Author: Tulunada Surya

ಮಂಗಳೂರು : ಮಂಗಳೂರಿಗೆ ಹೊಸದಾಗಿ ನೇಮಕಗೊಂಡ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಕೊಲೆಯಂತಹ ಅಪರಾಧಗಳಲ್ಲಿ ಭಾಗಿಯಾಗಿರುವವರಿಗೆ ಮತ್ತು ಅಂತಹ ಆರೋಪಿಗಳನ್ನು ಬೆಂಬಲಿಸುವ ಅಥವಾ ಆಶ್ರಯ ನೀಡುವ ಯಾರಿಗಾದರೂ ಬಲವಾದ ಎಚ್ಚರಿಕೆ ನೀಡಿದ್ದಾರೆ. “ಇದು ಸ್ಪಷ್ಟವಾಗಿರಲಿ: ಕೊಲೆ ಅಥವಾ ಅಪರಾಧ ಆರೋಪಿಗೆ ಆಶ್ರಯ, ಆಹಾರ, ತಪ್ಪಿಸಿಕೊಳ್ಳಲು ವಾಹನ, ಹಣ ಅಥವಾ ಸಂವಹನ ನಡೆಸಲು ಫೋನ್ ನೀಡುವ ಮೂಲಕ ಸಹಾಯ ಮಾಡುವ ಯಾರನ್ನಾದರೂ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಆರೋಪಿ ಎಂದು ಪರಿಗಣಿಸಲಾಗುತ್ತದೆ” ಎಂದು ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಈ ಎಚ್ಚರಿಕೆ ಆರೋಪಿಯ ಸ್ನೇಹಿತರು, ಸಂಬಂಧಿಕರು ಮತ್ತು ಅವರ ಮನೆಯ ಸದಸ್ಯರಿಗೂ ಅನ್ವಯಿಸುತ್ತದೆ ಎಂದು ಅವರು ಒತ್ತಿ ಹೇಳಿದರು. “ಅಪರಾಧಿಯನ್ನು ತಿಳಿದೂ ಬೆಂಬಲಿಸುವುದು ಕಾನೂನಿನಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಅಜ್ಞಾನವು ಒಂದು ಕ್ಷಮಿಸಿರುವುದಿಲ್ಲ” ಎಂದು ಅವರು ಹೇಳಿದರು. “ಯಾರನ್ನಾದರೂ ಬಂಧಿಸಲಾಗಿಲ್ಲ ಎಂದು ನೀವು ಭಾವಿಸಿದರೆ, ನಮ್ಮನ್ನು ಪ್ರಶ್ನಿಸಿ, ನಾವು ತಕ್ಷಣ ಕ್ರಮ ಕೈಗೊಳ್ಳುತ್ತೇವೆ. ಯಾರನ್ನೂ ಬಿಡಲಾಗುವುದಿಲ್ಲ” ಎಂದು ಅವರು ಹೇಳಿದರು

