- ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆ ಖಂಡನೀಯ: ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಉಡುಪಿ ಪತ್ರಕರ್ತರ ಸಂಘ ಆಗ್ರಹ
- ಆರೂರು ಅಡ್ಜಿಲು ಭಾಗದ ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಮೆಸ್ಕಾಂ ಒಂದು ತಿಂಗಳೊಳಗೆ ಹೊಸ ಟಿಸಿ ಅಳವಡಿಸುವ ಭರವಸೆ – ತುಳುನಾಡು ರಕ್ಷಣಾ ವೇದಿಕೆ ಆಗ್ರಹ
- ಆಗಸ್ಟ್ 23ರಂದು ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ “ಮರಿಯಾಳದ ಮಿನದನ” ಪೂರ್ವಭಾವಿ ಸಭೆ
- ₹5 ಕೋಟಿ ನಕಲಿ ಔಷಧಿ ಜಾಲ ಬಯಲು: ಫಾರ್ಮ್ಹೌಸ್ನಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗೆ ಅಧಿಕಾರಿಗಳ ದಾಳಿ ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಲೇಬಲ್ ಅಂಟಿಸಿ ಔಷಧಿಗಳ ಮರುಪ್ಯಾಕಿಂಗ್ – ಅವಧಿ ಮೀರಿದ ಔಷಧಿಗಳೂ ಪತ್ತೆ
- ಉಡುಪಿ: ತುಳುನಾಡಿನ ಸಂಸ್ಕೃತಿ, ಪರಂಪರೆ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಸೂರಜ್ ನಾಯಕ್ ಸೋನಿ
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
Author: Tulunada Surya
ಮಂಗಳೂರು, ಮೇ 14 : ಮಂಗಳೂರಿನ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಸಮಾಜಸೇವಕ ಹಾಗೂ ‘ಲ್ಯಾನ್ಸಿ ಕನ್ಸ್ಟ್ರಕ್ಷನ್ಸ್’ ಸಂಸ್ಥೆಯ ಸ್ಥಾಪಕರಾದ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ (77) ಅವರು ಅಲ್ಪಕಾಲದ ಅಸ್ವಸ್ಥತೆಯ ಬಳಿಕ ಬುಧವಾರ ನಿಧನರಾದರು. ಅವರ ಅಗಲಿಕೆಯಿಂದ ದಕ್ಷಿಣ ಕನ್ನಡ ಜಿಲ್ಲೆ ತನ್ನೊಬ್ಬ ಹಿರಿಯ ಉದ್ಯಮಿ, ದಾನಿ ಹಾಗೂ ಎಲ್ಲ ಸಮುದಾಯಗಳ ವಿಶ್ವಾಸ ಗಳಿಸಿದ್ದ ವ್ಯಕ್ತಿತ್ವವನ್ನು ಕಳೆದುಕೊಂಡಂತಾಗಿದೆ. ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಉದ್ಯಮ ವಲಯ, ಧಾರ್ಮಿಕ ಮುಖಂಡರು ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ , ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ಲಂಬರ್‌ನಿಂದ ಬೃಹತ್ ಉದ್ಯಮಿಯಾಗಿ ಬೆಳೆದ ಸಾಧಕ 1973ರಲ್ಲಿ ಪರವಾನಗಿ ಪಡೆದ ಪ್ಲಂಬರ್ ಆಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ್ದ ಲಾಸ್ಸಿ ಜೋಸೆಫ್ ಮಸ್ಕರೇನಸ್ ಅವರು ಪರಿಶ್ರಮ, ಪ್ರಾಮಾಣಿಕತೆ ಮತ್ತು ದೂರದೃಷ್ಟಿಯಿಂದ ಹಂತ ಹಂತವಾಗಿ ಸಿವಿಲ್ ಕಾಂಟ್ರಾಕ್ಟರ್…
