Author: Tulunada Surya

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ಯುವಕನೊಬ್ಬ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭಿಣಿಯಾದ ಬಳಿಕ ಆತ ವಿವಾಹವಾಗಲು ನಿರಾಕರಿಸಿರುವ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮನೀಡಿದ್ದಾಳೆ ಎಂದು ತಿಳಿದು ಬಂದಿದೆ. ಬಪ್ಪಳಿಗೆ ನಿವಾಸಿ ಕೃಷ್ಣರಾವ್‌ ಮತ್ತು ಸಂತ್ರಸ್ತ ಯುವತಿ ಇಬ್ಬರೂ ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. 2024ರ ಅ.11ರಂದು ಆರೋಪಿ ಕೃಷ್ಣ ಸಂತ್ರಸ್ತ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡು ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಕೆಲವು ತಿಂಗಳ ನಂತರ ಸಂತ್ರಸ್ತೆ ಗರ್ಭಿಣಿಯಾಗಿದ್ದು, ವಿಚಾರವನ್ನು ಆರೋಪಿ ಕೃಷ್ಣನಿಗೆ ತಿಳಿಸಿದ್ದಾನೆ. ಈ ವೇಳೆ ಮನೆಯವರ ಬಳಿ ಈ ವಿಚಾರ ಹೇಳದಿದ್ದರೆ ತಾನು ಮದುವೆಯಾಗುವುದಾಗಿ ಹೇಳಿದ್ದ. ಬಳಿಕ ಮದುವೆಗೆ ನಿರಾಕರಿಸಿದ್ದ ಯುವಕನ ಮೇಲೆ ಯುವತಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹ ಪ್ರಕರಣ ದಾಖಲಿಸಿದ್ದಳು, ಪ್ರಕರಣ ದಾಖಲಾಗುತ್ತಿದ್ದಂತೆ ಯುವಕ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಅತ್ಯಚಾರ ಹಾಗೂ ನಂಬಿಕೆ ದ್ರೋಹ ಪ್ದಕರಣ ದಾಖಲಿಸಿಕೊಂಡು…

Read More

ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಅಧ್ಯಕ್ಷರಾಗಿ ಪ್ರದೀಪ್ ಪೂಜಾರಿ (ದೀಪು)ಚಾಂತಾರ್, ಉಪಾಧ್ಯಕ್ಷರಾಗಿ ಸಂದೇಶ್ ಶೆಟ್ಟಿ ಹೇರೂರು, ಪ್ರಧಾನ ಕಾರ್ಯದರ್ಶಿಯಾಗಿ ಶರತ್ ರಾಜ್ ಆರೂರು, ಮತ್ತು ಕೋಶಾಧಿಕಾರಿಯಾಗಿ ನಿತಿನ್ ಶೆಟ್ಟಿ ಪೇತ್ರಿ ರವರನ್ನು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿರವರು ಮತ್ತು ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ಹಾವಂಜೆ ರವರ ಶಿಫಾರಸು ಮೇರೆಗೆ ಆಯ್ಕೆಮಾಡಲಾಗಿದೆ. ಇವರ ಆಯ್ಕೆ ಯಿಂದಬ್ರಹ್ಮಾವರ ತಾಲೂಕುನಲ್ಲಿ ತುಳುನಾಡ ರಕ್ಷಣಾ ವೇದಿಕೆ ಇನ್ನಷ್ಟು ಬಲಿಷ್ಠವಾಗಿ ಬೆಳೆಯಲು , ತುಳು ಅಚಾರ ವಿಚಾರ, ಸಂಸ್ಕೃತಿ ಮತ್ತು ಬ್ರಹ್ಮಾವರ ಸರ್ವತೋಮುಖ ಅಭಿವೃದ್ಧಿಯಾಗಲು ಜನರ ಬೇಡಿಕೆ ಈಡೇರಿಕೆಗೆ ಹೋರಾಟ ಮಾಡಲು ಬಲ ಬಂದಂತಾಗಿದೆ. ಎಂದು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ರವರು ತಿಳಿಸಿದರು. ಬ್ರಹ್ಮಾವರ ತಾಲೂಕು ನಿಕಟಪೂರ್ವ ಅಧ್ಯಕ್ಷ ಸತೀಶ್ ಪೂಜಾರಿ ಕೀಳಂಜೆ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಜಯರಾಮ್ ಪೂಜಾರಿ, ವೈದ್ಯರ ಘಟಕ ಜಿಲ್ಲಾಧ್ಯಕ್ಷ ಸಂದೀಪ್ ಸನಿಲ್, ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಜಯ…