Read More

ಮಂಗಳೂರು : ಸುಧೀರ್ ಕುಮಾರ್ ರೆಡ್ಡಿ ಅವರು ಶುಕ್ರವಾರ ಮೇ 30 ರಂದು ಮಂಗಳೂರಿನ ನಗರಕ್ಕೆ ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಿ ಆರ್ಥಿಕ ಅಪರಾಧಗಳ ಉಪ ನಿರೀಕ್ಷಕ ಜನರಲ್ ಆಗಿ ನೇಮಿಸಲಾಯಿತು. ರಾಜ್ಯ ಸರ್ಕಾರ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಆದೇಶಗಳನ್ನು ಅನುಸರಿಸಿ, ಇಂದು ಬೆಳಿಗ್ಗೆ, ಡಾ. ಅರುಣ್ ಕೆ, ಐಪಿಎಸ್, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಆಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಸುಧೇರ್ ಕುಮಾರ್ ರೆಡ್ಡಿ ಅವರು ಜೂನ್ 2017 ರಿಂದ ಜನವರಿ 2018 ರವರೆಗೆ ಸ್ವಲ್ಪ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಆಗಿ ಸೇವೆ ಸಲ್ಲಿಸಿದರು. ಈ ಅವಧಿಯಲ್ಲಿ ಅವರು ಅಕ್ರಮ ಮರಳು ಮಾಫಿಯಾವನ್ನು ನಿಭಾಯಿಸಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ಶರತ್ ಮಡಿವಾಳ ಅವರನ್ನು ಜುಲೈ 4, 2017 ರಂದು ಬಿ.ಸಿ. ರಸ್ತೆಯಲ್ಲಿ ನಡೆದ ಕೋಮು…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಎಡೆಬಿಡದೆ ಗಾಡವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಒಟ್ಟು ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾತ್ತು ಆದರೆ ಆಸ್ಪತ್ರೆಯಲ್ಲಿ ಮಗು ಮೃತಪಟ್ಟಿದೆ. ಮಂಜಾನಾಡಿ ಗ್ರಾಮದ ಮದಪಾಡಿಯ ಮೊಂಟೆಪದವು ಕೋಡಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿತ ಪ್ರಕರಣದಲ್ಲಿ ಒಟ್ಟು ಮೂವರು ಸಾವನ್ನಪ್ಪಿದ್ದಾರೆ. ಮುಂದುವರೆದ ಕಾರ್ಯಾಚರಣೆಯಲ್ಲಿ ತಾಯಿ ಹಾಗೂ ಮಗುವನ್ನು ರಕ್ಷಿಸಿದ್ದರು ಆದರೆ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ . ಅವಶೇಷದಡಿ ಸಿಲುಕಿ ಅಜ್ಜಿ ಪ್ರೇಮ (58) ಆರ್ಯನ್ (3) ರಕ್ಷಣಾ ಕಾರ್ಯಚರಣೆಯ ಬಳಿಕ ಆಸ್ಪತ್ರೆಯಲ್ಲಿ ಮಗು ಆಯುಷ್ (2) ಸಾವು. ಮಗುವಿನ ತಾಯಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು ಮಳೆ ಹಾಗೂ ಇಕ್ಕಟ್ಟಿನ ಜಾಗವಾದ ಹಿನ್ನೆಲೆ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿತ್ತು.ಆದರೆ ರಕ್ಷಣಾ ತಂಡ ಹರಸಾಹಸ ಪಟ್ಟು ಪುಟ್ಟ ಮಗುವನ್ನು ರಕ್ಷಿಸಿದರೂ ಮಗು ಬದುಕುಳಿಯಲಿಲ್ಲ.

Read More

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಹಿರಿಯ ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ಚಾವಡಿ ತಮ್ಮನದ ಗೌರವ ಸಮರ್ಪಣೆಯ ಕಾರ್ಯಕ್ರಮ ಮೇ 31ರಂದು ಸಂಜೆ 4.30 ಗಂಟೆಗೆ ಪಡುಬಿದ್ರೆಯ ಕನ್ನಂಗಾರ್ ಬ್ರಹ್ಮಬೈದರ್ಕಳ ಗರೋಡಿಯಲ್ಲಿ ನಡೆಯಲಿದೆ.ಈ ಚಾವಡಿ ತಮ್ಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ವಹಿಸುವರು. ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ವೈ, ಜಾನಪದ ವಿದ್ವಾಂಸರು ಹಾಗೂ ತುಳು ಅಕಾಡೆಮಿ ಮಾಜಿ ಸದಸ್ಯರಾದ ಡಾ.ವೈ.ಎನ್. ಶೆಟ್ಟಿ , ಕನ್ನಂಗಾರ್ ಬ್ರಹ್ಮಬೈದರ್ಕಳ ಗರೋಡಿಯ ಅಧ್ಯಕ್ಷರಾದ ಶೀನ ಪೂಜಾರಿ , ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ರಮೀಝ್ ಹುಸೇನ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ತುಳು ಸಂಸ್ಕ್ರತಿ ಸಂಶೋಧಕರಾದ ನಿತೇಶ್ ಅಂಚನ್ ಅಭಿನಂದನಾ ಭಾಷಣ ಮಾಡುವರು, ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಹಾಗೂ ಸದಸ್ಯ ಸಂಚಾಲಕ ಉದ್ಯಾವರ ನಾಗೇಶ್ ಕುಮಾರ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ತುಳು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.ಇಂದು 60ನೇ ವರ್ಷಕ್ಕೆ ಪಾದಾರ್ಪಣೆ…

Read More

ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ರವರ ಜಾಗಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಸುದೀರ್ ರೆಡ್ಡಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ

Read More

ಉಡುಪಿ : ಉಡುಪಿ ಎಸ್.ಪಿ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಂ ಶಂಕರ್ ಅವರನ್ನು ಸರ್ಕಾರ ನೇಮಿಸಿದೆ.

