Author: Tulunada Surya

ಉಡುಪಿ: ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2025 ರ ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ. ಹವಾಮಾನದ ವೈರ‍್ಯತೆಯ ಮುನ್ಸೂಚನೆ ನೀಡಿದಲ್ಲಿ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಪಾಲಿಸಬೇಕು ಎನ್ನಲಾಗಿದೆ. ಮೀನುಗಾರಿಕೆ ನಿಷೇಧ ಹಿನ್ನೆಲೆ, ಕಡ್ಡಾಯವಾಗಿ ಎಲ್ಲಾ ಬೋಟುಗಳು ಮೇ 31 ರ ಒಳಗಾಗಿ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು…

Read More

ಮಂಗಳೂರು: ಖಾಸಗಿ ಸಂಘ, ಸಂಸ್ಥೆಗಳು ಆಯೋಜಿಸುವ ತುಳು ಭಾಷೆ, ಸಾಹಿತ್ಯ , ಸಂಸ್ಕ್ರತಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಮಂಗಳೂರಿನ ತುಳು ಭವನದಲ್ಲಿ ವಿಶೇಷವಾಗಿ ಶೇಕಡಾ ಐವತ್ತರಷ್ಟು ರಿಯಾಯಿತಿಯಲ್ಲಿ ಸಭಾಂಗಣವನ್ನು ನೀಡಲಾಗುತ್ತಿದೆ. ಇದೇ ವೇಳೆ ಯಕ್ಷಗಾನ , ನಾಟಕ ಆಯೋಜಿಸುವವರಿಗೆ ಇನ್ನೂ ಹೆಚ್ಚಿನ ರಿಯಾಯಿತಿಯಲ್ಲಿ ಸಭಾಂಗಣವನ್ನು ಒದಗಿಸಲಾಗುತ್ತದೆ, ಯಾವುದೇ ರಿಯಾಯಿತಿಯನ್ನು ರದ್ದು ಮಾಡಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಘ ಸಂಸ್ಥೆಗಳು ಅಕಾಡೆಮಿಯೊಂದಿಗೆ ಸಹಭಾಗಿತ್ವದಲ್ಲಿ ನಡೆಸುವ ಕಾರ್ಯಕ್ರಮಗಳಿಗೆ ಉಚಿತವಾಗಿ ಸಭಾಂಗಣ ಒದಗಿಸಲಾಗುತ್ತದೆ. ಸಾಹಿತ್ಯ , ಸಾಂಸ್ಕ್ರತಿಕ ಹೊರತುಪಡಿಸಿದ ಖಾಸಗಿ ಕಾರ್ಯಕ್ರಮಗಳಿಗೆ ಮಾತ್ರ ಪೂರ್ತಿ ಬಾಡಿಗೆ ಪಡೆಯಲಾಗುತ್ತಿದೆ.ಯಾವುದೇ ಸಂಘ , ಸಂಸ್ಥೆಗಳು ನಡೆಸುವ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸರ್ಟಿಫಿಕೇಟ್ ನೀಡುವುದು ಅಕಾಡೆಮಿ ಕಾರ್ಯವ್ಯಾಪ್ತಿಗೆ ಸಂಬಂಧಿಸಿದ ವಿಚಾರವಾಗಿರುವುದಿಲ್ಲ ಅಥವಾ ಅಕಾಡೆಮಿಯು ಪರೀಕ್ಷೆ ಪ್ರಾಧಿಕಾರವಾಗಿರುವುದಿಲ್ಲ. ಅಕಾಡೆಮಿಯ ವತಿಯಿಂದ ನೇರವಾಗಿ ಅಥವಾ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಸುವ ತರಬೇತಿ ಶಿಬಿರ , ಕಮ್ಮಟ, ಸೆಮಿನಾರ್ ಗಳಲ್ಲಿ ಭಾಗವಹಿಸುವವರಿಗೆ ಸರ್ಟಿಫೀಕೇಟ್ ಆಯಾ…

