳದ ಮಿನದನ” ಪೂರ್ವಭಾವಿ ಸಭೆ
- ₹5 ಕೋಟಿ ನಕಲಿ ಔಷಧಿ ಜಾಲ ಬಯಲು: ಫಾರ್ಮ್ಹೌಸ್ನಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗೆ ಅಧಿಕಾರಿಗಳ ದಾಳಿ ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಲೇಬಲ್ ಅಂಟಿಸಿ ಔಷಧಿಗಳ ಮರುಪ್ಯಾಕಿಂಗ್ – ಅವಧಿ ಮೀರಿದ ಔಷಧಿಗಳೂ ಪತ್ತೆ
- ಉಡುಪಿ: ತುಳುನಾಡಿನ ಸಂಸ್ಕೃತಿ, ಪರಂಪರೆ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಸೂರಜ್ ನಾಯಕ್ ಸೋನಿ
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
Author: Tulunada Surya
ಕಾಪು, ಮೇ 24: ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಉಚಿತ ಸಮಗ್ರ ಆರೋಗ್ಯ ತಪಾಸಣಾ ಶಿಬಿರವು ಮೇ 26, 2026 ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಚಂದ್ರನಗರದ ಬಟರ್ ಫ್ಲೈ ಪಾರ್ಟಿ ಹಾಲ್‌ನಲ್ಲಿ ನಡೆಯಲಿದೆ.ಶಿಬಿರದಲ್ಲಿ ಉಚಿತ ನೇತ್ರ ತಪಾಸಣೆ, ಮಧುಮೇಹ ಪರೀಕ್ಷೆ, ರಕ್ತದೊತ್ತಡ ತಪಾಸಣೆ ಹಾಗೂ ದಂತ ತಪಾಸಣೆ ಸೇವೆಗಳು ಲಭ್ಯವಿರಲಿವೆ.ಈ ಆರೋಗ್ಯ ಶಿಬಿರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವಿಕೆ ಘಟಕ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಶಿರ್ವ, ಬಟರ್ ಫ್ಲೈ ಗೆಸ್ಟ್ ಹೌಸ್ & ಪಾರ್ಟಿ ಹಾಲ್ ಚಂದ್ರನಗರ, ಗ್ರಾಮ ಪಂಚಾಯತ್ ಕುತ್ಯಾರು/ಕಳತ್ತೂರು, ಅಲಯನ್ಸ್ ಕ್ಲಬ್ ಉಡುಪಿ ರಾಯಲ್ ಹಾಗೂ ರೋಟರಿ ಕ್ಲಬ್ ಶಿರ್ವ ಇವರ ಸಹಯೋಗದಲ್ಲಿ ಆಯೋಜಿಸಲಾಗಿದೆ.ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉಚಿತ ಆರೋಗ್ಯ ಸೇವೆಯ ಪ್ರಯೋಜನ ಪಡೆದುಕೊಳ್ಳುವಂತೆ ಸಮುದಾಯ ಆರೋಗ್ಯ ಕೇಂದ್ರ ಶಿರ್ವದ ಆಡಳಿತ ವೈದ್ಯಾಧಿಕಾರಿ ಹಾಗೂ ಬಟರ್ ಫ್ಲೈ ಗೆಸ್ಟ್ ಹೌಸ್…
ಮಂಗಳೂರು, ಮೇ 23: ಉಳ್ಳಾಲ ತಾಲೂಕು ತೊಕ್ಕೊಟ್ಟು ಬಟ್ನಗರದಲ್ಲಿರುವ ನೇತಾಜಿ-ಎ ಯಲ್ಲಪ್ಪ ಮೆಮೋರಿಯಲ್ ಹಾಸ್ಪಿಟಲ್ ಎದುರಿನ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ದಿನನಿತ್ಯ ಹೆಚ್ಚುತ್ತಿರುವ ಅನಧಿಕೃತ ವಾಹನ ಪಾರ್ಕಿಂಗ್ ಸಮಸ್ಯೆಯನ್ನು ತಡೆಗಟ್ಟುವಂತೆ ಆಗ್ರಹಿಸಿ ಆಸ್ಪತ್ರೆ ಮುಖ್ಯಸ್ಥರು ಹಾಗೂ ಸಾರ್ವಜನಿಕ ಹಿತಾಸಕ್ತಿಯ ಪ್ರತಿನಿಧಿಗಳು ಶನಿವಾರ 23-05-2026 