What's Hot
- ಮಂಗಳೂರು ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ: ಎಐ ತಂತ್ರಜ್ಞಾನ ಪ್ರಯೋಗ, ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಒತ್ತು
- ಮಂಗಳೂರು : ಕ್ರಿಸ್ ಮಸ್ ಹಬ್ಬ ಸಮಾಜದಲ್ಲಿ ಸತ್ಯ,ನ್ಯಾಯ ಹಾಗೂ ಸಹ ಜೀವನದ ಮೌಲ್ಯಗಳನ್ನು ಮರುಸ್ಥಾಪಿಸುವ ವಿಶಿಷ್ಟ ಅವಕಾಶ ಒದಗಿಸುತ್ತದೆ ; ಧರ್ಮಾಧ್ಯಕ್ಷ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ.
- ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಎಂ.ಆರ್.ಜಿ. ಗ್ರೂಪ್ನ ಆಶಾ–ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆ ‘ನೆರವು–2025’
- ಉಡುಪಿ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್ಗಳನ್ನು ಬಂಧಿಸಿದ ಪಡುಬಿದ್ರೆ ಪೊಲೀಸರು
- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
- ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕ ಸ್ಥಾನ , ನಿರ್ದೇಶಕರ ಭವಿಷ್ಯ ಕುರಿತಾಗಿ ಚರ್ಚೆಗೂ ದಾರಿ ?
- ಮಂಗಳೂರು: MDMA ಸಾಗಾಟ ಜಾಲ ಭೇದಿಸಿದ ಸಿಸಿಬಿ; ಮೂವರು ಆರೋಪಿಗಳು ಬಂಧನ
- ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸ್ ಕ್ರಮ ಖಂಡನೀಯ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ತೀವ್ರ ಆಕ್ರೋಶ
Author: Tulunada Surya
ನಮ್ಮ ಹೆಲ್ಪ್ ಲೈನ್ ಸೇವಾ ತಂಡದ ಮುಖಾಂತರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು ಈ ಯೋಜನೆ . ಈ ಪುಣ್ಯ ಕಾರ್ಯದಲ್ಲಿ ತಂಡದ ಸಹಕಾರ ಶ್ಲಾಘನೀಯ. ಸರಕಾರಿ ಪ್ರೌಢ ಶಾಲೆ ಕೆಂಜಾರು ಇಲ್ಲಿ ಮಕ್ಕಳಿಗೆ ಇಂದು ಪುಸ್ತಕ ವಿತರಣೆ ಮಾಡಿರುತ್ತೇವೆ.ಇನ್ನು ಮುಂದೆಯೂ ನಮ್ಮ ತಂಡದಿಂದ ಇದೇ ರೀತಿಯಾದ ಅನೇಕ ರೀತಿಯ ಸಮಾಜಮುಖಿ ಕೆಲಸಗಳು ನಡೆಯಬೇಕು. ಜನ ಸೇವೆಯೇ ನಮ್ಮ ಗುರಿಯಾಗಬೇಕು.🙏ಈ ಸಮಾರಂಭದಲ್ಲಿ ಹೆಲ್ಪ್ ಲೈನ್ ಸೇವಾ ತಂಡದ ಸ್ಥಾಪಕರಾದ ಮಹೇಶ್ ಅಮಿನ್, ಸದಸ್ಯರುಗಳಾದ ಶ್ರೀ ಕೃಷ್ಣ ಕುಳಾಯಿ , ಶ್ರೀ ಜಯಂತ್ ಕೊಳಂಬೆ, ಶ್ರೀಮತಿ ವಿನುತಾ ಕೊಡಿಯಾಲ್ ಗುತ್ತು, ಕು. ಪ್ರಜ್ಞಾ ಅಮಿನ್, ಶ್ರೀ ನಿರಂಜನ್, ಗುರುರಾಜ್, ಸತೀಶ್,ಶ್ರೀಮತಿ ಪ್ರಮೀಳಾ, ಶ್ರೀಮತಿ ಸರಸ್ವತಿ, ಶ್ರೀಮತಿ ಡೀಲಕ್ಷಿ , ಕಾರ್ಯಕ್ರಮದ ಮುಖ್ಯ ಕೇಂದ್ರ ಬಿಂದುಗಳಾದ ಶಾಲಾ ಮಕ್ಕಳು ಉಪಸ್ಥಿತರಿದ್ದರು.ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಶ್ರೀಮತಿ ಉಮಾಕ್ಷಿ ಎಸ್. ಎಂ ಇವರು ಬಂದಂತಹ ಅಥಿತಿಗಳನ್ನು ಸ್ವಾಗತಿಸಿದರು, ಅಧ್ಯಕ್ಷತೆ ಶ್ರೀಮತಿ ವಿನೋದಾ, ಶ್ರೀಮತಿ ಮಮತಾ ವಿ ಅಮಿನ್…
