- ಕರಾವಳಿ ಉತ್ಸವದಲ್ಲಿ ಯಕ್ಷ ಭಾರತಿ ತಂಡದ ತಾಳಮದ್ದಳೆ
- ಮಂಗಳೂರು ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ: ಎಐ ತಂತ್ರಜ್ಞಾನ ಪ್ರಯೋಗ, ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಒತ್ತು
- ಮಂಗಳೂರು : ಕ್ರಿಸ್ ಮಸ್ ಹಬ್ಬ ಸಮಾಜದಲ್ಲಿ ಸತ್ಯ,ನ್ಯಾಯ ಹಾಗೂ ಸಹ ಜೀವನದ ಮೌಲ್ಯಗಳನ್ನು ಮರುಸ್ಥಾಪಿಸುವ ವಿಶಿಷ್ಟ ಅವಕಾಶ ಒದಗಿಸುತ್ತದೆ ; ಧರ್ಮಾಧ್ಯಕ್ಷ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ.
- ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಎಂ.ಆರ್.ಜಿ. ಗ್ರೂಪ್ನ ಆಶಾ–ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆ ‘ನೆರವು–2025’
- ಉಡುಪಿ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್ಗಳನ್ನು ಬಂಧಿಸಿದ ಪಡುಬಿದ್ರೆ ಪೊಲೀಸರು
- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
- ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕ ಸ್ಥಾನ , ನಿರ್ದೇಶಕರ ಭವಿಷ್ಯ ಕುರಿತಾಗಿ ಚರ್ಚೆಗೂ ದಾರಿ ?
- ಮಂಗಳೂರು: MDMA ಸಾಗಾಟ ಜಾಲ ಭೇದಿಸಿದ ಸಿಸಿಬಿ; ಮೂವರು ಆರೋಪಿಗಳು ಬಂಧನ
Author: Tulunada Surya
ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಗ್ರಾಮ ಪಂಚಾಯತ್ ಕೋಟ ತಟ್ಟು, ಉಸಿರು ಕೋಟ, ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಬ್ರಹ್ಮಾವರ, ಗೀತಾನಂದ ಪೌಂಡೇಶನ್ ಮಾಣೂರು ಪಡುಕೆರೆ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟ ತಟ್ಟು ಆಸರೆಯಲ್ಲಿ ಮೇ 4 ರಂದು ಕೋಟಾದ ಕಾರಂತ ಥೀಮ್ ಪಾರ್ಕ್ ನಲ್ಲಿ ನಡೆಯುವ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಂಘಟಕ, ಕುಂದಾಪ್ರ ಕನ್ನಡ ಹರಿಕಾರ, ಶಿಕ್ಷಕ ಪ್ರಖರ ವಾಗ್ಮಿ ನಾಡು ನುಡಿ ನೆಲ ಜಲದ ಬಗ್ಗೆ ಕಾರ್ಯವೆಸಗುತ್ತಿರುವ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ಆಯ್ಕೆಯಾಗಿರುತ್ತಾರೆ. ಎಂದು ಪ್ರಕಟಣೆಯಲ್ಲಿ ಕಾರ್ಯಧ್ಯಕ್ಷರಾದ ಆನಂದ ಸಿ.ಕುಂದರ್, ಅಧ್ಯಕ್ಷರಾದ ಸತೀಶ್ ಬಾರಿಕೆರೆ, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪಿ.ಡಿ.ಒ ರವೀಂದ್ರ ರಾವ್ ತಿಳಿಸಿದ್ದಾರೆ.
