Author: Tulunada Surya

ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ ದಿನಾಂಕ*21-03-2024 ರಂದು ಗುರುವಾರ ಬೆಳಗ್ಗೆ 10.30 ಗಂಟೆಗೆ ಸರಿಯಾಗಿ ಉಡುಪಿ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಸಂತೆಕಟ್ಟೆಯಲ್ಲಿ ಸಾರ್ವಜನಿಕರು ಅನುಭವಿಸುವ ಸಮಸ್ಯೆಗಳ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಮತ್ತು ರಾಷ್ಟ್ರೀಯ ಹೆದ್ದಾರಿ ಮಂಗಳೂರು ವಿಭಾಗ ಯೋಜನೆ ನಿರ್ದೇಶಕರನ್ನುಭೇಟಿ ಮಾಡಿ ಮನವಿ ನೀಡಿರುತ್ತಾರೆ.ರಾಷ್ಟ್ರೀಯ ಹೆದ್ದಾರಿ 66 ಕಲ್ಯಾಣಪುರ ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಅಂಡರ್ ಪಾಸಿಂಗ್ ರಸ್ತೆ ಕಾಮಗಾರಿ ಆಗುತ್ತಿದ್ದು ಸದ್ರಿ, ರಾಷ್ಟ್ರೀಯ ಹೆದ್ದಾರಿಯಾ ಬಲಬದಿಯ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು ಸದರಿ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಬಹಳ ತೊಂದರೆ ಉಂಟಾಗುತ್ತಿದ್ದು ದಿನನಿತ್ಯ ಪರದಾಡುವ ಪರಿಸ್ಥಿತಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ನಿರ್ಲಕ್ಷದಿಂದ ಉಂಟಾಗಿರುತ್ತಾರೆ. ಸದರಿ ಅಸಂರ್ಪಕ ರಸ್ತೆಯಿಂದಾಗಿ ಈವರೆಗೆ ಹಲವಾರು ಅಪಘಾತಗಳು ಉಂಟಾಗಿ ಹಲವಾರು ಕುಟುಂಬದ ಮಕ್ಕಳು ಹಾಗೂ ದುಡಿಯುತ್ತಿರುವ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ತಮ್ಮ ಪ್ರಾಣವನ್ನು ಕಳೆದುಕೊಂಡು ಎಷ್ಟೋ ಕುಟುಂಬಗಳು ಬೀದಿಗೆ ಬಂದಿರುತ್ತದೆ.…

Read More

21/03/024.ಮಧ್ಯಾಹ್ನ 3.30ಕ್ಕೆ ಜಮೀಯತುಲ್ ಫಲಾಹ್ ಕಛೇರಿಯಲ್ಲಿ (ಕಂಕನಾಡಿ) ಮೊಯ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ 21/03/024.ಮಧ್ಯಾಹ್ನ 3.30ಕ್ಕೆ ಜಮೀಯತುಲ್ ಫಲಾಹ್ ಕಛೇರಿಯಲ್ಲಿ (ಕಂಕನಾಡಿ) ಮೊಯ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ ಮಾಜಿ ಶಾಸಕ ಮೊಯ್ದಿನ್ ಬಾವಾರವರು ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸ ಬೇಕೆಂಬ ಒತ್ತಾಯವು ದಕ್ಷಿಣ ಕನ್ನಡದಾದ್ಯಂತ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಮೊಯ್ದಿನ್ ಬಾವಾ ರವರ ರಾಜಕೀಯ ಶ್ರೇಯಸ್ಸನ್ನು ಬಯಸುವ ಅವರ ಆಪ್ತರು, ಅಭಿಮಾನಿಗಳು ಮತ್ತು ಹಿತೈಷಿಗಳು, ಪ್ರಸಕ್ತ ರಾಜಕೀಯ ಸ್ಥಿತಿಗತಿ ಗಳ ಬಗ್ಗೆ ಚಿಂತನಾ -ಮಂಥನಾ ನಡೆಸಿ ಸೂಕ್ತ ನಿರ್ಧಾರವನ್ನು ತೆಗೆದು ಕೊಳ್ಳುವ ತೀರ್ಮಾನಕ್ಕೆ ಬಂದಿದ್ದು. ಈ ಸಮಾಲೋಚನಾ ಸಭೆಯು ದಿನಾಂಕ 21.03.2024ರಂದು ಮಧ್ಯಾಹ್ನ 3.30ಕ್ಕೆ ಕಂಕನಾಡಿಯಲ್ಲಿರುವ ಜಮೀಯತುಲ್ ಫಲಾಹ್ ಕಛೇರಿಯಲ್ಲಿ ನಡೆಯಲಿದೆ ಎಂದು ಮೊಯ್ದಿನ್ ಬಾವಾರ ಆಪ್ತರಿಂದ ತಿಳಿದುಬಂದಿದೆ