Read More

ಮಂಗಳೂರು ; ಮದುವೆ ವಿಚಾರದಲ್ಲಿ ನಡೆದ ಕಲಹದಿಂದ ಯುವಕನೋರ್ವನು ತಂದೆ ಮಕ್ಕಳಿಗೆ ಚೂರಿಯಿಂದ ಇರಿದ ಪರಿಣಾಮ ತಂದೆ ಮೃತಪಟ್ಟು, ಮಕ್ಕಳಿಬ್ಬರು ಗಾಯಗೊಂಡ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಳಚಿಲ್ ಎಂಬಲ್ಲಿ ನಡೆದಿದೆ.ವಾಮಂಜೂರಿನ ನಿವಾಸಿ ಸುಲೇಮಾನ್ (50) ಮೃತ ವ್ಯಕ್ತಿ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಅವರ ಮಕ್ಕಳಾದ ರಿಯಾಬ್ ಮತ್ತು ಸಿಯಾಬ್ ಗಾಯಗೊಂಡಿದ್ದಾರೆ. ಮುಸ್ತಫಾ(30) ಬಂಧಿತ ಆರೋಪಿ.ಮೇ 22ರಂದು ರಾತ್ರಿ 9:30 ಸುಮಾರಿಗೆ ಘಟನೆ ನಡೆದಿದೆ. ಮದುವೆ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದ ಮೃತ ಸುಲೇಮಾನ್ 8 ತಿಂಗಳ ಹಿಂದೆ ತನ್ನ ಸಂಬಂಧಿಯಾದ ಆರೋಪಿ ಮುಸ್ತಫಾ(30)ನಿಗೆ ಯುವತಿಯೊಬ್ಬಳೊಂದಿಗೆ ವಿವಾಹ ಸಂಧಾನ ಮಾಡಿ ಮದುವೆಗೆ ಮಾಡಿದ್ದರು. ಬಳಿಕ ಅವರಿಬ್ಬರ ವೈವಾಹಿಕ ಜೀವನದ ಭಿನ್ನಾಭಿಪ್ರಾಯದಿಂದ, 2 ತಿಂಗಳ ಹಿಂದೆ ಮುಸ್ತಫಾನ ಮನೆಯನ್ನು ತೊರೆದು ತವರು ಮನೆ ಸೇರಿದ್ದಳು. ಇದು ಮುಸ್ತಫಾ ಮತ್ತು ಸುಲೇಮಾನ್ ನಡುವೆ ಗಲಾಟೆಗೆ ಕಾರಣವಾಗಿತ್ತು.ನಿನ್ನೆ ಸುಲೇಮಾನ್ ತಮ್ಮ ಮಕ್ಕಳಾದ ರಿಯಾಬ್ ಮತ್ತು ಸಿಯಾಬ್ ಅವರೊಂದಿಗೆ ವಳಚಿಲ್‌ನಲ್ಲಿರುವ ಮುಸ್ತಫಾ ನಿವಾಸಕ್ಕೆ ಭೇಟಿ ನೀಡಿದ್ದರು.…

Read More

ಕೊಪ್ಪಳ(ಕುಕನೂರು): ಕೋಳಿ ಫಾರಂ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ ಘಟನೆ ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಬುಧವಾರ ನಡೆದಿದೆ.ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಕೋಳಿ ಫಾರಂ ರನ್ಯಾ ರಾವ್ ತಂದೆ ರಾಮಚಂದ್ರರಾವ್ ಸಂಬಂಧಿಯ ಹೆಸರಲ್ಲಿದ್ದು, ಹಾಗಾಗಿ ರನ್ಯಾ ರಾವ್ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿಂದೆ ಹಲವು ಬಾರಿ ರನ್ಯಾ ರಾವ್ ತಂದೆ ರಾಮಚಂದ್ರರಾವ್ ಬಂದು ಹೋಗಿದ್ದರು.ಬುಧವಾರ ಬೆಳಿಗ್ಗೆಯಿಂದ ಕೋಳಿ ಫಾರಂ ಗೇಟ್ ಬಂದ್ ಮಾಡಿ, ಇಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಡಿ ಅಧಿಕಾರಿಗಳು ದೆಹಲಿಯಿಂದ ಬಂದು, ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಇದ್ದು, ಭದ್ರತೆಗಾಗಿ ಬಿ.ಎಸ್.ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಬಂದಿದ್ದಾರೆ. ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಸ್ಥಳೀಯ ಪೊಲೀಸರನ್ನೂ ಬದಿಗಿಟ್ಟು ಕಾರ್ಯಾಚರಣೆ ಮಾಡಿರುವುದು ಗಮನಾರ್ಹ. ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ಲಭ್ಯ ವಾಗಬೇಕಾಗಿದೆ.

