Author: Tulunada Surya

ಕೊಡಿಪ್ಪಾಡಿ ಗ್ರಾಮದ ಕಲೆಂಬಿ ಗುಳಿಗೆ ಗುರಿಯಲ್ಲಿ ಮೇ 13 ರಂದು ನಡೆದ ಪಂಜುರ್ಲಿ ಮತ್ತು ಗುಳಿಗ ದೈವದ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಮಣ್ಯ ದೈವಸ್ಥಾನದ ವ್ಯವಸ್ಥಾಪನ ಸಮಿತಿ ನೂತನ ಸದಸ್ಯೆ ಪ್ರವೀಣ ರೈ ಮರುವಂಜ ಮತ್ತು ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು

Read More

ಅಮಾಸೆಬೈಲು: ಕುಂದಾಪುರ ಸಮೀಪದ ಅಮಾಸೆಬೈಲು ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದಾಗ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಘಟನೆ ವಿವರ: ದಿನಾಂಕ 14/05/2025 ರಂದು ಅಶೋಕ್ ಕುಮಾರ್ ಪೊಲೀಸ್ ಉಪನಿರೀಕ್ಷಕರು ಅಮಾಸೆಬೈಲು ಠಾಣೆ ಇವರು ಠಾಣಾ ಸರಹದ್ದಿನಲ್ಲಿ ಇಲಾಖಾ ಜೀಪು ನಂಬ್ರ KA-20 G-375 ರಲ್ಲಿ ಠಾಣಾ ಸಿಬ್ಬಂದಿಯವರಾದ ರಾಘವೇಂದ್ರ ಕೆ, ಸಂಪತ್ ಕುಮಾರ್ ಹಾಗೂ ಜೀಪು ಚಾಲಕ ಸುಧೀರ ಇವರುಗಳೊಂದಿಗೆ ಮಡಾಮಕ್ಕಿ ಗ್ರಾಮದ ಮಾಂಡಿ ಮೂರುಕೈ ಬಳಿ ರೌಂಡ್ಸ್ ಕರ್ತವ್ಯದಲ್ಲಿರುವಾಗ 11:00 ಗಂಟೆಗೆ ಅಮಾಸೆಬೈಲು ಠಾಣಾ ವ್ಯಾಪ್ತಿಯ 04 ನೇ ಹಗಲು ಗ್ರಾಮಗಸ್ತು ಕರ್ತವ್ಯದ ಸಿಬ್ಬಂದಿ ದೇವರಾಜ್ ಇವರು ದೂರವಾಣಿ ಕರೆ ಮಾಡಿ ಬಾತ್ಮೀದಾರರೊಬ್ಬರು ಬೀಟು ವ್ಯಾಪ್ತಿಯ ಮಡಾಮಕ್ಕಿ ಗ್ರಾಮದ ಕೆಲಾರಬೆಟ್ಟು ಎಂಬಲ್ಲಿ ಸೀತಾನದಿ ಹೊಳೆಯಿಂದ ಯಾರೋ ವ್ಯಕ್ತಿಗಳು ಅಕ್ರಮವಾಗಿ ಸರಕಾರದ ಪರವಾನಿಗೆಯಿಲ್ಲದೆ ಮರಳನ್ನು ಸಂಗ್ರಹಿಸಿ ಇಟ್ಟಿರುವುದಾಗಿ ತಿಳಿಸಿರುವುದಾಗಿ ಮಾಹಿತಿ ನೀಡಿರುತ್ತಾರೆ. ಬೀಟ್ ಸಿಬ್ಬಂದಿಯವರು ನೀಡಿದ ಖಚಿತ ಮಾಹಿತಿಯ ಮೇರೆಗೆ ನಾನು ಸದ್ರಿ ಸ್ಥಳಕ್ಕೆ ಹೋಗಿ ನೋಡಲಾಗಿ ಮಡಾಮಕ್ಕಿ…

