Author: Tulunada Surya

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇವರು ಸಹಕಾರ ಕ್ಷೇತ್ರದ ಸಾಧಕರಿಗೆ ಕೊಡಮಾಡುವ 2025 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಹಿರಿಯ ಸಹಕಾರಿ ನಾಯಕ, ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾನ್ಯ ಅಧ್ಯಕ್ಷರಾದ ಎನ್ ರಮೇಶ್ ಶೆಟ್ಟಿ ರವರಿಗೆ ಲಭಿಸಿದೆ. ನ.14ರಂದು ಬೆಂಗಳೂರಿನ ಗಾಯತ್ರಿ ವಿಹಾರ್, ಫ್ಯಾಲೆಸ್ ಗೌಂಡ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಎನ್ ರಮೇಶ್ ಶೆಟ್ಟಿಯವರು ಸಾಮಾಜಿಕ, ಸಹಕಾರ, ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡವರು. ಸಹಕಾರ ಕ್ಷೇತ್ರದಲ್ಲಿ ಅವರು ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಘದ ಬೆಳವಣಿಗೆಯಲ್ಲಿ ಶ್ರಮಿಸಿದ್ದಾರೆ.

Read More

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ ನಿಯಮಿತ ಇದರ ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ

Read More

ಮಣಿಪಾಲ : ನಗರದಲ್ಲಿರುವ ಪಬ್‌ ಒಂದರ ಹತ್ತಿರ ತಡರಾತ್ರಿ ಇಬ್ಬರು ಯುವಕರ ತಂಡಗಳ ನಡುವೆ ಗಲಾಟೆ ನಡೆದ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಧ್ಯರಾತ್ರಿ ವೇಳೆ ನಡು ರಸ್ತೆಯಲ್ಲೇ ಯುವಕರು ಪರಸ್ಪರ ತಳ್ಳಾಡಿಕೊಂಡು ಹೊಡೆಯುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ತಕ್ಷಣವೇ ವಿಡಿಯೋ ಆಧರಿಸಿ ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಗಲಾಟೆಗೆ ಒಳಪಟ್ಟಿದ್ದ ಇಬ್ಬರೂ ತಂಡದ ಯುವಕರು ಪರಸ್ಪರ ಪರಿಚಿತರಾಗಿದ್ದು, ಯಾವುದೇ ಅಪರಾಧ ಹಿನ್ನೆಲೆ ಹೊಂದಿಲ್ಲ ಎನ್ನುವುದು ತಿಳಿದುಬಂದಿದೆ. ಆದಾಗ್ಯೂ, ಸಾರ್ವಜನಿಕ ಸ್ಥಳದಲ್ಲಿ ಕಿರಿಕಿರಿ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಇಬ್ಬರೂ ಗುಂಪಿನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮರ್ ಶೆಟ್ಟಿ, ಚಂದನ್ ಸಿ. ಸಾಲ್ಯಾನ್, ಧನುಷ್ ಹಾಗೂ ಅಜಯ್ ಎಂಬ ಆರೋಪಿತರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 203/2025, ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 194(2) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.…

Read More

ಮಂಗಳೂರು, ನ. 9: ಹಿಂದೂ ಸಮಾಜದ ಪಾರಂಪರಿಕ ಆಚಾರ–ವಿಚಾರಗಳು, ಸಂಸ್ಕೃತಿ ಮತ್ತು ಆಚರಣೆಗಳು ಕಾಲಕ್ರಮೇಣ ಮಾಯವಾಗುತ್ತಿರುವ ಹಿನ್ನೆಲೆಯಲ್ಲಿ, ಅವುಗಳ ಮೂಲತ್ವವನ್ನು ಉಳಿಸಿ–ಬೆಳೆಸುವ ಉದ್ದೇಶದಿಂದ ‘ಧರ್ಮಾವಲೋಕನ’ ಎಂಬ ವಿಶಿಷ್ಟ ಧಾರ್ಮಿಕ ವಿಚಾರಗೋಷ್ಠಿ ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಪೂರ್ವಭಾವಿ ಸಭೆ ನವೆಂಬರ್ 9ರಂದು ಮಂಗಳೂರಿನ ಖಾಸಗಿ ಸಭಾಂಗಣದಲ್ಲಿ ನಡೆಯಿತು. ಡಿಸೆಂಬರ್ 14ರಂದು ಬಂಟ್ಸ್ ಹಾಸ್ಟೆಲ್‌ನ ರಾಮಕೃಷ್ಣ ಪಿಯು ಕಾಲೇಜು ಸಭಾಭವನದಲ್ಲಿ ಮಧ್ಯಾಹ್ನ 3ರಿಂದ ರಾತ್ರಿ 10ರವರೆಗೆ ನಡೆಯುವ ‘ಧರ್ಮಾವಲೋಕನ’ ಸಭೆಗೆ ಗುರುಪುರದ ದೋಣಿಂಜೆಗುತ್ತು ಗಡಿಕಾರ ಪ್ರಮೋದ್ ಕುಮಾರ್ ರೈ ಅವರನ್ನು ಸಭಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಮೋದ್ ಕುಮಾರ್ ರೈ ಹೇಳಿದರು: ಅವರು ಮುಂದುವರಿಸಿ ಉದ್ಯಮಿ ಜಯರಾಮ ಶೆಟ್ಟಿ ಮುಂದಾಡಿಗುತ್ತು ಮಾತನಾಡಿ, ಇಂಜಿನಿಯರ್ ಕಿರಣ್ ಉಪಾಧ್ಯಾಯ ಹೇಳಿದರು: ಪೂರ್ವಭಾವಿ ಸಭೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು, ಧಾರ್ಮಿಕ ಮುಖಂಡ ಗಂಗಾಧರ ಶೆಟ್ಟಿ ಬಜ್ಪೆ, ಕಮಲಾಕ್ಷ ಗಂಧಕಾಡು, ವಕೀಲ ಪ್ರಶಾಂತ್ ಮಂಗಳೂರು ಮೊದಲಾದವರು ಸಲಹೆ ನೀಡಿದರು. ಈ…