Read More

ಉತ್ತಮ ಸಮಾಜಸೇವಕರು, ಸರ್ವ ದರ್ಮದ ಒಡನಾಡಿ, ಬಹು ಭಾಷಾ ಕವಿ, ಕನ್ನಡ/ ತುಳು ಪರ ಹೋರಾಟಗಾರ, ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಸದಸ್ಯರು ಹಾಗೂ ಮುಖಂಡರು, ಕೋಟೆಕಾರು ಪಟ್ಟಣ ಪಂಚಾಯತ್ ಮಾಜಿ ಕೌನ್ಸಿಲರ್, ಕರ್ನಾಟಕ ಭಾವೈಕ್ಯ ಪರಿಷತ್ ಇದರ ನಿರ್ದೇಶಕರಾಗಿರುವ ಹಮೀದ್ ಹಸನ್ ಮಾಡೂರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡಿರುತ್ತಾರೆ. ಇವರಿಗೆ ತುಳುನಾಡ ಸೂರ್ಯನ್ಯೂಸ್ ಅಭಿನಂದನೆ ಸಲ್ಲಿಸುತ್ತದೆ.

Read More

ತುಳುನಾಡ ಸೂರ್ಯ ನ್ಯೂಸ್ : ರಸ್ತೆ ದಾಟುತ್ತಿದ್ದ ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಘಟನೆಯೊಂದು ತಲಪಾಡಿಯಲ್ಲಿ ನಡೆದಿದೆ ರಾಜೇಶ್ ಶೆಟ್ಟಿ (49) ಮೃತಪಟ್ಟ ವ್ಯಕ್ತಿ. ರಾಜೇಶ್ ಅವರಿಗೆ ತಲಪಾಡಿ ಹಳೆ ಬಸ್ ತಂಗುದಾಣದ ಬಳಿ ಬೇಕರಿ ಇದೆ. ಎದುರು ಭಾಗದಲ್ಲೇ ಹೆದ್ದಾರಿ ಸಮೀಪ ಮನೆ ಕೂಡಾ ಇದೆ. ಭಾನುವಾರ ತಲಪಾಡಿ ದೇವಿಪುರದಲ್ಲಿ ರಥೋತ್ಸವ ಇದ್ದ ಕಾರಣ ರಾಜೇಶ್ ಅವರು ತಮ್ಮ ಮನೆಗೆ ಬಂದಿದ್ದ ನೆಂಟರನ್ನು ಉಪಚರಿಸಿದ್ದು, ಮಧ್ಯಾಹ್ನದ ಸಮಯದಲ್ಲಿ ಬೇಕರಿಗೆ ತೆರಳುತ್ತಿದ್ದರು. ರಾಜೇಶ್ ಶೆಟ್ಟಿ ಯವರು ಉತ್ತಮ ವ್ಯಕ್ತಿತ್ವ ಹೊಂದಿದವರಿಗೆ ಎಲ್ಲರೊಡನೆ ಉತ್ತಮ ಒಡನಾಟ ಹೊಂದಿದ್ದರು. ಈ ಸಮಯದಲ್ಲಿ ಅವರು ಹೆದ್ದಾರಿ ದಾಟಲು ನಿಂತಿದ್ದು, ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಾಜೇಶ್ ಅವರು ರಸ್ತೆಗೆಸೆಯಲ್ಪಟ್ಟಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ…

