What's Hot
- ಮಂಗಳೂರು ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ: ಎಐ ತಂತ್ರಜ್ಞಾನ ಪ್ರಯೋಗ, ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಒತ್ತು
- ಮಂಗಳೂರು : ಕ್ರಿಸ್ ಮಸ್ ಹಬ್ಬ ಸಮಾಜದಲ್ಲಿ ಸತ್ಯ,ನ್ಯಾಯ ಹಾಗೂ ಸಹ ಜೀವನದ ಮೌಲ್ಯಗಳನ್ನು ಮರುಸ್ಥಾಪಿಸುವ ವಿಶಿಷ್ಟ ಅವಕಾಶ ಒದಗಿಸುತ್ತದೆ ; ಧರ್ಮಾಧ್ಯಕ್ಷ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ.
- ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಎಂ.ಆರ್.ಜಿ. ಗ್ರೂಪ್ನ ಆಶಾ–ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆ ‘ನೆರವು–2025’
- ಉಡುಪಿ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್ಗಳನ್ನು ಬಂಧಿಸಿದ ಪಡುಬಿದ್ರೆ ಪೊಲೀಸರು
- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
- ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕ ಸ್ಥಾನ , ನಿರ್ದೇಶಕರ ಭವಿಷ್ಯ ಕುರಿತಾಗಿ ಚರ್ಚೆಗೂ ದಾರಿ ?
- ಮಂಗಳೂರು: MDMA ಸಾಗಾಟ ಜಾಲ ಭೇದಿಸಿದ ಸಿಸಿಬಿ; ಮೂವರು ಆರೋಪಿಗಳು ಬಂಧನ
- ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸ್ ಕ್ರಮ ಖಂಡನೀಯ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ತೀವ್ರ ಆಕ್ರೋಶ
Author: Tulunada Surya
ಮಂಗಳೂರು, : ಹೋಟೆಲ್,ವಸತಿ ಗೃಹ, ಬಾರ್ ರೆಸ್ಟೋರೆಂಟ್‍ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು/ಆಹಾರ ಒದಗಿಸುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್.ಕೆ ಸೂಚಿಸಿದ್ದಾರೆ.ಅವರು ಜಿಲ್ಲಾ ಪಂಚಾಯತ್‍ನಲ್ಲಿ ಗುರುವಾರ ನಡೆದ ಜಿಲ್ಲಾ ಕಣ್ಗಾವಲು ಮತ್ತು ಕಾರ್ಯಕಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕುಡಿಯುವ ನೀರಿನ ಮಾದರಿಯನ್ನು ಕಾಲಕಾಲಕ್ಕೆ ಪರೀಕ್ಷಿಸಿ ಗುಣಮಟ್ಟವನ್ನು ದೃಢೀಕರಿಸಿ ಶುದ್ಧೀಕರಣಕ್ಕೆ ಬೇಕಾದ ಮೌಲ್ಯಮಾಪನಾ ಕ್ರಮಗಳನ್ನು ಅನುಸರಿಸಿ, ಸಾರ್ವಜನಿಕ ನೀರಿನ ಜಲಾಗಾರವನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸಿ ಕ್ಲೋರಿನೇಶನ್ ಮಾಡಿ ರೆಸಿಡುವೆಲ್ ಕ್ಲೋರಿನ್ ಪ್ರಮಾಣವನ್ನು ಇಲಾಖೆಯ ಸಹಕಾರದೊಂದಿಗೆ ಖಾತ್ರಿ ಪಡಿಸಿಕೊಂಡು, ನೀರನ್ನು ಸರಬರಾಜು ಮಾಡುವುದು ಈ ಮೂಲಕ ಜಲಜನ್ಯ ರೋಗಗಳನ್ನು ನಿಯಂತ್ರಿಸಲು ಕ್ರಮವಹಿಸಬೇಕು ಎಂದು ಅವರು ಹೇಳಿದರು.