Author: Tulunada Surya

ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆ ದಿನಾಂಕ 17 -11- 2024 ರವಿವಾರ ಉಡುಪಿ ಜಿಲ್ಲಾ ಕಚೇರಿಯಲ್ಲಿ ಜರಗಿತು.ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ಸಂಘಟನೆ ಬಲಪಡಿಸುವ ಬಗ್ಗೆ ಹಲವಾರು ಹಿತನುಡಿಗಳನ್ನು ತಿಳಿಸಿದರು. ತುಳುನಾಡ ರಕ್ಷಣೆ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವೀಕ್ಷಕ ಫ್ರಾಂಕಿ ಡಿಸೋಜಾ ಕೊಳಲಗಿರಿ ಜಿಲ್ಲಾ ಘಟಕ ವತಿಯಿಂದ ಸಮ್ಮೇಳನ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದರು. ಸಭೆಯಲ್ಲಿ ನೂತನ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಸುನಿಲ್ ಫೆರ್ನಾಂಡಿಸ್ ರವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ರಾಘವೇಂದ್ರ ಉಡುಪಿ , ಅಮಿತಾ ಕಿರಣ್ ಬೆಳಪು ಸಂಘಟನೆಗೆ ಸೇರ್ಪಡೆಗೊಂಡರು. ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜರುದ್ದೀನ್ ಸುಬ್ರಹ್ಮಣ್ಯ ನಗರ , ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಪೂಜಾರಿ, ಉಡುಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಶೆಟ್ಟಿ ಹಾವಂಜೆ ,ಮಹಿಳಾಧ್ಯಕ್ಷೆ ಶೋಭಾ ಪಂಗಲ ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ.…

Read More

ಕುಂಬಳೆ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ಕಾಸರಗೋಡಿನಿಂದ ಆಲುವಾ ನ್ಯಾಯಾಲಯಕ್ಕೆ ಸಾಗಿಸುತ್ತಿದ್ದಾಗ ಆರೋಪಿ ದಾರಿ ಮಧ್ಯೆ ರೈಲಿನಿಂದ ಹೊಳೆಗೆ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ, ಈ ವೇಳೆ ಪೊಲೀಸರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಹೊಳೆಗೆ ಹಾರಿ ಆತನನ್ನು ಬಂಧಿಸಿದ ಘಟನೆ ನಡೆದಿದೆ

Read More

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೋಭಾ ಪಾಂಗಳ ಅಧ್ಯಕ್ಷತೆಯಲ್ಲಿ ವೀರ ನಾರಿ ಒಣಕೆ ಓಬವ್ವ ಜಯಂತಿ ಆಚರಣೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಜರಗಿತು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸದಸ್ಯರಿಗೆ ವೀರನಾರಿ ಒನಕೆ ಓಬವ್ವರ ಚಿತ್ರದುರ್ಗದ ಕಲ್ಲಿನಕೋಟೆಯ ಕಾವಲುಗಾರ ಪತ್ನಿಯ ಸ್ಥಾನದಲ್ಲಿ ಶತ್ರುಗಳನ್ನು ಸದೆಬಡೆದು ಹೆಣ್ಣಿನ ಶಕ್ತಿ ಮತ್ತು ಜವಾಬ್ದಾರಿ ಪ್ರಾಮಾಣಿಕತೆ ನಿಷ್ಠೆಯನ್ನು ತೋರಿಸಿಕೊಟ್ಟರು. ಅದು ಸಮಾಜಕ್ಕೆ ಮಾದರಿಯಾಗಿದೆ. ಉಡುಪಿ ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್, ಉಡುಪಿ ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ, ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಜಿಲ್ಲಾ ಕೋಶಾಧಿಕಾರಿ ಸುನಂದ ಕೋಟ್ಯಾನ್ ,ಕಾರ್ಮಿಕ ಘಟಕ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ ಅವಿನಾಶ್ ಮಾಸ್ಟರ್ , ಕಾರ್ಮಿಕ ಘಟಕ ಸಂಘಟನಾ ಕಾರ್ಯದರ್ಶಿ ರೋಷನ್ ಬಂಗೇರ…

Read More

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಾರ್ಮಿಕ ಘಟಕದ ಸಭೆ ಜಯ ಪೂಜಾರಿ ಲಕ್ಷ್ಮಿ ನಗರ ರವರ ಅಧ್ಯಕ್ಷತೆಯಲ್ಲಿ ದಿನಾಂಕ 10-11-2024 ರಂದು ಉಡುಪಿ ಜಿಲ್ಲಾ ಕಚೇರಿಯಲ್ಲಿ ಜರಗಿತು . ಸಭೆಯಲ್ಲಿ ಕಾರ್ಮಿಕ ಘಟಕ ಬಲಪಡಿಸುವ ಬಗ್ಗೆ ಸಮಾಲೋಚನೆ ನಡೆಸಲಾಯಿತು, ತುಳುನಾಡು ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ಹಲವಾರು ಪ್ರಮುಖ ವಿಷಯಗಳ ಬಗ್ಗೆ ಕಾರ್ಮಿಕ ಘಟಕ ಜಿಲ್ಲಾ ಪದಾಧಿಕಾರಿಗಳ ಗಮನಸೆಳೆದರು ಹಾಗೂ ಹೊಸದಾಗಿ ಸೇರ್ಪಡೆಗೊಂಡ ಸದಸ್ಯರಿಗೆ ಪ್ರೋತ್ಸಾಹದಾಯಕ ಮಾತುಗಳನ್ನಾಡಿದರು.ಉಡುಪಿ ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್, ಉಡುಪಿ ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಶೋಭಾ ಪಾಂಗಳ, ಕಾರ್ಮಿಕ ಘಟಕ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ ಅವಿನಾಶ್ ಮಾಸ್ಟರ್ , ಕಾರ್ಮಿಕ ಘಟಕ ಸಂಘಟನಾ ಕಾರ್ಯದರ್ಶಿ ರೋಷನ್ ಬಂಗೇರ , ಜೊತೆ ಕಾರ್ಯದರ್ಶಿ ಮೊಹಮ್ಮದ್ ಮಜೀದ್ , ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಜಿಲ್ಲಾ ಕೋಶಾಧಿಕಾರಿ…

Read More

ಬ್ರಹ್ಮಾವರ: ಮಹಿಳೆಗೆ ಚುಡಾಯಿಸಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಇಂದು ಸೆಲ್‌ನ ಬಾತ್ ರೂಮಿನೊಳಗೆ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಕೇರಳ ರಾಜ್ಯ ಕೊಲ್ಲಂ ಮೂಲದ ಬಿಜು ಮೋಹನ್ (42) ಎಂದು ಗುರುತಿಸಲಾಗಿದೆ. ಇವರು ಹಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಜು ಮೋಹನ್, ನವೆಂಬರ್ 9 ರಂದು ರಾತ್ರಿ ವೇಳೆ ಅಲ್ಲೇ ಸಮೀಪದ ಮನೆಯಲ್ಲಿ ವಾಸವಿದ್ದ ಮಹಿಳೆಯನ್ನು ಚುಡಾಯಿಸಿದ್ದರು ಎಂದು ಆರೋಪಿಸಲಾಗಿದೆ. ಆ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು, ಸ್ಥಳೀಯರು ಜಮಾಯಿಸಿ ಬಿಜು ಮೋಹನ್‌ನನ್ನು ಹಿಡಿದು ಮನೆಯೊಳಗೆ ಕೂಡಿ ಹಾಕಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದರು ಎಂದು ತಿಳಿದುಬಂದಿದೆ. ಮದ್ಯ ಸೇವಿಸಿದ್ದರೆನ್ನಲಾದ ಬಿಜು ಮೋಹನ್ ರನ್ನು ಸೆಲ್‌ನಲ್ಲಿ ಇರಿಸಲಾಗಿದ್ದು, ಇಂದು ನಸುಕಿನ ವೇಳೆ 3:30ರ ಸುಮಾರಿಗೆ…

Read More

ಮಂಗಳೂರು : ಮಂಗಳೂರು : ಲೇಡಿಗೋಷನ್ ಆಸ್ಪತ್ರೆಯ ಮಹಡಿಯಿಂದ ಹಾರಿ ಬಾಣಂತಿ ಆತ್ಮಹತ್ಯೆ ಮಂಗಳೂರು ನಗರದ ಲೇಡಿಗೋಷನ್ ಆಸ್ಪತ್ರೆಯ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ರಂಜಿತಾ ಆಚಾರ್ಯ (28) ಮೃತ ಮಹಿಳೆಯಾಗಿದ್ದಾಳೆ.