Read More

ಮಂಗಳೂರು: ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿಯತ್ತ ತನ್ನ ಅಚಲ ಬದ್ಧತೆಯ ಭಾಗವಾಗಿ, ಎಂಸಿಸಿ ಬ್ಯಾಂಕ್ 2025 ಜೂನ್ ತಿಂಗಳಲ್ಲಿ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು, ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಮತ್ತು ನಿರ್ದೇಶಕರ ಮಂಡಳಿಯ ನೇತೃತ್ವದಲ್ಲಿ ನಡೆಯುತ್ತಿರುವ ಈ ಚಟುವಟಿಕೆಗಳು, ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸಲು ಮತ್ತು ಶೈಕ್ಷಣಿಕ ಸಬಲೀಕರಣವನ್ನು ಉತ್ತೇಜಿಸಲು ಬ್ಯಾಂಕಿನ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತವೆ

Read More

ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಅವರು ಮಂಗಳವಾರದಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಪಡೀಲ್ ಅಮೃತ ಕಾಲೇಜ್ ಸಹಯೋಗದಲ್ಲಿ ಆಯೋಜಿಸಲಾದ ತುಳು ನಾಟಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಶತಮಾನಗಳ ಹಿಂದೆಯೇ ಪಂಜೆ ಮಂಗೇಶರಾಯರ ಕಾರಣದಿಂದಾಗಿ ಶಾಲೆಗಳಲ್ಲಿ ನಾಟಕ ಆರಂಭವಾಗಿತ್ತು ಎಂಬ ವಿಚಾರವನ್ನು ತಮ್ಮ ಲಕ್ಷಣ ಅವರು ಈ ಸಂದರ್ಭದಲ್ಲಿ ನೆನಪಿಸಿದರು.ವಿದ್ಯಾರ್ಥಿಗಳು ತುಳು ನಾಟಕದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಹಾಗೂ ರಂಗಭೂಮಿಯಲ್ಲಿ ತೊಡಗಿಸಿಕೊಳ್ಳಬೇಕು, ಶಾಲೆಯಿಂದಲೇ ತುಳು ನಾಟಕಗಳ ಬೆಳವಣಿಗೆ ಆರಂಭಗೊಂಡಿತು ಹಾಗೂ ವೃತ್ತಿಪರವಾಗಿ ಬೆಳವಣಿಗೆ ಹೊಂದಿದೆ. ಅದನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಯುವ ಪೀಳಿಗೆ ಮೇಲಿದೆ ಎಂದರು.ಮುಖ್ಯ ಅತಿಥಿಯಾಗಿ ಪಾಲ್ಗೊಂಡ ‌ ಹಿರಿಯ ರಂಗನಟ ಪ್ರಭಾಕರ ಕಾಪಿಕಾಡ್ ಮಾತನಾಡಿ, ನಾಟಕದ ಮೂಲಕ ಸ್ನೇಹ, ಪ್ರೀತಿ, ಸಾಮರಸ್ಯವನ್ನು ಮೂಡಿಸಬೇಕು ಎಂದು ಹೇಳಿದರುಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು.…

