Author: Tulunada Surya

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜೂನ್ 16 (ಇಂದು) ಸೋಮವಾರ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ತರಗತಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. ಭಾನುವಾರ ರಾತ್ರಿ ಜಿಲ್ಲೆಯ ಐದು ತಾಲೂಕುಗಳಿಗೆ ಮಾತ್ರ ರಜೆ ಘೋಷಿಸಿ ಡಿಸಿ ಆದೇಶ ಹೊರಡಿಸಿದ್ದರು. ಆದರೆ ಇದೀಗ ಮಳೆ ವ್ಯಾಪಕವಾಗಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಆದೇಶ ಪರಿಷ್ಕರಿಸಿದ್ದು ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ ಘೋಷಣೆ ಮಾಡಿದ್ದಾರೆ. ಉಳಿದಂತೆ ಜಿಲ್ಲೆಯಲ್ಲಿ ವಿವಿಧ ಮಳೆ ಸಂಬಂಧಿತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಡಿಸಿ ಸೂಚಿಸಿದ್ದಾರೆ.

Read More

ಮಂಗಳೂರು : ಭಾರತದಲ್ಲಿ ಕ್ರಿಕೆಟ್ ಅಂದರೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಕರಾವಳಿಯಲ್ಲಿ ಅಂಡರ್ ಆರ್ಮ್ ಕ್ರಿಕೆಟ್ ಎಂದರೆ ಒಂದು ಆರಾಧನೆಯಾಗಿದೆ. ಅದೇ ಅಂಡರ್ ಆರ್ಮ್ ಕ್ರಿಕೆಟ್ ನ ಕಥೆ ತುಳು ಸಿನಿಮಾದಲ್ಲಿ ಬರುತ್ತಿದೆ ಎಂದರೆ ಅಭಿಮಾನಿಗಳಿಗೆ ಒಂದು ಹಬ್ಬ. ಹೌದು ಭಾರತದಲ್ಲಿ ಪ್ರಪ್ರಥಮ ಬಾರಿಗೆ ಅಂಡರ್ ಆರ್ಮ್ ಕ್ರಿಕೆಟ್ ಕಥೆಯನ್ನು ಗಜಾನನ ಕ್ರಿಕೆಟರ್ಸ್ ಸಿನಿಮಾದ ಮೂಲಕ ತೆರೆದಿಡಲಾಗಿದೆ. ಈ ಚಿತ್ರದ ಮೊದಲ ನೋಟ ಬಿಡುಗಡೆಯಾಗಿದ್ದು ಚಿತ್ರ ಪ್ರೇಮಿಗಳೆಲ್ಲ ಹುಬ್ಬೇರಿಸಿ ನೋಡುತ್ತಿದ್ದಾರೆ. ಈ ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ಅನ್ವಿತಾ ಸಾಗರ್, ಸಮತಾ ಅಮೀನ್, ಪ್ರಜ್ವಲ್ ಶೆಟ್ಟಿ, ನವೀನ್ ಡಿ ಪಡಿಲ್, ಅರವಿಂದ ಬೋಳಾರ್, ಬೋಜರಾಜ್ ವಾಮಂಜೂರ್, ಪ್ರಕಾಶ್ ತುಮಿನಾಡ್, ದೀಪಕ್ ರೈ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ವಾಲ್ಟರ್ ನಂದಳಿಕೆ, ಸಚಿನ್ ಮಾಡ ಸೇರಿದಂತೆ ಕರಾವಳಿಯ ಹಾಲವಾರು ಹೆಸರಾಂತ ಕಲಾವಿದರು ನಟಿಸಿದ್ದಾರೆ. ಇದರಿಂದ ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದ್ದು ಆದಷ್ಟು ಬೇಗ ಚಿತ್ರಮಂದಿರದಲ್ಲಿ ಸಿನಿಮಾ…

