Author: Tulunada Surya

ಮಂಗಳೂರು : ನಮ್ಮೊಳಗಿನ ಜಾತಿ, ಧರ್ಮ, ಭಾಷೆಯ ವೈವಿಧ್ಯತೆಯನ್ನು ಜೊತೆಗಿರಿಸಿಕೊಂಡು ನಾವೆಲ್ಲರೂ ಒಂದೇ ಅನ್ನುವ ಸೌಹರ್ದತೆಯ ಸಮಾಜವನ್ನು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಯುವಜನರ ಜವಬ್ದಾರಿ ಮಹತ್ವವಾದುದು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ.ಎನ್.ಇಸ್ಮಾಯಿಲ್ ಅವರು ಹೇಳಿದರು.ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳುನಾಡಿನ ಸೌಹಾರ್ದ ಬದುಕಿನ ಬಗ್ಗೆ ರಂಗಚಲನ ತಂಡದ ಮೂಲಕ ನಿರ್ಮಾಣಗೊಂಡ “ಜಾಗ್ ರ್ತೆ” ತುಳು ನಾಟಕದ ಪ್ರಥಮ ಪ್ರದರ್ಶನವನ್ನು ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಘಾಟಿಸಿ ಮಾತನಾಡಿದರು.ನಾವು ಕತ್ತರಿಸುವ ಕತ್ತರಿ ಆಗಬಾರದು ಹೊಲಿದು ಒಟ್ಟುಗೂಡಿಸುವ ಸೂಜಿ ದಾರ ಆಗಬೇಕು, ನಮ್ಮ ಜಾತಿ ಧರ್ಮ ಮನೆಯಲ್ಲಿ ಮತ್ತು ಆರಾಧನಾಲಯಗಳಲ್ಲಿ ಮಾತ್ರ ಇರಬೇಕು, ಹೊರತಾಗಿ ಸಮಾಜದಲ್ಲಿ ನಾವೆಲ್ಲರೂ ಒಂದೇ ಎನ್ನುವ ಭಾವನೆ ಇರಬೇಕು. ಧರ್ಮ, ಜಾತಿ ಭಾಷೆ ಯಾವುದೇ ಇರಲಿ ಮನುಷ್ಯರು ಒಂದೇ, ಅದನ್ನು ಸಾರುವ ಪ್ರಯತ್ನ ತುಳು ಅಕಾಡೆಮಿ ಈ ನಾಟಕದ ಮೂಲಕ ಮಾಡುತ್ತಿದೆ ಎಂದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ತುಳುನಾಡಿನ ಸೌಹಾರ್ದ…

Read More

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಕಳೆದ 8 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ್ದರಿಂದ ನೊಂದ ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು ಆಕೆಯ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡ ಘಟನೆ ಸಂಭವಿಸಿದೆ. ಸಾವನ್ನಪ್ಪಿದ ಯುವಕನನ್ನು ಕೊಡ್ಮಣ್ ನಿವಾಸಿ ಸುಧೀರ್ (30) ಹಾಗೂ ಚೂರಿ ಇರಿತಕ್ಕೊಳಗಾದ ಯುವತಿಯನ್ನು ಫರಂಗಿಪೇಟೆ ನಿವಾಸಿ ದಿವ್ಯಾ ಯಾನೆ ದೀಕ್ಷಿತಾ (26) ಎಂದು ತಿಳಿದು ಬಂದಿದೆ. ದಿವ್ಯಾ ಯಾನೆ ದೀಕ್ಷಿತಾ ಹಾಗೂ ಸುಧೀರ್ ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು ಎಂದು ತಿಳಿಯಲಾಗಿದೆ. ಕಳೆದ ಕೆಲ ತಿಂಗಳುಗಳಿಂದ ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿತ್ತು. ನಂತರ ಸುಧೀರ್ ಆಕೆ ಬಳಿ ಮಾತನಾಡಲು ಮುಂದಾದ, ದೀಕ್ಷಿತಾ ಮಾತನಾಡಲು ನಿರಾಕರಿಸಿದ್ದಳು ಎನ್ನಲಾಗಿದೆ. ಅದೇ ಕಾರಣಕ್ಕೆ ಜಗಳ ನಡೆದು ಆಕೆ ಮದುವೆ ಆಗಲ್ಲ ಹೇಳಿದ ಕಾರಣ ದೀಕ್ಷಿತಾಳಿಗೆ ಚೂರಿ ಇರಿದಿದ್ದಾನೆ.ಆಕೆ ತಪ್ಪಿಸಿಕೊಂಡು ಓಡಿ ಹೋಗಿ ಬಿದ್ದಿದ್ದಾಳೆ.ಅದನ್ನು ನೋಡಿ ಆಕೆ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಸುಧೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.…