V. D. Satheesan ಅವರನ್ನು ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿರುವುದು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಇತ್ತೀಚೆಗೆ ನಡೆದ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಭರ್ಜರಿ ಗೆಲುವು ಸಾಧಿಸಿದ ಬಳಿಕ ಮುಖ್ಯಮಂತ್ರಿ ಆಯ್ಕೆ ಕುರಿತಾಗಿ ಕಳೆದ ಹತ್ತು ದಿನಗಳಿಂದ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗಳು, ಸಮಾಲೋಚನೆಗಳು ಹಾಗೂ ಲಾಬಿಯಿಂಗ್ ನಡೆಯುತ್ತಿತ್ತು. ಅಂತಿಮವಾಗಿ ಹೈಕಮಾಂಡ್ ಸತೀಶನ್ ಅವರ ನಾಯಕತ್ವದ ಮೇಲೆ ವಿಶ್ವಾಸ ವ್ಯಕ್ತಪಡಿಸಿ ಮಹತ್ವದ ಹೊಣೆಗಾರಿಕೆಯನ್ನು ನೀಡಿದೆ. ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ವಿ.ಡಿ. ಸತೀಶನ್ ಕೇರಳ ಕಾಂಗ್ರೆಸ್‌ನ ಪ್ರಭಾವಿ ಹಾಗೂ ಜನಪರ ನಾಯಕರಲ್ಲಿ ಒಬ್ಬರಾಗಿದ್ದಾರೆ. ತಮ್ಮ ತೀಕ್ಷ್ಣ ವಾಗ್ಮಿತ್ವ, ಆಡಳಿತಾತ್ಮಕ ದೃಷ್ಟಿಕೋನ ಹಾಗೂ ವಿರೋಧ ಪಕ್ಷದ ನಾಯಕರಾಗಿ ನಡೆಸಿದ ಹೋರಾಟಗಳಿಂದ ಅವರು ರಾಜ್ಯ ರಾಜಕೀಯದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದರು. ವಿಶೇಷವಾಗಿ ಭ್ರಷ್ಟಾಚಾರ, ಜನಜೀವನದ ಸಮಸ್ಯೆಗಳು ಹಾಗೂ ಆಡಳಿತ ವೈಫಲ್ಯಗಳ ವಿರುದ್ಧ ಅವರು ನಡೆಸಿದ ನಿರಂತರ ಹೋರಾಟ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿತ್ತು.…
ಮಂಗಳೂರು, ಮೇ 13 : ಕಾಲೇಜು ವಿದ್ಯಾರ್ಥಿನಿಯರನ್ನೇ ಬಳಸಿಕೊಂಡು ನಡೆಯುತ್ತಿರುವ ಮಾದಕ ದ್ರವ್ಯ ಜಾಲದ ವಿರುದ್ಧ ಮುಲ್ಕಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಸುಮಾರು ₹35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಅಂತಿಮ ವರ್ಷದ BCA ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಲಾಗಿದೆ. ಬಂಧಿತೆಯನ್ನು ಸುಹಾನಾ (21) ಎಂದು ಗುರುತಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾಗಿರುವ ಆಕೆ, ಪ್ರಸ್ತುತ ಕುಂದಾಪುರದ ಕಾಲೇಜೊಂದರಲ್ಲಿ BCA ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದುಬಂದಿದೆ. ಮೇ 12ರಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವೀಡ್ ಗಾಂಜಾವನ್ನು ಮಾರಾಟ ಉದ್ದೇಶದಿಂದ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪಣಂಬೂರು ACP ತಂಡ ಹಾಗೂ ಮುಲ್ಕಿ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆಯ ವೇಳೆ ಆರೋಪಿತೆಯನ್ನು ಬಂಧಿಸಿ, ಆಕೆಯ ಬಳಿಯಿಂದ 1 ಕೆಜಿ 42 ಗ್ರಾಂ ತೂಕದ ಹೈಡ್ರೊವೀಡ್ ಗಾಂಜಾವನ್ನು ವಶಪಡಿಸಿಕೊಳ್ಳಲಾಯಿತು. ಇದರೊಂದಿಗೆ ಕೃತ್ಯಕ್ಕೆ…