ಮಂಗಳೂರು :- ಅಗ್ನಿ ಸುರಕ್ಷತಾ ಸೇವಾ ಸಪ್ತಾಹದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಸಭಾಂಗಣದಲ್ಲಿ ಬೆಂಕಿ ಅವಘಡದಿಂದ ಆಗುವ ದುಷ್ಪರಿಣಾಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಮತ್ತು ಪ್ರಾತ್ಯಕ್ಷಿಕೆಯನ್ನು ಅಗ್ನಿಶಾಮಕ ಇಲಾಖೆ ವತಿಯಿಂದ ನೀಡಲಾಯಿತು. ಅಗ್ನಿ ಸುರಕ್ಷಿತ ಭಾರತವನ್ನು ಹುಟ್ಟು ಹಾಕಲು ಒಂದಾಗೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು ಮತ್ತು ಜಾಗೃತಿ ಮೂಡಿಸಲು ಕರ ಪತ್ರಗಳನ್ನು ಹಂಚಲಾಯಿತು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜೆಸಿಂತಾ ಉಪಸ್ಥಿತರಿದ್ದರು.
ಮಂಗಳೂರು : ಕನ್ನಡ ಚಿತ್ರ ನಟ ಡಾ. ರಾಜ್‍ಕುಮಾರ್ ಅವರು ತಾನು ನಟಿಸಿದ ಚಲನಚಿತ್ರಗಳಲ್ಲಿ ಅಥವಾ ವೈಯಕ್ತಿಕ ಬದುಕಿನಲ್ಲಿ ಸಮಾಜಕ್ಕೆ ಕೆಡುಕನ್ನುಂಟು ಮಾಡುವ ಯಾವುದೇ ಅಂಶಗಳನ್ನು ತೋರಿಸದೆ, ತನ್ನ ಬದುಕನ್ನೇ ಆದರ್ಶವನ್ನಾಗಿ ತೋರಿಸಿದ್ದಾರೆ ಎಂದು ಕರ್ನಾಟಕ ಗೇರು ಅಭಿವೃಧ್ದಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಪಿ ದಯಾನಂದ ಪೈ ಪಿ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಇವರ ಸಹಕಾರದೊಂದಿಗೆ ಕನ್ನಡ ಚಿತ್ರನಟ ಡಾ. ರಾಜಕುಮಾರ್ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಅಪ್ರತಿಮ ನಟನಾಗಿ ಅವರು ಸಮಾಜಕ್ಕೆ ನೀಡಿದ ಸಂದೇಶ ಸ್ಮರಣೀಯ. ರಾಜಕುಮಾರ್ ಅವರನ್ನು ಸಮಾಜದ ಮಾದರಿ ವ್ಯಕ್ತಿ ಅಂದರೆ ತಪ್ಪಾಗಲಾರದು. ಅವರ ಜೀವನ ಚರಿತ್ರೆಯನ್ನು ಇಂದಿನ ಯುವ ಪೀಳಿಗೆ ಸ್ಮರಿಸುವುದು ಬಹಳ ಅತ್ಯಗತ್ಯ. ಅವರ ಆದರ್ಶ, ಜೀವನ ಮೌಲ್ಯಗಳು ನಮ್ಮಲ್ಲಿ ಅಳವಡಿಸಿಕೊಂಡರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು…
ಮಂಗಳೂರು :- ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ದಿನಾಂಕ 24/04/2025ರಂದು ಸಂಭವಿಸುತ್ತಿರುವ ಶೂನ್ಯ ನೆರಳಿನ ವಿದ್ಯಮಾನವನ್ನು ವೀಕ್ಷಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಈ ವಿದ್ಯಮಾನದ ಬಗ್ಗೆ ವಿವರಣೆಯನ್ನು ಮತ್ತು ಅದಕ್ಕೆ ಸಂಬಂಧಪಟ್ಟ ಪ್ರಾತ್ಯಕ್ಷಿಕೆಗಳನ್ನು ಆಸಕ್ತ ಸಂದರ್ಶಕರಿಗೆ ಏರ್ಪಡಿಸಲಾಗಿತ್ತು. ಸಂದರ್ಶಕರು ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿ ಸಂದೇಹಗಳನ್ನು