Read More

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದಾಗಿರುವ ಹಾನಿ, ಕೈಗೊಂಡ ಪರಿಹಾರ ಕ್ರಮ, ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಬಾರಿಯ ಪ್ರಕೃತಿ ವಿಕೋಪದಿಂದಾಗಿ ನಗರದ ಹಲವೆಡೆ ರಸ್ತೆ, ಚರಂಡಿ, ರಾಜ ಕಾಲುವೆ, ತಡೆಗೋಡೆಗಳಿಗೆ ವಿಪರೀತ ಹಾನಿಯಾಗಿದೆ. ಕಾನೂನಾತ್ಮಕವಾಗಿ ತಡೆಗೋಡೆಗೆ ಪರಿಹಾರ ಒದಗಿಸಲು ಸಾಧ್ಯವಿಲ್ಲದಿದ್ದರೂ, ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 25 ರಿಂದ 50 ಕೋಟಿವರೆಗೂ ಅನುದಾನವನ್ನು ತಂದು ನಗರದಲ್ಲಿ ಪರಿಹಾರ ಕಾರ್ಯ ನಡೆಸಲಾಗಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಳೆದ ಎರಡು ವರ್ಷಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ವಿಶೇಷ ಅನುದಾನವನ್ನೇ (ಎಸ್.ಎಫ್.ಸಿ) ನೀಡಿಲ್ಲ. ಅಲ್ಲದೇ ಈ ಹಿಂದಿನ ಮಳೆ ಹಾನಿಯ ಪರಿಹಾರ ಧನವೂ ಬಂದಿಲ್ಲ. ಅದರ ಜೊತೆಗೆ ಈ ಬಾರಿಯ ಪರಿಹಾರದ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಲಿದ್ದು ಅದೂ ಸಹ ಬಾಕಿಯಾದರೆ ಕ್ಷೇತ್ರದ ಜನತೆ ತೀವ್ರ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು.…

Read More

ಮದಭಿನವ ಸ್ವಾಮೀಜಿ,ಓಂ ನಮಃತಮ್ಮ ಪ್ರಾಚೀನ ಕ್ಷೇತ್ರಬಾಳೇಕುದ್ರು ಮಠದ ಶ್ರೀ ನರಸಿಂಹಾಶ್ರಮ ಸ್ವಾಮೀಜಿ ಅವರು ಸ್ವರ್ಗ ಸ್ಥ ರಾದ ಸುದ್ದಿ ತಿಳಿಯಿತು ಶ್ರೀ ಗಳವರು ಉತ್ತಮ ತಪಸ್ವೀ ಗಳು ನಮ್ಮ ಶ್ರೀ ಮಠ ದ ಆತ್ಮೀಯ ರಲ್ಲಿ ಓರ್ವ ಉತ್ತಮ ಸಾಧಕ ರು ಅವರ ಅಗಲಿದ ಆತ್ಮಕ್ಕೆ ಉತ್ತಮ ಸದ್ಗತಿ ಪ್ರಾಪ್ತಿ ಯಾಗಲಿಅವರ ಅಗಲುವಿಕೆ ಯಿಂದ ಆಗಿರುವ ದುಃಖ್ಖ ವನ್ನು ಸಹಿಸುವ ಶಕ್ತಿ ಭಕ್ತ ವ್ರoದಕ್ಕೆ ಸಿಗಲಿಇತೀ ಜಿನೇಂದ್ರ ಸ್ಮರಣೆ ಗಳೊಂದಿಗೆ,ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಚಾರ್ಯ ಪಟ್ಟಾಚಾರ್ಯ ವರ್ಯ ಮಹಾ ಸ್ವಾಮೀಜಿ ಶ್ರೀ ದಿಗಂಬರ ಜೈನ ಮಠ,ಮೂಡು ಬಿದಿರೆ, ಜಿಲ್ಲೆ ದ.ಕ,ಕರ್ನಾಟಕ