ರಂದು ಬೆಳ್ಳಿಗೆ 10 ಗಂಟೆಗೆ ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು. ಆಸ್ಪತ್ರೆಯ ಮುಖ್ಯಸ್ಥರಾದ ಪ್ರಭಾಕರ್ ಅವರು ತುಳುನಾಡ ರಕ್ಷಣಾ ವೇದಿಕೆ ಕೇಂದ್ರಿಯ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರೊಂದಿಗೆ ಪೊಲೀಸ್ ಠಾಣೆಗೆ ತೆರಳಿ ಸಮಸ್ಯೆಯ ಗಂಭೀರತೆಯನ್ನು ಅಧಿಕಾರಿಗಳ ಗಮನಕ್ಕೆ ತಂದು ಮನವಿ ಪತ್ರ ಸಲ್ಲಿಸಿದ್ದು ತೊಕ್ಕೊಟ್ಟು ಭಾಗದಲ್ಲಿರುವ ನೇತಾಜಿ-ಎ ಯಲ್ಲಪ್ಪ ಮೆಮೋರಿಯಲ್ ಹಾಸ್ಪಿಟಲ್ ಕರಾವಳಿ ಭಾಗದ ಅನೇಕ ಜನರಿಗೆ ತುರ್ತು ಹಾಗೂ ಸಾಮಾನ್ಯ ಆರೋಗ್ಯ ಸೇವೆಗಳನ್ನು ನೀಡುತ್ತಿರುವ ಪ್ರಮುಖ ಆಸ್ಪತ್ರೆಯಾಗಿದ್ದು, ಆಸ್ಪತ್ರೆ ಎದುರಿನ ಸರ್ವಿಸ್ ರಸ್ತೆಯಲ್ಲಿ ಕಾರುಗಳು, ಲಾರಿಗಳು, ಆಟೋ ರಿಕ್ಷಾಗಳು ಸೇರಿದಂತೆ ವಿವಿಧ ವಾಹನಗಳನ್ನು ನಿಯಮಬಾಹಿರವಾಗಿ ನಿಲ್ಲಿಸಲಾಗುತ್ತಿರುವುದರಿಂದ ಸಂಚಾರ ದಟ್ಟಣೆ ದಿನದಿಂದ…
“ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)” ಅದ್ದೂರಿಯಾಗಿ ತೆರೆಕಂಡಿದ್ದು, ಮಂಗಳೂರು ಸೇರಿದಂತೆ ಕರಾವಳಿಯ ವಿವಿಧ ಭಾಗಗಳಲ್ಲಿ ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರವನ್ನು ಯುವ ನಿರ್ಮಾಪಕ ಪ್ರಜ್ವಲ್ ಶೆಟ್ಟಿ ನಿರ್ಮಿಸಿದ್ದು, ಕತೆ, ಚಿತ್ರಕಥೆ ಹಾಗೂ ನಿರ್ದೇಶನವನ್ನು ಪ್ರತಿಭಾವಂತ ನಿರ್ದೇಶಕ ಕೀರ್ತನ್ ಭಂಡಾರಿ ನಿರ್ವಹಿಸಿದ್ದಾರೆ. ಕ್ರಿಕೆಟ್ ಹಿನ್ನೆಲೆಯ ಭಾವನಾತ್ಮಕ ಕಥಾವಸ್ತುವಿನೊಂದಿಗೆ ಮೂಡಿಬಂದಿರುವ ಈ ಸಿನಿಮಾ ತುಳು ಚಿತ್ರರಂಗದಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಭಾರತ್ ಸಿನಿಮಾಸ್‌ನಲ್ಲಿ ಅದ್ದೂರಿ ಬಿಡುಗಡೆ ಸಮಾರಂಭಮಂಗಳೂರಿನ ಭಾರತ್ ಸಿನಿಮಾಸ್‌ನಲ್ಲಿ ನಡೆದ ಭವ್ಯ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದೊಂದಿಗೆ ಹಲವಾರು ಗಣ್ಯರು, ಕಲಾವಿದರು, ಸಮಾಜಮುಖಿ ನಾಯಕರು ಹಾಗೂ ತುಳು ಚಿತ್ರರಂಗದ ಪ್ರಮುಖರು ಭಾಗವಹಿಸಿ ಚಿತ್ರಕ್ಕೆ ಶುಭ ಹಾರೈಸಿದರು. ದೀಪ ಬೆಳಗಿಸುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಲಾಯಿತು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಗಣ್ಯರುವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ಹಿರಿಯ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ಖ್ಯಾತ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ಉದ್ಯಮಿ ಮೈಕಲ್ ಡಿ’ಸೋಜಕಲಾ ನಿರ್ದೇಶಕ ತಮ್ಮ ಲಕ್ಷ್ಮಣ್ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ…
