- ನಟ ಚೇತನ್ ಅಹಿಂಸಾಗೆ ತುಳುನಾಡ ರಕ್ಷಣಾ ವೇದಿಕೆಯಿಂದ ಆಟಿಡೊಂಜಿ ದಿನ ಕಾರ್ಯಕ್ರಮಕ್ಕೆ ಆಹ್ವಾನ
- ಕಾಪು: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಡೇವಿಡ್ ಡಿಸೋಜಾ ಮೇಲೆ ಗುಂಡಿನ ದಾಳಿ -ಭೀಕರ ಹತ್ಯೆ!
- ಬಂಟ್ವಾಳ: ಟಿಪ್ಪರ್ ಹರಿದು ಸ್ಕೂಟರ್ ಹಿಂಬದಿ ಸವಾರ ಸಾವು; ಲಾರಿ ಚಾಲಕ ವಶಕ್ಕೆ, ಅಪಘಾತದ ಬಗ್ಗೆ ವಿಭಿನ್ನ ಮಾಹಿತಿ
- ಮಂಗಳೂರು: ಬಾರ್ಗಳ ಮೇಲೆ ಅಬಕಾರಿ ಇಲಾಖೆಯ ದಿಢೀರ್ ದಾಳಿ – ಅಪ್ರಾಪ್ತರಿಗೆ ಮದ್ಯ ಪೂರೈಕೆಗೆ ಕಟ್ಟುನಿಟ್ಟಿನ ಎಚ್ಚರಿಕೆ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಮಂಗಳೂರುನೀರುಮಾರ್ಗ ಶಾಖೆ ವತಿಯಿಂದ 113ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ
- ಪೂರ್ವಭಾವಿಯಾಗಿ ಜೆಡಿಎಸ್ ಒತ್ತಾಯ – ಈಗ ಶಾಲಾ ವಾಹನಗಳ ವಿಶೇಷ ತಪಾಸಣೆ: ಮಕ್ಕಳ ಸುರಕ್ಷತೆಗೆ ಕ್ರಮ ಸ್ವಾಗತಾರ್ಹ
- ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ನಡೆಯುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ
- ಶಾಲಾ ವಾಹನಗಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ: ಆರ್ಟಿಒಗೆ ಜೆಡಿಎಸ್ ನಿಯೋಗದಿಂದ ಮನವಿ
Author: Tulunada Surya
ಮಂಗಳೂರು, ಜುಲೈ 31: ಜನತಾದಳ (ಜಾತ್ಯತೀತ) ಪಕ್ಷದ ಮೀನುಗಾರ ಘಟಕದ ರಾಜ್ಯಾಧ್ಯಕ್ಷ ರತ್ನಾಕರ್ ಸುವರ್ಣ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾವಚಿತ್ರದೊಂದಿಗೆ ಸುಳ್ಳು ಮರಣ ಸುದ್ದಿಯನ್ನು ಹರಿಬಿಟ್ಟು ಮಾನಹಾನಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಮತ್ತು ಗೊಂದಲ ಸೃಷ್ಟಿಸಿರುವ ಘಟನೆ ಅತ್ಯಂತ ಖಂಡನೀಯ ಎಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರೋ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ರತ್ನಾಕರ್ ಸುವರ್ಣ ಅವರು ಮೃತಪಟ್ಟಿದ್ದಾರೆ ಎಂಬ ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿರುವ ಪರಿಣಾಮ ಅವರ ಕುಟುಂಬದ ಸದಸ್ಯರು, ಸಂಬಂಧಿಕರು, ಸ್ನೇಹಿತರು, ಪಕ್ಷದ ಮುಖಂಡರು ಹಾಗೂ ಹಿತೈಷಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಇಂತಹ ದುರುದ್ದೇಶಪೂರಿತ ಕೃತ್ಯಗಳು ವ್ಯಕ್ತಿಯ ಘನತೆ, ಗೌರವ ಹಾಗೂ ಸಾಮಾಜಿಕ ವಿಶ್ವಾಸಕ್ಕೆ ಧಕ್ಕೆ ತರುವುದಲ್ಲದೆ, ಸಮಾಜದಲ್ಲಿ ಸುಳ್ಳು ಸುದ್ದಿಗಳಿಗೆ ಉತ್ತೇಜನ ನೀಡುವ ಅಪಾಯಕಾರಿ ಪ್ರವೃತ್ತಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ದುರುಪಯೋಗ ಮಾಡಿಕೊಂಡು ಸುಳ್ಳು ಮಾಹಿತಿ ಹರಡುವುದು ಗಂಭೀರ…
