Author: Tulunada Surya

ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ 20ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ಅವರ ನೇತೃತ್ವದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಭ್ರಮ-2025 ದಿನಾಂಕ 23-03-2025 ರಂದು ದೇವಮ್ಮ ಕಾಂಪ್ಲೆಕ್ಸ್ ಸುಳ್ಯ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಇವರು ಸಾಹಿತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ 2025 ನೇ ಸಾಲಿನ ಚಂದನ ಸಾಹಿತ್ಯ ರತ್ನ ಪ್ರಶಸ್ತಿ ಯನ್ನು ಯುವ ಸಾಹಿತಿಪ್ರಿಯಾ ಸುಳ್ಯ ರವರಿಗೆ ಗೌರವಾನ್ವಿತ ಅತಿಥಿಗಳ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು.ಇವರು, ಸಾಹಿತ್ಯ, ಸಾಂಸ್ಕೃತಿಕ ಮತ್ತು ಸಮಾಜಮುಖಿ ಸೇವೆಗಳಲ್ಲಿ ಕಳೆದ ಕೆಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಚಿಗುರೆಲೆ ಸಾಹಿತ್ಯ ಬಳಗ ಇದರ ಸದಸ್ಯರಾಗಿರುತ್ತಾರೆ.ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಚುಟುಕು ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಿತು. ಸಮಾರಂಭ ಕಾರ್ಯಕ್ರಮದಲ್ಲಿ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್. ಭೀಮರಾವ್ ವಾಷ್ಠರ್ ಸುಳ್ಯ , ಹಿರಿಯ ಸಾಹಿತಿ ಶ್ರೀ ಶ್ರೀ ಯೋಗೇಶ್ವರನಂದ ಸರಸ್ವತಿ ಸ್ವಾಮೀಜಿ, ಹಿರಿಯ ಸಾಹಿತಿ ನಾರಾಯಣ ಕುಕ್ಕುವಳ್ಳಿ,ಶ್ರೀ ಮೋಹನ್ ನಂಗಾರು,ಶ್ರೀ ಚೆನ್ನಕೇಶವ ಜಾಲ್ಸೂರು ,ಶ್ರೀ.ಪಿ ವೆಂಕಟೇಶ್ ಬಾಗವಾಡ…

Read More

ಮಂಗಳೂರು ಮಾ. 22 :- ಶಿಕ್ಷಣ ಸಂಸ್ಥೆಗಳು ಶಿಕ್ಷಣ ನೀಡುವುದಕ್ಕೆ ಮಾತ್ರ ಸೀಮಿತವಾಗದೆ ಭವಿಷ್ಯದ ಉತ್ತಮ ಪ್ರಜೆಗಳನ್ನು ಸೃಷ್ಟಿಸುವ ಜವಾಬ್ದಾರಿಯನ್ನು ಹೊಂದಿವೆ. ಈ‌ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಕಾರ್ಯವನ್ನು ಶಾಲಾ ಕಾಲೇಜುಗಳು ವಹಿಸಬೇಕು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡು ಹೇಳಿದ್ದಾರೆ. ಅವರು ಶನಿವಾರ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾನಿಲಯ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ-ವಿಚಾರ ಸಂಕಿರಣವನ್ನು ವಿವಿ ಕಾಲೇಜು ರವೀಂದ್ರ ಕಲಾಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಮಾದಕ ವ್ಯಸನಗಳ ಪ್ರಕರಣಗಳು ನಗರದಲ್ಲಿ ಹೆಚ್ಚುತ್ತಿದೆ. ವಿದ್ಯಾರ್ಥಿಗಳು ಕೇವಲ ಓದುವ ಕಡೆಗೆ ಗಮನ ಕೊಡಬೇಕು. ಮಾದಕ ವ್ಯಸನ ರೂಪಿಸಲು ಅನೇಕ ಜಾಲಗಳಿವೆ. ಅಂತಹ ಯಾವುದೇ ರೀತಿಯ ಹಾದಿ ತಪ್ಪಿಸುವ ದುಶ್ಚಟಗಳಿಗೆ ಒಳಗಾಗಬಾರದು ಎಂದು ಅವರು ಹೇಳಿದರು.ಇತ್ತೀಚೆಗೆ ಮಂಗಳೂರು ನಗರ…

Read More

ಎಸ್.ಡಿ.ಎಮ್ ಕಾನೂನು ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ , ಕೆ.ಎಂ.ಸಿ.ಆಸ್ಪತ್ರೆ, ಪ್ರಸಾದ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ , ಆಶ್ರಯದಲ್ಲಿ, ಮಂಗಳೂರಿನ ಎಸ್.ಡಿ.ಎಮ್ . ಕಾನೂನು ಕಾಲೇಜಿನಲ್ಲಿ ಬೃಹತ್ ರಕ್ತದಾನ ಹಾಗೂ ಕಣ್ಣಿನ ತಪಾಸಣೆ ಶಿಬಿರ ನಡೆಯಿತು. ಡಾ.ವಿಕ್ರಂ ಜೈನ್ , ಡಾ.ದೇವರಾಜ್ .ಕೆ ಡಾ.ಸಿಂಚನ , ಸತೀಶ್ ಬಿ.ಕೆ, ಡಾ. ತಾರಾನಾಥ ಶೆಟ್ಟಿ, ಪ್ರೊ.ಪುಷ್ಪರಾಜ್ .ಕೆ, ಡಾ.ಡಿಂಪಲ್ ,ಅಪೂರ್ವ ಶೆಟ್ಟಿ, ರಾಘವೇಂದ್ರ ರಾವ್, ಅಮಿತ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Read More

ದಿನಾಂಕ 23-03-2025 ರಂದು ಆದಿತ್ಯವಾರ ಸಂಜೆ 3 ಗಂಟೆಗೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಉಡುಪಿ ಜಿಲ್ಲಾ ಘಟಕ ಸಭೆ ನಡೆಯಲಿದೆ. ಸಭೆ ಮುಖ್ಯಾಂಶಗಳು : 👉 ತುಳುನಾಡ ರಕ್ಷಣಾ ವೇದಿಕೆ ಸಂಘಟನೆಗೆ ಹಲವಾರು ಗಣ್ಯರ ಸೇರ್ಪಡೆ ಇದೆ. 👉 ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ತುಳುನಾಡ ರಕ್ಷಣಾ ವೇದಿಕೆ 15 ವರ್ಷ ನಿರಂತರ ಸೇವೆ ಸಲ್ಲಿಸಿ 16 ನೇ ವರ್ಷಾಚರಣೆ ಅಂಗವಾಗಿ ತುಳು ಸಮ್ಮೇಳನ ನಡೆಸುವ ಬಗ್ಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರನ್ನು ಆಹ್ವಾನಿಸುವುದು ಸೇರಿದಂತೆ ಮತ್ತಿತರರ ಮಹತ್ವದ ವಿಷಯಗಳ ಸಮಾಲೋಚನೆ 👉 ಜಿಲ್ಲಾ ಘಟಕ ಅಭಿವೃದ್ಧಿ ದೃಷ್ಟಿಯಿಂದ ಕೆಲವು ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಈ ಸಭೆಗೆ ಜಿಲ್ಲಾ ಘಟಕ, ಕಾರ್ಮಿಕ ಘಟಕ, ಮಹಿಳಾ ಘಟಕದ ಅಧ್ಯಕ್ಷರು ಮತ್ತು ಜಿಲ್ಲೆಯ ಎಲ್ಲಾ ತಾಲೂಕುಗಳು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ತಪ್ಪದೇ ಆಗಮಿಸಬೇಕೆಂದು ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ…