ಮಂಗಳೂರು, ಮೇ 23:ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಯುವ ಘಟಕದ ಅದ್ಯಕ್ಷ ಅಕ್ಷಿತ್ ಸುವರ್ಣ ನೇತ್ರತ್ವದ ನಿಯೋಗವು ಶನಿವಾರ ಮಂಗಳೂರಿನಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ, ಮಂಗಳೂರು ಮತ್ತು ಕರಾವಳಿ ಕರ್ನಾಟಕ ಭಾಗದ ಬಹುಕಾಲದ ಪ್ರಮುಖ ರೈಲ್ವೆ ಸಮಸ್ಯೆಗಳ ಕುರಿತು ಸಮಗ್ರ ಮನವಿಪತ್ರ ಸಲ್ಲಿಸಿತು. ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆಯಾದ ಪ್ರತ್ಯೇಕ “ಮಂಗಳೂರು ರೈಲ್ವೆ ವಿಭಾಗ” ರಚನೆಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿತು. ಪ್ರಸ್ತುತ ಮಂಗಳೂರು ಪಾಲಕ್ಕಾಡ್ ರೈಲ್ವೆ ವಿಭಾಗದ ಅಧೀನದಲ್ಲಿರುವುದರಿಂದ ಆಡಳಿತಾತ್ಮಕ ವಿಳಂಬಗಳು ಉಂಟಾಗುತ್ತಿದ್ದು, ಕರಾವಳಿ ಭಾಗದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರಯಾಣಿಕರ ಅಗತ್ಯತೆಗಳಿಗೆ ಸಮರ್ಪಕ ಆದ್ಯತೆ ಸಿಗುತ್ತಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಪ್ರತ್ಯೇಕ ಮಂಗಳೂರು ರೈಲ್ವೆ ವಿಭಾಗ ಸ್ಥಾಪನೆಯಾದರೆ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಸಿಗುವುದರ ಜೊತೆಗೆ ಪ್ರಯಾಣಿಕರ ಸೌಲಭ್ಯ, ಕಾರ್ಯಾಚರಣಾ ದಕ್ಷತೆ ಮತ್ತು ಹೊಸ ಯೋಜನೆಗಳ ಅನುಷ್ಠಾನ ಸುಗಮವಾಗಲಿದೆ…
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಕರ್ನಾಟಕದ ಲಕ್ಷಾಂತರ ಜನರಿಗೆ ಸುಲಭ, ವೇಗವಾದ ಹಾಗೂ ಸಮೀಪದ ನ್ಯಾಯದಾನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸಬೇಕೆಂದು ಶಾಸಕ ವೇದವ್ಯಾಸ ಕಾಮತ್ ಬಲವಾದ ಆಗ್ರಹ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಕರಾವಳಿ ಭಾಗದ ಜನರು ಸಣ್ಣ ಹಾಗೂ ಮಧ್ಯಮ ಮಟ್ಟದ ನ್ಯಾಯಾಂಗ ವಿಚಾರಗಳಿಗೂ ಬೆಂಗಳೂರಿನವರೆಗೆ ತೆರಳಬೇಕಾದ ಪರಿಸ್ಥಿತಿ ಇಂದಿಗೂ ಮುಂದುವರಿದಿದೆ. ಇದರಿಂದ ಸಾಮಾನ್ಯ ನಾಗರಿಕರು, ಬಡವರು, ರೈತರು, ಮೀನುಗಾರರು, ಕಾರ್ಮಿಕರು ಮತ್ತು