ಮೂಡುಬಿದಿರೆ ಕ್ಷೇತ್ರದ ಶಾಸಕರಾಗಿ, ಕರ್ನಾಟಕ ಸರಕಾರದ ಸಚಿವರಾಗಿ ಸೇವೆ ಸಲ್ಲಿಸಿ ಸ್ವಕ್ಷೇತ್ರದಲ್ಲಿ ಅಭಿವೃದ್ಧಿಗೆ ಹೊಸ ಛಾಪು ನೀಡಿದ್ದ ಮಾಜಿ ಸಚಿವ, ಮಾಜಿ ಶಾಸಕರೂ ಆದ ದಿ.ಕೆ.ಅಮರನಾಥ ಶೆಟ್ಟಿ ಅವರ ನೆನಪಿನಲ್ಲಿ ಪ್ರಾರಂಭಗೊಂಡಿರುವ ಕೆ.ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀರ್ಕೆರೆ ಸ.ಹಿ.ಪ್ರಾ .ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕಗಳನ್ನು ವಿತರಿಸಲಾಯಿತು. ಟ್ರಸ್ಟಿಗಳಾದ ಜಯಶ್ರೀ ಶೆಟ್ಟಿ, ಡಾ.ಅಮರಶ್ರೀ ಶೆಟ್ಟಿ ಹಾಗೂ ಆಶ್ರಿತಾ ಪಿ.ಶೆಟ್ಟಿ ಅವರು ಈ ಸಂದರ್ಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ‘ ಈ ಟ್ರಸ್ಟ್ ಮೂಲಕ ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಸಮಾಜಮುಖಿ ಕಾರ್ಯಕ್ರಮಗಳ ಯೋಜನೆಯನ್ನು ರೂಪಿಸಲಾಗಿದೆ’ ಎಂದರು.ಮರಿಯಡ್ಕ ರಮೇಶ್ ಶೆಟ್ಟಿ, ತುಳುನಾಡು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಮಕೃಷ್ಣ ಶೆಟ್ಟಿ, ಬಿ.ಎಸ್.ಜೆ.ಎಂ.ಅಧ್ಯಕ್ಷರಾದ ಎಂ.ಎ.ಎಸ್.ಆಸಿಫ್ ಇಕ್ಬಾಲ್,ಪಂಚಾಯತ್ ಸದಸ್ಯರಾದ ಜೆ.ಕೆ.ಹಸನಬ್ಬ,ಹರಿಪ್ರಸಾದ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಜಯಲಕ್ಷ್ಮಿ ಶೆಟ್ಟಿಗಾರ್,ನೇಮಿರಾಜ್ ಶೆಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಂಗಳೂರು:ಮನೆ ನಿರ್ಮಾಣ ಸೇರಿದಂತೆ ವಿವಿಧ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಯಮಗಳನ್ನು ಸರಳೀಕರಿಸುವ ಬಗೆ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಬುಧವಾರ ಸುಳ್ಯದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಸುಳ್ಯ ನಗರ ಯೋಜನಾ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.ನಿವೇಶನಗಳ ನೋಂದಣಿ, ನಕ್ಷೆ ಮಂಜೂರಾತಿ, ಖಾತೆ, 9/11, ಏಕ ನಿವೇಶನ ಸೇರಿದಂತೆ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಹಲವಾರು ನಿಯಮಗಳನ್ನು ಪಾಲಿಸಬೇಕಿರುವುದರಿಂದ ಸಾರ್ವಜನಿಕರಿಗೆ ಮನೆ ನಿರ್ಮಿಸಲು ವಿಳಂಬವಾಗುತ್ತಿರುವ ಬಗ್ಗೆ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ಹಲವಾರು ಅಹವಾಲುಗಳು ಬಂದಿದೆ. ಯಾವುದೇ ನಗರವನ್ನು ವೈಜ್ಞಾನಿಕವಾಗಿ ಅಭಿವೃದ್ಧಿ ಪಡಿಸಲು ನಗರ ಯೋಜನಾ ಪ್ರಾಧಿಕಾರ ಅಗತ್ಯವಾಗಿದೆ. ಆದರೂ ಇದರಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಬಾರದೆಂದು ಸರಕಾರದ ಕಾಳಜಿಯಾಗಿದೆ. ಈ ನಿಟ್ಟಿನಲ್ಲಿ ನಿಯಮಗಳನ್ನು ಸರಳೀಕರಿಸಿ ತ್ವರಿತವಾಗಿ ಇಂತಹ ಮಂಜೂರಾತಿ ನೀಡುವ ಬಗ್ಗೆ ಸರಕಾರ ಗಮನ ಹರಿಸಲಿದೆ ಎಂದು ಅವರು ತಿಳಿಸಿದರು. ನಿವೇಶನ…