ಪರಿಹರಿಸಿಕೊಂಡರು. ಆದರೆ ಶೂನ್ಯ ನೆರಳಿನ ವಿದ್ಯಮಾನ ಸಂಭವಿಸುತ್ತಿರುವ ಸಮಯದಲ್ಲಿ ಮೋಡ ಕವಿದ ವಾತಾವರಣವಿದ್ದ ಕಾರಣ ಅದರ ಅನುಭವವನ್ನು ಪಡೆಯಲು ಸಾಧ್ಯವಾಗಲಿಲ್ಲ. ವೀಕ್ಷಕರಿಗೆ ಸೋಲಾರ್ ಫಿಲ್ಟರ್ ಅಳವಡಿಸಿದ ದೂರದರ್ಶಕದ ಮೂಲಕ ಸೌರಕಲೆಗಳನ್ನು ವೀಕ್ಷಿಸಲು ಅನುವು ಮಾಡಿಕೊಡಲಾಯಿತು.ಬೆಂಗಳೂರಿನ ಜವಾಹರ್‍ಲಾಲ್ ನೆಹರು ತಾರಾಲಯ, ಚೆನ್ನೈನ ಪೆರಿಯಾರ್ ವಿಜ್ಞಾನ ಮತ್ತು ತಂತ್ರಜ್ಞಾನ ಮ್ಯೂಸಿಯಂ ಮತ್ತು ಇನ್ನಿತರ ಕೇಂದ್ರಗಳ ಸಮನ್ವಯತೆಯೊಂದಿಗೆ ಭೂಮಿಯ ಸುತ್ತಳತೆ, ಭೂಮಿ ತಿರುಗುವ ವೇಗ ಮತ್ತು ನಿಜ ಉತ್ತರ ದಿಕ್ಕುಗಳನ್ನು ಕಂಡುಹಿಡಿಯುವ ಪ್ರಯೋಗಗಳನ್ನು ಕೈಗೊಳ್ಳಲಾಗಿತ್ತು.ಕೇಂದ್ರದ ವೈಜ್ಞಾನಿಕ ಅಧಿಕಾರಿ ವಿಘ್ನೇಶ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು ಹಾಗೂ ಕೇಂದ್ರದ ಸಿಬ್ಬಂದಿ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸುವಲ್ಲಿ ಸಹಕರಿಸಿದರು.
“ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ ಲಾಡ್ ಅವರ ಮುಖಂಡತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ ಎಂದು ತಿಳಿಸಿದರು. ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ…
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನ ಬೈಸರನ್ ಕಣಿವೆ ಪ್ರದೇಶದಲ್ಲಿ ನಡೆದ ಶಂಕಿತ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ಜಮ್ಮು ಕಾಶ್ಮೀರದಲ್ಲಿ ಕರ್ನಾಟಕ ರಾಜ್ಯದ ಇಬ್ಬರು ಸೇರಿ 27 ಪ್ರವಾಸಿಗರು ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. 12 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ‘ಮಿನಿ-ಸ್ವಿಟ್ಟರ್ಲೆಂಡ್’ ಎಂದು ಕರೆಯಲ್ಪಡುವ ಅನಂತನಾಗ್ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣದಲ್ಲಿ, ಪ್ರವಾಸಿ ಋತುವಿನ ಗರಿಷ್ಠ ಸಮಯದಲ್ಲಿ ಈ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರ ಮೂಲದ ಭಯೋತ್ಪಾದಕ ಗುಂಪು ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರು ಹರಿದು ಬರುತ್ತಿರುವ ಮತ್ತು ಅಮರನಾಥ ಯಾತ್ರೆ ಜುಲೈನಲ್ಲಿ ಪ್ರಾರಂಭವಾಗಲಿರುವ ಸಮಯದಲ್ಲಿ ಈ ಘಟನೆ ನಡೆದಿದೆ. ರೆಸಿಸ್ಟೆನ್ಸ್ ಫ್ರಂಟ್ ಎಂಬುದು ಲಷ್ಕರ್-ಎ-ತೈಬಾ ಒಂದು ಶಾಖೆಯಾಗಿದ್ದು, ಆಗಸ್ಟ್ 2019 ರಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಹೊರಹೊಮ್ಮಿದ ಸಂಘಟನೆ. 