Read More

ತಮಿಳುನಾಡಿನಲ್ಲಿ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿಗಳ ಎರಡು ದಿನಗಳ ಧಾರ್ಮಿಕ ಪ್ರವಾಸವು ನವೆಂಬರ್ 7 ಮತ್ತು 8ರಂದು ಭಕ್ತಿಭಾವದಿಂದ ಯಶಸ್ವಿಯಾಗಿ ನೆರವೇರಿತು. ನವೆಂಬರ್ 7ರಂದು, ತಿರುಚನಾಪಳ್ಳಿ ಪ್ರದೇಶದ ಬಿ.ಹೆಚ್.ಇ.ಎಲ್ ನಿವೃತ್ತ ಹಿರಿಯ ಇಂಜಿನಿಯರ್ ಜೀವಣ್ಣರವರು ಸತ್ಸಂಗವನ್ನು ಆಯೋಜಿಸಿದ್ದರು. ಅಂದು ಕುಂಭಕೋಣದ ಸಮೀಪದ ಆದಿನಂ ಶೈವ ಸಂಸ್ಥಾನ ಮಠದ ಪರಮಾಚಾರ್ಯ ಶ್ರೀ ಕೈಲಾಯಿ ಮಸಿಲಮಣಿ ದೇಸಿಕ ಸ್ವಾಮೀಜಿಗಳ ಜನ್ಮದಿನ ಸುವರ್ಣ ವರ್ಷ ಮತ್ತು 27ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಅಂಗವಾಗಿ ನಡೆದ ಸಂತರ ಸಮಾವೇಶದಲ್ಲಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಗಳು ಭಾಗವಹಿಸಿದರು. ಅವರು ಮಾತನಾಡಿ, “ಧರ್ಮಕ್ಷೇತ್ರಗಳು ಮತ್ತು ಪ್ರಾಚೀನ ತೀರ್ಥಕ್ಷೇತ್ರಗಳು ಸನಾತನ ಧರ್ಮವನ್ನು ಒಗ್ಗೂಡಿಸಿ ಸುಸಂಸ್ಕೃತ ಹಾಗೂ ಸಭ್ಯ ಸಮಾಜದ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ. ಭಾರತೀಯ ಸನಾತನ ಧರ್ಮವು ವಿಶ್ವಮಾನ್ಯವಾದ ಮಾರ್ಗದರ್ಶಕ ಶಕ್ತಿ,” ಎಂದು ನುಡಿದರು. ಈ ಸಮಾರಂಭದಲ್ಲಿ ಬೆಂಗಳೂರು ಕೈಲಾಸಾಶ್ರಮದ ಜಯೇಂದ್ರಪುರಿ ಸ್ವಾಮೀಜಿ, ಹರಿಹರ ಮಠದ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ, ಬೆಳ್ಳಾರಿಯ ಕಲ್ಯಾಣ…