Read More

ದಿನಾಂಕ 14-05-2025 ಕೆಲವು ದಿನಗಳ ನಿರಂತರ ಮಳೆಯಿಂದಾಗಿ ಪಡೀಲ್ , ಕಾರ್ ಸ್ಟ್ರೀಟ್ , ಜಪ್ಪಿನಮೊಗರು, ಪಂಪ್‌ವೆಲ್, ಬಿಕರ್ನಕಟ್ಟೆ, ಕೈಕಂಬ ಮತ್ತು ಇತರ ನಗರ ಪ್ರದೇಶಗಳು ಸೇರಿದಂತೆ ಮಂಗಳೂರಿನ ವಿವಿಧ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಮಳೆನೀರು ರಸ್ತೆಗಳಿಗೆ ಉಕ್ಕಿ ಮನೆಗಳು ಮತ್ತು ಅಂಗಡಿಗಳಿಗೆ ನುಗ್ಗಿ ನಿವಾಸಿಗಳು ಮತ್ತು ವ್ಯಾಪಾರಿಗಳಿಗೆ ತೊಂದರೆ ಉಂಟುಮಾಡಿದೆ. ಮಳೆನೀರು ರಸ್ತೆಯ ಉದ್ದಕ್ಕೂ ಅನಿಯಂತ್ರಿತವಾಗಿ ಹರಿಯುತ್ತಿರುವುದನ್ನು ಮತ್ತು ಅದನ್ನು ಬೇರೆಡೆಗೆ ತಿರುಗಿಸಲು ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದನ್ನು ಸಮಸ್ಯೆಯೂ ಸಮಸ್ಯೆ ಯಾಗಿಯೇ ಉಳಿದಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಮಳೆಗಾಲದಲ್ಲಿ ಮರುಕಳಿಸುವ ಪ್ರವಾಹವನ್ನು ತಡೆಗಟ್ಟಲು ಮಳೆನೀರು ಚರಂಡಿಗಳನ್ನು ನಿರ್ಮಿಸಲು ಮತ್ತು ದುರಸ್ತಿ ಮಾಡಲು ತುರ್ತು ಕ್ರಮ ಕೈಗೊಳ್ಳವ ಅಗತ್ಯ ಎದ್ದು ಕಾಣುತ್ತಿತ್ತು.

Read More

ಮಂಗಳೂರಿನಲ್ಲಿ ಸ್ಪೆಷಲ್ ಆಕ್ಷನ್ ಪೋರ್ಸ್ ಕಾರ್ಯಪಡೆ ಕಚೇರಿಯನ್ನು ಇಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ರವರು ಉದ್ಘಾಟಿಸಿದರು. ದಕ ಜಿಲ್ಲೆಯ ಜನ ಸುಂಸ್ಕೃತರು, ಇಲ್ಲಿನ ಜನರ ಮನಸ್ಥಿತಿ ಸಂಸ್ಕೃತಿ ಬೇರೆ ಇದೆ ಕಲೆ ಸಾಹಿತ್ಯ ಉಳಿದಿದ್ದರೆ ಅದು ದಕ ಜಿಲ್ಲೆಯಿಂದ ಜಗತ್ತಿನ ಬೇರೆ ಬೇರೆ ಕಡೆಗೆ ಹೋದ ಇಲ್ಲಿನ ಜನ ತಮ್ಮ ಛಾಪು ಮೂಡಿಸಿದವರು ಇಲ್ಲಿ ಸರ್ಕಾರಿ ಶೈಕ್ಷಣಿಕ ವ್ಯವಸ್ಥೆ ಗಳು ಬರುವ ಮುಂಚೆಯೇ ಖಾಸಗಿ ಮೆಡಿಕಲ್ ಕಾಲೇಜುಗಳು ಇತ್ತು ಇಲ್ಲಿ ಮತೀಯ ಭಾವನೆ,ದ್ವೇಷದ ವಾತಾವರಣವನ್ನು ಹತ್ತಿಕ್ಕಲು ತೀರ್ಮಾನ ಮಾಡುತ್ತಿದೆ ಎಂದರು. ಈ ಹಿಂದಿನ ಕಮೀಷನರ್ ಪೊಲೀಸ್ ಗೆ ಹೇಳಿದ್ದೆ ಇರುವ ಸಿಬ್ಬಂದಿ ಯಲ್ಲಿ ಟಾಸ್ಕ್ ಫೋರ್ಸ್ ತಯಾರು ಮಾಡೋಕೆ ಹೇಳಿದ್ದು ಆಗ ಕಮೀಷನರ್ ಆಗಿದ್ದವರು ಕುಲದೀಪ್ ಕುಮಾರ್ ಜೈನ್ ರವರು ಮಟ್ಟಿಗೆ ಈ ಸಂಘರ್ಷವನ್ನು ತಡೆದಿದ್ದರು ಆದರೆ ಇತ್ತೇಚೆಗೆ ಕೊಲೆ ಆದಾಗ ಭೇಟಿ ನೀಡಿದಾಗ ವಿಶೇಷ ಕಾರ್ಯಪಡೆ ಮಾಡೋಕೆ ತೀರ್ಮಾನ ಮಾಡಿದ್ದೆಆ ಸಂಧರ್ಭದಲ್ಲಿ ಎಸ್ ಎ ಎಫ್ ಮಾಡುವ…

Read More

ಸುರತ್ಕಲ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಸೂಪರ್ ಕಾಪ್, ದಕ್ಷ ಪೊಲೀಸ್ ಅಧಿಕಾರಿಯಾಗಿ ಜಿಲ್ಲೆ ಮತ್ತು ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಜನಸಾಮಾನ್ಯರಿಗೆ ಪ್ರೀತಿ ಪಾತ್ರರಾಗಿದ್ದವರು ಅಂತಹ ದಕ್ಷ ಅಧಿಕಾರಿಗಳ ಅಗತ್ಯ ಮಂಗಳೂರು ನಗರಕ್ಕೆ ಬರಲಿ ಎಂದು ಮಂಗಳೂರಿನ ಹೆಚ್ಚಿನ ಜನರು ಆಶಿಸುತ್ತಿದ್ದರು. ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಇದೀಗ ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ರಾಗಿ ಅಧಿಕಾರ ಸ್ವೀಕರಿಸಿದರು.

Read More

ಮಂಗಳೂರು ನಗರ ಪೊಲೀಸ್ ಹಾಗೂ ಪಶ್ಚಿಮ ವಲಯದ 4 ಜಿಲ್ಲೆಗಳ ಕಾನೂನು ಮತ್ತು ಸುವ್ಯವಸ್ಥೆಯ ಕುರಿತಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು ಕಟ್ಟುನಿಟ್ಟಿನ ಕ್ರಮ ವಹಿಸಿವಂತೆ ಸೂಚಿಸಿದೆ. ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಮಟ್ಟ ಹಾಕುವ ನಿಟ್ಟಿನಲ್ಲಿ, ದಂಧೆಕೋರರ ಚಲನವಲನಗಳ ಮೇಲೆ ತೀವ್ರ ನಿಗಾವಹಿಸಿ, ಕಾನೂನು ಕ್ರಮ ಕೈಗೊಳ್ಳಬೇಕು. ವಾಹನ ಸಂಚಾರ ನಿಯಮ ಉಲ್ಲಂಘನೆ ಹೆಚ್ಚಾಗುತ್ತಿದೆ. 18 ವರ್ಷದೊಳಗಿನ ಮಕ್ಕಳು ವಾಹನ ಚಲಾಯಿಸುತ್ತಿದ್ದು, ಅಪಘಾತಗಳು ಸಂಭವಿಸಿ ಸಾವು ನೋವುಗಳಾಗುತ್ತಿವೆ. ಇದನ್ನು ತಡೆಗಟ್ಟಲು ಅಗತ್ಯ ಕಾರ್ಯಾಚರಣೆ ಮತ್ತು ಜಾಗೃತಿ ಮೂಡಿಸಬೇಕು. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಮೇಲೆ ದೌರ್ಜನ್ಯ ಎಸಗಿದ ಆರೋಪಿಗಳು ಕಾನೂನಿಂದ ತಪ್ಪಿಸಿಕೊಳ್ಳಬಾರದು. ನ್ಯಾಯಾಲಯದ ವಿಚಾರಣೆ ವೇಳೆ ಅಗತ್ಯ ಸಾಕ್ಷ್ಯಾದರಗಳನ್ನು ಒದಗಿಸಿ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ನೊಂದವರು ಠಾಣೆಗೆ ಬಂದಾಗ ಅವರ ದೂರನ್ನು ಆಲಿಸಿ, ರಕ್ಷಣೆ ನೀಡಬೇಕು ಎಂದು…