Read More

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಆಯ್ಕೆಯಾಗಿರುತ್ತಾರೆ, ಕಿರಣ್ ರವರುಎನ್ ಎಸ್ ಯು ಐ ತಾಲೂಕು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ,2 ಬಾರಿ ಚುನಾಯಿತ ಜಿಲ್ಲಾ ಯುವ ಕಾಂಗ್ರೆಸ್ ಪ್ರಾಧಾನ ಕಾರ್ಯದರ್ಶಿಯಾಗಿ ,ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿ (ರಿ.) ಮಂಗಳೂರು ಅಧ್ಯಕ್ಷರಾಗಿ , ಯುವ ಒಕ್ಕಲಿಗ ಸಂಘ ಸೇವೆ . ಮಂಗಳೂರಿನ ಅಧ್ಯಕ್ಷರಾಗಿ ಸಲ್ಲಿಸಿದರು. ಇದೀಗ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಕಿರಣ್ ಬುಡ್ಲೆಗುತ್ತು ರವರನ್ನು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ನೇಮಕಮಾಡಿರುತ್ತಾರೆ.

Read More

ತುಳುನಾಡು ರಕ್ಷಣಾ ವೇದಿಕೆ ಸಂಘಟನೆಗೆ ಹಲವಾರು ಕನ್ನಡಪರ ಸಂಘಟನೆಗಳಿಂದ ಸೇರ್ಪಡೆ ದಿನಾಂಕ 17.3 20 24ರಂದು ಮಧ್ಯಾಹ್ನ 3:00 ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಗೆ ಕನ್ನಡ ಪರ ಸಂಘಟನೆ ಮುಖಂಡರುಗಳಾದ ಕುಶಲ್ ಅಮೀನ್ ಜಯ ಪೂಜಾರಿ ರೋಷನ್ ಬಂಗೇರ , ಸುಲತಾ , ಲಲಿತಾ, ರವೀಜಾ, ಉಮಾವತಿ, ಸವಿತಾ ಮತ್ತಿತರ ಹಲವಾರು ಪ್ರಮುಖರು ಸಾರ್ವಜನಿಕರ ಮೇಲೆ ಬಾಷೆ ಹೇರಿಕೆ ಮತ್ತು ಕನ್ನಡ ಬೋರ್ಡ್ ಅಳವಡಿಸಲು ವ್ಯಾಪಾರಸ್ಥರ ಮೇಲೆ ಬಲವಂತದ ಒತ್ತಡ ಹೇರುತ್ತಿರುವ ಕ್ರಮವನ್ನು ವಿರೋಧಿಸಿ ತುಳುನಾಡು ರಕ್ಷಣಾ ವೇದಿಕೆಗೆ ಸೇರ್ಪಡೆ ಗೊಂಡರು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರು ಸಂಘಟನೆಯ ಸಾಲು ಮತ್ತು ಹೂವನ್ನು ನೀಡಿ ಸಂಘಟನೆಗೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ವೀಕ್ಷಕರಾದ ಫ್ರ್ಯಾಂಕಿ ಡಿ’ಸೋಜ , ಉಡುಪಿ ಜಿಲ್ಲಾ ಅಧ್ಯಕ್ಷರಾದ ಕೃಷ್ಣಕುಮಾರ್ , ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಜಯರಾಮ್ ಪೂಜಾರಿ, ಮಹಿಳಾ ಅಧ್ಯಕ್ಷರಾದ ಶೋಭಾ ಪಂಗಳಾ, ವೈದ್ಯರ ಘಟಕ ರಾಜ್ಯ…