ಬಿಸಿರೋಡ್, ಜು.31: ಜೆಡಿಎಸ್ ಮುಖಂಡ ರತ್ನಾಕರ್ ಸುವರ್ಣ ಅವರ ಕುರಿತು ಸಾಮಾಜಿಕ ಜಾಲತಾಣಗಳು ಹಾಗೂ ಕೆಲವು ಮಾಧ್ಯಮಗಳಲ್ಲಿ ಸುಳ್ಳು ಮರಣ ಸುದ್ದಿಯನ್ನು ಉದ್ದೇಶಪೂರ್ವಕವಾಗಿ ಹರಡಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಡ್ವಕೇಟ್ ಉಮೇಶ್ ಕುಮಾರ್ ವೈ. ಅವರು, ಯಾವುದೇ ಸತ್ಯಾಸತ್ಯತೆ ಪರಿಶೀಲಿಸದೆ ಇಂತಹ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವುದು ಅತ್ಯಂತ ಬೇಜವಾಬ್ದಾರಿಯ ಕೃತ್ಯವಾಗಿದೆ. ಇದರಿಂದ ಸಂಬಂಧಪಟ್ಟ ವ್ಯಕ್ತಿಯ ಘನತೆಗೆ ಧಕ್ಕೆ ಉಂಟಾಗುವುದಲ್ಲದೆ, ಅವರ ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಮತ್ತು ಗೊಂದಲ ಸೃಷ್ಟಿಯಾಗುತ್ತದೆ ಎಂದು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು ಸುಳ್ಳು ಸುದ್ದಿಗಳು, ವದಂತಿಗಳು ಹಾಗೂ ಅಪಪ್ರಚಾರಗಳನ್ನು ಹರಡುವ ಪ್ರವೃತ್ತಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಸುಳ್ಳು ಮಾಹಿತಿ ಹರಡುವುದನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲು ಸಾಧ್ಯವಿಲ್ಲ. ಇಂತಹ ಕೃತ್ಯಗಳು ಸಮಾಜದ ಶಾಂತಿ ಹಾಗೂ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ತರುವಂತವು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಪ್ರಕರಣವನ್ನು ಪೊಲೀಸ್…
ಮಂಗಳೂರು, ಜುಲೈ 31: ಜನತಾದಳ (ಜಾತ್ಯತೀತ) ಪಕ್ಷದ ಮೀನುಗಾರ ಘಟಕದ ರಾಜ್ಯಾಧ್ಯಕ್ಷರಾದ ರತ್ನಾಕರ್ ಸುವರ್ಣ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮರಣ ಸುದ್ದಿಯನ್ನು ಅವರ ಭಾವಚಿತ್ರದೊಂದಿಗೆ ಹರಿಬಿಟ್ಟು ಮಾನಹಾನಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ಅತ್ಯಂತ ಖಂಡನೀಯ ಎಂದು ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರೋ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ರತ್ನಾಕರ್ ಸುವರ್ಣ ಅವರು ಮೃತಪಟ್ಟಿದ್ದಾರೆ ಎಂಬ ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿರುವ ಪರಿಣಾಮ ಅವರ ಕುಟುಂಬದ ಸದಸ್ಯರು, ಸಂಬಂಧಿಕರು, ಸ್ನೇಹಿತರು, ಪಕ್ಷದ ಮುಖಂಡರು ಹಾಗೂ ಹಿತೈಷಿಗಳು ತೀವ್ರ ಆತಂಕ ಮತ್ತು ಗೊಂದಲಕ್ಕೆ ಒಳಗಾಗಿದ್ದಾರೆ. ಇಂತಹ ದುರುದ್ದೇಶಪೂರಿತ ಕೃತ್ಯಗಳು ವ್ಯಕ್ತಿಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವುದಲ್ಲದೆ, ಸಮಾಜದಲ್ಲಿ ಸುಳ್ಳು ಸುದ್ದಿಗಳಿಗೆ ಉತ್ತೇಜನ ನೀಡುವ ಅಪಾಯಕಾರಿ ಪ್ರವೃತ್ತಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ದುರುಪಯೋಗ ಮಾಡಿ ಸುಳ್ಳು ಮಾಹಿತಿ ಹರಡುವುದು ಗಂಭೀರ…
ಕುಂದಾಪುರ, ಜು. 31: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ವೈಷಮ್ಯ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದ್ದು, ರೌಡಿಶೀಟರ್ ಐವನ್ ರಿಚಾರ್ಡ್ ಮಸ್ಕರೇನಸ್ ಅಲಿಯಾಸ್ ಮುನ್ನಾ ಗುಂಡೇಟಿಗೆ ಬಲಿಯಾಗಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ, ಜುಲೈ 30ರ ರಾತ್ರಿ ಐವನ್ ಹಾಗೂ ಡೆರಿಕ್ ಕ್ರಾಸ್ತಾ ನಡುವೆ ಹಣಕಾಸಿನ ವ್ಯವಹಾರದ ವಿಚಾರವಾಗಿ ತೀವ್ರ ಮಾತಿನ ಚಕಮಕಿ ನಡೆದಿತ್ತು. ಬಳಿಕ ಡೆರಿಕ್ ತನ್ನ ಲೊಕೇಶನ್ ಅನ್ನು ಕಳುಹಿಸಿ, ಕುಂದಾಪುರದ ಚರ್ಚ್ ರಸ್ತೆಯ ಹೋಲಿ ರೋಸಾರಿ ಚರ್ಚ್ ಎದುರು ಬರಲು ಸೂಚಿಸಿದ್ದಾನೆ ಎನ್ನಲಾಗಿದೆ. ಜುಲೈ 31ರ ಮುಂಜಾನೆ ಸುಮಾರು 3.15ರ ವೇಳೆಗೆ ಐವನ್ ಸ್ಥಳಕ್ಕೆ ಥಾರ್ ಕಾರಿನಲ್ಲಿ ಆಗಮಿಸಿದ್ದಾನೆ. ಕಾರಿನಿಂದ ಇಳಿದ ತಕ್ಷಣ ಆರೋಪಿ ಡೆರಿಕ್ ಕ್ರಾಸ್ತಾ ಗನ್‌ನಿಂದ ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಹಣಕಾಸು ಹಾಗೂ ಇತರ ವ್ಯವಹಾರಗಳಿಗೆ ಸಂಬಂಧಿಸಿದ ಮನಸ್ತಾಪವೇ ಕೃತ್ಯಕ್ಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ…
ಉಡುಪಿ, ಜುಲೈ 31: ಉಡುಪಿ ಜಿಲ್ಲೆಯ ಕುಂದಾಪುರ ಪಟ್ಟಣದ ಚರ್ಚ್ ರಸ್ತೆಯಲ್ಲಿ ಶುಕ್ರವಾರ ನಸುಕಿನ ವೇಳೆ ದುಷ್ಕರ್ಮಿಗಳು ಪಿಸ್ತೂಲ್‌ನಿಂದ ಗುಂಡು ಹಾರಿಸಿ ಉದ್ಯಮಿಯೊಬ್ಬರನ್ನು ಹತ್ಯೆಗೈದ ಘಟನೆ ಸಂಭವಿಸಿದ್ದು, ಈ ಘಟನೆ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಮೃತರನ್ನು ಐವನ್ ರಿಚಾರ್ಡ್ ಮಸ್ಕರೇನಸ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನಸುಕಿನ ವೇಳೆ ಚರ್ಚ್ ರಸ್ತೆಯಲ್ಲಿ ಇದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಅವರನ್ನು