Read More

ಮಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡಿಸಿದ್ದಾರೆ. ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪದ ಮೇಲೆ ಲೋಕಾಯುಕ್ತ ಎಸ್.ಪಿ. ನೇತೃತ್ವದಲ್ಲಿ ದಾಳಿ ನಡೆದಿದ್ದು ಅದರಂತೆ ಮಂಗಳೂರಿನ ಬಿಜೈನಲ್ಲಿರುವ ಮಂಜುನಾಥ್ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮನೆಯಲ್ಲಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರು ಮೂಲದ ಮಂಜುನಾಥ್ ಅವರು ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಮೂರು ಅಂತಸ್ತಿನ ಮನೆಯಲ್ಲಿ ಕುಟುಂಬ ವಾಸವಾಗಿದೆ ಅದರಂತೆ ಗುರುವಾರ 3 ಕಾರುಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ಮಂಜುನಾಥ್ ಅವರಿಗೆ ಸಂಬಂದಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ತಂದೆ, ಮಗ ಸಾವನ್ನಪ್ಪಿ ತಾಯಿಯನ್ನು ಸ್ಥಳೀಯರು ರಕ್ಷಿಸಿದ ಘಟನೆ ಮೇ. 15 ರಂದು ಗುರುವಾರ ಬೆಳಿಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ನಡೆದಿದೆ. ಮೃತರನ್ನು ಮಾಧವ ದೇವಾಡಿಗ (55), ಪ್ರಸಾದ್ ದೇವಾಡಿಗ (22) ಎಂದು ತಿಳಿಯಲಾಗಿದೆ. ತಾಯಿ ತಾರಾ ದೇವಾಡಿಗ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮೂಲತಃ ಕುಂದಾಪುರದವರಾದ ಇವರು ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ಶಂಕರ್ ಶೆಟ್ಟಿ ಅವರ ಕಟ್ಟಡದಲ್ಲಿ ಸುಮಾರು ಏಳು ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ತಂದೆ ಮತ್ತು ಮಗ ಕುಂದಾಪುರ ರಿಲಯನ್ಸ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ಕುಂಭಾಸಿ ಚಂಡಿಕಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಡುಗೆ ಕೆಲಸದ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಗುರುವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಪಕ್ಕದ ಮನೆಯ ಮಹಿಳೆ ರಂಗೋಲಿ ಹಾಕಲೆಂದು ಮನೆಯಿಂದ ಹೊರಗಡೆ ಬಂದಾಗ…

Read More

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯಲ್ಲಿನ ಗಡ್ಡೆಯನ್ನು ಹೊರತೆಗೆಯುವ ಸಂದರ್ಭದಲ್ಲಿ ವಿಪರೀತ ರಕ್ತಸ್ರಾವದಿಂದ ಮಹಿಳೆ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಮೃತ ಮಹಿಳೆಯ ಸಂಬಂಧಿಕರು ಆಸ್ಪತ್ರೆಯಲ್ಲಿ ವೈದ್ಯರ ವಿರುದ್ಧ ಆಕ್ರೋಶಗೊಂಡು ಪ್ರತಿಭಟಿಸಿದ ಘಟನೆ ಕಾರ್ಕಳದ ಸ್ಪಂದನ ಆಸ್ಪತ್ರೆಯಲ್ಲಿ ಸಂಭವಿಸಿದೆ ‌ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಜುಬೇದಾ(54) ಎಂಬವರು ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಅವರು ಸಾಣೂರಿನ ಕ್ಲಿನಿಕ್ ಗೆ ತಪಾಸಣೆ ಮಾಡಿಸಿದಾಗ ಅವರು ಹೊಟ್ಟೆಯಲ್ಲಿ ಗಡ್ಡೆ ಬೆಳೆದ ಕಾರಣದಿಂದ ಶಸ್ತ್ರಚಿಕಿತ್ಸೆ ನಡೆಸುವಂತೆ ಶಿಫಾರಸ್ಸು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜುಬೇದಾ ಅವರನ್ನು ಬುಧವಾರಕಾರ್ಕಳದ ಸ್ಪಂದನ ಆಸ್ಪತ್ರೆಗೆ ದಾಖಲಿಸಿದ್ದರು.ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯಲ್ಲಿನ ಗಡ್ಡೆ ಹೊರತೆಗೆಯಲು ಯತ್ನಿಸಿದಾಗ ವಿಪರೀತ ರಕ್ತಸ್ರಾವದಿಂದಜುಬೇದಾ ಮೃತಪಟ್ಟಿದ್ದಾರೆ ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ. ರಕ್ತಸಿಕ್ತ ಬಟ್ಟೆಗಳನ್ನು ಬೆಡ್ ಬಳಿ ಹಾಕಲಾದ ದೃಶ್ಯ ಇದಕ್ಕೆ ಪುಷ್ಟಿ ನೀಡುವಂತಿತ್ತು ಮಹಿಳೆ ಮೃತಪಟ್ಟ ಬಳಿಕ ಅವರ ಸಂಬಂಧಿಕರು ಹಾಗೂ ಸ್ಥಳೀಯರು ಆಸ್ಪತ್ರೆಯಲ್ಲಿ ಜಮಾಯಿಸಿ ವೈದ್ಯರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.…