Read More

ಮಂಗಳೂರು: ‘ತೆಂಕು ತಿಟ್ಟಿನ ಬಣ್ಣದ ವೇಷಗಾರಿಕೆ ಯಕ್ಷಗಾನ ರಂಗದ ವಿಸ್ಮಯಗಳಲ್ಲೊಂದು. ಅನುಭವೀ ಹಿರಿಯ ಕಲಾವಿದರು ಈ ಪ್ರಕಾರಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ. ಅದೇ ಪರಂಪರೆಯ ಜಾಡಿನಲ್ಲಿ ಹೊಸ ಆವಿಷ್ಕಾರದೊಂದಿಗೆ ಜನಮನ ಗೆದ್ದ ಕಲಾವಿದ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್. ಅವರು ಓರ್ವ ಪ್ರಯೋಗಶೀಲ ಬಣ್ಣದ ವೇಷಧಾರಿ’ ಎಂದು ಹಿರಿಯ ಯಕ್ಷಗಾನ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿ ಹೇಳಿದ್ದಾರೆ.ಬೆಂಗಳೂರಿನ ಅಳಿಕೆ ರಾಮಯ್ಯ ರೈ ಸ್ಮಾರಕ ಟ್ರಸ್ಟ್ ವತಿಯಿಂದ ಪ್ರಸಿದ್ಧ ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಅವರಿಗೆ ಗೃಹ ಸಮ್ಮಾನದೊಂದಿಗೆ ಅಳಿಕೆ ರಾಮಯ್ಯ ರೈ ಯಕ್ಷ ಸಹಾಯನಿಧಿ ಪ್ರದಾನ ಮಾಡಿದ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಮುಖ್ಯ ಸಲಹೆಗಾರರಾಗಿ ಅವರು ಮಾತನಾಡಿದರು. ಇನ್ನೋರ್ವ ಸಲಹೆಗಾರ ಹಾಗೂ ಸದಾಶಿವ ಶೆಟ್ಟಿಗಾರ್ ಅವರ ಒಡನಾಡಿ ಹಿರಿಯ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ ಶೆಟ್ಟಿ ಅಭಿನಂದನಾ ನುಡಿಗಳನ್ನಾಡಿದರು.ನೆರವಿಗಾಗಿ ಮನವಿ:ಆಯ್ಕೆ ಸಮಿತಿ ಸಂಚಾಲಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ ‘ಬಣ್ಣದ ಮಾಲಿಂಗಜ್ಜನ ಗರಡಿಯಲ್ಲಿ ಪಳಗಿದ ಸದಾಶಿವ ಶೆಟ್ಟಿಗಾರ್ ಪಾರಂಪರಿಕ ಶೈಲಿ, ಹೊಸತನದ…

Read More

ಮಂಡ್ಯ ನಗರದ ಬೆಂಗಳೂರು- ಮೈಸೂರು ಹೆದ್ದಾರಿಯ (Bangalore- Mysore Highway) ಪಿಇಎಸ್‌ ಕಾಲೇಜು ಪಕ್ಕದಲ್ಲಿರುವ ಸಲೂನ್‌ ಅಂಡ್‌ ಸ್ಪಾ ಮೇಲೆ ದಾಳಿ (raid) ನಡೆಸಿದ ಪೊಲೀಸರು ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಸಲೂನ್‌ ಅಂಡ್‌ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ (Prostitution) ನಡೆಸುತ್ತಿದ್ದ ಕೇಂದ್ರದ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ, ಪೊಲೀಸರ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಮಹಿಳೆಯರನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ದಂಧೆ ನಡೆಸುತ್ತಿದ್ದ ಸಲೂನ್‌ ಮಾಲಕಿ, ಓರ್ವ ಪಿಂಪ್, ಓರ್ವ ಗ್ರಾಹಕನನ್ನು ದಾಳಿ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಂಧೆ ನಡೆಸಲು ಹೊರಗಿನಿಂದ ಮಹಿಳೆಯರನ್ನು ಕರೆತರುತ್ತಿದ್ದ (They were bringing women from outside) ಈ ಗ್ಯಾಂಗ್, ಪಕ್ಕದ ಕಾಲೇಜು ವಿದ್ಯಾರ್ಥಿ -ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ದಂಧೆಯಲ್ಲಿ ತೊಡಗಿಸುವ ಪ್ರಯತ್ನಿಸಿದ್ದ ಆರೋಪವೂ ಕೇಳಿಬಂದಿದೆ