Read More

ಮಂಗಳೂರು,:- ಕರ್ನಾಟಕ ಸರಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನಾ ಸಂಭ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಕೆ.ಎಸ್.ಆರ್.ಟಿ.ಸಿ. ಮಂಗಳೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿ ಪ್ರದರ್ಶನಕ್ಕೆ ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರು ಗುರುವಾರ ಚಾಲನೆ ನೀಡಿದರು.   ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕಾರ್ಯಕ್ರಮಗಳು ಆಯೋಜಿಸಿ ಜನರ ಗಮನ ಸೆಳೆಯುವಂತೆ ಮಾಡುತ್ತಿದ್ದು, ಈ ಯೋಜನೆಗಳು ಜನರ ಮನೆಯ ಬಾಗಿಲಿಗೆ ತಲುಪಿಸುವುದರ ಜೊತೆಗೆ ಸರ್ಕಾರದಿಂದ ಜಾರಿ ಮಾಡುವಂತಹ ಯೋಜನೆಗಳ ಸೌಲಭ್ಯಗಳನ್ನು ಯಾವ ರೀತಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ ಅವರು, ಸರಕಾರದ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸಲು ರಾಜ್ಯದ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಹಿತಿ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.  ಕರ್ನಾಟಕ ರಸ್ತೆ ಸಾರಿಗೆ…

Read More

ಮಂಗಳೂರು :  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ  ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ” ಗುರುವಾರ  ನಗರದ ಪುರಭವನ ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆಯಿತು.   ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ವಿರುದ್ಧ ನಿರಂತರವಾಗಿ ಹೋರಾಡಿದರೆ ಮಾತ್ರ  ದಕ್ಷಿಣ ಕನ್ನಡ ಜಿಲ್ಲೆ ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗಬಹುದು.  ’ಸ್ಟೂಡೆಂಟ್ ಲೈಫ್ ಇಸ್ ಗೋಲ್ಡನ್ ಲೈಫ್’ ಎಂಬ ಮಾತಿದೆ.  ವಿದ್ಯಾರ್ಥಿ ಜೀವನ  ಎಂಬುದು  ಚಿನ್ನದಂತಹ ಅವಕಾಶ ಮತ್ತು  ಶಿಕ್ಷಣ ಪ್ರತಿಯೊಬ್ಬರ ಜೀವನದ ಮುಖ್ಯವಾದ  ಹಂತ.   ಮಕ್ಕಳು ಶಿಕ್ಷಣ ಎಂಬ  ಅವಕಾಶದಿಂದ  ವಂಚಿತರಾಗಬಾರದು. ಬಾಲಕಾರ್ಮಿಕತೆಯನ್ನು ನಿರ್ಮೂಲನೆಗೊಳಿಸಿ ಶಿಕ್ಷಣ ಎಂಬ ಅವಕಾಶವನ್ನು ಅವರಿಗೆ ನೀಡಿದರೆ   ನಮ್ಮ ದೇಶ ಬಲಿಷ್ಠವಾಗಬಹುದು. ಮಕ್ಕಳು ಮಾನಸಿಕ ಮತ್ತು ದೈಹಿಕ…

Read More

ಮಂಗಳೂರು:- ರೈತರು ಹಾಗೂ ಉತ್ಪಾದಕರಿಗೆ ನೇರ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ನಾನಾ ಮೇಳಗಳು ಮತ್ತು ವಸ್ತು ಪ್ರದರ್ಶನಗಳನ್ನು ಆಯೋಜಿಸುತ್ತಾ ಬಂದಿದೆ. ಕಳೆದ ದಶಕದಿಂದ ಹಣ್ಣುಗಳ ಉತ್ಸವ ಮತ್ತು ಹಲಸು ಮೇಳವನ್ನು ಯಶಸ್ವಿಯಾಗಿ ನಡೆಸುತ್ತಾ ಬಂದಿದ್ದು, ಸಾರ್ವಜನಿಕರಿಂದ ವಿಶಿಷ್ಟ ಮೆಚ್ಚುಗೆಗಳನ್ನು ಗಳಿಸಿದೆ.ಈ ಬಾರಿ ಹಣ್ಣುಗಳ ಮೇಳವನ್ನು ಜೂನ್ 14 ಮತ್ತು 15 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಪಿಲಿಕುಳದ ಅರ್ಬನ್ ಹಾಥ್ ಮಳಿಗೆಗಳ ಸಂಕೀರ್ಣ, ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಆಯೋಜಿಸಲಾಗಿದೆ. ಮೇಳದಲ್ಲಿ ದಕ್ಷಿಣ ಕನ್ನಡ ಸಹಿತ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು, ಉತ್ಪಾದಕರು, ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ವಿವಿಧ ಸಂಸ್ಥೆಗಳು ಭಾಗವಹಿಸಿ ತಮ್ಮ ಮೌಲ್ಯಾಧಾರಿತ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಅವಕಾಶ ಹೊಂದಿದ್ದಾರೆ.ಮೇಳದ ಪ್ರಮುಖ ಆಕರ್ಷಣೆಗಳು:- ಪ್ರಾದೇಶಿಕ ಹಾಗೂ ವಿಶಿಷ್ಟ ಮಾವು, ಹಲಸು ಮತ್ತು ಇತರ ಹಣ್ಣುಗಳು, ಹಣ್ಣುಗಳಿಂದ ತಯಾರಿಸಿದ ವಿವಿಧ ಆಹಾರ ಪದಾರ್ಥಗಳು, ಹಲಸಿನ ಜಿಲೇಬಿ, ಗಾರಿಗೆ,…