ಮಂಗಳೂರು, ಮೇ 13 : ರಾಜ್ಯದ ವಿವಿಧ ಭಾಗಗಳಲ್ಲಿ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ದ್ರವ್ಯ ಜಾಲಗಳು ನಡೆಸುತ್ತಿರುವ ಅಕ್ರಮ ಚಟುವಟಿಕೆಗಳು ಸಮಾಜದಲ್ಲಿ ತೀವ್ರ ಆತಂಕವನ್ನುಂಟು ಮಾಡಿವೆ. ವಿಶೇಷವಾಗಿ ವಿದ್ಯಾರ್ಥಿನಿಯರನ್ನೇ ಡ್ರಗ್ಸ್ ಮಾರಾಟ ಮತ್ತು ಸಾಗಣೆಂತಹ ಕೃತ್ಯಗಳಿಗೆ ಬಳಸಿಕೊಳ್ಳುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿರುವುದು ಅತ್ಯಂತ ಖಂಡನೀಯ ಹಾಗೂ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜನತಾದಳ (ಜಾ) ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ಹಾಗೂ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಬೇಕಾದ ಯುವಜನತೆಯನ್ನು ಕೆಲ ದುಷ್ಕರ್ಮಿಗಳು ಹಣದ ಆಸೆ, ಆಮಿಷ ಮತ್ತು ಒತ್ತಡಗಳ ಮೂಲಕ ಮಾದಕ ಜಾಲಕ್ಕೆ ಸೆಳೆದು ಅವರ ಬದುಕನ್ನೇ ಹಾಳುಮಾಡುತ್ತಿರುವುದು ಸಮಾಜದ ಭವಿಷ್ಯಕ್ಕೂ ಗಂಭೀರ ಅಪಾಯಕಾರಿಯಾಗಿದೆ. ವಿದ್ಯಾರ್ಥಿಗಳ ಮನಸ್ಥಿತಿ, ಆರ್ಥಿಕ ಸಂಕಷ್ಟ ಹಾಗೂ ಸಾಮಾಜಿಕ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಅವರನ್ನು ವ್ಯಸನದ ದಾರಿಗೆ ತಳ್ಳುತ್ತಿರುವ ಜಾಲಗಳ ವಿರುದ್ಧ ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ…
ಮಂಗಳೂರು : ಇತ್ತೀಚಿನ ದಿನಗಳಲ್ಲಿ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಮಾದಕ ದ್ರವ್ಯ ಜಾಲದ ಚಟುವಟಿಕೆಗಳು ಸಮಾಜದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿವೆ. ವಿಶೇಷವಾಗಿ ವಿದ್ಯಾರ್ಥಿನಿಯರನ್ನೇ ಡ್ರಗ್ಸ್ ಮಾರಾಟ ಮತ್ತು ಸಾಗಣೆಂತಹ ಹೀನ ಕೃತ್ಯಗಳಿಗೆ ಬಳಸಿಕೊಳ್ಳುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿರುವುದು ಅತ್ಯಂತ ಖಂಡನೀಯ ಎಂದು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಬೇಕಾದ ಯುವಜನತೆಯನ್ನು ಕೆಲ ದುಷ್ಕರ್ಮಿಗಳು ಹಣದ ಆಸೆಗೆ ಮಾದಕ ಜಾಲಕ್ಕೆ ಸೆಳೆದು ಅವರ ಬದುಕನ್ನು ನಾಶಮಾಡುತ್ತಿರುವುದು ಸಮಾಜದ ಭವಿಷ್ಯಕ್ಕೂ ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳ ಮನಸ್ಥಿತಿ, ಆರ್ಥಿಕ ಸಂಕಷ್ಟ ಹಾಗೂ ಸಾಮಾಜಿಕ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಮಾದಕ ವ್ಯಸನದ ದಾರಿಗೆ ತಳ್ಳುವ ಕೀಡಿಗೇಡಿಗಳ ವಿರುದ್ಧ ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ತನಿಖಾ ಸಂಸ್ಥೆಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ವಿದ್ಯಾರ್ಥಿನಿಯರನ್ನು ಬೆದರಿಕೆ, ಆಮಿಷ ಹಾಗೂ ಮೋಸದ ಮೂಲಕ ಡ್ರಗ್ಸ್ ಮಾರಾಟದಂತಹ…
ಮಂಗಳೂರು : ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಕೊಡಿಯಾಲ್ ಬೈಲ್ ವಾರ್ಡಿನ ತಾಳಿಪಾಡಿ ಮನೆ ಎದುರಿನ ಶರಾವತಿ ಅಪಾರ್ಟ್‌ಮೆಂಟ್ ಸಮೀಪದ ರಾಜಕಾಲುವೆಗೆ ಸುಮಾರು ₹30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತಡೆಗೋಡೆ ಕಾಮಗಾರಿಗೆ ಶಾಸಕ D. Vedavyas Kamath ನೇತೃತ್ವದಲ್ಲಿ ಶಿಲಾನ್ಯಾಸ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಮಳೆಗಾಲದ ಸಂದರ್ಭಗಳಲ್ಲಿ ರಾಜಕಾಲುವೆಯಲ್ಲಿ ನೀರು ಉಕ್ಕಿ ಹರಿದು ಸ್ಥಳೀಯ ನಿವಾಸಿಗಳು ಪ್ರತಿವರ್ಷ ತೀವ್ರ ತೊಂದರೆ ಅನುಭವಿಸುತ್ತಿದ್ದರು. ಸ್ಥಳೀಯರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿ ಇದೀಗ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು. “ಈ ಕಾಮಗಾರಿ ಶೀಘ್ರ ಪೂರ್ಣಗೊಂಡು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂಬ ವಿಶ್ವಾಸವಿದೆ. ಜೊತೆಗೆ ಸಮೀಪದ ಎಂ.ಜಿ ರಸ್ತೆಯ ಭಾಗದಲ್ಲಿ ನಿರ್ಮಾಣವಾಗಲಿರುವ ಸೇತುವೆ ಕಾಮಗಾರಿಗೂ ಸುಮಾರು ₹2 ಕೋಟಿ ಅನುದಾನ ಮೀಸಲಿರಿಸಲಾಗಿದೆ. ಆ ಯೋಜನೆ ಪೂರ್ಣಗೊಂಡರೆ ನೀರು ಸರಾಗವಾಗಿ ಹರಿದು ಕೃತಕ ನೆರೆ ಸಮಸ್ಯೆ ಬಹುಮಟ್ಟಿಗೆ ಕಡಿಮೆಯಾಗುವ ಸಾಧ್ಯತೆಯಿದೆ” ಎಂದು ತಿಳಿಸಿದರು. ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ…
ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಗಂಜಿಮಠ ಸಮೀಪದ ಒಡ್ಡೂರು ಪಾರ್ಮ್ಸ್‌ನಲ್ಲಿ ಆಯೋಜಿಸಲಾದ “ಪಂ. ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ–2026” ವರ್ಗದ ಉದ್ಘಾಟನಾ ಸಮಾರಂಭ ಭಾನುವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸದ Capt. Brijesh Chowta, ಇಂತಹ ಪ್ರಶಿಕ್ಷಣ ವರ್ಗಗಳು ಪಕ್ಷದ ಸಂಘಟನೆಗೆ ಬಲ ತುಂಬುವುದರ ಜೊತೆಗೆ ಸಮರ್ಥ ಕಾರ್ಯಕರ್ತರನ್ನು ರೂಪುಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ಶಾಸಕರಾದ D. Vedavyas Kamath ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳು ಮತ್ತು ಸಾಧನೆಗಳ ಕುರಿತು ವಿವರಿಸಿದರು. ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳನ್ನೂ ಪ್ರಸ್ತಾಪಿಸಿ ಕಾರ್ಯಕರ್ತರಿಗೆ ಮಾಹಿತಿ ನೀಡಿದರು. ಎರಡು ದಿನಗಳ ಕಾಲ ನಡೆಯಲಿರುವ ಈ ಪ್ರಶಿಕ್ಷಣ ವರ್ಗದಲ್ಲಿ ಪಕ್ಷ ಸಂಘಟನೆ, ಕಾರ್ಯಪದ್ಧತಿ, ಚಟುವಟಿಕೆಗಳು ಹಾಗೂ ಕಾರ್ಯಕರ್ತರ ಜವಾಬ್ದಾರಿಗಳ ಕುರಿತು ವಿವಿಧ ಪ್ರಮುಖರಿಂದ ವಿಶೇಷ ಅವಧಿಗಳು ನಡೆಯಲಿವೆ ಎಂದು ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ…
ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಒಡ್ಡೂರು ಪಾರ್ಮ್ಸ್‌ನಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ “ಪಂ. ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ–2026” ವರ್ಗ ಯಶಸ್ವಿಯಾಗಿ ಸಮಾಪ್ತಿಗೊಂಡಿತು. ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಂಸದ Nalin Kumar Kateel, ಬಿಜೆಪಿ ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದು ನಿಲ್ಲಲು ನಿರಂತರ ಸಂಘಟನಾ ಚಟುವಟಿಕೆಗಳೇ ಪ್ರಮುಖ ಕಾರಣವಾಗಿವೆ ಎಂದು ಹೇಳಿದರು. “ಅಭ್ಯಾಸ ವರ್ಗ, ಕಾರ್ಯಕಾರಿಣಿ ಸಭೆಗಳು, ಪದಾಧಿಕಾರಿಗಳ ಸಭೆಗಳು ಹಾಗೂ ಪ್ರಶಿಕ್ಷಣ ಕಾರ್ಯಕ್ರಮಗಳು ಕಾರ್ಯಕರ್ತರಲ್ಲಿ ಸಂಘಟನಾ ಶಕ್ತಿ ಮತ್ತು ರಾಷ್ಟ್ರಭಕ್ತಿ ಬೆಳೆಸುತ್ತವೆ. ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ತತ್ವದ ಆಧಾರದ ಮೇಲೆ ಬಿಜೆಪಿ ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಬ್ಬ ಕಾರ್ಯಕರ್ತನಿಗೂ ಜವಾಬ್ದಾರಿ ನೀಡಿ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ತೊಡಗಿಸುತ್ತದೆ” ಎಂದು ಅವರು ಅಭಿಪ್ರಾಯಪಟ್ಟರು. ಭಾರತವನ್ನು ಪರಮ ವೈಭವದತ್ತ ಕೊಂಡೊಯ್ಯುವ ಗುರಿ ಪ್ರತಿಯೊಬ್ಬ ಕಾರ್ಯಕರ್ತನದಾಗಿರಬೇಕು. ಸಂಘಟಿತ ಶಕ್ತಿಯೊಂದಿಗೆ ದೇಶ ಸೇವೆಯ ದಾರಿಯಲ್ಲಿ ಮುಂದುವರಿಯಬೇಕೆಂದು ಅವರು ಕರೆ…