ಕರ್ನಾಟಕ ರಾಜ್ಯ ಸರ್ಕಾರವು ಆಡಳಿತಾತ್ಮಕ ಹಲವು ಬದಲಾವಣೆ ಮಾಡಲು ದಿನಾಂಕ 17-06-2025 ರಂದು ಹಲವು ಐ.ಎ.ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಇದರಲ್ಲಿ ಐವರು ಜಿಲ್ಲಾಧಿಕಾರಿಗಳು ಸೇರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಅವರಿಂದ ತೆರವಾದ ಸ್ಥಾನಕ್ಕೆ ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ ಉಡುಪಿ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ವರೂಪ ಟಿ ಕೆ ನೇಮಕ ಮಾಡಲಾಗಿದೆ ಬಾಗಲಕೋಟೆ ಜಿಲ್ಲೆಯ ಉಪ ಆಯುಕ್ತರಾದ ಶ್ರೀಮತಿ ಜಾನಕಿ ಕೆ ಎಂ, ಐಎಎಸ್ (ಕೆಎನ್: 2012) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ, ಬೆಂಗಳೂರು, ಡಾ. ವಿಶಾಲ್ ಆರ್, ಐಎಎಸ್ ಅವರನ್ನು ಸಮಕಾಲೀನ ಪ್ರಭಾರದಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಯ ಉಪ ಆಯುಕ್ತರಾದ ಶ್ರೀಮತಿ ಸತ್ಯಭಾಮ ಸಿ, ಐಎಎಸ್ (ಕೆಎನ್:…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲಿಜನ್ ನವರ ಸಹಯೋಗದಲ್ಲಿ ಯೂನಿಯನ್ ಪ್ರೌಢಶಾಲೆ ಮಾಜಾಳಿಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ವಿಜ್ಞಾನ ಶಿಕ್ಷಕಿ ಶ್ರೀಮತಿ ಕಪಿಲಾ ಜಿ ನಾಯ್ಕರವರು ಪರಿಸರದ ಮಹತ್ವ ಹಾಗೂ ಉದ್ದೇಶವನ್ನು ವಿವರಿಸಿದರು. ಪರಿಸರವನ್ನು ಸಂರಕ್ಷಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬುದನ್ನು ತಿಳಿಸಿದರು. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ಅಧ್ಯಕ್ಷೆ Snr ಮಲ್ಲಿಕಾ ಜೆ ರೈಯವರು ಉಪಸ್ಥಿತರಿದ್ದು ಮಾಹಿತಿ ನೀಡಿದರು. ವಿಶ್ವ ಪರಿಸರ ದಿನಾಚರಣೆ ನಿಮಿತ್ತ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ನಂತರ ಬಹುಮಾನವನ್ನು ವಿತರಿಸಲಾಯಿತು . ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಶಿಲ್ಪಾ ಸಾಲುಂಕೆ, ಶಿಕ್ಷಕ ಶಿಕ್ಷಕಿಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 17ರ ಮಂಗಳವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಘೋಷಿಸಿರುವುದಿಲ್ಲ.