Read More

ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಆಡಳಿತ ಮಂಡಳಿ ರಚನೆಯಾಗಿದೆ. ಹಿರಿಯ ಪತ್ರಕರ್ತ ಹಾಗೂ ವಿಜಯ ಕರ್ನಾಟಕ ವರದಿಗಾರ ಸುಬ್ರಹ್ಮಣ್ಯ ಜಿ.ಭಟ್ (ಸುಜಿ ಕುರ್ಯ) ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರೊಂದಿಗೆ ನಝೀರ್ ಪೊಲ್ಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಹರೀಶ್ ಕುಂದರ್ ಕೋಶಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ವಾರ್ತಾಧಿಕಾರಿ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉಪಾಧ್ಯಕ್ಷರಾಗಿ ಪ್ರಭಾಕರ ಆಚಾರ್ಯ ಚಿತ್ತೂರು, ಉದಯ ಕುಮಾರ್ ಮುಂಡ್ಕೂರು ಮತ್ತು ಉದಯ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಗಳಾಗಿ ಉಮೇಶ್ ಮಾರ್ಪಳ್ಳಿ, ಸುರೇಶ್ ಎಮಾರ್ಳ್ ಮತ್ತು ಟಿ. ಲೋಕೇಶ್ ಆಚಾರ್ಯ ತೆಕ್ಕಟ್ಟೆ ಅವಿರೋಧವಾಗಿ ಆಯ್ಕೆಯಾದರು. ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಮೂವರು ಸ್ಪರ್ಧಿಸಿದ್ದರು. ಅದರಲ್ಲಿ ಉದಯವಾಣಿ ಫೋಟೋ ಜರ್ನಲಿಸ್ಟ್ ಆಸ್ಟ್ರೋ ಮೋಹನ್ ಅವರು 44 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಪ್ರಜ್ವಲ್ ಅಮೀನ್, ಜನಾರ್ದನ ಕೊಡವೂರು, ಚೇತನ್ ಮಟಪಾಡಿ, ಮುಹಮ್ಮದ್ ಶರೀಫ್, ರಮಾನಂದ ಅಜೆಕಾರು, ಯೋಗೀಶ್…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ರವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯನಿರತ ಪತ್ರಕರ್ತರ ಸಂಘ ದ.ಕ ಜಿಲ್ಲೆಯ ಆಡಳಿತ ಮಂಡಳಿ ಚುನಾವಣೆಯಲ್ಲಿ ವಿವಿಧ ಹುದ್ದೆಗಳಿಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಪಡೆದ ಮತಗಳು ಈ ಕೆಳಗಿನಂತಿವೆ: 🗳️ ಆಡಳಿತ ಮಂಡಳಿ ಸದಸ್ಯರ ಫಲಿತಾಂಶ 🏅 ಉಪಾಧ್ಯಕ್ಷರಾಗಿ ಆಯ್ಕೆಯಾದವರು ಮುಹಮ್ಮದ್ ಆರೀಫ್ ವಿಲ್ಪ್ರೆಡ್ ಡಿಸೋಜ ರಾಜೇಶ್ ಶೆಟ್ಟಿ 📰 ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಪುಷ್ಪರಾಜ್ ಬಿ.ಎನ್ – 187 ಮತಗಳು ಶ್ರವಣ್ – 144 ಮತಗಳು ➡️ ಈ ಮೂಲಕ ಪುಷ್ಪರಾಜ್ ಬಿ.ಎನ್ ಅವರು ಅತಿ ಹೆಚ್ಚು ಮತಗಳನ್ನು ಪಡೆದು ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ✍️ ಕಾರ್ಯದರ್ಶಿ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಸಿದ್ದೀಕ್ ನೀರಾಜೆ – 165 ರಾಜೇಶ್ ಕುಮಾರ್ ಡಿ. – 139 ಸುರೇಶ್ ಡಿ. ಪಳ್ಳಿ – 218 ಸತೀಶ್ ಇರಾ – 256 ಸತೀಶ್ ಇರಾ ಅವರು ಅತಿ…

Read More

ಮ.ನ.ಪಾ. ವ್ಯಾಪ್ತಿಯ 58 ನೇ ಬೋಳಾರ ವಾರ್ಡಿನ ಮುಳಿಹಿತ್ಲುವಿನಲ್ಲಿ ಸುಮಾರು ಎರಡು ಕೋಟಿ ವೆಚ್ಚದಲ್ಲಿ ರಸ್ತೆ ಅಗಲೀಕರಣ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ರಸ್ತೆ ಅಗಲೀಕರಣದ ಅವಶ್ಯಕತೆ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯರು, ಸಾರ್ವಜನಿಕರು, ಹಲವು ಸಮಯದಿಂದ ಬೇಡಿಕೆಯಿಟ್ಟಿದ್ದರು. ಆ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ ಪಾಲಿಕೆಯ ಪ್ರೀಮಿಯಂ ಎಫ್.ಎ.ಆರ್ ಅನುದಾನವನ್ನು ಬಳಸಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿಯೂ ತೊಂದರೆಯಾಗದಂತೆ ಶೀಘ್ರದಲ್ಲಿ ಕಾಮಗಾರಿ ಮುಗಿಸುವಂತೆ ಸೂಚನೆ ನೀಡಿದ್ದೇನೆ ಎಂದರು. ಮಾಜಿ ಉಪ ಮೇಯರ್ ಭಾನುಮತಿ ಪಿ.ಎಸ್, ನಿಕಟಪೂರ್ವ ಪಾಲಿಕೆ ಸದಸ್ಯೆ ರೇವತಿ ಶೆಟ್ಟಿ, ಸ್ಥಳೀಯ ಬಿಜೆಪಿ ಪ್ರಮುಖರಾದ ದೀಪಕ್ ಪೈ, ಅಮಿತ್ ಶೆಟ್ಟಿ, ಪ್ರಸಾದ್ ಬೋಳಾರ, ಉಮಾನಾಥ ಕೋಟೆಕಾರ್, ಗಿರೀಶ್ ಶೆಟ್ಟಿ, ದಿನೇಶ್ ಶೆಟ್ಟಿ, ಕೇಶವ ಶೆಟ್ಟಿ, ಸುಜಾತ ಆಳ್ವ, ಜಯಶ್ರೀ, ಶಬರಿ ಶೆಟ್ಟಿ, ಜಯಶ್ರೀ ಕೊಟ್ಟಾರಿ, ಗಾಯತ್ರಿ, ವಿವೇಕ್ ಶೆಟ್ಟಿ, ಬಿಜೆಪಿ…