ಗುರಿಯಾಗಿಸಿಕೊಂಡು ಸಮೀಪದಿಂದಲೇ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಐವನ್ ರಿಚರ್ಡ್ ಅವರು ಕೆಲವು ವ್ಯವಹಾರಗಳನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಜೊತೆಯಲ್ಲಿದ್ದ ಮಹಿಳೆ ಆರೋಪಿಯನ್ನು ಗುರುತಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿ ಐವನ್ ರಿಚಾರ್ಡ್ ಮಸ್ಕರೇನಸ್ (ಮುನ್ನಾ) ಈತ ಪಿಟ್ಟಿ ನಾಗೇಶ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದ ಎನ್ನಲಾಗಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕುಂದಾಪುರ…
ಕುಂದಾಪುರ, ಜು. 30: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ ರಾಷ್ಟ್ರಮಟ್ಟದ ಉಚಿತ ಬೃಹತ್ ಉದ್ಯೋಗ ಮೇಳ ‘16ನೇ ಆಳ್ವಾಸ್ ಪ್ರಗತಿ–2026’ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಈ ಬಾರಿ ಸುಮಾರು 350ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, 24,298ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವ ತಿಳಿಸಿದ್ದಾರೆ. ಗುರುವಾರ ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ 326ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಂಡಿವೆ ಎಂದು ತಿಳಿಸಿದರು. ಮಾಹಿತಿ ತಂತ್ರಜ್ಞಾನ (IT), ಐಟಿಇಎಸ್, ಉತ್ಪಾದನೆ, ಆರೋಗ್ಯ, ಔಷಧ, ಬ್ಯಾಂಕಿಂಗ್, ಹಣಕಾಸು, ಮಾರಾಟ, ಚಿಲ್ಲರೆ ವ್ಯಾಪಾರ, ಆತಿಥ್ಯ, ಮಾಧ್ಯಮ, ಎಲೆಕ್ಟ್ರಾನಿಕ್ಸ್, ದೂರಸಂಪರ್ಕ ಹಾಗೂ ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾವಿರಾರು ಉದ್ಯೋಗಾವಕಾಶಗಳು ಲಭ್ಯವಿರಲಿವೆ ಎಂದರು. ಕಳೆದ 15 ಆವೃತ್ತಿಗಳ ಉದ್ಯೋಗ ಮೇಳಗಳ ಮೂಲಕ 40,848 ಅಭ್ಯರ್ಥಿಗಳು ಸ್ಥಳದಲ್ಲೇ ಉದ್ಯೋಗ ಪಡೆದಿದ್ದು, 66,432 ಮಂದಿ…
ಬೈರಂಪಳ್ಳಿ, ಜು. 30: ತುಳುನಾಡಿನ ಭಾಷೆ, ಸಂಸ್ಕೃತಿ, ಸಂಪ್ರದಾಯ, ಆಚರಣೆ, ವಿಚಾರಧಾರೆ ಹಾಗೂ ಶ್ರೀಮಂತ ಪರಂಪರೆಯ ಸಂರಕ್ಷಣೆ ಮತ್ತು ಅಭಿವೃದ್ಧಿಯನ್ನು ಧ್ಯೇಯವನ್ನಾಗಿಸಿಕೊಂಡು ಹಲವು ವರ್ಷಗಳಿಂದ ಜನಪರ ಹಾಗೂ ಸಾಂಸ್ಕೃತಿಕ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿರುವ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಕಾಪು ತಾಲೂಕು ಹಾಗೂ ಬೈರಂಪಳ್ಳಿ ಘಟಕದ ಆಶ್ರಯದಲ್ಲಿ ಆಗಸ್ಟ್ 2ರಂದು (ಭಾನುವಾರ) ಕಾರ್ಯಕರ್ತರ ಸ್ನೇಹ ಸಮ್ಮಿಲನ ಹಾಗೂ ನೂತನ ಕಾರ್ಯಕರ್ತರ ಸದಸ್ಯತ್ವ ಸೇರ್ಪಡೆ ಕಾರ್ಯಕ್ರಮವನ್ನು ಸಾಂತ್ಯರ್ ಅಂಬೇಡ್ಕರ್ ಸಭಾಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು, ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ನಾಗಲಕ್ಷ್ಮಿ ಸುಬ್ರಹ್ಮಣ್ಯನಗರ, ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮೀನಗರ, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಸಂಘಟನೆಯ ಸದಸ್ಯರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸಂಘಟನೆಯು ಕಳೆದ ಒಂದು ವರ್ಷದಲ್ಲಿ ಕೈಗೊಂಡಿರುವ ವಿವಿಧ ಜನಪರ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ…
ಮಂಗಳೂರು, ಜು. 29: ಚಿನ್ನಾಭರಣ ದೋಚುವ ಉದ್ದೇಶದಿಂದ 2021ರ ಜನವರಿ 25ರಂದು ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೇಲಿ ನಿವಾಸಿ 80 ವರ್ಷದ ಹಿರಿಯ ಮಹಿಳೆ ಬೆನೆಡಿಕ್ಟ್ ಕಾರ್ಲೋ ಅವರಿಗೆ ವಿಷಪ್ರಾಶನ ಮಾಡಿ, ಬಳಿಕ ಉಸಿರುಗಟ್ಟಿಸಿ ಹತ್ಯೆಗೈದ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.ಜೀವಾವಧಿ ಶಿಕ್ಷೆಗೆ ಗುರಿಯಾದವರು ಅಮ್ಮಾಡಿ ಹೀರಾ ನಿವಾಸಿ ವಿಲ್ಮಾ ಪ್ರಶಿತಾ ಬಾರೆಟ್ಟೊ (30), ನರಿಕೊಂಬು ಅಂತರಹಾಸ್ ನಿವಾಸಿ ಸತೀಶ್ (33) ಹಾಗೂ ನರಿಕೊಂಬು ಪದಕೆಟ್ಟೆ ಹೊಯಿಗೆಬೈಲು ನಿವಾಸಿ ಚರಣ್ ಕುಮಾರ್ (34). ಪ್ರಕರಣದ ಹಿನ್ನೆಲೆ:ಬೆನೆಡಿಕ್ಟ್ ಕಾರ್ಲೋ ಅವರು ತಮ್ಮ ಪತಿ ಇನಾಸ್ ಕಾರ್ಲೋ ಅವರೊಂದಿಗೆ ಅಮ್ಮುಂಜೆಯ ಪಾಂಡೇಲಿಯಲ್ಲಿ ವಾಸವಾಗಿದ್ದರು. ಪಾರ್ಶ್ವವಾಯು ಪೀಡಿತರಾಗಿದ್ದ ಇನಾಸ್ ಕಾರ್ಲೋ ಅವರ ಆರೈಕೆಗೆ ವಿಲ್ಮಾ ಪ್ರಶಿತಾ ಬಾರೆಟ್ಟೊ ಸುಮಾರು ಎರಡು ತಿಂಗಳಿನಿಂದ ಕೆಲಸ ಮಾಡುತ್ತಿದ್ದರು.ಈ ವೇಳೆ ಬೆನೆಡಿಕ್ಟ್ ಕಾರ್ಲೋ ಅವರ ಬಳಿ ಹೆಚ್ಚಿನ ಪ್ರಮಾಣದ ಚಿನ್ನಾಭರಣಗಳಿರುವುದನ್ನು…
ಬೆಂಗಳೂರು, ಜುಲೈ 28: ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುತ್ತಿರುವ ಸೈಬರ್ ವಂಚನೆಗಳು ದಿನದಿಂದ ದಿನಕ್ಕೆ ಹೊಸ ರೂಪ ಪಡೆಯುತ್ತಿದ್ದು, ಇದೀಗ ಫೇಸ್‌ಬುಕ್‌ನಲ್ಲಿ ಪರಿಚಯ ಮಾಡಿಕೊಂಡ ವಿಚ್ಛೇದಿತ ಮಹಿಳೆಯೊಬ್ಬರನ್ನು ಪ್ರೀತಿ, ವಿಶ್ವಾಸ ಮತ್ತು ಉಡುಗೊರೆಯ ಆಮಿಷದ ಮೂಲಕ ವಂಚಿಸಿ, ಕಸ್ಟಮ್ಸ್ ಶುಲ್ಕದ ನೆಪದಲ್ಲಿ ಬರೋಬ್ಬರಿ ₹1.75 ಕೋಟಿ ಹಣ ಕಸಿದುಕೊಂಡಿರುವ ಬೆಚ್ಚಿಬೀಳಿಸುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.