ಇಂದು16.6.25ರಂದು ಬೆಳಿಗ್ಗೆ 10.25ಕ್ಕೆ ಭಾರತೀಯ ಸಂತ ಪರಿಷತ್ ನ ಚರಿತ್ರಾರ್ಹ ಕಾರ್ಯಕ್ರಮ ಬೆಂಗಳೂರು ಕೋಣನ ಕುಂಟೆ ಬಳಿ ಯ ಆರ್ಟ್ ಕನ್ವನ್ಶ ನ್ ಸೆಂಟರ್ ನಲ್ಲಿ ಸಹಸ್ರಾರು ಸನಾತನ ಧರ್ಮ ದ ಏಕತೆ ಗಾಗಿ ಸಂತ ರ ಉಪಸ್ಥಿತಿ ಯಲ್ಲಿ ಏಕ ಕಾಲದಲ್ಲಿ ಉದ್ಘಾಟನೆ ಗೊಂಡಿತು ಹರಿ ಹರಶ್ರೀ ಮಠ ಸ್ವಯಂ ಪ್ರಕಾಶ ಸ್ವಾಮೀಜಿ ಸುತ್ತೂರು ಶ್ರೀ ಶಿವ ರಾತ್ರಿ ಕೇಂದ್ರ ಸ್ವಾಮೀಜಿ ಚುಂಚನಗಿರಿ ಸ್ವಾಮೀಜಿ, ಪೇಜಾವರ ಸ್ವಾಮೀಜಿ ಮೂಡು ಬಿದಿರೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಸೊಂದಾ ಸ್ವರ್ಣ ವಲ್ಲಿ, ರಾಮಚಂದ್ರ ಪುರ ಮಠ ಸ್ವಾಮೀಜಿ, ಸಿರಿಗೆರೆ ಸ್ವಾಮೀಜಿ ಅದಮಾರು ಸ್ವಾಮೀಜಿ ಸಾಯಿ ಸ್ವಾಮೀಜಿ, ಸೈoಗೋಲ್, ಕಂಚಿ ಸ್ವಾಮೀಜಿ,ಕೊಲ್ಲಾಪುರ ಕನೇರಿ ಮಠ ಸ್ವಾಮೀಜಿ, ಹೊಸ ಮಠ ಹುಬ್ಬಳ್ಳಿ ಲೋಕೇಶ್ ಮುನಿ, ಬೌದ್ಧ ಮಠ ದ ಸ್ವಾಮೀಜಿ, ಸೇರಿದಂತೆ ಎಲ್ಲಾ ಪೂಜ್ಯರು ಏಕ ಕಾಲದಲ್ಲಿ ಕಾರ್ಯಕ್ರಮ ಮೊದಲ ಎರಡು ಸಾಲಿನ ಸ್ವಾಮೀಜಿ ಬಲ ಕೈಯಲ್ಲಿ ದೀಪ ಬೆಳಗಿಸಿ ಸನಾತನ ಪರಂಪರೆ ಯ…
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಸಮಿತಿ ವತಿಯಿಂದ ಎಸ್‌ಡಿಎಂ ಪಿ.ಜಿ.ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನ ಸಹಯೋಗದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ನಗರದ ಕೊಡಿಯಾಲ್‌ಬೈಲ್‌ನ ಎಸ್‌ಡಿಎಂ ಕಾನ್ಫರೆನ್ಸ್ ಹಾಲ್‌ನಲ್ಲಿ ಶನಿವಾರ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್.ತಿಮ್ಮಯ್ಯ ಮಾತನಾಡಿ ‘ ನಿರಂತರ ರಕ್ತದಾನ ಮಾಡುವ ರಕ್ತದಾನಿಗಳ ದೇಹದಲ್ಲಿ ಶುದ್ದ ರಕ್ತ ಉತ್ಪಾದನೆಯಾಗುತ್ತಲೇ ಇರುವ ಕಾರಣ ಹೆಚ್ಚು ಆರೋಗ್ಯವಂತರಾಗಿರುತ್ತಾರೆ. ಇದರಿಂದ ಅವರ ಹೃದಯವೂ ಆರೋಗ್ಯ ಪೂರ್ಣವಾಗಿರುತ್ತದೆ. ತುರ್ತು ಸಂದರ್ಭ ಜೀವ ಉಳಿಸಲು ನೆರವಾಗುವ ರಕ್ತದಾನದ ಬಗ್ಗೆ ಯುವ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅವಶ್ಯ’ಎಂದರುಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ ‘ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭ ಅವಶ್ಯ ಇರುವವರಿಗೆ ರೆಡ್‌ಕ್ರಾಸ್‌ನ ಬ್ಲಡ್ ಬ್ಯಾಂಕ್ ವತಿಯಿಂದ ಸಂಪೂರ್ಣ ಉಚಿತವಾಗಿ ರಕ್ತ ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಿಪಿಎಲ್ ಕಾರ್ಡ್ ಇರುವವರು ಯಾವುದೇ ಆಸ್ಪತ್ರೆಯಲ್ಲಿ ದಾಖಲಾದರೂ ರೆಡ್‌ಕ್ರಾಸ್‌ನಿಂದ ಉಚಿತವಾಗಿ ರಕ್ತ ಒದಗಿಸಲು ಯೋಜನೆ ರೂಪಿಸಲಾಗುವುದು ಎಂದರು.ವೆನ್ಲಾಕ್ ಆಸ್ಪತ್ರೆಯ…
ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಕಮಿಷನರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವರು, ಅಧಿಕಾರಿಗಳು ಸ್ಥಳದಲ್ಲಿದ್ದು, ಮಳೆ ಹಾನಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಸೂಚಿಸಿದರು. ರಸ್ತೆ ಮಾರ್ಗಗಳಲ್ಲಿ ಗುಡ್ಡ ಕುಸಿತವಾದ ಸ್ಥಳಗಳಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಬೇಕು. ನ್ಯಾಷನಲ್ ಹೈವೇ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರಸ್ತೆ ಸಂಪರ್ಕ ಕಡಿತವಾದ ಸ್ಥಳಗಳಲ್ಲಿ ಸಮಸ್ಯೆ ಬಗೆಹರಿಸಿ. ನೀರು ನುಗ್ಗಿರುವ ತಗ್ಗು ಪ್ರದೇಶಗಳಲ್ಲಿ ಕುಟುಂಬಗಳನ್ನ ಪುನರ್ವಸತಿ ಕೇಂದ್ರಗಳಿಗೆ ಸ್ಥಾಳಂತರಿಸುವಂತೆ ಸಚಿವರು ಸೂಚಿಸಿದರು. ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲಾ ತಹಶೀಲ್ದಾರರು ಹಾಗೂ ಅಧಿಕಾರಿಗಳು ಸ್ಥಳದಲ್ಲಿದ್ದು ಕಾರ್ಯನಿರ್ವಹಿಸಬೇಕು. ಅಪಾಯದ ಅಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಕೂಡಲೇ ಸ್ಥಳಾಂತರಿಸಲು ಕ್ರಮ ತೆಗೆದುಕೊಳ್ಳಿ. ರಕ್ಷಣಾ ಸಾಮಾಗ್ರಿಗಳನ್ನು ಸನ್ನದ್ಧವಾಗಿರಿಸಿಕೊಂಡು, ಯಾವುದೇ ಸಾವು ನೋವು ಸಂಭವಿಸದಂತೆ…
ಮಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ, ರಾಜಕಾಲುವೆ ಸೇರುವ ನೇತ್ರಾವತಿ ತೀರದ ಕಡೇಕಾರು ಪ್ರದೇಶ, ಮೊದಲಾದ ಪ್ರದೇಶಗಳ, ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ ಪರಿಹಾರ ಕ್ರಮ ಇತ್ಯಾದಿ ವಿಷಯಗಳ ಬಗ್ಗೆ ಸ್ಥಳೀಯರ ಅಭಿಪ್ರಾಯದ ಮೇರೆಗೆ ಕೂಡಲೇ ಕ್ರಮಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ವಿಶೇಷವಾಗಿ ಎಕ್ಕೂರಿನ ಧ್ರುವ ರೆಸಿಡೆನ್ಸಿ ಸಮೀಪದ ರಾಜಕಾಲುವೆ ಬಳಿ ಇರುವ ಬೃಹತ್ ಖಾಸಗಿ ಕಾಂಪೌಂಡ್ ಕುಸಿದಿದ್ದೇ ಜಪ್ಪಿನಮೊಗರು, ಗಣೇಶ ನಗರ ಪರಿಸರ, ದೊಂಪದ ಬಲಿ, ಹೊಯ್ಗೆ ರಾಶಿ, ಮುಳುಗಡೆಯಾಗಲು ಕಾರಣವಾಗಿದೆ, ಕೆಲವೆಡೆ ಇದೇ ಮೊದಲ ಬಾರಿ ನೆರೆ ಬಂದಿದ್ದರೆ, ಉಳಿದೆಡೆ ಈ ಹಿಂದೆಯೂ ಸಮಸ್ಯೆ ತಲೆದೋರಿತ್ತು,…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