Read More

ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ-ಸಂಘಟನೆಗಳು ಒಗ್ಗೂಡಿರುವ “ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ” ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಪೋರ್ಚುಗೀಸರು ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು, ಹಾಗಾಗಿ ಈ ನೆಲಕ್ಕೂ ದಕ್ಷಿಣ ಕನ್ನಡ ಹೆಸರಿಗೂ ಯಾವುದೇ ಸಂಬಂಧವಿಲ್ಲ ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಜಿಲ್ಲೆಗೆ ಮರುನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ. ಜಿಲ್ಲೆಯ ಹೆಸರು ಬದಲಾವಣೆಯಾದಲ್ಲಿ ತುಳುಭಾಷೆಯ ಹೋರಾಟಕ್ಕೂ ಇನ್ನಷ್ಟು ಪುಷ್ಟಿ ಸಿಗಲಿದೆ. ಈಗಾಗಲೇ ನಮ್ಮ ಜಿಲ್ಲೆಗೆ ಆರ್ಥಿಕವಾಗಿ ಬಹಳಷ್ಟು ಅನ್ಯಾಯವಾಗುತ್ತಿದ್ದರೂ ಸಹಿಸಿಕೊಂಡಿದ್ದೇವೆ. ಆದರೆ ಇಲ್ಲಿನ ಸಂಸ್ಕೃತಿಯ ಮೇಲೆ ಅನ್ಯಾಯವಾಗುವುದನ್ನು ಸ್ವಾಭಿಮಾನಿಗಳಾದ ತುಳುವರು ಸಹಿಸುವುದಿಲ್ಲ.ಎಂದರು. ಉತ್ತರ ಪ್ರದೇಶ, ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಸ್ಥಳೀಯ ಹೆಸರುಗಳ…

Read More

ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ ಉಂಟಾಗಿದ್ದು ಕಟ್ಟಡ ನಿರ್ಮಾಣ ಕಾಮಗಾರಿಗಳು ಸ್ಥಗಿತವಾಗಿದೆ. ಇದರಿಂದ ಕಾರ್ಮಿಕರು, ಗುತ್ತಿಗೆದಾರರು, ಸಾರ್ವಜನಿಕರಿಗೆ ತೀವ್ರ ಸಮಸ್ಯೆಯುಂಟಾಗಿ ಕೆಲಸವೇ ಇಲ್ಲದ ವಾತಾವರಣ ನಿರ್ಮಾಣವಾಗಿದ್ದಲ್ಲದೇ, ಅಭಿವೃದ್ಧಿ ಕಾರ್ಯಗಳಿಗೂ ತೀವ್ರ ಹಿನ್ನಡೆಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ಮರಳು ನೀತಿ ಮಾಡುತ್ತೇವೆ ಅಂತ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಆದರೆ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗುತ್ತಾ ಬಂದರೂ ಈ ಬಗ್ಗೆ ಸ್ಪಷ್ಟ ಕಾನೂನು ರೂಪಿಸಿಲ್ಲವಾದ್ದರಿಂದ ಈಗಲೂ ಸಹ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಮರಳು ಸಿಗುತ್ತಿಲ್ಲ. ಈ ಬಗ್ಗೆ ಸರ್ಕಾರ ಒಂದಾದರೂ ಸಭೆ ನಡೆಸಿದೆಯಾ? ಕ್ಷೇತ್ರದ ಶಾಸಕನಾಗಿರುವ ನನಗಂತೂ ಈ ಬಗ್ಗೆ ಯಾವ ಮಾಹಿತಿಯೂ ಬಂದಿಲ್ಲ. ಕೇರಳದಲ್ಲಿ ಒಂದು ಟನ್ ಕೆಂಪು ಕಲ್ಲಿಗೆ 32 ರೂ. ರಾಯಲ್ಟಿ ಇದ್ದರೆ, ಕರ್ನಾಟಕದಲ್ಲಿ 282 ರೂ. ಇದೆ. ಹಾಗಾಗಿ ಕೇರಳದಿಂದ ಉಳ್ಳಾಲ ಕಡೆಗೆ…