ಈ ಸಂಬಂಧ ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 52 ವರ್ಷದ ಉದ್ಯೋಗಸ್ಥ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಫೇಸ್‌ಬುಕ್ ಸ್ನೇಹದಿಂದ ಆರಂಭವಾದ ವಂಚನೆಮಹಿಳೆ ಯೂಟ್ಯೂಬ್‌ನಲ್ಲಿ ಹೂಡಿಕೆ ಸಂಬಂಧಿತ ವಿಡಿಯೋಗಳು ಹಾಗೂ ಜಾಹೀರಾತುಗಳನ್ನು ವೀಕ್ಷಿಸುತ್ತಿದ್ದ ವೇಳೆ, ಫೇಸ್‌ಬುಕ್‌ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಪರಿಚಯ ಮಾಡಿಕೊಂಡಿದ್ದ. ಆತ ತನ್ನನ್ನು ದಕ್ಷಿಣ ಕೊರಿಯಾ ಮೂಲದ ಉದ್ಯಮಿ ಎಂದು ಪರಿಚಯಿಸಿಕೊಂಡು, ಸುಳ್ಳು ಹೆಸರಿನಲ್ಲಿ ಮಹಿಳೆಯ ವಿಶ್ವಾಸ ಗಳಿಸಿದ್ದಾನೆ.ಪ್ರತಿದಿನ ನಿರಂತರವಾಗಿ ಸಂದೇಶ ಕಳುಹಿಸುವುದು, ವಿಡಿಯೋ ಕರೆಗಳ ಮೂಲಕ ಆತ್ಮೀಯತೆ ಬೆಳೆಸುವುದು ಹಾಗೂ ಭಾವನಾತ್ಮಕವಾಗಿ ಹತ್ತಿರವಾಗುವಂತೆ ನಡೆದುಕೊಳ್ಳುವ…
ಹಾಸನ ಸಮೀಪ ಭೀಕರ ಅಪಘಾತ; ಹಿಂಬದಿಯಿಂದ ಬಂದ ಕಾರಿನ ಡಿಕ್ಕಿಗೆ ಕಾರು ಪಲ್ಟಿ – ಮೂವರಿಗೆ ಗಾಯ ಮುಲ್ಕಿ/ಹಾಸನ, ಜು. 27: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚೌಡೇನಹಳ್ಳಿ ಸಮೀಪ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಲ್ಕಿ ಮೂಲದ ಜನತಾದಳ (ಜಾತ್ಯತೀತ) ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಶಶಿಪ್ರಭಾ (47) ಅವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಶಶಿಪ್ರಭಾ ಅವರು ಮುಲ್ಕಿಯ ಕಾರ್ನಾಡ್ ಕೆ.ಎಸ್. ರಾವ್ ನಗರ, ಕೊರಂಟಬೆಟ್ಟು ನಿವಾಸಿಯಾಗಿದ್ದು, ಮುಲ್ಕಿ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ದಿವಂಗತ ಶಶಿಕಾಂತ್ ಶೆಟ್ಟಿ ಅವರ ಸಹೋದರಿಯಾಗಿದ್ದರು. ಅವರು ಜನತಾದಳ (ಜಾತ್ಯತೀತ) ಪಕ್ಷದ ಮುಲ್ಕಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದುದಲ್ಲದೆ, ಹಲವು ಸಾಮಾಜಿಕ, ಧಾರ್ಮಿಕ ಹಾಗೂ ಸೇವಾ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಮೆಚ್ಚುಗೆ ಗಳಿಸಿದ್ದರು. ಅಪಘಾತದಲ್ಲಿ ಗಾಯಗೊಂಡಿರುವ ಕಾರ್ಕಳ ನಿವಾಸಿ ದಿನೇಶ್ (34), ಮಂಡ್ಯ ನಿವಾಸಿ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