ಮಹಿಳೆಯರು ಆರ್ಥಿಕ ಹಾಗೂ ಮಾನಸಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ನ್ಯಾಯದಾನ ಪ್ರಕ್ರಿಯೆ ಜನಸಾಮಾನ್ಯರಿಗೆ ಇನ್ನಷ್ಟು ಹತ್ತಿರವಾಗಬೇಕಾದರೆ ಮಂಗಳೂರಿನಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಅನಿವಾರ್ಯ” ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬೇಡಿಕೆಗೆ ಸಕಾರಾತ್ಮಕ ಸ್ಪಂದನೆ ನೀಡಿರುವುದು ಕರಾವಳಿ ಭಾಗದ ಜನರಲ್ಲಿ ಹೊಸ ಆಶಾಭರವನ್ನೂ ಮೂಡಿಸಿದೆ. ಇದು ಕೇವಲ ಆಡಳಿತಾತ್ಮಕ ನಿರ್ಧಾರವಲ್ಲ, ದೀರ್ಘಕಾಲದಿಂದ ನಡೆಯುತ್ತಿರುವ ಜನಪರ ಹೋರಾಟಕ್ಕೆ ದೊರೆತ ಗೌರವವಾಗಿದೆ ಎಂದು ಕಾಮತ್…
ಉಡುಪಿ, ಮೇ 22: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಮೀಪದ ಗರಡಿಮಜಲಿನಲ್ಲಿ ನೂತನ ಬಾವಿ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ಗುರುವಾರ ಸಂಭವಿಸಿದೆ. ಮೃತ ಕಾರ್ಮಿಕನನ್ನು ಕೊಪ್ಪಳ ಮೂಲದ ರಮೇಶ್ ಎಂದು ಗುರುತಿಸಲಾಗಿದೆ. ಘಟನೆಯ ವೇಳೆ ಇನ್ನೊಬ್ಬ ಕಾರ್ಮಿಕ ಕೂಡ ಮಣ್ಣಿನಡಿ ಸಿಲುಕಿಕೊಂಡಿದ್ದರೂ, ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿಗಳ ತಕ್ಷಣದ ಕಾರ್ಯಾಚರಣೆಯಿಂದ ಅವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಲಾಗಿದೆ ಎಂದು ತಿಳಿದು ಬಂದಿದೆ. ಮಾಹಿತಿಯ ಪ್ರಕಾರ, ಗರಡಿಮಜಲು ಪ್ರದೇಶದಲ್ಲಿ ಹೊಸ ಬಾವಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಸುಮಾರು ಏಳೆಂಟು ಅಡಿ ಆಳದ ಹೊಂಡದಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾಗ ಏಕಾಏಕಿ ಮರಳು ಹಾಗೂ ಮಣ್ಣು ಕುಸಿದಿದೆ. ಪರಿಣಾಮ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಲ್ಪೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಸ್ಥಳೀಯರು, ಪೊಲೀಸ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಮಣ್ಣು ತೆರವುಗೊಳಿಸುವ ಕಾರ್ಯಾಚರಣೆ…
ಮಂಗಳೂರು: Mangaluru City Corporation ವ್ಯಾಪ್ತಿಯ 51ನೇ ಅಳಪೆ ಉತ್ತರ ವಾರ್ಡಿನ ಕನ್ನಗುಡ್ಡೆಯ ಸಂತೋಷ್ ಅವರ ಮನೆಯ ಸಮೀಪದ ರಾಜಕಾಲುವೆ ಕುಸಿದ ಭಾಗಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿಗಾಗಿ ಸುಮಾರು ₹10 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿತು. ಕನ್ನಗುಡ್ಡೆ ಪ್ರದೇಶವು ಎತ್ತರ ಪ್ರದೇಶವಾಗಿರುವುದರಿಂದ ಮಳೆಗಾಲ ಹಾಗೂ ಪ್ರಕೃತಿಕ ವಿಕೋಪಗಳ ಸಂದರ್ಭದಲ್ಲಿ ಭೂ ಕುಸಿತ ಮತ್ತು ನೀರಿನ ಹರಿವಿನಿಂದ ಹಾನಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಮಳೆಗಾಲದ ವೇಳೆ ರಾಜಕಾಲುವೆ ಭಾಗ ಕುಸಿತಗೊಂಡು ಸಾರ್ವಜನಿಕರಿಗೆ ಹಾಗೂ ಸುತ್ತಮುತ್ತಲಿನ ಮನೆಗಳಿಗೆ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಗಳ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಆರಂಭಿಸಲಾಗುತ್ತಿದೆ. ಈ ಕಾಮಗಾರಿಯಿಂದ ರಾಜಕಾಲುವೆ ಬದಿಯ ಭೂ ಕುಸಿತ ತಡೆಯಲ್ಪಡುವುದರ ಜೊತೆಗೆ ಮಳೆ ನೀರಿನ ಸರಿಯಾದ ಹರಿವಿಗೆ ಸಹಕಾರಿಯಾಗಲಿದೆ. ಅಲ್ಲದೆ ಸುತ್ತಮುತ್ತಲಿನ ಮನೆಗಳು ಹಾಗೂ ಸಾರ್ವಜನಿಕರ ಸುರಕ್ಷತೆಗೂ ಹೆಚ್ಚಿನ ಭದ್ರತೆ ಒದಗಿಸುವ ನಿರೀಕ್ಷೆಯಿದೆ. ಸ್ಥಳೀಯರು ಈ ಅಭಿವೃದ್ಧಿ…
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಪ್ರಮಾಣದ ಮಾದಕ ವಸ್ತು ಜಾಲವನ್ನು ಹೆಬ್ಬಾಳ ಪೊಲೀಸರು ಭೇದಿಸಿದ್ದು, ಮೂವರು ವಿದೇಶಿ ಪ್ರಜೆಗಳು ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು ₹35 ಕೋಟಿ ಮೌಲ್ಯದ 17.4 ಕೆ.ಜಿ. ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಸೆನೆಗಲ್ ಮೂಲದ ಡನ್ಫಾ ಗೆರಾಲ್ಡ್, ತಾಂಜೇನಿಯಾ ಮೂಲದ ಮೆಗ್ರಾತ್, ನೈಜೀರಿಯಾ ಮೂಲದ ಒಬಿಯಾನಿಜ್ ರೀಟಾ, ಹೊಸದಿಲ್ಲಿಯ ರೀನಾ ಯಾದವ್ ಹಾಗೂ ದೆಬಾಶಿಶ್ ಬ್ಯಾನರ್ಜಿ, ಜೊತೆಗೆ ಬೆಂಗಳೂರಿನ ಧೀರಜ್, ಮೊಹಮ್ಮದ್ ಮನ್ಸೂರ್ ಮತ್ತು ಅಬ್ದುಲ್ ಸಮದ್ ಎಂದು ಗುರುತಿಸಲಾಗಿದೆ. ಪೊಲೀಸರ ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ ಬಹಿರಂಗವಾಗಿದ್ದು, ಆರೋಪಿಗಳು ಯಾರಿಗೂ ಅನುಮಾನ ಬಾರದಂತೆ ಸೀರೆ, ಇಸ್ತ್ರಿ ಟೇಬಲ್ ಮತ್ತು ಕುರ್ಚಿಗಳ ಒಳಭಾಗದಲ್ಲಿ ಎಂಡಿಎಂಎ ಕ್ರಿಸ್ಟಲ್ ಅಡಗಿಸಿ ಉಡುಗೊರೆ ಪ್ಯಾಕ್ ಮಾದರಿಯಲ್ಲಿ ಸಿದ್ಧಪಡಿಸುತ್ತಿದ್ದರು. ಬಳಿಕ ರೈಲು ಮಾರ್ಗದ ಮೂಲಕ ದಿಲ್ಲಿಯಿಂದ ಬೆಂಗಳೂರಿಗೆ ಸಾಗಿಸಿ, ನಗರದ ನಿರ್ಜನ ಪ್ರದೇಶಗಳಲ್ಲಿ ಕಾರುಗಳ ಮೂಲಕ ಮಾದಕ ವಸ್ತು ಮಾರಾಟ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಹೆಬ್ಬಾಳದ ಆನಂದನಗರದ ಬಳಿ ಮೊದಲಿಗೆ…