ಸಾಕು ಪ್ರಾಣಿಗಳ ವ್ಯಾಕ್ಸಿನೇಶನ್ ಇನ್ನೂ ಹೆಚ್ಚಾಗಿ ಆಯೋಜಿಸಿ ಸಾಕು ಪ್ರಾಣಿಗಳ ರೇಬಿಸ್ ವ್ಯಾಕ್ಸಿನೇಶನ್ ಅನ್ನು ಪೂರ್ಣ ಪ್ರಮಾಣದಲ್ಲಿ ಕೈಗೊಳ್ಳಬೇಕು. ಸಂಶಯಾಸ್ಪದ ರೋಗ ಪ್ರಕರಣಗಳು ಕಂಡು ಬಂದಲ್ಲಿ ಅಂತರ ಇಲಾಖಾ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು…
ಮಂಗಳೂರು: ”ಕನ್ಸ್ಟ್ರಕ್ಷನ್ ಸಂಸ್ಥೆಯೊಂದರ ಸಹ ಗುತ್ತಿಗೆದಾರನ ಬಿಲ್ ಕೇಳಲು ಹೋದಾಗ ಅಲ್ಲಿನ ಡೆಪ್ಯುಟಿ ಚೇರ್ ಮೆನ್ ಜೊತೆ ಗೌರವಯುತವಾಗಿ ವರ್ತಿಸಿದ್ದೇನೆ. ಆದರೆ 26 ಗಂಟೆಯ ನಂತರ ಎನ್ ಎಂಪಿಎ ಕಾರ್ಯದರ್ಶಿ ನನ್ನ ವಿರುದ್ಧ ಸುಳ್ಳು ದೂರು ನೀಡಿದ್ದು ಯಾಕೆ? ಚೇರ್‌ಮೆನ್ ಒತ್ತಡದಿಂದ ಸೆಕ್ರಟರಿ ಮತ್ತು ಲೀಗಲ್ ಅಡ್ವೈಸರ್ ನನ್ನ ಮೇಲೆ ಸುಳ್ಳು ಕೇಸ್ ಹಾಕಿಸಿದ್ದಾರೆ. ಹಾಗಾಗಿ ಡೆಪ್ಯುಟಿ ಚೇರ್ ಮೆನ್ ವಿರುದ್ಧ 24 ಕೋಟಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ“ ಎಂದು ಸುರತ್ಕಲ್ ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಎಚ್ಚರಿಕೆ ನೀಡಿದ್ದಾರೆ. ತನ್ನ ಮೇಲೆ ಎನ್‌ಎಂಪಿಎ ಅಧಿಕಾರಿಗಳು ಪ್ರಕರಣ ದಾಖಲಿಸಿರುವ ಕುರಿತು ಮಂಗಳೂರಿನ ಖಾಸಗಿ ಹೋಟೇಲ್ ಒಂದರಲ್ಲಿ ಸ್ಪಷ್ಟನೆ ನೀಡಿದ ಅವರು, “ಒಂದು ವೇಳೆ ನಾನು ಅಧಿಕಾರಿಯ ಜೊತೆ ಅನಾಗರಿಕವಾಗಿ ವರ್ತಿಸಿದ್ದರೆ ಅಲ್ಲಿನ ಸಿಸಿಟಿವಿ ಚೆಕ್ ಮಾಡಲಿ, ನಾನು ಮೇಡಂ ಜೊತೆ ಕೈ ಮುಗಿದು ಸೌಜನ್ಯಯುತವಾಗಿ ಬೀಳ್ಕೊಟ್ಟು ಬಂದಿದ್ದೇನೆ. ಆವರು ನನ್ನ ಅಕ್ಕನ ಸಮಾನ. ಒಂದು ವೇಳೆ ಆರೋಪ ಸಾಬೀತಾದರೆ ಗಲ್ಲಿಗೇರಲೂ ರೆಡಿ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಳಹಂತದ ಪೊಲೀಸ್ ಅಧಿಕಾರಿಗಳ ಬದಲಾವಣೆ ಆರಂಭವಾಗಿದೆ. ರಾಜ್ಯ ಸರಕಾರ ಹಲವು ಜಿಲ್ಲೆಗಳಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ಮಂಗಳೂರಿನಲ್ಲಿ ಇತ್ತಿಚಿನ ಹಲವು ಕಹಿ ಘಟನೆಗಳ ನಂತರ ಪೊಲೀಸ್ ಕಮೀಷನರ್, ಜಿಲ್ಲಾ ಎಸ್ಪಿಯವರನ್ನು ವರ್ಗಾವಣೆಗೊಳಿಸಿ ಖಡಕ್ ಅಧಿಕಾರಿಗಳನ್ನು ನೇಮಿಸಿತ್ತು. ಇದೀಗಸುರತ್ಕಲ್ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಮಹೇಶ್ ಪ್ರಸಾದ್ ಅವರು ಇನ್ಸ್ ಪೆಕ್ಟರ್ ಆಗಿದ್ದರು. ಸುರತ್ಕಲ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಸೂಪರ್ ಕಾಪ್, ದಕ್ಷ ಪೊಲೀಸ್ ಅಧಿಕಾರಿಯಾಗಿ ಜಿಲ್ಲೆ ಮತ್ತು ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಜನಸಾಮಾನ್ಯರಿಗೆ ಪ್ರೀತಿ ಪಾತ್ರರಾಗಿದ್ದವರು ಅಂತಹ ದಕ್ಷ ಅಧಿಕಾರಿಗಳ ಅಗತ್ಯ ಮಂಗಳೂರು ನಗರಕ್ಕೆ ಬರಲಿ ಎಂದು ಮಂಗಳೂರಿನ ಹೆಚ್ಚಿನ ಜನರು ಆಶಿಸುತ್ತಿದ್ದರು.
ಕಡಬ : ಎಸ್ಪಿ ಅರುಣ್ ಕುಮಾರ್ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೋಳಿ ಅಂಕ ನಡೆಸದಂತೆ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಕಡಬ ಪೊಲೀಸ್ ಠಾಣಾ ಪೋಲಿಸ್ ಉಪನಿರೀಕ್ಷಕರಾದ ಅಭಿನಂದನ್ ರವರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಈ ವೇಳೆ ಕೃತ್ಯದಲ್ಲಿ ತೊಡಗಿದ್ದ 08 ಜನರು ಪರಾರಿಯಾಗಿದ್ದು, 03 ಜನರನ್ನು ವಶಕ್ಕೆ ಪಡೆಯಲಾಗಿರುತ್ತದೆ. ಸ್ಥಳದಲ್ಲಿದ್ದ 06 ಬೈಕ್, 02 ಕಾರು, 4 ಕೋಳಿ, ಕೋಳಿ ಅಂಕಕ್ಕೆ ಬಳಸಲಾಗುವ ಕತ್ತಿ ಹಾಗೂ ನಗದು ಹಣ 3,560 ರೂ ವಶಕ್ಕೆ ಪಡೆದುಕೊಂಡು ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ :44/2025 ಕಲಂ: 87, 93 KP Act ಹಾಗೂ 3,11 THE PREVENTION OF CRUELTY TO…
ಮಂಗಳೂರು : ಪಣಂಬೂರಿನ ನವಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ)ದಲ್ಲಿ ತುರ್ತು ಕ್ರಮವಾಗಿ, ಅರೇಬಿಯನ್ ಸಮುದ್ರದಲ್ಲಿ ಬೆಂಕಿ ಹೊತ್ತಿಕೊಂಡ ಸಿಂಗಾಪುರದ ಸರಕು ಸಾಗಣೆ ಹಡಗಿನಿಂದ ರಕ್ಷಿಸಲ್ಪಟ್ಟ 18 ಸಿಬ್ಬಂದಿಯನ್ನು ರಕ್ಷಿಸಿದ್ದುಅವರಲ್ಲಿ ಐವರು ಗಾಯಗೊಂಡಿದ್ದಾರೆ, ಅವರಲ್ಲಿ ಇಬ್ಬರು ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕೊಲಂಬೊದಿಂದ ಮುಂಬೈಗೆ ತೆರಳುತ್ತಿದ್ದ ಎಂವಿ ವಾನ್ ಹೈ 503 ಎಂಬ ಹಡಗು, ಜೂನ್ 9 ರ ಸೋಮವಾರದಂದು ಕೇರಳದ ಬೇಪೋರ್ ಕರಾವಳಿಯಿಂದ ಸುಮಾರು 78 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ದೊಡ್ಡ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ ಭಾರತೀಯ ನೌಕಾಪಡೆಯ ಹಡಗು ಐಎನ್‌ಎಸ್ ಸೂರತ್ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿತು ಮತ್ತು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನವಮಂಗಳೂರು ಬಂದರಿಗೆ ಆಗಮಿಸಿದೆ.