Read More

ಮಂಗಳೂರು :- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.ಮೇ 16 ರಂದು ಮಧ್ಯಾಹ್ನ 3:15 – ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:35- ನಗರದ ಉರ್ವಾ ಮಾರ್ಕೆಟ್‍ನಲ್ಲಿರುವ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ ಹಾಗೂ ವೀಕ್ಷಣೆ, ಸಂಜೆ 4:15- ಪಡೀಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನೂತನ ಕಚೇರಿ ”ಪ್ರಜಾ ಸೌಧ” ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಸರ್ಕಾರಿ ಸವಲತ್ತುಗಳ ವಿತರಣಾ ಸಮಾರಂಭ, 6:30 – ಉಳ್ಳಾಲ ಸೈಯದ್ ಮೊಹಮ್ಮದ್ ಶರೀಫ್ ಫುಲ್ ಮದನಿ ದರ್ಗಾ ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲಿ ಭಾಗಿ, ನಂತರ ರಾತ್ರಿ 8:25 – ಮಂಗಳೂರಿನಿಂದ ಮುಖ್ಯಮಂತ್ರಿಗಳು ಬೆಂಗಳೂರಿಗೆ ತೆರಳಲಿದ್ದಾರೆ.

Read More

ಮಂಗಳೂರು:- ಕಡಲ ಕೊರೆತ ಕಾಮಗಾರಿಗಳನ್ನು ನಡೆಸುವಾಗ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿ ನಡೆಸುವಂತೆ ವಿಧಾನಸಭೆ ಸ್ಪೀಕರ್ ಸೂಚಿಸಿದರು. ಅವರು ಬುಧವಾರ ನಗರದ ಸಕ್ರ್ಯೂಟ್ ಹೌಸ್ ನಲ್ಲಿ ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕಡಲ ಕೊರೆತ ಕಾಮಗಾರಿ ನಡೆಸುವಾಗ ಅಧಿಕಾರಿಗಳು ಸ್ಥಳೀಯ ಪ್ರದೇಶಕ್ಕೆ ಸೂಕ್ತವಲ್ಲದ ತಂತ್ರಜ್ಞಾನದಿಂದ ಕಾಮಗಾರಿ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಆಕ್ಷೇಪಣೆಗಳು ಬರುತ್ತಿದೆ. ಕಡಲ ಅಲೆಗಳ ಅಬ್ಬರವು ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿಯಲ್ಲಿರುತ್ತದೆ. ಸ್ಥಳೀಯ ಮೀನುಗಾರರು ಹಾಗೂ ಇತರೆ ಕಡಲತೀರ ನಿವಾಸಿಗಳು ಹಲವು ದಶಕಗಳಿಂದ ಕಡಲತೀರದಲ್ಲಿ ವಾಸಿಸುತ್ತಿದ್ದು ಕಡಲ ಅಲೆಗಳ ಏರಿಳಿತದ ಬಗ್ಗೆ ಅನುಭವದ ಮಾಹಿತಿ ಹೊಂದಿದ್ದಾರೆ. ಇವರ ಅಭಿಪ್ರಾಯ ಆಲಿಸಿ ಕಾಮಗಾರಿಯನ್ನು ನಡೆಸಬೇಕು ಎಂದು ವಿಧಾನಸಭೆ ಸ್ಪೀಕರ್ ತಿಳಿಸಿದರು. ಈಗಾಗಲೇ ಸರಕಾರವು ಸಮುದ್ರ ಪ್ರತಿಬಂಧಕ ಕಾಮಗಾರಿಗಳಿಗೆ ಕರಾವಳಿ ತೀರದ 3 ಜಿಲ್ಲೆಗಳಿಗೆ 200 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಅಲ್ಲಲ್ಲಿ ಅಲ್ಪ ಸ್ವಲ್ಪ ಕಾಮಗಾರಿ ನಡೆಸುವ ಬದಲು ಅತಿ ಹೆಚ್ಚು ಕಡಲ ಕೊರೆತ…