Read More

ಮಂಗಳೂರು, : ವೈದ್ಯಕೀಯ ತಂತ್ರಜ್ಞಾನದ ಪ್ರಗತಿಯಿಂದ ಸರ್ಜರಿ ರಹಿತವಾಗಿ ಮಕ್ಕಳಲ್ಲಿ ವಕ್ರಪಾದ ದೋಷವನ್ನು ಸರಿಪಡಿಸಬಹುದಾಗಿದೆ ಎಂದು ವೆನ್‍ಲಾಕ್ ಆಸ್ಪತ್ರೆಯ ಎಲುಬು ಮತ್ತು ಕೀಳು ತಜ್ಞ ಡಾ.ಕೆ.ಆರ್ ಕಾಮತ್ ತಿಳಿಸಿದ್ದಾರೆ.ಅವರು ವೆನ್‍ಲಾಕ್ ಆಸ್ಪತ್ರೆಯಲ್ಲಿ ವಿಶ್ವ ವಕ್ರಪಾದ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಹುಟ್ಟುವ ಪ್ರತಿ ಸಾವಿರ ಮಕ್ಕಳಲ್ಲಿ 1-3 ಮಕ್ಕಳಲ್ಲಿ ವಕ್ರಪಾದ ಸಮಸ್ಯೆ ಕಂಡುಬರುತ್ತಿದೆ. ವೆನ್‍ಲಾಕ್ ಆಸ್ಪತ್ರೆಯಲ್ಲಿ ಇದಕ್ಕೆ ಉಚಿತವಾಗಿ ಪ್ರತಿ ಗುರುವಾರ ವಿಶೇಷ ಚಿಕಿತ್ಸೆ ನೀಡಲಾಗುತ್ತದೆ. ಕಳೆದ ಹತ್ತು ವರ್ಷದಲ್ಲಿ 500ಕ್ಕೂ ಅಧಿಕ ಮಕ್ಕಳಿಗೆ ವೆನ್‍ಲಾಕ್‍ನಲ್ಲಿ ವಕ್ರಪಾದ ಚಿಕಿತ್ಸೆ ನೀಡಲಾಗಿದ್ದು, ಶೇ.90 ರಷ್ಟು ಮಕ್ಕಳು ಗುಣಮುಖರಾಗಿದ್ದಾರೆ ಎಂದು ಅವರು ಹೇಳಿದರು.ಕಾರ್ಯಕ್ರಮವನ್ನು ವೆನ್‍ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ಉದ್ಘಾಟಿಸಿದರು. ಐ.ಎಂ.ಎ ಮಂಗಳೂರು ಘಟಕ ಅಧ್ಯಕ್ಷೆ ಡಾ.ಜೆಸ್ಸಿ ಮರಿಯಾ ಡಿಸೋಜಾ, ರೋಟರಿ ಕ್ಲಬ್ ಸಂಸ್ಥೆಯ ಸಿ.ನಝ್ರತ್, ವೆನ್‍ಲಾಕ್ ಆರ್.ಎಂ.ಓ ಡಾ.ಸುಧಾಕರ್, ಪ್ರಿಯಾ ಯೋಗೇಶ್ ಮತ್ತಿತರರು ಉಪಸ್ಥಿತರಿದ್ದರು.

Read More