Read More

ಮಂಗಳೂರು: ಬಹುಕೋಟಿ ಸಾಲ ವಂಚನೆ ಹಗರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯ (ED) ಹೊಸ ಹೆಜ್ಜೆ ಇಟ್ಟಿದೆ. ಮಂಗಳೂರು ಮೂಲದ ಉದ್ಯಮಿ ರೋಶನ್ ಸಲ್ದಾನಾ ಅವರ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ, ಸುಮಾರು ₹2.85 ಕೋಟಿ ಮೌಲ್ಯದ ಆಸ್ತಿಗಳನ್ನು ಇಡಿ ಅಧಿಕಾರಿಗಳು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ವಾರದ ಆರಂಭದಲ್ಲಿ ಮಂಗಳೂರು ಉಪವಲಯ ಕಚೇರಿಯ ಇಡಿ ಅಧಿಕಾರಿಗಳು ಸಲ್ದಾನಾ ಹಾಗೂ ಅವರ ಕುಟುಂಬ ಸದಸ್ಯರ ಹೆಸರಿನಲ್ಲಿದ್ದ ವಸತಿ ಆಸ್ತಿ ಮತ್ತು ಅನೇಕ ಬ್ಯಾಂಕ್ ಖಾತೆಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಗಳಲ್ಲಿ, ಸಲ್ದಾನಾ ದೇಶದ ವಿವಿಧ ಭಾಗಗಳಲ್ಲಿ ಶ್ರೀಮಂತ ಹೂಡಿಕೆದಾರರು ಹಾಗೂ ಉದ್ಯಮಿಗಳನ್ನು ಗುರಿಯಾಗಿಸಿಕೊಂಡು “ಹೆಚ್ಚು ಮೌಲ್ಯದ ವಿಶೇಷ ಸಾಲಗಳು” ನೀಡುವುದಾಗಿ ಭರವಸೆ ನೀಡಿ, ನೂರಾರು ಕೋಟಿಗಳ ವಂಚನೆ ನಡೆಸಿದ್ದಾರೆ ಎಂಬ ಆರೋಪಗಳು ದೃಢಪಟ್ಟಿವೆ. ಇಡಿ ಮೂಲಗಳ ಪ್ರಕಾರ, “ಆರೋಪಿಗಳು ನೂರಾರು ಕೋಟಿ ಮೌಲ್ಯದ ಸಾಲಗಳನ್ನು ಒದಗಿಸುವುದಾಗಿ ಹೇಳಿ, ಪ್ರತಿ ಗ್ರಾಹಕರಿಂದ 5 ರಿಂದ 10 ಕೋಟಿ ರೂ.ಗಳ ಮುಂಗಡ ಮೊತ್ತವನ್ನು ಸಂಗ್ರಹಿಸಿದರು. ಆದರೆ ಯಾವುದೇ ಸಾಲಗಳು…

Read More

ವಾಮಂಜೂರು: ಖ್ಯಾತ ಉದ್ಯಮಿ ತಿರುವೈಲು ಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಹಾಗೂ ಯುವ ಉದ್ಯಮಿ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ನವೆಂಬರ್ 6ರಂದು ಮಧ್ಯಾಹ್ನ ಬಪ್ಪನಾಡು ಸೇತುವೆ ಬಳಿ ಅವರ ಕಾರು ಪತ್ತೆಯಾಗಿದ್ದು, ಬಳಿಕ ಅವರು ನಾಪತ್ತೆಯಾಗಿದ್ದರು. ಶೋಧ ಕಾರ್ಯ ನಡೆಸಿದ ಬಳಿಕ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಘಟನೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಲಭ್ಯವಾಗಲಿದೆ.

Read More