Read More

ಧಾರವಾಡ:ಮನೆಯಲ್ಲಿ ಆಟವಾಡುತ್ತಾ ಆಕಸ್ಮಿಕವಾಗಿ ಒಂದು ರೂಪಾಯಿ ನಾಣ್ಯವನ್ನು ಬಾಯಿಗೆ ಹಾಕಿಕೊಂಡಿದ್ದರಿಂದ ಗಂಟಲಿನಲ್ಲಿ ಸಿಲುಕಿ 2 ವರ್ಷದ ಮಗು ಮೃತಪಟ್ಟಿರುವ ಘಟನೆ ನಗರದ ಕೋಳಿಕೇರಿ ಬಡಾವಣೆಯಲ್ಲಿ ನಡೆದಿದೆ. ಮೃತ ಮಗುವನ್ನು ನಗರದ ಕೋಳಿಕೇರಿ ಬಡಾವಣೆಯ ಮಹ್ಮದ ಜುಬೇರ್ ಸಾಲಿ (2) ಎಂದು ತಿಳಿದು ಬಂದಿದೆ. ಮಗು. ಆಟವಾಡುತ್ತಿದ್ದಾಗ ಬಾಯಿಯಲ್ಲಿ ಒಂದು ರೂಪಾಯಿ ನಾಣ್ಯ ಹಾಕಿಕೊಂಡಿದೆ. ಅದು ಗಂಟಲಿನಲ್ಲಿ ಸಿಲುಕಿಕೊಂಡಿದ್ದರಿಂದ ಮಗು ಒದ್ದಾಡುತ್ತಿದ್ದದ್ದನ್ನು ಕಂಡು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ತುಳುನಾಡ ಸೂರ್ಯ ಮಕ್ಕಳ ಹೆತ್ತವರಲ್ಲಿ ವಿನಂತಿಸುತ್ತಿದೆ.

Read More

ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಈ ಬಾರಿ ಲೋಕಸಭೆ ಅಭ್ಯರ್ಥಿ ಬದಲಾವಣೆ ಆಗಲೇಬೇಕೆಂದು ಪಕ್ಷದ ಕಾರ್ಯಕರ್ತರು ಅಭಿಯಾನ ಕೈಗೊಂಡಿದ್ದರು. ಕಾರ್ಯಕರ್ತರ ಮಾತಿಗೆ ಓಗೊಟ್ಟ ಬಿಜೆಪಿ ಹೈಕಮಾಂಡ್ ಯುವ ನಾಯಕ, 42 ವರ್ಷದ ಬೃಜೇಶ್ ಚೌಟ ಅವರನ್ನು ಅಭ್ಯರ್ಥಿಯಾಗಿಸಿದೆ. ಅಂದಹಾಗೆ, ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ತಿಗೆ ಆಯ್ದುಕೊಂಡಿರುವುದು ಮಹತ್ವದ ನಡೆಯಾಗಿದೆ. ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ ದುಡಿದು ಬಂದ ವ್ಯಕ್ತಿಯೊಬ್ಬರಿಗೆ ಸಂಸತ್ ಸ್ಪರ್ಧೆಯ ಟಿಕೆಟ್ ಕೊಡಲಾಗಿದೆ. ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಸಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ…

