What's Hot
- ಮಂಗಳೂರು ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ: ಎಐ ತಂತ್ರಜ್ಞಾನ ಪ್ರಯೋಗ, ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಒತ್ತು
- ಮಂಗಳೂರು : ಕ್ರಿಸ್ ಮಸ್ ಹಬ್ಬ ಸಮಾಜದಲ್ಲಿ ಸತ್ಯ,ನ್ಯಾಯ ಹಾಗೂ ಸಹ ಜೀವನದ ಮೌಲ್ಯಗಳನ್ನು ಮರುಸ್ಥಾಪಿಸುವ ವಿಶಿಷ್ಟ ಅವಕಾಶ ಒದಗಿಸುತ್ತದೆ ; ಧರ್ಮಾಧ್ಯಕ್ಷ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ.
- ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಎಂ.ಆರ್.ಜಿ. ಗ್ರೂಪ್ನ ಆಶಾ–ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆ ‘ನೆರವು–2025’
- ಉಡುಪಿ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್ಗಳನ್ನು ಬಂಧಿಸಿದ ಪಡುಬಿದ್ರೆ ಪೊಲೀಸರು
- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
- ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕ ಸ್ಥಾನ , ನಿರ್ದೇಶಕರ ಭವಿಷ್ಯ ಕುರಿತಾಗಿ ಚರ್ಚೆಗೂ ದಾರಿ ?
- ಮಂಗಳೂರು: MDMA ಸಾಗಾಟ ಜಾಲ ಭೇದಿಸಿದ ಸಿಸಿಬಿ; ಮೂವರು ಆರೋಪಿಗಳು ಬಂಧನ
- ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸ್ ಕ್ರಮ ಖಂಡನೀಯ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ತೀವ್ರ ಆಕ್ರೋಶ
Author: Tulunada Surya
ಸುಮಾರು 2 ದಶಕಗಳ ಕಾಲ ಪತ್ರಕರ್ತರಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕಾಸರಗೋಡು ಪತ್ರಕರ್ತರ ದತ್ತಿನಿಧಿ ಪ್ರಶಸ್ತಿಯನ್ನು ಎನ್ಕೌಂಟರ್ ಪತ್ರಿಕೆ ಸಂಪಾದಕ ಇಕ್ಬಾಲ್ ಕುತ್ತಾರ್ ಆಯ್ಕೆ ಮಾಡಲಾಗಿತ್ತು. ಕರ್ನಾಟಕ ಸರಕಾರದ ಸನ್ಮಾನ್ಯ ಸಚಿವರಾದ ಶ್ರೀ ಚೆಲುವರಾಯ ಸ್ವಾಮಿ ಅವರಿಂದ ಕಾಸರಗೋಡು ಪತ್ರಕರ್ತರ ದತ್ತಿನಿಧಿ ಪ್ರಶಸ್ತಿಯನ್ನು ಎನ್ಕೌಂಟರ್ ಪತ್ರಿಕೆ ಸಂಪಾದಕ ಇಕ್ಬಾಲ್ ಕುತ್ತಾರ್ ಸ್ವೀಕರಿಸಿದರು.