370 ನೇ ವಿಧಿಯ ರದ್ದಿತಿಯಾದ ಆರು ತಿಂಗಳೊಳಗೆ, ಲಷ್ಕರ್-ಎ-ತೈಬಾ ಸೇರಿದಂತೆ ವಿವಿಧ ಬಣಗಳ ಉಗ್ರಗಾಮಿಗಳನ್ನು ಸಂಯೋಜಿಸುವ…
ಕಾರ್ಕಳ: ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆಗಾಗಿ ಹಿರಿಯಡ್ಕದ ಸೌಮ್ಯ ಕ್ಲಿನಿಕ್ ನ ಡಾ. ಶೋಭಿತಾ ಅವರು ಈ ವರ್ಷ ‘ಕರ್ನಾಟಕ ಮಹಿಳಾ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಕರ್ನಾಟಕ ಪ್ರೆಸ್ ಕ್ಲಬ್ ನೀಡಲಿದ್ದು, ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಗೌರವಿಸುವ ಉದ್ದೇಶದಿಂದ ಈ ಮಾನ್ಯತೆ ನೀಡಲಾಗುತ್ತಿದೆ. ಏಪ್ರಿಲ್ 24ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಖ್ಯಾತ ಚಲನಚಿತ್ರ ನಟಿ ಶೃತಿ ಭಾಗವಹಿಸಲಿದ್ದಾರೆ. ಪ್ರಶಸ್ತಿಗೆ ಆಯ್ಕೆ ಯಾದ ಶೋಭಿತ ರವರಿಗೆ ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ರವೀಂದ್ರ ಮತ್ತು ಜಿಲ್ಲಾ ಘಟಕ ಅಧ್ಯಕ್ಷ ಡಾ ಸಂದೀಪ್ ಸನಿಲ್ ಶುಭ ಹಾರೈಸಿದ್ದಾರೆ.
ಮಂಗಳೂರು ; ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ಬಂದು ಕೇರಳದ ಉಪ್ಪಳದಲ್ಲಿ ವಾಸವಾಗಿದ್ದ ಯುವತಿಯನ್ನು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಏಪ್ರಿಲ್ 16 ರ ರಾತ್ರಿ ಈ ಹೇಯ ಕೃತ್ಯ ನಡೆದಿದ್ದು, ಅಟೋ ಚಾಲಕ ಸೇರಿ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಿಥುನ್ ಕುಂಪಲ,ಮನೀಷ್ ,ಪ್ರಭುರಾಜ್ ಎಂದು ತಿಳಿದುಬಂದಿದೆ. ಉಪ್ಪಳದಲ್ಲಿ ವಾಸವಾಗಿದ್ದ ಯುವತಿ ಸ್ನೇಹಿತನ ಜೊತೆಯಲ್ಲಿ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದಿದ್ದು, ಇಲ್ಲಿ ಇಬ್ಬರಿಗೂ ಜಗಳವಾಗಿ ಬೇರೆ ಬೇರೆಯಾಗಿದ್ದಾರೆ. ಈ ವೇಳೆ ಜಗಳದಲ್ಲಿ ಯುವತಿಯ ಮೊಬೈಲ್ ಪುಡಿಯಾಗಿದ್ದು ದಾರಿ ತೋಚದೆ ಕಂಗಾಲಾಗಿದ್ದಾಳೆ. ಇದೇ ಸಮಯದಲ್ಲಿ ಬಗಂಬಿಲದ ಅಟೋ ಚಾಲಕನೊಬ್ಬ ಆಕೆಗೆ ಸಹಾಯ ಮಾಡಲು ಮುಂದಾಗಿದ್ದು, ಆಕೆಯ ಮೊಬೈಲ್ ರಿಪೇರಿ ಮಾಡಲು ಸಹಾಯ ಮಾಡಿದ್ದಾನೆ. ಬಳಿಕ ಆಕೆಗೆ ತಿನ್ನಲು ಆಹಾರ ತೆಗೆದುಕೊಟ್ಟಿದ್ದಾನೆ. ಇದರಿಂದ ಆತನ ಮೇಲೆ ವಿಶ್ವಾಸದಿಂದ ತನ್ನನ್ನು ರೈಲ್ವೇ ಸ್ಟೇಷನ್ ತನಕ ಬಿಡುವಂತೆ ಕೋರಿಕೊಂಡಿದ್ದಾಳೆ. ಇದಾದ ಬಳಿಕ ಅಟೋ ಏರಿದ ಯುವತಿ ಪ್ರಜ್ಞೆ ಕಳೆದುಕೊಂಡಿದ್ದು ಎಚ್ಚರವಾದಗ ಅಟೋ ಚಾಲಕ…