Read More

ದಿನಾಂಕ 08-03-2024 ರಂದು ಬೆಳ್ಳಿಗೆ 11 ಗಂಟೆಗೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಮಹಿಳಾ ಘಟಕ ವತಿಯಿಂದ ವೇದಿಕೆ ಹಮ್ಮಿಕೊಂಡಿದ್ದ “ವಿಶ್ವ ಮಹಿಳಾ ದಿನಾಚರಣೆ” ಉದ್ಘಾಟನೆಯನ್ನು ಮಹಿಳಾ ಜಿಲ್ಲಾದ್ಯಕ್ಷೆ ಶೋಭಾ ಪಾಂಗಳ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ. ಯೋಗಿಶ್ ಶೆಟ್ಟಿ ಜಪ್ಪು ರವರು ಮಾತನಾಡುತ್ತ “ಮಹಿಳೆಯರ ಹಕ್ಕುಗಳ ಅರಿವಿನ ದಿನವೇ ಮಹಿಳಾ ದಿನ. ಮಹಿಳೆಯರಾದ ನಾವೆಲ್ಲಾ ಈ ದಿನವನ್ನು ಸಂಭ್ರಮಿಸಬೇಕು. ಮಾತೆ ಸಾವಿತ್ರಿಬಾಯಿ ಫುಲೆ ರವರು ಕೊಟ್ಟ ಶಿಕ್ಷಣ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ರವರು ಬರೆದ ಸಂವಿಧಾನದಿಂದಾಗಿ ನಾವುಗಳು ಕಲಿಯುತ್ತಿದ್ದೇವೆ ಮೀಸಲಾತಿಯನ್ನು ಅನುಭವಿಸುತ್ತಿದ್ದೇವೆ. ಒಂದು ಹೊತ್ತಿನ ಊಟ ಕಡಿಮೆ ಮಾಡೋಣ. ಆದರೆ ನಮ್ಮ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡೋಣ. ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರಿಂದ ನಮ್ಮ ನಮ್ಮ ಕುಟುಂಬಗಳಿಂದ ಹಿಡಿದು ದೇಶವೇ ಸುಧಾರಣೆ ಆಗುತ್ತದೆ. ಪ್ರತಿಯೊಂದು ಮಹಿಳೆಯಲ್ಲೂ ಒಂದೊಂದು ಪ್ರತಿಭೆ ಇರುತ್ತದೆ ಆ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ನಮ್ಮಲ್ಲಿ ಕೆಲವು ಭಾಗದಲ್ಲಿ ಹೆಣ್ಣು ಮಕ್ಕಳಲ್ಲಿ ಹೆಚ್ಚು ಪ್ರತಿಭೆಗಳಿದ್ದರೂ ಮತ್ತೆ ಅವಳು ಮುಸುರೆ…

Read More

ಉಡುಪಿ ಜಿಲ್ಲಾ ಘಟಕ ವತಿಯಿಂದ ಮಾರ್ಚ್ 8 ರಂದು ಮಹಿಳಾ ದಿನಾಚರಣೆ ಕಾರ್ಯಕ್ರಮ ದಿನಾಂಕ 08-03-2024 ರಂದು ಬೆಳ್ಳಿಗೆ 10.30 ಕ್ಕೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಮಹಿಳಾ ಘಟಕ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಉದ್ಘಾಟನೆ ಯನ್ನು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷ ರಾದ ಯೋಗಿಶ್ ಶೆಟ್ಟಿ ಜಪ್ಪುರವರು ನೆರವೇರಿಸಲಿದ್ದಾರೆ.ಹಲವಾರು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಮಹಿಳಾ ಸಬಲಿಕರಣ, ಸನ್ಮಾನ ಮತ್ತು ಇತರ ಕಾರ್ಯಕ್ರಮ ಜರಗಲಿದೆ. ಜಿಲ್ಲೆಯ ಎಲ್ಲಾ ಮಹಿಳಾ ಪಧಾದಿಕಾರಿಗಳು ಮತ್ತು ಪುರುಷ ಪಧಾದಿಕಾರಿಗಳು ಆಗಮಿಸಿ ಯಶಸ್ವಿ ಗೊಳಿಸಬೇಕಾಗಿ ವಿನಂತಿ. ಕಾರ್ಯಕ್ರಮ ಬಳಿಕ ಸಂಘಟನೆ ಮಹಿಳಾ ಪಧಾದಿಕಾರಿ ರೇಣುಕಾ ರವರ ಮನೆಯ ರೇಣುಕಾ ಯಲ್ಲಮ್ಮ ದೇವರ ಪೂಜಾ ಕಾರ್ಯಕ್ರಮ ದಲ್ಲಿ ಭಾಗವಹಿಸಲಿಕ್ಕಿದೆ. ಎಂದು ಉಡುಪಿ ಮಹಿಳಾ ಜಿಲ್ಲಾದ್ಯಕ್ಷೆ ಶೋಭಾ ಪಾಂಗಳ ರವರ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.

Read More