Read More

ಪಿರ್ಯಾದಿದಾರರು ತನ್ನ ಪರಿಚಯದವರ ಹೆಸರಿನಲ್ಲಿ ಇರುವ ಉಳ್ಳಾಲ ತಾಲೂಕು ಇರಾ ಗ್ರಾಮದ ಸರ್ವೆ ನಂಬ್ರ 279/5 ರಲ್ಲಿ 1.39 ಎಕರೆ ವಿಸ್ತೀರ್ಣದ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆಯನ್ನು ಕಟ್ಟುವ ಉದ್ದೇಶದಿಂದ ಕಟ್ಟಡಕಲ್ಲು ತೆಗೆದು ಸಮತಟ್ಟು ಮಾಡಲು ಅನುಮತಿ ನೀಡಲು ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆ ದಿನಾಂಕ 28/10/2024 ರಂದು ಅರ್ಜಿಯನ್ನು ಸಲ್ಲಿಸಿರುತ್ತಾರೆ. ತಹಶೀಲ್ದಾರ್ ಉಳ್ಳಾಲ ತಾಲೂಕುರವರು ಸಮತಟ್ಟು ಮಾಡುವ ಸಲುವಾಗಿ ಜಮೀನಿನಲ್ಲಿ ಲಭ್ಯವಿರುವ ಕಟ್ಟಡಕಲ್ಲು ತೆಗೆಯಲು ಪ್ರಮಾಣಪತ್ರ/ದೃಢಿಕರಣ ಪತ್ರ ನೀಡಬಹುದಾಗಿದೆ ಎಂಬುದಾಗಿ ದಿನಾಂಕ 21/03/2025ರಂದು ವರದಿ ಸಲ್ಲಿಸಿದ್ದರೂ ಕೂಡ ಗಣಿ ಇಲಾಖೆಯಿಂದ ಅನುಮತಿ ನೀಡಿರುವುದಿಲ್ಲ. ಈ ಬಗ್ಗೆ ಅರ್ಜಿಯ ಬಗ್ಗೆ ವಿಚಾರಿಸಲು ಪಿರ್ಯಾದಿದಾರರು ಮಂಗಳೂರು ಗಣಿ ಇಲಾಖೆ ಕಛೇರಿಗೆ ತೆರಳಿದ್ದು, ಅಲ್ಲಿನ ಉಪನಿರ್ದೇಶಕರಾದ ಕೃಷ್ಣವೇಣಿ ರವರು ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಯಿಸಿ ಫೈಲಿಗೆ 50,000/- ತಗೊಳ್ಳಿ, ನಂತರ ಸೈನ್ ಮಾಡುವ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಮಂಗಳೂರು…

Read More

ರಾಯಚೂರು : ಜಿಲ್ಲೆಯ ಮಸ್ಕಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಬಾಣಂತಿಯ ಕುಟುಂಬಸ್ಥರು ಆಸ್ಪತ್ರೆಯ ಮುಂದೆ ಧರಣಿ ನಡೆಸಿ, ಕಲ್ಲು ತೂರಾಟ ಮಾಡಿದ್ದು, ಆ್ಯಂಬುಲೆನ್ಸ್‌ನ ಗಾಜು ಪುಡಿಪುಡಿಯಾಗಿದೆ. ಮಸ್ಕಿ ಪಟ್ಟಣದ ಸಿದ್ದಮ್ಮ ಎನ್ನುವ ಬಾಣಂತಿಯನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸೋಮವಾರ ಬಾಣಂತಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಗೊತ್ತಾಗುತ್ತಿದ್ದಂತೆ ಆಸ್ಪತ್ರೆಯ ಮುಂದೆ ಸಂಬಂಧಿಕರು ಜಮಾವಣೆಗೊಂಡು ಧರಣಿ ನಡೆಸಿ, ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಆರೋಗ್ಯ ಮತ್ತು ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಡಾ.ಶಿವಕುಮಾರ, ಲಿಂಗಸುಗೂರು ತಾಲೂಕು ವೈದ್ಯಾಧಿಕಾರಿ ಅಮರೇಶ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯ ಆವರಣದಲ್ಲಿ ಧರಣಿಯಿಂದ ಉಂಟಾಗಿದ್ದ ಬಿಗುವಿನ ವಾತಾವರಣ ನಿಯಂತ್ರಿಸಲು ಪೊಲೀಸ್ ಸಿಬ್ಬಂದಿಗಳು ಹರಸಾಹಸಪಟ್ಟರು. ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ಲಭ್ಯ ವಾಗಬೇಕಾಗಿದೆ