Read More

ತುಮಕೂರು ; ಅಪ್ರಾಪ್ತ ಬಾಲಕನಿಗೆ ಬೈಕ್‌ ಚಲಾಯಿಸಲು ಕೊಟ್ಟ ತಂದೆಗೆ ಜೈಲು ಶಿಕ್ಷೆ ನೀಡಿ ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ತೀರ್ಪು ನೀಡಿ ಆದೇಶ ಹೊರಡಿಸಿದ ಘಟನೆ ನಡೆದಿದೆ. ಅಪ್ರಾಪ್ತ ಬಾಲಕನ‌ ತಂದೆಗೆ ಒಂದು ದಿನ ಜೈಲು ಶಿಕ್ಷೆ ನೀಡಿ 30 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ‌. 2024 ನವೆಂಬರ್ 06 ರಂದು ಬಾಲಕ ಬೈಕ್ ಚಲಾಯಿಸಿ ಅಪಘಾತ ಮಾಡಿದ್ದನು.ತುಮಕೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ವೇಳೆ ಗುಬ್ಬಿಯಲ್ಲಿ ಬೈಕ್ ಅಪಘಾತ ನಡೆದಿತ್ತು. ಗುಬ್ಬಿ ಸಿಐಟಿ ಕಾಲೇಜು ಬಳಿ ಮಣ್ಣಿನ ಗುಡ್ಡೆಗೆ ಡಿಕ್ಕಿಯಾಗಿ ಬಿದ್ದಿದ್ದು ಈ ಬಗ್ಗೆ ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಗುಬ್ಬಿ ಸಿವಿಲ್‌ ನ್ಯಾಯಾಲಯ ಬಾಲಕನಿಗೆ ಬೈಕ್ ಕೊಟ್ಟ ತಪ್ಪಿಗೆ ತಂದೆಗೆ ಶಿಕ್ಷೆ‌ ನೀಡಿ ತೀರ್ಪು ನೀಡಿದೆ. ಮಗನಿಗೆ ಬೈಕ್ ಕೊಟ್ಟ ತಪ್ಪಿಗೆ ಕೋರ್ಟ್ ಒಂದು ದಿನ ಜೈಲು ಶಿಕ್ಷೆ ನೀಡಿದೆ. ಈ ಮೂಲಕ ಅಪ್ರಾಪ್ತರಿಗೆ ಬೈಕ್…

Read More

ಮಂಗಳೂರು: ಮಂಗಳೂರು ಸಹಕಾರಿ ಬ್ಯಾಂಕ್ ಒಂದರಲ್ಲಿ ಭಾರಿ ಗೋಲ್ಡ್ ಗೋಲ್ಮಾಲ್ ನಡೆದಿದೆ. ಗ್ರಾಹಕರು ತಮ್ಮ ಕಷ್ಟಕ್ಕೆ ಅಡವಿಟ್ಟ ಚಿನ್ನಕ್ಕೆ ಅದೇ ಬ್ಯಾಂಕ್‌ನ ಕ್ಯಾಷಿಯರ್ ಕನ್ನ ಹಾಕಿ ಎಗರಿಸಿದ್ದಾನೆ. ಕದ್ದ ಬಂಗಾರವನ್ನು ಬೇರೊಂದು ಬ್ಯಾಂಕ್‌ನಲ್ಲಿ ಅಡವಿಟ್ಟು ಕೋಟ್ಯಂತರ ರೂಪಾಯಿ ಹಣ ಸಾಲ ಪಡೆದು ಮಜಾ ಮಾಡಿ, ಈಗ ಸಿಕ್ಕಿಬಿದ್ದಿದ್ದಾನೆ. ಮಂಗಳೂರಿನ ಶಕ್ತಿನಗರದ ಪದುವ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಅದೇ ಬ್ಯಾಂಕ್‌ನ ಕ್ಯಾಷಿಯರ್ ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ್ದಾನೆ. ಪ್ರೀತೇಶ್ ಕಳೆದ ಕೆಲ ವರ್ಷಗಳಿಂದ ಈ ಬ್ಯಾಂಕ್‌ನಲ್ಲಿ ಕ್ಯಾಷಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಅದರ ಜೊತೆಗೆ ಗ್ರಾಹಕರು ಸಾಲಕ್ಕಾಗಿ ಚಿನ್ನವನ್ನು ಅಡವಿಟ್ಟಾಗ ಅದರ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದ. ಇತ್ತ ಗ್ರಾಹಕರು ಬ್ಯಾಂಕ್‌ನ ಖಜಾನೆಗೆ ಚಿನ್ನ ಒಪ್ಪಿಸುತ್ತಿದ್ದಂತೆಯೇ ಪ್ರೀತೇಶ್‌ಗೆ ಚಿನ್ನದ ಮೇಲಿನ ವ್ಯಾಮೋಹ ಹೆಚ್ಚಾಗಿದೆ. ಎರಡು ಸಾವಿರಕ್ಕೂ ಅಧಿಕ ಗ್ರಾಹಕರು ಇರುವ ಬ್ಯಾಂಕ್‌ನ ಇಪ್ಪತ್ತಾರು ಗ್ರಾಹಕರ ಚಿನ್ನಕ್ಕೆ ಪ್ರೀತೇಶ್ ಕನ್ನ ಹಾಕಿದ್ದಾನೆ. ಬ್ಯಾಂಕ್‌ನ ದಾಖಲೆಗಳಲ್ಲಿ ಚಿನ್ನಕ್ಕಾಗಿ ಮಾಡಿದ ಲೋನ್‌ಗಳು ಕ್ಲಿಯರ್ ಆಗಿದೆ ಅಂತಾ ನಕಲಿ…