ಸುಹಾಸ್ ಶೆಟ್ಟಿ ಹತ್ಯೆಗೆ ಸಂಭಂದಿಸಿದಂತೆ ಮಂಗಳೂರು ಪೋಲಿಸರು 8 ಜನರನ್ನು ಬಂಧಿಸಿದ್ದಾರೆ.ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿ ನಡೆಸಿದ್ದು ಒಟ್ಟು 8 ಜನರನ್ನು ಬಂಧಿಸಿದ್ದು ಇನ್ನೂ 2 ಜನರ ಬಂಧನವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಬಂಧಿತರನ್ನು ಮಂಗಳೂರು ಮೂಲದ ಅಬ್ದುಲ್ ಸಫ್ವಾನ್(29) ನಿಯಾಜ್(28), ಮೊಹಮ್ಮದ್ ಮುಝುಮಿಲ್(32), ಕಲಂದರ್ ಶಾಫಿ(31), ಮೊಹಮ್ಮದ್ ರಿಜ್ವಾನ್(28) ಆದಿಲ್ ಮೆಹರೂಫ್ ಚಿಕ್ಕಮಗಳೂರು ಮೂಲದ ರಂಜಿತ್(19) ನಾಗರಾಜ್(2೦) ಎಂದು ತಿಳಿದಿದೆ. ಆರು ಜನ ಸೇರಿ ಸುಹಾಸ್ ಶೆಟ್ಟಿ ಮೇಲೆ ಹತ್ಯೆನಡೆಸಿದ್ದು ಪ್ರಮುಖ ಆರೋಪಿ ಸಫ್ವಾನ್ ಎಂದು ಗುರುತಿಸಲಾಗಿದೆ. ಸಫ್ವಾನ್ ಮೇಲೆ 2023 ರ ಮೇಲೆ ಮಾರಣಾಂತಿಕ ಹಲ್ಲೆಯಾಗುತ್ತದೆ ಪ್ರಶಾಂತ್ ,ಧನರಾಜ್ ಸುಹಾಸ್ ಶೆಟ್ಟಿ ಸ್ನೇಹಿತ ರಾಗಿದ್ದು ಸಫ್ವಾನ್ ಗೆ ಸುಹಾಸ್ ಕೊಲೆ ಮಾಡುವ ಆತಂಕ ಇತ್ತು ಎಂದು ತಿಳಿದಿದೆ. ಈ ಹಿನ್ನಲೆ ಸುಹಾಸ್ ನ್ನು ಕೊಲೆ ಮಾಡಲು ತೀರ್ಮಾನ ಮಾಡಲಾಗಿದ್ದು ಫಾಝೀಲ್ ನ ತಮ್ಮನನ್ನು ಸಂಪರ್ಕಿಸಿ ಕೊಲೆ ಮಾಡೋಕೆ ತೀರ್ಮಾನ ಮಾಡುತ್ತಾರೆ.ಸುಹಾಸ್ ಕೊಲೆ…
ದುಬೈ: ಯುಎಇ ನಲ್ಲಿ ಕಳೆದ ಮೂರು ದಶಕಗಳಿಂದ ಕರ್ನಾಟಕ ಸಂಘಟನೆಗಳ ಪರ ಕ್ರೀಡಾ ಕಾರ್ಯಕ್ರಮಗಳ ನೇತೃತ್ವವನ್ನು ವಹಿಸಿಕೊಂಡು ಬಂದಿರುವ ಉತ್ತಮ ಕ್ರೀಡಾ ಸಂಘಟಕರಾದ ನೊಯಲ್ ಡಿ.ಅಲ್ಮೆಡಾ ಅವರಿಗೆ ಕನ್ನಡ ಸಂಘ ಅಲೈನ್ ವತಿಯಿಂದ “ಗಲ್ಫ್ ಕ್ರೀಡಾ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಳೆದ ಎರಡು ದಶಕಗಳಿಂದ ಕನ್ನಡ ಪರ ಚಟುವಟಿಕೆಗಳನ್ನು ಯಶಸ್ವಿಯಾಗಿ ಆಯೋಜಿಸಿ ಕೊಂಡು ಬಂದಿರುವ ಕರ್ನಾಟಕ ಸಂಘಟನೆಗಳ ಪೈಕಿ ಕನ್ನಡ ಸಂಘ ಅಲೈನ್ ಕೂಡ ಒಂದು. ಇದರ 22ನೇ ವಾರ್ಷಿಕೋತ್ಸವದ ಅಂಗವಾಗಿ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಇತ್ತೀಚೆಗೆ ಅಲೈನ್ ನ ರಾಡಿಸ್ಸನ್ ಬ್ಲೂ ಹೋಟೆಲ್ ನಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕ್ರೀಡಾ ಕ್ಷೇತ್ರದ ಸಂಘಟನೆಯಲ್ಲಿ ಅತ್ಯುತ್ತಮ ಸೇವೆಗೈದ ನೊಯಲ್ ಡಿ.ಅಲ್ಮೇಡಾ ಅವರಿಗೆ “ಗಲ್ಫ್ ಕ್ರೀಡಾ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಯು.ಎ.ಇ. ಹಿರಿಯ ಉದ್ಯಮಿ ಡಾ. ಬಿ.ಆರ್. ಶೆಟ್ಟಿ, ಗೌರವ ಅತಿಥಿಗಳಾಗಿ ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿಯವರು ಮತ್ತು ಅಲೈನ್ ಜೂನಿಯರ್ ಸ್ಕೂಲ್ ನ…
ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಕಾರ್ಮಿಕ ದಿನಾಚರಣೆಯು ಮೇ 1 ಗುರುವಾರ ಉಡುಪಿ ಬಸ್ ನಿಲ್ದಾಣ ಬಳಿಯ ಅಕ್ಷಯ ಟವರ್ ನಲ್ಲಿ ನಡೆಯಿತು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ಅವರು ದೀಪ ಬೆಳಗಿಸಿದ ರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ವಾಗತ ಭಾಷಣವನ್ನು ಮಾಡಿದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ರವರು ತುಳುನಾಡ ರಕ್ಷಣಾ ವೇದಿಕೆ ಕಳೆದ 16 ವರ್ಷಗಳಿಂದ ಯೋಗೀಶ್ ಶೆಟ್ಟಿ ಜಪ್ಪುರವರ ನೇತೃತ್ವದಲ್ಲಿ ನೂರಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ . ಪ್ರಾಸ್ತಾವಿಕ ಭಾಷಣ ಕೇಂದ್ರೀಯ ಮಂಡಳಿ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬರವರು ಕಾರ್ಮಿಕರಿಗೆ ಅನ್ಯಾಯವಾದಾಗ ತುಳುನಾಡ ರಕ್ಷಣಾ ವೇದಿಕೆ ನಿರಂತರ ಹೋರಾಟ ಮಾಡಿ ನ್ಯಾಯ ದೊರಕಿಸಿ ಕೊಟ್ಟಿದೆ. ವೇದಿಕೆಯಲ್ಲಿ ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ ರವರು ಕಾರ್ಮಿಕರ ಹಿತರಕ್ಷಣೆಗೆ ತುಳುನಾಡ ರಕ್ಷಣಾ ವೇದಿಕೆ ಸದಾ ಸಿದ್ದ ವಾಗಿರುತ್ತದೆ. ಎಂದರು. ಜಿಲ್ಲಾ ಸಂಘಟನಾ…
ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಸಂಘಟನೆಗಳು ಕರೆ ನೀಡಿವೆ 2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತರಾಗಿದ್ದರು ಮತ್ತು ಅವರ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು. ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್ನ ಕೊಲೆಯಾಗಿತ್ತು . ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದರು. ಇದೀಗ ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ…
ವಾಮಂಜೂರು ಸಮೀಪದ ಕುಡುಪು ಎಂಬಲ್ಲಿ ಏಪ್ರಿಲ್ 27 ರಂದು ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಸ್ಥಳಕ್ಕೆ ಬಂದಿದ್ದ ಕೇರಳ ಮೂಲದ ಕಾರ್ಮಿಕ ಅಶ್ರಫ್ ಎಂಬಾತನ ಮೇಲೆ ಮೂವತ್ತರಷ್ಟು ದುಷ್ಕರ್ಮಿಗಳು ವಿನಾಕಾರಣ ಥಳಿಸಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ಅಸಹಜ ಸಾವು ಎಂದು ಬಿಂಬಿಸಿ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಿದರು ಎಂಬ ಆರೋಪದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಅದಕ್ಕೆ ಸಾಥ್ ನೀಡಿದ ಎಸ್ ಬಿ ಚಂದ್ರ ಹಾಗೂ ಪೊಲೀಸ್ ಸಿಬ್ಬಂದಿ ಯಲ್ಲಾಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಮಂಗಳೂರು ಭಾಗದಲ್ಲಿ ನಡೆದ ಮೊದಲ ಗುಂಪು ಹತ್ಯೆ ಪ್ರಕರಣ ಇದಾಗಿದ್ದು, ಸ್ಥಳೀಯ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ ಎಂದು ಸಾರ್ವಜನಿಕವಾಗಿ ಕೆಲವು ಆಕ್ರೋಶಗಳಿಗೆ ಕಾರಣವಾಗಿತ್ತು. ಈ ಸಂಬಂಧ ಉನ್ನತ ಅಧಿಕಾರಿಗಳಿಗೆ ಸ್ಪಷ್ಟ ಮಾಹಿತಿ ನೀಡದೆ ಕರ್ತವ್ಯ ಲೋಪ ಎಸಗಿರುವ ಆರೋಪಗಳು ಕೇಳಿಬಂದಿವೆ.