Read More

ಮಂಗಳೂರು :- ಬೆಳ್ತಂಗಡಿ ತಾಲ್ಲೂಕು ಮಲವಂತಿಗೆ ಗ್ರಾಮದ ವ್ಯಾಪ್ತಿಗೊಳಪಟ್ಟ ಎಳನೀರು, ಗುತ್ಯಡ್ಕ, ಬಂಗಾರಗಿ, ಉಕ್ಕುಡ ಮತ್ತು ಕುರ್ಚಾರು ಪ್ರದೇಶಗಳು ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ನೂರಾರು ಕುಟುಂಬಗಳು ತಮ್ಮ ಗ್ರಾಮ ಪಂಚಾಯತ್ ಗೆ ಭೇಟಿ ನೀಡಬೇಕಾದರೆ ಕುದುರೆಮುಖ-ಬಜಗೋಳಿ-ಬೆಳ್ತಂಗಡಿ ಮೂಲಕ ಸುಮಾರು 120 ಕಿ.ಮೀ ದೂರವನ್ನು ಕ್ರಮಿಸಬೇಕು. ಆದರೆ, ಎಳನೀರು-ದಿಡುಪೆ ರಸ್ತೆಯ ಅಭಿವೃದ್ಧಿಯಾದರೆ ಈ ಪ್ರದೇಶಗಳಲ್ಲಿನ ಜನರಿಗೆ ತಮ್ಮ ಗ್ರಾಮಪಂಚಾಯತ್ ಗೆ ಕೇವಲ 9 ಕಿ.ಮೀ ಹಾಗೂ ತಾಲ್ಲೂಕು ಕೇಂದ್ರಕ್ಕೆ 20 ಕಿ.ಮೀ ದೂರವನ್ನು ಕ್ರಮಿಸಿದರೆ ತಲುಪಬಹುದಾಗಿದೆ.ಈ 9 ಕಿ.ಮೀ ರಸ್ತೆಯನ್ನು ಅಭಿವೃದ್ಧಿಪಡಿಸಲು ಈ ಭಾಗದ ಜನರು ಹಲವಾರು ದಶಕಗಳಿಂದ ಬೇಡಿಕೆ ಸಲ್ಲಿಸುತ್ತಿದ್ದಾರೆ. ಆದರೆ, ಈ ರಸ್ತೆಯ ಅಭಿವೃದ್ಧಿ ಮಾಡಬೇಕಾದರೆ ಅರಣ್ಯ ಇಲಾಖೆಯ ವನ್ಯ-ಜೀವಿ ವಿಭಾಗದ ಅನುಮತಿ ಅಗತ್ಯವಾಗಿರುತ್ತದೆ. ಅದರಂತೆ ಹಿಂದಿನ ಸರ್ಕಾರದ ಅವಧಿಯಲ್ಲಿ ಈ ರಸ್ತೆಯ ಅಭಿವೃದ್ಧಿಗೆ ಸರ್ವೆ ನಡೆಸುವ ಬಗ್ಗೆ ಅರಣ್ಯ ಇಲಾಖೆಯ ವನ್ಯ ಜೀವಿ ವಿಭಾಗವು ಅನುಮತಿ ನೀಡಿರುತ್ತದೆ ಎಂಬುದಾಗಿ ಪತ್ರಿಕಾ ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ.…