Read More

ದಿನಾಂಕ 21-05-2025 ಬುಧವಾರ ಬೆಳಗ್ಗೆ 10.30 ಕುಕ್ಕೆ ಮ್ಯಾಕ್ ಮಾರ್ಕ್ ಇನ್ಪ್ರಾ ರಿಯಾಲಿಟಿ ಪ್ರೈವೇಟ್ ಲಿಮಿಟೆಡ್ ಪಂಪು ವೆಲ್ ಮಂಗಳೂರು ಎಂಬಲ್ಲಿ ಡಿ.ಕೆ. ಗ್ರೂಪ್ ಆಫ್ ಕಂಪನೀಸ್ ಇದರ 13 ನೇ ಶಾಖೆ ಯು ಉದ್ಘಾಟನಾ ಸಮಾರಂಭ ನಡೆಯಿತು. ಡಿ.ಕೆ. ಗ್ರೂಪ್ ಆಫ್ ಕಂಪನೀಸ್ ನ ಸ್ಥಾಪಕ ಸದಸ್ಯರು ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್ ನ ಆಡಳಿತ ನಿರ್ದೇಶಕ ಶ್ರೀ ಆಲ್ವಿನ್ ಜೋಯಲ್ ನೋರೋನ್ಹ. ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಾ ಉತ್ತಮ ಸೇವೆ ನೀಡುವ ಮೂಲಕ ಇಂದು 12 ಹೆಚ್ಚು ಶಾಖೆಗಳನ್ನು ಹೊಂದಿದ್ದು ಒಂದೇ ಸೂರಿನಲ್ಲಿ ವಿವಿಧ ಉತ್ತಮ ಸೇವಾ ಸೌಲಭ್ಯಗಳನ್ನು ಗ್ರಾಹಕರಿಗೆ ನೀಡುವುದರ ಮೂಲಕ ಜನರನ್ನ ಆಕರ್ಷಿಸುತ್ತಿವೆ ಎಂದರು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಮುಖ್ಯ ಅತಿಥಿಗಳಾಗಿ ನಿಕಟಪೂರ್ವ ಮ.ನ.ಪ ಸದಸ್ಯರುಗಳಾದ ಶೋಭಾ ಪೂಜಾರಿ, ಸಂದೀಪ್ ಗರೋಡಿ, ಡಿ.ಕೆ.ಗ್ರೂಪ್ ಆಫ್ ಕಂಪನೀಸ್ ನ ವಿವಿಧ ಶಾಖೆಗಳ ಪ್ರಮುಖರಾದ ಕಿರಣ್, ನೆಲ್ಸನ್ ,…

Read More

SSLC ಪರೀಕ್ಷೆಯಲ್ಲಿ 93% ಅಂಕ ಪಡೆದು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ಹಾಝರಾ ರಾಹಿಲಾ ರವರನ್ನು ಅಡ್ಕರೆ ಫೌಂಡೇಶನ್ ವತಿಯಿಂದ ಸನ್ಮಾನಿಸಲಾಯಿತು,ಅಡ್ಕರೆ ಫೌಂಡೇಶನ್ (ರಿ) ಸ್ಥಾಪಕರಾದ ಎಂ. ಸಿರಾಜ್ ಅಡ್ಕರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಜನಾಬ್ ಅಬ್ಲುಲ್ ರಹಿಮಾನ್, ಶೌಕತ್ ಕೋಡಿ , ರಿಯಾಝ್ ಕಲ್ಲಾಪು, ಇರ್ಷಾದ್ ಉಳ್ಳಾಲ ಮುಂತಾದವರು ಉಪಸ್ಥಿತರಿದ್ದರು,