ಮಂಗಳೂರು: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಕನಕದಾಸರ ಎಲ್ಲಾ ಕೃತಿಗಳನ್ನು ದೇಶದ 14 ಭಾಷೆಗಳಲ್ಲಿ ಅನುವಾದ ಮಾಡುವ ಕಾರ್ಯ ಕೈಗೊಂಡು ಅದೀಗ ತಲಾ ಮೂರು ಸಂಪುಟಗಳಲ್ಲಿ ಅಚ್ಚಾಗಿ ಬಿಡುಗಡೆಗೆ ಸಿದ್ಧವಾಗಿವೆ.ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು 14 ಭಾಷೆಗಳಲ್ಲಿ ಅನುವಾದವಾಗಿ ಸಿದ್ಧವಾದ ಸಂಪುಟಗಳನ್ನು ಬಿಡುಗಡೆಗೊಳಿಸಲಿದ್ದಾರೆ. ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತಿತರ ಗಣ್ಯರು ಭಾಗವಹಿಸುವರು. ಸಂಸ್ಕೃತಿ ಚಿಂತಕರಾದ ಬಂಜಗೆರೆ ಜಯಪ್ರಕಾಶ್ ಕೃತಿಗಳ ಕುರಿತು ಮಾತನಾಡುವರು.ಮೂರು ಸಂಪುಟಗಳಲ್ಲಿ ತುಳು ಆವೃತ್ತಿ:ಕರಾವಳಿ ಕರ್ನಾಟಕದ ಪ್ರಮುಖ ಆಡುಭಾಷೆಯಾಗಿರುವ ತುಳುವಿನಲ್ಲಿ ಕನಕದಾಸರ ಸಮಗ್ರ ಕೃತಿಗಳು ಅನುವಾದವಾಗಿದ್ದು ಹಿರಿಯ ಸಂಶೋಧಕ ವಿದ್ವಾಂಸರಾದ ಪ್ರೊ| ಎ.ವಿ. ನಾವಡ ತುಳು ಆವೃತ್ತಿಯ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಮಂದಿ ಹಿರಿಯ ಲೇಖಕರು ಆ ಕೃತಿಗಳನ್ನು ತುಳು ಭಾಷೆಗೆ ಅನುವಾದಿಸಿದ್ದಾರೆ. ದಿ| ಡಾ.ವಾಮನ ನಂದಾವರ, ಡಾ. ವಸಂತ ಕುಮಾರ್ ಪೆರ್ಲ (ಮೋಹನ ತರಂಗಿಣಿ); ಡಾ. ವಸಂತ ಭಾರದ್ವಾಜ, ಪ್ರೊ.ಟಿ…
ಮಂಗಳೂರು, ಮೇ 11 : ತುಳುನಾಡಿನ ಭಾಷೆ, ಸಂಸ್ಕೃತಿ ಹಾಗೂ ಹುತಾತ್ಮ ಕೆದಂಬಾಡಿ ರಾಮಯ್ಯಗೌಡರವರ ಪ್ರತಿಮೆ ನಿರ್ಮಾಣ ಮತ್ತು ಸ್ವಾತಂತ್ಯ ಹೋರಾಟಗಾರರ ಹೆಸರು ಚಿರಸ್ಥಾಯಿಯಾಗಿ ಉಳಿಯುವಲ್ಲಿ ತನ್ನದೇ ಆದ ರೀತಿಯಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ಜನಪರ ಹೋರಾಟಗಳ ಮೂಲಕ ಗುರುತಿಸಿಕೊಂಡಿರುವ ತುಳುನಾಡ ರಕ್ಷಣಾ ವೇದಿಕೆಯ ಕಚೇರಿಗೆ ಜನಪ್ರಿಯ ನ್ಯಾಯವಾದಿಗಳಾದ ಸಮಾಜಮುಖಿ ಕೆಲಸಮಾಡುತ್ತಿರುವ ಜೆಡಿಎಸ್ ಸುಳ್ಯ ತಾಲೂಕು ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿ ಅವರು ದಿನಾಂಕ 11-05-2026 ರಂದು ಭೇಟಿ ನೀಡಿ ಸಂಘಟನೆಯ ಪ್ರಮುಖ ಪದಾಧಿಕಾರಿಗಳೊಂದಿಗೆ ಸೌಹಾರ್ದಯುತ ಸಂವಾದ ನಡೆಸಿದರು .ಜೆಡಿಎಸ್ ಸುಳ್ಯ ಪ್ರಧಾನಕಾರ್ಯದರ್ಶಿ ರಾಕೇಶ್ ಕುಂಟಿಕಾನ ಅವರು ಉಪಸ್ಥಿತರಿದ್ದರು ಈ ವೇಳೆ ತುಳುನಾಡ ರಕ್ಷಣಾ ವೇದಿಕೆಯ ವಿವಿಧ ಸಾಮಾಜಿಕ ಚಟುವಟಿಕೆಗಳು, ಜನಪರ ಕಾರ್ಯಕ್ರಮಗಳು, ಯುವಜನರ ಸಂಘಟನಾ ಬಲವರ್ಧನೆ ಹಾಗೂ ತುಳುನಾಡಿನ ಸಾಂಸ್ಕೃತಿಕ ಪರಂಪರೆಯ ಉಳಿವಿಗೆ ಕೈಗೊಳ್ಳಲಾಗುತ್ತಿರುವ ಕಾರ್ಯಗಳ ಕುರಿತು ಚರ್ಚೆ ನಡೆಯಿತು. ಸಮಾಜಮುಖಿ ಚಟುವಟಿಕೆಗಳಲ್ಲಿ ಪರಸ್ಪರ ಸಹಕಾರದ ಅಗತ್ಯತೆಯನ್ನೂ ನಾಯಕರು ಅಭಿಪ್ರಾಯಪಟ್ಟರು. ಭೇಟಿ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