ದಿನಾಂಕ: 16.06.2025 ರಂದು ಬೆಳಿಗ್ಗೆ 11-00 ಗಂಟೆಯಿಂದ ಬೆಳ್ತಂಗಡಿ ತಾಲೂಕು ಕಛೇರಿ, ಬೆಳ್ತಂಗಡಿ ಇಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿರುತ್ತದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು. ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ದಿನಾಂಕ 16.06.2025 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಆಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ. ಅರ್ಜಿದಾರರು ನಮೂನೆ 1 & ॥ ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ…
ಮೂಡುಬಿದಿರೆ: ಬೆಳುವಾಯಿ ಬ್ಲೋಸಂ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ರೆನ್ಸಿಟ ಅತಿ ಹೆಚ್ಚು 619 ( 99.04% ) ಅಂಕಗಳಿಸಿದ್ದು ಶಾಲೆಯಲ್ಲಿ ಪ್ರಥಮ ಮತ್ತು ಕರ್ನಾಟಕ ರಾಜ್ಯದಲ್ಲಿ 7ನೇ ಸ್ಥಾನ ಪಡೆದು ಕಲಿತ ಶಾಲೆಗೆ ನಮ್ಮ ತುಳುನಾಡಿಗೆ ಹೆಮ್ಮೆ ತಂದಿರುತ್ತಾರೆ. ಇವರನ್ನು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ರವರು ದಿನಾಂಕ 08-06-2025 ರಂದು ಮೂಡುಬಿದಿರೆಯಲ್ಲಿ ಶಾಲು ಹೊದಿಸಿ, ಮಾಲೆ ಹಾಕಿ ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ರೆನ್ಸಿಟ ರವರ ತಂದೆ ರೋಬರ್ಟ್ ಫೆರ್ನಾಂಡಿಸ್ ಹಾಗೂ ತಾಯಿ ರೈನಾ ಫೆರ್ನಾಂಡಿಸ್, ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ಘಟಕ ಕೋಶಾಧಿಕಾರಿ ರೋಷನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಗೆ ನಿಯುಕ್ತರಾದ ಮಾನ್ಯ ಹರಿರಾಮ್ ಶಂಕರ್ ಐಪಿಎಸ್ ರವರನ್ನು ಧಾರ್ಮಿಕ ಮಾರ್ಗದರ್ಶಕ ಸಂತೋಷ ಆಚಾರ್ಯ ಉಡುಪಿ ಬೇಟಿ ಮಾಡಿ ಶ್ರೀ ಮಧುಕರ್ ಶೆಟ್ಟಿ ಐಪಿಎಸ್ ರವರ ಭಾವಚಿತ್ರ ನೀಡಿ ಶಾಲು ಹಾಕಿ ಅಬಿನಂದಿಸಿ ಹರಸಿದರು. ಹಾಗೂ ಇತರ ಧಾರ್ಮಿಕ ಮುಖಂಡರಾದ ಸಮಾಜ ಸೇವಕ ಶ್ರೀ ಶಶಿಧರ್ ಕಟಪಾಡಿ ಮತ್ತು ಶ್ರೀ ರವಿ ಶರ್ಮಾ ಪಾಲಮೆ ಉಪಸ್ಥಿತರಿದ್ದರು.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಳೆಯಿಂದ ಉಂಟಾಗಿರುವ ಅವ್ಯವಸ್ಥೆಗಳು ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ರವರು ತುರ್ತು ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕರು, ಪಾಲಿಕೆ ವ್ಯಾಪ್ತಿಯಲ್ಲಿ ವಿಪರೀತ ಮಳೆ ಸುರಿದಿದ್ದರೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಪ್ಪಿಲ್ಲ. ಇನ್ನೊಂದೆಡೆ ರಾಜಕಾಲುವೆಗಳಲ್ಲಿ ಸಮರ್ಪಕವಾಗಿ ಹೂಳೆತ್ತದಿರುವಿಕೆಯಿಂದ ಮನೆಗಳಿಗೆ ಮಳೆ ನೀರು ನುಗ್ಗಿ ಜನಸಾಮಾನ್ಯರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ. ಸಾಲದ್ದಕ್ಕೆ ಮಳೆಯಿಂದ ತೊಂದರೆಗೀಡಾದವರಿಗೆ ಪಾಲಿಕೆ ವತಿಯಿಂದ ಯಾವುದೇ ನೆರವು ಸಿಗುತ್ತಿಲ್ಲ. ಕಸ ವಿಲೇವಾರಿಯ ಅವ್ಯವಸ್ಥೆಯ ಬಗ್ಗೆಯೂ ಜನರಿಂದ ದೂರುಗಳು ಬರುತ್ತಿವೆ. ಬಲ್ಲಾಳ್ ಬಾಗ್ ಬಳಿಯ ಶಿಥಿಲಗೊಂಡಿರುವ ರಾಜಕಾಲುವೆಯ ಬ್ರಿಡ್ಜ್ ನಿಂದ ನೀರು ಸಾರಾಗವಾಗಿ ಹರಿಯದೇ ಅದರಿಂದಲೂ ಕೃತಕ ನೆರೆ ಸೃಷ್ಟಿಯಾಗುತ್ತಿದ್ದು ಆ ಬಗ್ಗೆಯೂ ಕ್ರಮಕೈಗೊಳ್ಳುವುದು ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿ ಪಾಲಿಕೆ ಅಧಿಕಾರಿಗಳು ಯಾವುದನ್ನೂ ಹಗುರವಾಗಿ ಪರಿಗಣಿಸದೇ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಕಟ್ಟುನಿಟ್ಟಿನ…
ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ನೀಡಬೇಕಾದರೆ 20 ಸಾವಿರ ಲಂಚ ನೀಡಬೇಕು ಎಂದು ಬೇಡಿಕೆ ಇಟ್ಟ ಬ್ರಹ್ಮಾವರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಪೂಜಾರಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ದಿನೇಶ್ ಪೂಜಾರಿ ಎಂಬವರು ತಮ್ಮ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಮೆಸ್ಕಾಂ ಎಇಇ ಭೇಟಿಯಾಗಿದ್ದರು. ಸ್ಥಳ ಪರಿಶೀಲನೆ ನಡೆಸಿದ ಎಇಇ ವಿದ್ಯುತ್ ಸಂಪರ್ಕ ನೀಡಬೇಕಾದರೆ 20 ಸಾವಿರ ಲಂಚ ನೀಡಬೇಕು ಎಂಬ ಬೇಡಿಕೆಯನ್ನು ಇರಿಸಿದ್ದರು. ಈ ಬಗ್ಗೆ ದಿನೇಶ್ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ದಿನೇಶ್ ಎಂಬಾತನಿಂದ 20 ಸಾವಿರ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮೆಸ್ಕಾಂ ಎಇಇ ಅಶೋಕ್ ಪೂಜಾರಿಯನ್ನು ಬಂಧಿಸಿದ್ದಾರೆ. ಈ ಹಿಂದೆ ಕುಂದಾಪುರದ ಎಇಇ ಆಗಿದ್ದ ಅಶೋಕ್ ಪೂಜಾರಿ ಕಳೆದ ನಾಲ್ಕು ವರ್ಷಗಳಿಂದ ಬ್ರಹ್ಮಾವರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮಂಗಳೂರು ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಮಂಜುನಾಥ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು.
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