Read More

ಮಂಗಳೂರು: ತನ್ನ ಪುಟ್ಟ ಮಗುವನ್ನೆತ್ತಿಕೊಂಡು ತಂದೆಯೋರ್ವರು ಗುರುಪುರ ನದಿಯ ಸೇತುವೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಕೈಕಂಬದ ನಿವಾಸಿ ಸಂದೀಪ್ ಎಂಬವರು ತಮ್ಮ 2 ವರ್ಷದ ಮಗುವನ್ನೆತ್ತಿಕೊಂಡು ಗುರುಪುರ ಸೇತುವೆಯ ಮೇಲೇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅವರು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆಂದು ತಿಳಿದು ಉಪಾಯದಿಂದ ಮನವೊಲಿಸಿ ಮಗು ಸಹಿತ ಅವರನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಸಂದೀಪ್ ಬಳಿ ವಿಚಾರಿಸಿದಾಗ ತಾನು ಮಗುವಿಗೆ ಹೊಳೆ ತೋರಿಸುವ ಉದ್ದೇಶದಿಂದ ಸೇತುವೆಯ ಮೇಲೇರಿರುವುದಾಗಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಅವರಿಗೆ ಬುದ್ಧಿವಾದ ಹೇಳಿ ಮನೆಗೆ ಕಳುಹಿಸಿ ಕೊಟ್ಟಿದ್ದಾರೆ

Read More

ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಳೆದ ಎರಡು ಮೂರು ವರ್ಷಗಳಿಂದ ಏಕೆ ನಿವೇಶನಕ್ಕೆ ಪರವಾನಿಗೆಗೆ ಅರ್ಜಿ ಸಲ್ಲಿಸಿದ್ದರೂ ಇದುವರಿಗೂ ಜನರಿಗೆ ಏಕೆ ನಿವೇಶನ ವಿನ್ಯಾಸ ಅನುಮತಿ ಸಿಗದಿದ್ದದ್ದು ಜನರಿಗೆ ತುಂಬಾ ಸಂಕಷ್ಟಕ್ಕೆ ಈಡು ಮಾಡಿದೆ. ಸ್ವಂತ ಮನೆ ನಿರ್ಮಾಣ ಮಾಡುವುದು ಅಸಾಧ್ಯವಾಗಿದ್ದು ಜನರು ಬಾಡಿಗೆ ಮನೆಯಲ್ಲಿ ಆಶ್ರಯಿಸುವಾಂತಾಗಿದೆ. ಈ ಸಮಸ್ಯೆಯನ್ನು ತ್ವರಿತ ಗತಿಯಲ್ಲಿ ಪರಿಹರಿಸಲು ಆದ್ಯತೆ ನೀಡಬೇಕಾಗಿದೆ.ಕೃಷಿ ವಲಯದಲ್ಲಿ 10 ಸೆನ್ಸ್ ವರೆಗೆ ಏಕ ನಿವೇಶನ ಬರವಣಿಗೆ ನೀಡುವ ಪ್ರಕ್ರಿಯೆಯನ್ನು ನಗರ ಅಭಿವೃದ್ಧಿ ಪ್ರಾಧಿಕಾರ ಸ್ಥಗಿತಗೊಳಿಸಿದಾರೆ. ಇದರಿಂದ ಜನಸಾಮಾನ್ಯರಿಗೆ ಮನೆ ಕಟ್ಟಲು ಸಾಧ್ಯವಾಗದೆ ಪರದಾಡುವಂತಾಗಿದೆ ಈ ಮೊದಲಿನಂತೆ ಇದ್ದ ಪದ್ಧತಿಯನ್ನೇ ಮುಂದುವರಿಸಿಕೊಂಡು ಹೋದಲ್ಲಿ ಸಮಸ್ಯೆಗೆ ಪರಿಹಾರ ದೊರಕಿದಂತಾಗುತ್ತದೆ. ಅಲ್ಲದೇ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಬೇಡಿಕೆಗನುಸಾರವಾಗಿ ಸ್ಪಂದಿಸಲು ಸಾಕಷ್ಟು ಪೂರ್ಣ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿವರ್ಗದ ಕೊರತೆ ಇದ್ದು ಜನರ ಸಮಸ್ಯೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲು ಅಗತ್ಯ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿ ವರ್ಗಗಳನ್ನು ನಿಯೋಜಿಸ ಬೇಕು ಸೇರಿದಂತೆ ಹಲವು…