ಮಂಗಳೂರು: ಕಾವೂರಿನ ಮಾಲಾಡಿಕೋರ್ಟ್ ಮುಖ್ಯ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಾವೂರು ಬಂಟರ ಸಂಘದ ಬಹುನಿರೀಕ್ಷಿತ “ಬಂಟರ ಭವನ” ಜನವರಿ 20, 2027ರಂದು ಭವ್ಯವಾಗಿ ಉದ್ಘಾಟನೆಯಾಗಲಿದ್ದು, ಅದರ ಅಂಗವಾಗಿ ಪೂರ್ವ ಸಿದ್ಧತಾ ಸಭೆ ಸಂಘದ ಅಧ್ಯಕ್ಷ ಆನಂದ ಶೆಟ್ಟಿ ಅಡ್ಯಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಅವರು, ಬಂಟರ ಭವನವು ಸಮುದಾಯದ ಹೆಮ್ಮೆಯ ಪ್ರತೀಕವಾಗಿದ್ದು, ಉದ್ಘಾಟನಾ ಸಮಾರಂಭವನ್ನು ಸಂಘಟಿತ ರೀತಿಯಲ್ಲಿ ನಡೆಸಿ ಯಶಸ್ವಿಗೊಳಿಸಲು ಎಲ್ಲ ಸದಸ್ಯರು ಹಾಗೂ ಸಮಾಜ ಬಾಂಧವರು ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ಮುಗೇರೋಡಿ ಡಿ. ಸುಧಾಕರ ಶೆಟ್ಟಿ ಮಾತನಾಡಿ, ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಭವನವು ಅಂತಿಮ ಹಂತ ತಲುಪಿದೆ ಎಂದರು. ಕಳೆದ ಎರಡು ವರ್ಷಗಳಿಂದ ಸಮಿತಿಯ ನಿರಂತರ ಪರಿಶ್ರಮ, ದಾನಿಗಳ ಸಹಕಾರ ಹಾಗೂ ಸಮುದಾಯದ ಬೆಂಬಲದಿಂದ ಈ ಮಹತ್ವಾಕಾಂಕ್ಷಿ ಯೋಜನೆ ಸಾಕಾರಗೊಳ್ಳುತ್ತಿದೆ ಎಂದು ಹೇಳಿದರು. ಸುಮಾರು 1,300 ಆಸನ ಸಾಮರ್ಥ್ಯದ ಹವಾ ನಿಯಂತ್ರಿತ ಸಭಾಂಗಣ, ಪ್ರತ್ಯೇಕ…
ಮಂಗಳೂರು : ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಪಕ್ಷದ ಸಂಘಟನೆ ಬಲವರ್ಧನೆ, ಮುಂದಿನ ಕಾರ್ಯಕ್ರಮಗಳ ರೂಪರೇಖೆ ಹಾಗೂ ಮುಂಬರುವ ಚುನಾವಣೆಯ ತಂತ್ರಗಾರಿಕೆ ಕುರಿತು ಚರ್ಚಿಸಲು ಮಹತ್ವದ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯು ಮೇ 30, 2026 ಶನಿವಾರ ದಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪಕ್ಷದ ವಿವಿಧ ಘಟಕಗಳ ಪ್ರಮುಖರು, ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. ಸಭೆಯಲ್ಲಿ ಪಕ್ಷದ ಸಂಘಟನೆ ಬಲವರ್ಧನೆ, ತಾಲೂಕು ಮಟ್ಟದ ಕಾರ್ಯಕ್ರಮಗಳ ರೂಪರೇಖೆ, ಮುಂಬರುವ ಚುನಾವಣೆಗಳಿಗೆ ಸಂಬಂಧಿಸಿದ ತಂತ್ರಗಾರಿಕೆ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಹಾಗೂ ಸಲಹೆಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಲಾಗಿದೆ. ಪಕ್ಷದ ಹಿತದೃಷ್ಟಿಯಿಂದ ಈ ಸಭೆ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