Read More

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ‌. ಹಾಗಾಗಿ ಈ ಎರಡೂ ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೇ 27 ಮತ್ತು 28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್ಸಿ, ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.”

Read More

ಬಂಟ್ವಾಳ: ‘ಭಾರತದಲ್ಲಿ ಹಿಂದೂವಾಗಿ ಹುಟ್ಟುವುದು ಪುಣ್ಯವಾಗಿದ್ದು, ಧರ್ಮ ಪ್ರಸಾರಕ್ಕೆ ಯಕ್ಷಗಾನ ಅತ್ಯಮೂಲ್ಯ ಕೊಡುಗೆ ನೀಡಿದೆ. ಯಕ್ಷಗಾನಕ್ಕೆ ಪುಳಿಂಚ ರಾಮಯ್ಯ ಶೆಟ್ಟರ ಸೇವೆ ಸ್ಮರಣೀಯವಾಗಿದ್ದು, ಆ ಪರಂಪರೆಯನ್ನು ಪುತ್ರ ಶ್ರೀಧರ ಶೆಟ್ಟಿ ಪುಳಿಂಚ ಮತ್ತವರ ಪತ್ನಿ ಮುಂದುವರಿಸುತ್ತಿರುವುದು ಶ್ಲಾಘನೀಯವಾಗಿದೆ’ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಇದರ ಸಂಚಾಲಕ ಕಲ್ಲಡ್ಕ ಪ್ರಭಾಕರ ಭಟ್ ಅವರು ಹೇಳಿದರು.ಅವರು ಕಲ್ಲಡ್ಕ ಸಮೀಪ ಬಾಳ್ತಿಲ ಗ್ರಾಮದ ಚೆಂಡೆಯಲ್ಲಿ ಶ್ರೀ ಕಲ್ಲುರ್ಟಿ ದೈವಸ್ಥಾನ ಹಾಗೂ ಪುಳಿಂಚ ಸೇವಾ ಪ್ರತಿಷ್ಠಾನ ಜಂಟಿ ಆಶ್ರಯದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದ ಬೆಜ್ಜದಗುತ್ತು ದಿ.ಪುಳಿಂಚ ರಾಮಯ್ಯ ಶೆಟ್ಟಿ ಅವರ ಸ್ಮರಣಾರ್ಥ ಬೊಳ್ನಾಡುಗುತ್ತು ದಿ.ಸರೋಜಿನಿ ರಾಮಯ್ಯ ಶೆಟ್ಟಿ ಪುಳಿಂಚ ವೇದಿಕೆಯಲ್ಲಿ ಮೇ24,ಶನಿವಾರ ನಡೆದ ಪಂಚಮ ತ್ರೈವಾರ್ಷಿಕ ‘ಪುಳಿಂಚ ಪ್ರಶಸ್ತಿ ಪ್ರದಾನ’ , ಮಂಗಳೂರು ಪುಳಿಂಚ ಚಿಟ್ಸ್(ಒಪಿಸಿ) ಪ್ರೈ.ಲಿಮಿಟೆಡ್ ನ ದಶಮ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿದರು.’ಹಿಂದೂ ಧರ್ಮದ ನಾಶಕ್ಕೆ ನಿರಂತರವಾಗಿ ಪ್ರಯತ್ನ ನಡೆಯುತ್ತಿದ್ದು, ಪಹಲ್ಗಾಮ್ ಘಟನೆಯು ಅದಕ್ಕೊಂದು ಜ್ವಲಂತ ಉದಾಹರಣೆಯಾಗಿದೆ. ದೇಶಕ್ಕೆ ಒಳಗಿನ ಶತ್ರುಗಳು ಅಪಾಯಕಾರಿಯಾಗಿದ್ದು, ಈ…

Read More