Read More

ಮಂಗಳೂರಿನಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. 30ನೇ ವಾರ್ಡ್ ಕೊಡಿಯಾಲ್ ಬೈಲ್ ಪೂರ್ವ ರಸ್ತೆ, ಬಲ್ಲಾಳ್ ಬಾಗ್ ಬ್ರಿಡ್ಜ್, ವೆಟ್ ವೆಲ್ ಇರುವ ಪ್ರದೇಶ, ಮೊದಲಾದ ಸ್ಥಳಗಳಿಗೆ ಭೇಟಿ ನೀಡಿದ ಶಾಸಕರು, ಅಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ ಪರಿಹಾರ ಕ್ರಮ ಇತ್ಯಾದಿ ವಿಷಯಗಳ ಬಗ್ಗೆ ಸ್ಥಳೀಯರ ಅಭಿಪ್ರಾಯದ ಮೇರೆಗೆ ಕೂಡಲೇ ಕ್ರಮಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು 75 ಕೋಟಿ ವಿಶೇಷ ಅನುದಾನದಲ್ಲಿ ಕ್ಷೇತ್ರದ ಹಲವು ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣ ಮಾಡಿದ್ದು ಬಿಟ್ಟರೆ, ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಇಲ್ಲಿನ ಸಣ್ಣಪುಟ್ಟ ತುರ್ತುಕ್ರಮಕ್ಕೂ ಬಿಡಿಗಾಸು ದೊರೆಯುತ್ತಿಲ್ಲ. ಇದರಿಂದಾಗಿ ವಿಶೇಷವಾಗಿ ಮಳೆಗಾಲದ ಸಮಯದಲ್ಲಿ ಸ್ಥಳೀಯ ಜನತೆ ತೀವ್ರ ತೊಂದರೆ ಅನುಭವಿಸುತ್ತಿದ್ದು ಈ ಎಲ್ಲದರ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಪ್ರಸ್ತಾಪಿಸಿ ಶಾಶ್ವತ ಪರಿಹಾರಕ್ಕೆ…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಿಜೈನಲ್ಲಿರುವ ಬ್ಯೂಟಿ ಸಲೂನ್ ಆವರಣದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಸ್ಥೆ ಉಡುಪಿ ಜಿಲ್ಲೆಯ ಬ್ರಹ್ಮಗಿರಿ ನಿವಾಸಿಯೊಬ್ಬರ ಒಡೆತನದಲ್ಲಿದೆ ಎಂದು ಮಾಹಿತಿ ತಿಳಿದು ಬಂದಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ, ಉರ್ವಾ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 55/2025 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅನೈತಿಕ ಸಂಚಾರ (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 3(1), 4, 5 ಮತ್ತು 6 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪ್ರಸ್ತುತ ತನಿಖೆ ನಡೆಯುತ್ತಿದೆ. ಇದರ ಜೊತೆಗೆ, ಸಂಸ್ಥೆಯ ವ್ಯಾಪಾರ ಪರವಾನಗಿಯನ್ನು ರದ್ದುಗೊಳಿಸುವಂತೆ ಶಿಫಾರಸು ಮಾಡುವ ವರದಿಯನ್ನು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಸಲ್ಲಿಸಿದ್ದಾರೆ. ವರದಿಯ ಮೇರೆಗೆ ಕಾರ್ಯನಿರ್ವಹಿಸಿದ ಆಯುಕ್ತರು ಸಲೂನ್‌ನ ವ್ಯಾಪಾರ ಪರವಾನಗಿಯನ್ನು ಅಧಿಕೃತವಾಗಿ ರದ್ದುಗೊಳಿಸಿದ್ದಾರೆ. ಕಾನೂನುಬಾಹಿರ ಅಥವಾ ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದ ಎಲ್ಲಾ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ…