ಕೊಣಾಜೆ : ಪಜೀರು ಗ್ರಾಮದ ಅಡ್ಕ ಎಂಬಲ್ಲಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಆಡ್ಕ ನಿವಾಸಿ ಅಬ್ದುಲ್ ರಝಾಕ್ (52) ಎಂದು ಗುರುತಿಸಲಾಗಿದೆ. ಅವರು ತನ್ನ ಮನೆಯ ಬಳಿ ಹಲಸು ಕೊಯ್ಯಲೆಂದು ಮರ ಏರಿದ್ದ ವೇಳೆ ವಿದ್ಯುತ್ ಸ್ಪರ್ಶಗೊಂಡಿದೆ. ಸುಮಾರು ಹೊತ್ತಾದರೂ ಮನೆಗೆ ಬಂದಿಲ್ಲ ಎಂದು ಅವರ ಪತ್ನಿ ಮರದ ಬಳಿ ಹೋದ ವೇಳೆ ರಝಾಕ್ ಅವರು ಮರದ ಕೆಳಗೆ ಪ್ರಜ್ಞೆತಪ್ಪಿ ಬಿದ್ದಿದ್ದರು ಎಂದು ತಿಳಿದುಬಂದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಝಾಕ್ ಅವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ. ಭಾರತ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ನಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ರಝಾಕ್ ಅವರು ಹಲವು ವರ್ಷಗಳಿಂದ ಟೈಲರ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು.
ಮಂಗಳೂರು ಮಾರಕಾಸ್ತ್ರಗಳಿಂದ ಕೊಚ್ಚಿ ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಸುಹಾಸ್ ಶೆಟ್ಟಿ ಕೊಲೆಮಾಡಲಾಗಿದೆ ಎಂದು ಹೇಳಲಾಗಿದೆ ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಸುಹಾಸ್ ಶೆಟ್ಟಿಯ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಮಂಗಳೂರಿನ ಬಜಪೆ, ಕಿನ್ನಿಪದವು ಸಮೀಪ ಘಟನೆ ನಡೆದಿದೆ. 2022ರ ಜುಲೈ 28 ರಂದು ಫಾಜಿಲ್ ಕೊಲೆ ನಡೆದಿತ್ತು. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಈ ಹಿಂದೆ ಹಿಂದೂ ಸಂಘಟನೆ ಕಾರ್ಯಕರ್ತನಾಗಿದ್ದ. ಸುಹಾಸ್ ಶೆಟ್ಟಿ. ಹಲವಾರು ಕೊಲೆ, ಕೊಲೆ ಯತ್ನ ಕೇಸ್ ನ ಆರೋಪಿಯಾಗಿದ್ದ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ರೌಡಿಶೀಟರ್ ಮತ್ತು ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಹಿನ್ನೆಲೆ ಮಂಗಳೂರಿನ ಎಜೆ ಆಸ್ಪತ್ರೆ ಬಳಿ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಮಂಗಳೂರಿನ ಎ.ಜೆ. ಆಸ್ಪತ್ರೆಯ ಬಳಿ ಹಿಂದೂ…