Read More

ತುಳುರಂಗಭೂಮಿಯ ಹೆಸರಾಂತ ನಾಟಕ ಸಂಸ್ಥೆ ಚಾಪರ್ಕ ತಂಡದ 60ನೇ ನಾಟಕದ ಮುಹೂರ್ತ ಇಂದು ಬೆಳಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.ತುಳುರಂಗಭೂಮಿಯಲ್ಲಿ ಹಾಸ್ಯದೊಂದಿಗೆ ಕೌಟುಂಬಿಕ ವಿಚಾರಗಳೊಂದಿಗೆ ಕಳೆದ 3 ಧಶಕಗಳಿಂದ ದೇಶ ವಿದೇಶದ ತುಳು ಕಲಾಭಿಮಾನಿಗಳನ್ನು ರಂಜಿಸುತ್ತಿರುವ ತೆಲಿಕೆದ ಬೊಳ್ಳಿ ಡಾl ದೇವುದಾಸ್ ಕಾಪಿಕಾಡ್ ರವರ ಬತ್ತಳಿಕೆಯಿಂದ ಮೂಡಿಬರುತ್ತಿರುವ ಮತ್ತೊಂದು ಕೌಟುಂಬಿಕ ಹಾಸ್ಯ ನಾಟಕ “ಎನ್ನನೇ ಕಥೆ” ವಿಭಿನ್ನ ಕಥಾ ಹಂದರವನ್ನು ಹೊಂದಿದ್ದು ಈ ಬಾರಿ ಕಲಾಪ್ರೇಕ್ಷಕರನ್ನು ರಂಜಿಸಲು ಸಕಲ ತಯಾರಿಯಲ್ಲಿ ಚಾಪರ್ಕ ತಂಡ ನಿರತವಾಗಿದೆ.ಕಾಪಿಕಾಡ್ ರವರ ದಶಕದ ಹಿಂದಿನ ಕೌಟುಂಬಿಕ ಸೂಪರ್ ಹಿಟ್ ನಾಟಕ “ಇಲ್ಲ ಇಲ್ಲದ ಕಥೆ”, “ಕಥೆ ನನ ಬರೆಯೋಡು” ಸಾಲಿಗೆ “ಎನ್ನನೇ ಕಥೆ” ಸೇರ್ಪಡೆಯಾಗಲಿದೆ ಎನ್ನುವುದು ಕಾಪಿಕಾಡ್ ರವರ ಅಭಿಮಾನಿಗಳ ನಿರೀಕ್ಷೆ.ಎಂದಿನಂತೆ ಕಾಪಿಕಾಡ್ ರ ಬಳಗದಲ್ಲಿ ಹಾಸ್ಯ ದಿಗ್ಗಜರಾದ ಬೋಜರಾಜ್ ವಾಮಂಜೂರು, ಸಾಯಿಕೃಷ್ಷಕುಡ್ಲರ ಜೊತೆ ಸ್ವತ ಕಾಪಿಕಾಡ್ ಕಮಾಲ್ ಮಾಡಲಿದ್ದಾರೆ,ಹಿರಿಯ ಕಲಾವಿದರಾದ ಸದಾಶಿವ ಅಮೀನ್, ತಿಮ್ಮಪ್ಪ ಕುಲಾಲ್, ಸುರೇಶ್ ಕುಲಾಲ್, ಸುಜಾತ ಶಕ್ತಿ ನಗರ, ಶರತ್…

Read More

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕೈಪಿಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಂಗಳೂರು ವಾರ್ತಾಭವನ ದಲ್ಲಿ ಬಿಡುಗಡೆಗೊಳಿಸಿದರು.ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮ ಉದ್ಘಾಟನೆಗೆ ಆಹ್ವಾನಿಸಲಾಯಿತು. ಈ ವೇಳೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಮ್,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಬೆಂಗಳೂರು ನಗರ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೋಮಶೇಖರ್ ಗಾಂಧಿ ಉಪಸ್ಥಿತರಿದ್ದರು.

Read More