ದಿನಾಂಕ: 24-04-2025 ರಂದು ಬೆಳಿಗ್ಗೆ 11-00 ಗಂಟೆಯಿಂದ ಪುತ್ತೂರು ತಾಲೂಕು ಕಛೇರಿ, ಪುತ್ತೂರು ಇಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿರುತ್ತದೆ . ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ದಿನಾಂಕ 24.04.2025 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ. ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ. ಅರ್ಜಿದಾರರು ನಮೂನೆ | & ॥ ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ…
ಅಗತ್ಯ ಕಂಡರೆ ಕ್ರಿಮಿನಲ್ ಮೊಕದ್ದಮೆ: ಪರಿಶಿಷ್ಟರ ಮಹಾಒಕ್ಕೂಟ ಎಚ್ಚರಿಕೆ ಮಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಬುಡಕಟ್ಟುಗಳ ಜನರ ಸಾಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳಲು ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ವ್ಯವಸ್ಥಿತ ಸಂಚು ನಡೆಸಿದೆ. ಕರ್ನಾಟಕ ರಾಜ್ಯದಲ್ಲಿ 180 ಪರಿಶಿಷ್ಟ ಜಾತಿಗಳು ಮತ್ತು 105 ಪರಿಶಿಷ್ಟ ಬುಡಕಟ್ಟುಗಳು ಇವೆ ಎಂಬುದನ್ನು ಕಾಂತರಾಜ್ ಆಯೋಗ ನಡೆಸಿದ ಜಾತಿ ಸಮೀಕ್ಷೆಯಲ್ಲಿ ಪತ್ತೆಯಾಗಿದೆ ಎಂಬ ಪತ್ರಿಕಾ ವರದಿ (ಪ್ರಜಾವಾಣಿ, ಮಂಗಳೂರು ದಿ. 15.04.2025, ಮುಖಪುಟದ ಪ್ರಧಾನ ವರದಿ) ಈ ಷಡ್ಯಂತ್ರವನ್ನು ಬಯಲುಮಾಡಿದೆ. ಹೆಚ್. ಕಾಂತರಾಜ್ ಅವರು ಅಧ್ಯಕ್ಷರಾಗಿದ್ದಾಗ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಮೀಕ್ಷೆಯ ದತ್ತಾಂಶಗಳನ್ನು ಅಧ್ಯಯನ ಮಾಡಿ ಕೆ. ಜಯಪ್ರಕಾಶ್ ಹೆಗ್ಡೆ ನೇತೃತ್ವದ ಆಯೋಗವು ರಾಜ್ಯ ಸರಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಈ ಮಾಹಿತಿಯಿದೆ ಮತ್ತು ದತ್ತಾಂಶಗಳ ಅಧ್ಯಯನ ವರದಿಯು ಪ್ರಜಾವಾಣಿಗೆ ಲಭ್ಯವಾಗಿದೆ ಎಂದು ಪತ್ರಿಕಾ ವರದಿಯಲ್ಲಿ ಸ್ಪಷ್ಟ ಪಡಿಸಲಾಗಿದೆ. ನಮ್ಮ ರಾಜ್ಯದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಯಾವುದೇ ಜಾತಿಯನ್ನು ಪರಿಶಿಷ್ಟ ಜಾತಿ ಎಂದು…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