Read More

ಮಂಗಳೂರು :(Tulunada surya) ನನ್ನ ರಾಜಕೀಯ ಗುರುಗಳಾದ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಹಾದಿಯಲ್ಲಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಜಕಾರಣ ಮಾಡುವುದಾಗಿ ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು. ತುಳುನಾಡಿನ ಸಮಗ್ರ ಅಭಿವೃದ್ಧಿ ಜತೆಗೆ ಸೌಹಾರ್ದ ಪರಂಪರೆಯನ್ನು ಮರಳಿ ಕಟ್ಟುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಗತವೈಭವ ಮರುಕಳಿಸುವಂತೆ ಮಾಡುವುದು ನನ್ನ ಉದ್ದೇಶ ಎಂದು ಒಂದು ರೀತಿಯಲ್ಲಿ ಪ್ರತಿಜ್ಞೆ ಮಾದರಿಯಲ್ಲಿ ಅವರು ನುಡಿದರು.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಧಿಕೃತ ಘೋಷಣೆಯಾದ ಬಳಿಕ ಬೆಂಗಳೂರಿನಿಂದ ಶುಕ್ರವಾರಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪದ್ಮರಾಜ್ಅವರನ್ನು ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ಹಾರ ಹಾಕಿ ಸಂಭ್ರಮಿಸಿದರು. ಚೆಂಡೆ ವಾದ್ಯಗಳ ಜೊತೆ ಭರ್ಜರಿಯಾಗಿ ಬರಮಾಡಿಕೊಂಡರು.ಬಳಿಕ ಅವರು ಆಧುನಿಕ ಮಂಗಳೂರು ಶಿಲ್ಪಿ ಉಳ್ಳಾಲ ಶ್ರೀನಿವಾಸ್ ಮಲ್ಯರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಮನ ಸಲ್ಲಿಸಿದರು. ಕದ್ರಿಯ ವೀರ ಯೋಧರ ಸ್ಮಾರಕ್ಕೆ ತೆರಳಿ ದೇಶಕ್ಕಾಗಿ ಮಡಿದ ಹುತಾತ್ಮ…

Read More

ಬೆಂಗಳೂರು : ಶಾಲಾ ಮಕ್ಕಳ ಜೀವನದಲ್ಲಿ ಆಟವಾಡುವ ಸರಕಾರದ ವಿರುದ್ಧ ಪೋಷಕರು ಆಕ್ರೋಶವ್ಯಕ್ತಪಡಿಸಿದ್ದು, ಈ ಮಧ್ಯೆ ಪೋಷಕರು ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸುತ್ತಿದ್ದರು. ಇದೀಗ ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ. ಬೋರ್ಡ್ ಪರೀಕ್ಷೆ ವಿಚಾರವಾಗಿ ಸರ್ಕಾರದ ಸುತ್ತೋಲೆ ರದ್ದು ಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಇದನ್ನು ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ವಿಭಾಗೀಯ ಪೀಠ ಏಕಸದಸ್ಯ ಪೀಠ ಆದೇಶ ರದ್ದು ಮಾಡಿ ಪರೀಕ್ಷೆ ನಡೆಸಲು ಗ್ರೀನ್‌ ಸಿಗ್ನಲ್ ನೀಡಿತ್ತು.ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಭಾಗೀಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಅಲ್ಲದೆ, ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು.…

Read More