Read More

ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕಲಿ ಪತ್ರಕರ್ತ ಹಾವಳಿ ಜಾಸ್ತಿಯಾಗಿದ್ದು, ಕೆಲವರು ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್ ತಯಾರಿಸಿ ಬಳಸುತ್ತಿದ್ದಾರೆ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಸಲಿ ಪತ್ರಕರ್ತರಿಗೂ ಇವರನ್ನು ಪತ್ತೆ ಮಾಡುವುದು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದ್ದು. ಇಂತವರಿಂದ ಪತ್ರಕರ್ತರ ಹೆಸರಿಗೆ ಮಸಿ ಬಳಿಯುವ ಕೃತ್ಯಗಳು ನಡೆಯುತ್ತಿದೆ ಅನ್ನೋದನ್ನು ಅಲ್ಲಗಳೆಯುವಂತಿಲ್ಲ. ನಿನ್ನೆ ನಗರದ ರಾಷ್ಟ್ರಕವಿ ಗೋವಿಂದ ಪೈ ವೃತ್ತದ ಬಳಿ ನಡೆದ ಸರಣಿ ಅಪಘಾತ ಮಾಡಿದ ಕಾರಿನಲ್ಲಿ ನಕಲಿ ಐಡಿಯೊಂದು ಪತ್ತೆಯಾಗಿದೆ. ಅಪಘಾತವಾದ ತಕ್ಷಣವೇ ಕಾರಿನಿಂದ ಇಳಿದಿದ್ದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕಾರಿನಲ್ಲಿದ್ದ ಆತನ ಐಡಿ ಕಾರ್ಡ್ ಮೂಲಕ ಆತನ ಹೆಸರು ರಾಜಶೇಖರ್ ಎಂದು ಗುರುತಿಸಲಾಗಿದ್ದು ಪ್ರತಿಷ್ಠಿತ ಮುದ್ರಣ ಸಂಸ್ಥೆಯಲ್ಲಿ ಉಪ ಸಂಪಾದಕ ಎಂದು ಐಡಿಯಲ್ಲಿ ನಮೂದಿಸಲಾಗಿದೆ. ಆದ್ರೆ ಆ ಮುದ್ರಣ ಸಂಸ್ಥೆಯಲ್ಲಿ ಅಂತಹ ಹೆಸರಿನ ಯಾರೂ ಕೂಡಾ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಕರ್ತರ ಹೆಸರು ದುರ್ಬಳಕೆ ತಡೆಯುವಂತೆ…

Read More

ಮಂಗಳೂರು :- ಕೈಗಾರಿಕೆಗಳು ಹಾಗೂ ಜನವಸತಿ ಪ್ರದೇಶಗಳಲ್ಲಿ ಅವಘಡ ಮತ್ತು ವಿಪತ್ತುಗಳಿಂದ ರಕ್ಷಿಸಲು ಏಕೀಕೃತ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ ಪಿ ಕರೆ ನೀಡಿದ್ದಾರೆ.ಅವರು ಗುರುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ 54ನೇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ರಿಸ್ಕ್ ಕೈಗಾರಿಕೆಗಳು ಸೇರಿದಂತೆ ವಿವಿಧ ರೀತಿಯ ಉದ್ಯಮಗಳು ಇವೆ. ಇವು ತಮ್ಮ ಸುರಕ್ಷತಾ ವ್ಯವಸ್ಥೆಯನ್ನು ಆಗಿಂದ್ದಾಗೆ ಪರಿಶೀಲಿಸುತ್ತಿರಬೇಕು. ಯಾವುದೇ ಅನಾಹುತಗಳಾದರೆ ಅವುಗಳ ಪರಿಣಾಮ ಇತರೆ ಪ್ರದೇಶಗಳಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಕೈಗಾರಿಕೆಗಳು ಮತ್ತು ಜನವಸತಿ ಪ್ರದೇಶಗಳ ಸುರಕ್ಷತೆಗೆ ಎಲ್ಲಾ ಭಾಗೀದಾರಿ ಇಲಾಖೆಗಳು ಹಾಗೂ ಸುರಕ್ಷತಾ ಏಜೆನ್ಸಿಗಳು ಏಕೀಕೃತವಾದ ಸುರಕ್ಷತಾ ವ್ಯವಸ್ಥೆಯನ್ನು ಹೊಂದಬೇಕು. ಇದರಿಂದ ಯಾವುದೇ ಅನಾಹುತಗಳ ಸಂದರ್ಭದಲ್ಲಿ ಜೀವ ಹಾನಿ ಮತ್ತು ನಷ್ಟದ ಪ್ರಮಾಣವನ್ನು ತಗ್ಗಿಸಬಹುದಾಗಿದೆ ಎಂದು ಅವರು ಹೇಳಿದರು.ನಾಗರೀಕರು ತಮ್ಮ ದೈನಂದಿನ ಬದುಕಿನಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನು ಆಗಿಂದ್ದಾಗೆ ಪರಿಶೀಲಿಸಬೇಕು. ಯಾವುದೇ ಅನಾಹುತಗಳಿಂದ ಮಾನಸಿಕ ಸ್ಥಿರತೆ…