Read More

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಅಭೂತಪೂರ್ವ ಕಾರ್ಯವೈಖರಿಯನ್ನು ಮೆಚ್ಚಿ ಫೌಂಡೇಶನ್ ನ ಗೌರವಾಧ್ಯಕ್ಷರಾದ ಮಹಾದಾನಿ, ಗೌರವಾನ್ವಿತ ಡಾ ಕೆ ಸದಾಶಿವ ಶೆಟ್ಟಿ ಯವರು ಫೌಂಡೇಶನ್ ಟ್ರಸ್ಟ್ ಗೆ ಮೂರು ಕೋಟಿ ರೂಪಾಯಿಗಳ ದೊಡ್ಡ ದೇಣಿಗೆಯನ್ನು ಘೋಷಿಸಿದ್ದಾರೆ. ಕನ್ಯಾನ ಸದಾಶಿವ ಶೆಟ್ಟಿಯವರು ಪಟ್ಲ ಫೌಂಡೇಶನ್ನಿನ ಗೌರವಾಧ್ಯಕ್ಷರಾದ ನಂತರ ಟ್ರಸ್ಟಿನ ಕಾರ್ಯ ಯೋಜನೆಗಳು ನಾಗಾಲೋಟದಲ್ಲಿ ಮುಂದುವರಿಯುತ್ತಿದ್ದು ಕಲಾಭಿಮಾನಿಗಳ, ಸಂಘಟಕರಿಂದ ಪ್ರಶಂಸೆಯ ಸುರಿಮಳೆ ಹರಿದು ಬರುತ್ತಿದೆ.ಕಳೆದ ಫೆಬ್ರವರಿ ತಿಂಗಳಲ್ಲಿ ಗೋಲ್ಡ್ ಪಿಂಚ್ ಹೋಟೆಲ್ ನಲ್ಲಿ “ಪಟ್ಲ ದಶಮ” ಸಂಭ್ರಮದ ಸಮಾಲೋಚನಾ ಸಭೆಯ ದಿನದಂದು ಫೌಂಡೇಶನ್ ನ ಎಲ್ಲಾ ಮಹಾದಾನಿಗಳು, ಮತ್ತು ಫೌಂಡೇಶನ್ ನ ಪದಾಧಿಕಾರಿಗಳ ಸಮ್ಮುಖದಲ್ಲಿ ಪಟ್ಲ ಫೌಂಡೇಶನ್ ನ ದಶಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಎಂಆರ್ ಜಿ ಗ್ರೂಪ್ ನ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಮತ್ತು ಅಧ್ಯಕ್ಷರಾಗಿ ಬರೋಡ ಶಶಿಧರ ಶೆಟ್ಟಿ ಅವರು ಜವಾಬ್ದಾರಿಯನ್ನು ಬಹಳ ಪ್ರೀತಿಯಿಂದ ವಹಿಸಿಕೊಂಡಿದ್ದರು. ದಶಮಾನೋತ್ಸವದ ಮುಖ್ಯ ಧ್ಯೇಯವಾಗಿ ಕನಿಷ್ಠ 10 ಕೋಟಿ ರೂಪಾಯಿ ಆದರೂ…

Read More

ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಎಫ್ .ಡಿ. ಎ. ಬಸವೇ ಗೌಡ ಲೋಕಾಯುಕ್ತ ಬಲೆಗೆ ಪಿರ್ಯಾದಿದಾರರ ಗಂಡ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ನೊಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿರುತ್ತಾರೆ. ತದ ನಂತರ ಪಿರ್ಯಾದಿದಾರರ ಗಂಡ ಜೂನ್ 2024 ರಂದು ಮರಣ ಹೊಂದಿರುತ್ತಾರೆ. ಪಿರ್ಯಾದಿದಾರರು ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಶ್ರೀ ಭಾಸ್ಕರ್ ರವರ ಬಳಿ ಅವರ ಗಂಡನ ಮರಣ ಉಪದಾನದ ಬಗ್ಗೆ ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ ಆಗಿರುವುದಿಲ್ಲ. ನಂತರ ಪಿರ್ಯಾದಿದಾರರ ಖಾತೆಗೆ ಗಂಡನ ಮರಣ ಉಪದಾನವನ್ನು ಜಮೆ ಮಾಡಿಕೊಟ್ಟಿರುವ ಪ್ರತಿಫಲವಾಗಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಶ್ರೀ ಭಾಸ್ಕರ್ ರವರು ರೂ 5000/- ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್.ರವರ ರೂ 5000/- ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ…

Read More