Read More

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಐಟಿ ಸೆಲ್ ಸಂಚಾಲಕರಾಗಿ ಸತೀಶ್ ಪೂಜಾರಿ ಕೀಳಂಜೆ ಆಯ್ಕೆಯಾಗಿರುತ್ತಾರೆ. ಸತೀಶ್ ಪೂಜಾರಿ ಕೀಳಂಜೆ ರವರು ಬ್ರಹ್ಮಾವರ ತಾಲೂಕು ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಸೇವೆ ಸಲ್ಲಿಸುತ್ತಿದ್ದು ಹಲವಾರು ಸಾಮಾಜಿಕ ಸಮಸ್ಯೆ ಗಳ ಬಗ್ಗೆ ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳ ಮೂಲಕ ಸಂಬಂಧ ಪಟ್ಟ ಇಲಾಖೆಯ ಗಮನಸೆಳೆದು ಯಶಸ್ಸು ಕಂಡಿರುತ್ತಾರೆ. ಅವರ ಸಾಮಾಜಿಕ ಕಳಕಳಿ ಮತ್ತು ತುಳುನಾಡ ರಕ್ಷಣಾ ವೇದಿಕೆಯ ಮೇಲೆ ಇದ್ದ ಅವರ ಅಪಾರ ಗೌರವ ಕಂಡು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ಬ್ರಹ್ಮಾವರ ರವರು ಜಿಲ್ಲಾ ಘಟಕದ ಉನ್ನತ ಮಟ್ಟದ ಸ್ಥಾನಕ್ಕೆ ಶಿಫಾರಸು ಮಾಡಿದ್ದ ಹಿನ್ನೆಲೆಯಲ್ಲಿ ಕೇಂದ್ರೀಯ ಮಂಡಳಿ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ರವರು ಉಡುಪಿ ಜಿಲ್ಲಾ ಐಟಿ ಸೆಲ್ ಸಂಚಾಲಕರಾಗಿ ಸತೀಶ್ ಪೂಜಾರಿ ಕೀಳಂಜೆ ರವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. (ಐಟಿ ಸೆಲ್ ಅಂದರೆ…

Read More

ದಿನಾಂಕ 21.06.2025 ರಂದು ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ಡಾ.ಗಾನ ಪಿ ಕುಮಾರ್, ಶ್ರೀ ಸುರೇಶ್ ಕುಮಾರ್ ಪಿ ಹಾಗೂ ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಭಾರತಿ ಜಿ, ಶ್ರೀ ಚಂದ್ರಶೇಖರ್ ಕೆ.ಎನ್ ಮತ್ತು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಮಂಜುನಾಥ, ರಾಜೇಂದ್ರ ನಾಯ್ಕ್ ಎಂ.ಎನ್ ರವರು ಮಂಗಳೂರು ಮತ್ತು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬ್ಬಂದಿಯವರೊಂದಿಗೆ ಮಂಗಳೂರು ಮಹಾನಗರ ಪಾಲಿಕೆಗೆ ಗೌರವಾನ್ವಿತ ಲೋಕಾಯುಕ್ತರಿಂದ ಸರ್ಚ್ ವಾರಂಟ್ ಪಡೆದು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ್ದು, ಪರಿಶೀಲನೆ ವೇಳೆ ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗ, ಆರೋಗ್ಯ ವಿಭಾಗ, ಎಂಜಿನಿಯರ್ ವಿಭಾಗ, ಲೆಕ್ಕ ಪತ್ರ ವಿಭಾಗ. ನಗರ ಯೋಜನಾ ವಿಭಾಗ, ಆಯುಕ್ತರ ಕಛೇರಿಯಲ್ಲಿ ಕಡತ ವಿಲೇವಾರಿಯಲ್ಲಿ ಹಲವಾರು ನ್ಯೂನ್ಯತೆಗಳು ಕಂಡುಬಂದಿರುತ್ತದೆ. ಕಂದಾಯ ಮತ್ತು ನಗರ ಯೋಜನಾ ವಿಭಾಗದ ಕಛೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ. ಬ್ರೋಕರ್ ಒಬ್ಬರು ಬಳಿ ರೂ 5 ಲಕ್ಷ ಹಣ ಪತ್ತೆಯಾಗಿರುತ್ತದೆ.…