ಮಂಗಳೂರು: ಹಿಂದೂ ಯುವ ಸೇನೆ ಭಾರ್ಗವ ಶಾಖೆ ಅಳಪೆ ಇದರ ನೇತೃತ್ವದಲ್ಲಿ ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ 26 ಪ್ರವಾಸಿಗರ ಆತ್ಮಕ್ಕೆ ಶಾಂತಿ ಸಿಗಲು ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮತ್ತು ಹುತಾತ್ಮರಾದ ರವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.. ಈ ಪ್ರತಿಭಟನೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಅವರು ಮಾತನಾಡಿ ರಾಷ್ಟ್ರೀಯತೆಯನ್ನು ಪ್ರತಿಯೊಬ್ಬ ಭಾರತೀಯ ತನ್ನ ಮೈಗೂಡಿಸಿಕೊಳ್ಳುವುದು ಪ್ರಮುಖವಾದ ಅಂಶವಾಗಿದೆ. ನಮ್ಮ ದೇಶದ 140 ಕೋಟಿ ನಿವಾಸಿಗಳು ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಬಲಿದಾನ ಮಾಡಿದ ಮಹಾಪುರುಷರ ಸ್ಮರಣೆ ಮಾಡಬೇಕು ಪ್ರತಿ ಮನೆಯಲ್ಲೂ ದೇಶಕ್ಕಾಗಿ ಹೊರಡುವ ಕಿಚ್ಚು ಮೈಗೂಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿಯ ಅಧ್ಯಕ್ಷರಾದ ಯಶೋಧರ ಚೌಟರವರು ಮಾತನಾಡಿ ಹಿಂದೂ ಜಾಗೃತವಾದಲ್ಲಿ ಮಾತ್ರ ಭರತ ಕಂಡ ಶಾಶ್ವತವಾಗಿ ಸನಾತನ ಸಂಸ್ಕೃತಿಯಲ್ಲಿ ಮುಂದುವರಿಯುತ್ತದೆ. ಆದ್ದರಿಂದ ತಾವೆಲ್ಲರೂ ಜಾಗೃತರಾಗಬೇಕೆಂದು ಕರೆ ನೀಡಿದರು. ಅಲ್ಲದೆ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶೋಭಾ ಪೂಜಾರಿ, ದುರ್ಗ…
ಮಂಗಳೂರು, : ಎಲ್ಲರೂ ಸಮಾನರಾಗಿ ಬಾಳಿ ಬದುಕಿ, ಸಂಘರ್ಷರಹಿತ ಮತ್ತು ದ್ವೇಷರಹಿತ ಸಮಾಜ ನಿರ್ಮಾಣಕ್ಕೆ ಬಸವೇಶ್ವರರ ಸಂದೇಶ ಇಂದಿನ ಅಗತ್ಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಆನಂದ್ ಹೇಳಿದ್ದಾರೆ. ಅವರು ಬುಧವಾರ ತುಳುಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂಖದ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಸಹಕಾರದೊಂದಿಗೆ ನಡೆದ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಸವಣ್ಣನವರ ತತ್ವಗಳು ಸದಾ ನಮ್ಮೊಂದಿಗೆ ಇರಬೇಕು. ಸಾಮಾಜಿಕ ಸಮಾನತೆಯನ್ನು ಅಂದಿನ ಕಾಲದಲ್ಲಿಯೇ ಪ್ರತಿಪಾದಿಸಿದ್ದ ಅವರು, ಮನುಷ್ಯರಲ್ಲಿ ಮೇಲು ಕೀಳು ಎಂಬ ನಿಲುವನ್ನು ಕಠುವಾಗಿ ವಿರೋಧಿಸಿದ್ದರು. ಇದುವೇ ಉತ್ತಮ ಸಮಾಜಕ್ಕೆ ಬುನಾಧಿಯಾಯಿತು ಎಂದು ಅವರು ಹೇಳಿದರು. ಬಸವಣ್ಣನವರು ಸಂಸ್ಥಾಪಿಸಿದ್ದ ಅನುಭವ ಮಂಟಪವು ಜಗತ್ತಿನ ಮೊದಲ ಸಂಸತ್ ಎಂದೇ ಪ್ರಸಿದ್ಧಿಯಾಗಿದೆ. ಇದು ಸಂಸದೀಯ ವ್ಯವಸ್ಥೆಗೆ ದೊಡ್ಡ ಕೊಡುಗೆ ನೀಡಿತು. ಶ್ರಮ ಮತ್ತು ಸೇವೆಯ ಮೇಲೆ ಅಪಾರ ನಂಬಿಕೆ ಇಟ್ಟಿದ್ದ ಅವರು, ಸಮಾಜದ ಪ್ರಗತಿಗೆ ಇದು ಪ್ರಮುಖ ಆಧಾರ ಎಂದು…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