Read More

ಮಂಗಳೂರು / ಉಡುಪಿ : ಮಂಗಳೂರು ಮೊದಲ ಮಳೆಗೆ ಭಾರೀ ಅವಾಂತರ ಸೃಷ್ಟಿಯಾಗಿದ್ದುಮಂಗಳೂರಿನ ಕೊಡಿಯಾಲ್ ಗುತ್ತುವಿನಲ್ಲಿ ನಡೆದ ಘಟನೆ ಸಿಲ್ವರ್ ಲೈನ್ ಅಪಾರ್ಟ್ಮೆಂಟ್ ತಡೆ ಗೋಡೆ ಕುಸಿದು ಭಾರೀ ಪ್ರಮಾಣದ ಹಾನಿ ಉಂಟಾಗಿದೆ. ಪಕ್ಕದಲ್ಲೇ ಬೃಹತ್ ಕಟ್ಟಡವೊಂದರ ಕಾಮಗಾರಿ ನಡೆಯುತ್ತಿದ್ದು ಅದೃಷ್ಟವಶಾತ್ ಯಾವುದೇ ದುರ್ಘಟನೆ ಸಂಭವಿಸಲ್ಲ.ಮಂಗಳೂರಿನ ಹಲವೆಡೆ ರಾತ್ರೆನೂ ಧಾರಾಕಾರ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಂಭವ ಹೆಚ್ಚಾಗಿದೆ. ಮಂಗಳೂರು ಹೊರವಲಯದಲ್ಲಿ ಬೆಳ್ಳಂ ಬೆಳ್ಳಿಗೆ ಸುರಿದ ಮಳೆಗೆ ಬಜಪೆ ಸಮೀಪದ ಅದ್ಯಪಾಡಿಯ ಸಂಕೇಶ ಎಂಬಲ್ಲಿ ಭೂಕುಸಿತ ಉಂಟಾಗಿದೆ. ಮಂಗಳೂರು ವಿಮಾನ ನಿಲ್ದಾಣ ಕೆಳಭಾಗದ ಅದ್ಯಪಾಡಿ ಪ್ರದೇಶ ಬಳಿ ವಿಮಾನ ನಿಲ್ದಾಣ ಭಾಗದಿಂದ ಹರಿದುಬಂದ ಮಣ್ಣು ನೀರು ಗುಡ್ಡದ ಕೆಳಭಾಗದ ಉಮಾನಾಥ ಸಾಲ್ಯಾನ್ ಎಂಬುವವರ ಮನೆಗೆ ಹಾನಿಯುಂಟಾಗಿದೆ .ಮನೆಯ ಮುಂಭಾಗದ ಅಂಗಳದಲ್ಲಿ ಮಣ್ಣು ಕೆಸರು ತುಂಬಿಕೊಂಡಿದ್ದು ಭೀಕರವಾಗಿ ಹರಿದ ಗುಡ್ಡ ಮಣ್ಣು ಮಿಶ್ರಿತ ನೀರು ಮನೆಯ ತುಳಸಿ ಕಟ್ಟೆ ಮನೆಯ ಅಂಗಳ ಸೇರಿದಂತೆ ಮನೆಗೆ ಸಂಪೂರ್ಣ ಹಾನಿಗೊಳಿಸಿದೆ .ಕಳೆದ ವರ್ಷವೂ…

Read More

ದಿನಾಂಕ: 26-05-2025 ರಂದು ಬೆಳಿಗ್ಗೆ 11-00 ಗಂಟೆಯಿಂದ ಬಂಟ್ವಾಳ ತಾಲೂಕು ಕಛೇರಿ, ಬಂಟ್ವಾಳ ಇಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿರುತ್ತದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ದಿನಾಂಕ 26.05.2025 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ. ಅರ್ಜಿದಾರರು ನಮೂನೆ | & ॥ ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ…

Read More