Read More

ದಿನಾಂಕ 22-06-2025 ರಂದು ಮದ್ಯಾಹ್ನ 2.00 ಕ್ಕೆ ಉಡುಪಿ ಅಕ್ಷಯ ಟವರ್ ನಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ರವರ ಅಧ್ಯಕ್ಷತೆಯಲ್ಲಿ ಬ್ರಹ್ಮಾವರ ತಾಲೂಕು ಅಧ್ಯಕ್ಷ ಸತೀಶ್ ಪೂಜಾರಿ ಕೀಳಿಂಜೆ ರವರ ಹುಟ್ಟು ಹಬ್ಬದ ಆಚರಣೆ ಸಭೆ ನಡೆಯಿತು .ಸತೀಶ್ ಪೂಜಾರಿ ಕೀಳಿಂಜೆ ರವರುತುಳುನಾಡ ರಕ್ಷಣಾ ವೇದಿಕೆ ಕೇಂದ್ರಿಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ರವರೊಂದಿಗೆ ಕೈ ಜೋಡಿಸಿ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಆಚರಿಸಿದರು. ಆಗಮಿಸಿದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸತೀಶ್ ಪೂಜಾರಿ ಕೀಳಿಂಜೆ ರವರಿಗೆ ಹೂ ಹಾರ ಹಾಕಿ ಶುಭ ಹಾರೈಸಿದರು.ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷಜಯ ಪೂಜಾರಿ ಲಕ್ಷ್ಮಿ ನಗರ, ಮಹಿಳಾ ಘಟಕ ಅಧ್ಯಕ್ಷೆ ಸುನಂದ ಕೋಟ್ಯಾನ್, ಜಿಲ್ಲಾ ಹಿರಿಯ ಉಪಾಧ್ಯಕ್ಷ ಜಯರಾಮ್ ಪೂಜಾರಿ, ಉಪಾಧ್ಯಕ್ಷ ಉಮೇಶ್ ಶೆಟ್ಟಿ ಹಾವಂಜೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ಹಾವಂಜೆ, ಕಾರ್ಮಿಕ ಘಟಕ ಜಿಲ್ಲಾ ಉಪಾಧ್ಯಕ್ಷ ಕುಶಲ್ ಅಮೀನ್…

Read More

ದಿನಾಂಕ 22-06-2025 ರಂದು ಮದ್ಯಾಹ್ನ 10.30 ಕ್ಕೆ ಉಡುಪಿ ಅಕ್ಷಯ ಟವರ್ ನಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ರವರ ಅಧ್ಯಕ್ಷತೆಯಲ್ಲಿ ಕಾಪು ತಾಲೂಕು ಅಧ್ಯಕ್ಷ ಆಯ್ಕೆ ಸಭೆ ನಡೆಯಿತು . ತುಳುನಾಡ ರಕ್ಷಣಾ ವೇದಿಕೆ ಕೇಂದ್ರಿಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ರವರು ಕಾಪು ತಾಲೂಕು ಮಹಿಳಾ ಅಧ್ಯಕ್ಷೆ ಅನುಸೂಯ ಶೆಟ್ಟಿ ಉಪಸ್ಥಿತಿಯಲ್ಲಿ ಕಾಪು ತಾಲೂಕು ಅಧ್ಯಕ್ಷ ರಾಗಿ ನಿತಿನ್ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಕಾರ್ತಿಕ್ ಕುಲಾಲ್ ಯವರನ್ನು ಹಾಗೂ ಬೈರಂಪಲ್ಲಿ ಘಟಕ ಅಧ್ಯಕ್ಷ ರಾಗಿ ಕೃಷ್ಣಾನಂದ ರವರ ನೇಮಕ ಘೋಷಣೆ ಮಾಡಿದ್ದರು. ನೇಮಕಗೊಂಡ ಪದಾಧಿಕಾರಿಗಳು ತುಳುನಾಡ ರಕ್ಷಣಾ ವೇದಿಕೆ ಸಂಘಟನೆ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ ಸಮರ್ಥರಾಗಿ ಕಾರ್ಯ ನಿರ್ವಹಿಸುತ್ತಾರೆ. ಎಂದು ಭರವಸೆ ಮೇಲೆ ಅಧಿಕಾರ ನೀಡಿದ್ದೇವೆ. ಕಾಪು ತಾಲೂಕು ಘಟಕದ ವಿವಿಧ ಘಟಕಗಳಾದ ಕಾರ್ಮಿಕ ಘಟಕ, ಯುವ ಘಟಕದ ಅಧ್ಯಕ್ಷರನ್ನು ಅದಷ್ಟು ಶೀಘ್ರ ಆಯ್ಕೆ ಮಾಡಲಾಗುವುದು…

Read More