Read More

ಉಡುಪಿ ತಾಲೂಕಿನ ಮಲ್ಪೆಯಲ್ಲಿ ಮೀನು ಕಳ್ಳತನದ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವಂತಹ ಅಮಾನವೀಯ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಡಿಸಿ ಮತ್ತು ಎಸ್ಪಿ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಕೂಡಲೇ ಮೂವರು ಆರೊಪಿಗಳನ್ನು ಬಂಧಿಸಿದ್ದಾರೆ‌. ಈ ಬಗ್ಗೆ ಸಿ.ಎಂ ಸಿದ್ದರಾಮಯ್ಯ ತಮ್ಮ x ಖಾತೆಯಲ್ಲಿ ಆಕ್ರೋಶ ಹೊರಹಾಕಿದ್ದುಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು.ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ. ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ, ದೂರು ದಾಖಲಿಸಿದರೆ ಪೊಲೀಸರು ತನಿಖೆ…

Read More

ಉಡುಪಿ: ಇಸ್ಪೀಟು ಜುಗಾರಿ ಅಂದರ್-ಬಾಹರ್ ಆಡುತ್ತಿದ್ದ ವೇಳೆ ಪೊಲೀಸ್‌ ದಾಳಿ ನಡೆಸಿ ಏಳು ಮಂದಿಯನ್ನು ವಶಕ್ಕೆ ಪಡೆದ ಘಟನೆ ಬೀಡನಗುಡ್ಡೆ ಮಹಾತ್ಮಗಾಂಧಿ ಬಯಲು ರಂಗ ಮಂದಿರದ ಬಳಿ ನಡೆದಿದೆ. ಬಂಧಿತರನ್ನು ನಾಗರಾಜ್, ಯಮುನಪ್ಪ, ಮಂಜುನಾಥ, ಅಮಿನ್ ಸಾಬ್, ಸಿದ್ದಪ್ಪ, ಗುರು, ಪರಶುರಾಮ ಎಂದು ಗುರುತಿಸಲಾಗಿದೆ. ಬೀಡನಗುಡ್ಡೆ ಮಹಾತ್ಮಗಾಂಧಿ ಬಯಲು ರಂಗ ಮಂದಿರದ ಬಳಿ ಮಾ.16ರಂದು ಇಸ್ಪೀಟು ಜುಗಾರಿ ಅಂದರ್-ಬಾಹರ್ ಆಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು 32,800ರೂ. ನಗದು ಸ್ವಾಧೀನ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ಮಸ್ಕಿರಿ ಕುಡ್ಲ ಅರ್ಪಿಸುವ ತುಳು ರಂಗಭೂಮಿಯಲ್ಲಿ ವಿಶೇಷ ರೀತಿಯಾ ರಂಗಪ್ರಯೋಗದಲ್ಲಿ ಮಿನುಗುತ್ತಿರುವ ಈ ವರ್ಷದ ಸೂಪರ್ ಹಿಟ್ ನಾಟಕ ಶಿರಡಿ ಸಾಯಿಬಾಬಾ ಮಂದಿರ ಆಶ್ರಿತ ಸಾಯಿಶಕ್ತಿ ಕಲಾ ಬಳಗ ಅರ್ಪಣೆ ಮಾಡುವ ಎರಡನೇ ಕಲಾಕಾಣಿಕೆ ಜೋಡು ಜೀಟಿಗೆ ನಾಟಕದ 25ನೇ ಅದ್ದೂರಿ ಪ್ರದರ್ಶನ ಮಂಗಳೂರಿನ ಪುರಭವನದಲ್ಲಿ ಇದೇ ಬರುವ ತಾರೀಕು ಮಾರ್ಚ್ 23, 2025, ಭಾನುವಾರ ಸಂಜೆ 5:30ಕ್ಕೆ ನಡೆಯಲಿದೆ. ತುಳು ರಂಗಭೂಮಿಯ ಇತಿಹಾಸದಲ್ಲಿ ಅದ್ಭುತ ಸಾಧನೆಯೊಂದಕ್ಕೆ ಸಾಯಿಶಕ್ತಿ ಕಲಾ ಬಳಗ ಮುನ್ನುಗ್ಗಿದೆ ಈ ನಾಟಕವು ಮುಂಬಯಿ ಮತ್ತು ಉಡುಪಿ ಮತ್ತು ಕಾಸರಗೋಡಿನಲ್ಲಿ ಏಕಕಾಲದಲ್ಲಿ ಪ್ರದರ್ಶನಗೊಳ್ಳುವ ಮೂಲಕ ವಿಶಿಷ್ಟ ಸಾಧನೆ ಮಾಡಿದೆ. ಶ್ರೀಮತಿ ಲಾವಣ್ಯ ವಿಶ್ವಾಸ್ ದಾಸ್ ಇವರ ನಿರ್ಮಾಣ ಮತ್ತು ನಿರ್ದೇಶನದ ಶ್ರೀಯುತ ಕೀರ್ತನ್ ಭಂಡಾರಿ ಕುಲಾಯಿ ರಚನೆಯ,ಗೌರವ್ ಶೆಟ್ಟಿಗಾರ್ ಮಠದಕಣಿ ಇವರ ನಿರ್ವಹಣೆಯಲ್ಲಿ ನಾಟಕ ಮೂಡಿ ಬರಲಿದೆ. ಕಾರ್ಯಕ್ರಮದ ಅತಿಥಿಗಳಾಗಿ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್, ಶ್ರೀ ಶಿರಡಿ ಸಾಯಿಬಾಬ ಮಂದಿರ, ಚಿಲಿಂಬಿಯ…

Read More

ಮಂಗಳೂರು : ಡಾ ವಾಮನ ನಂದಾವರ ಅವರ ಜಾನಪದ ಅಧ್ಯಯನದಲ್ಲಿ ವೈಜ್ಞಾನಿಕ ಶಿಸ್ತು ಇತ್ತು ಅದರ ಜೊತೆಗೆ ಹಳ್ಳಿಯ ಸೊಗಡು ಕೂಡ ಇತ್ತು, ಸಂಶೋಧಕನ ಸಹಜ ಚಿಂತನಾ ದೃಷ್ಟಿಕೋನ ಹಾಗೂ ಕವಿತೆ ಕಟ್ಟುವ ಕವಿತ್ವದ ಸಮಚಿತ್ತ ಅವರದ್ದಾಗಿತ್ತು ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಬಿ.ಎ. ವಿವೇಕ ರೈ ಅವರು ಅಭಿಪ್ರಾಯಪಟ್ಟರು.ಇತ್ತೀಚೆಗೆ ನಿಧನರಾದ ಕರ್ನಾಟಕ ತುಳು ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಡಾ.ವಾಮನ ನಂದಾವರ ಅವರಿಗೆ ಮಂಗಳೂರಿನ ತುಳುಭವನದಲ್ಲಿ ಹಮ್ಮಿಕೊಳ್ಳಲಾದ ಶ್ರದ್ಧಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿ ಅವರು ಮಾತನಾಡಿದರು.ಡಾ ವಾಮನ ನಂದಾವರ ಅವರ ‘ಕೋಟಿ ಚೆನ್ನಯ’ ಗ್ರಂಥವು ಅತ್ಯಂತ ತಳಸ್ಪರ್ಶಿ ಕ್ಷೇತ್ರ ಕಾರ್ಯದ ಅಧ್ಯಯನದ ಮೂಲಕ ಪ್ರಕಟಗೊಂಡ ಶ್ರೇಷ್ಠ ಕೃತಿಯಾಗಿದೆ. ಕೋಟಿ ಚೆನ್ನಯರ ಬಗ್ಗೆ ಹಾಗೂ ತುಳು ಜಾನಪದ ಅಧ್ಯಯನ ಸಲುವಾಗಿ ಬಂದಂತಹ ಅಂತರಾಷ್ಟ್ರೀಯ ಸಂಶೋಧಕರೆಲ್ಲರೂ ಡಾ.ವಾಮನ ನಂದಾವರ ಅವರನ್ನು ಎಲ್ಲಾ ಸಂದರ್ಭದಲ್ಲೂ ಉಲ್ಲೇಖಿಸಿರುತ್ತಾರೆ ಅನ್ನುವುದು ಅವರ ಅಧ್ಯಯನಕ್ಕೆ ಸಂದ ಗೌರವವಾಗಿದೆ ಎಂದು ಪ್ರೊ.ಬಿ.ಎ.ವಿವೇಕ ರೈ ಅವರು ಹೇಳಿದರು. 1997ರಲ್ಲಿ…

Read More