- ಸೇವಾ ಸಂಕಲ್ಪ ಅಭಿಯಾನಕ್ಕೆ ಮಾದರಿ ಹೆಜ್ಜೆ ಕುಲಶೇಖರ ಕಲ್ಪನೆ ಪರಿಸರದಲ್ಲಿ ನವೀಕೃತ ಬಸ್ ನಿಲ್ದಾಣ ಉದ್ಘಾಟನೆ
- ಮಾಡೂರು ಶ್ರೀ ಶಿವ ದುರ್ಗಾಂಬಾ ಮಠದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವ ವಿಶೇಷ ಪೂಜೆ, ಗಣಹೋಮ, ಮಹಾ ಚಂಡಿಕಾಯಾಗ, ಅಖಂಡ ಭಜನೆ ಹಾಗೂ ಅನ್ನಸಂತರ್ಪಣೆ
- ಗಾಂಧಿ ಜಯಂತಿ ಅಂಗವಾಗಿ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ವಿಶೇಷ ಕಾರ್ಯಕ್ರಮ ಗಾಂಧೀಜಿ ತತ್ವಗಳನ್ನು ಸ್ಮರಿಸಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ
- ಅ.5ರಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ
- MRPL ಸ್ಫೋಟ ಪ್ರಕರಣ: ನಿರ್ಲಕ್ಷ್ಯದ ಆರೋಪದಡಿ FIR ಗಂಭೀರ ಗಾಯಗೊಂಡ ಕಾರ್ಮಿಕ ಮನೀಶ್ ಕರ್ಕಡ ಸಾವು; ಸುತ್ತಮುತ್ತ 54 ಮನೆಗಳಿಗೆ ಹಾನಿ
- ಎಂಆರ್ಪಿಎಲ್ ಸ್ಫೋಟ: ಸ್ಥಳೀಯರ ಸುರಕ್ಷತೆಯೊಂದಿಗೆ ಯಾವುದೇ ರಾಜಿ ಬೇಡ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ, ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಿ ಕೈಗಾರಿಕೆ ಆರಂಭದ ವೇಳೆ ನೀಡಿದ ಭರವಸೆಗಳು ಅನುಷ್ಠಾನವಾಗಲಿ: ಯೋಗಿಶ್ ಶೆಟ್ಟಿ ಜಪ್ಪು
- ಎಂಆರ್ಪಿಎಲ್ನಲ್ಲಿ ಭಾರೀ ಸ್ಫೋಟ: ಎಂಟು ಮಂದಿ ಗಾಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಬೆಂಕಿ; ಓರ್ವನಿಗೆ ಶೇ.35ರಷ್ಟು ಸುಟ್ಟ ಗಾಯ
- ಎಂಆರ್ಪಿಎಲ್ ಘಟಕದಲ್ಲಿ ಭಾರೀ ಸ್ಫೋಟದ ಸದ್ದು: ಬೆಂಕಿ, ದಟ್ಟ ಹೊಗೆಯಿಂದ ಸ್ಥಳೀಯರಲ್ಲಿ ಆತಂಕ
Author: Tulunada Surya
ಪುತ್ತೂರು: ಹೈಕೋರ್ಟ್ ನಿರ್ದೇಶನದ ಮೇರೆಗೆ ನಗರದಲ್ಲಿರುವ ಕೋವಿ (ಬಂದೂಕು) ಠೇವಣಾತಿ ಕೇಂದ್ರದ ಮೇಲೆ ಶುಕ್ರವಾರ ಅಧಿಕಾರಿಗಳ ತಂಡ ದಾಳಿ ನಡೆಸಿ 1500ಕ್ಕೂ ಅಧಿಕ ಕೋವಿಗಳನ್ನು ಪತ್ತೆ ಹಚ್ಚಿದೆ. ಉಪವಿಭಾಗಾಧಿಕಾರಿ (ಎಸಿ) ಸ್ಟೆಲ್ಲಾ ವರ್ಗೀಸ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 83ರ ಅಡಿ ತನಿಖೆ ಆರಂಭಿಸಲಾಗಿದೆ ಎಂದು ತಿಳಿದುಬಂದಿದೆ. ನಗರ ಪೊಲೀಸ್ ಠಾಣೆ ಸಮೀಪದ ದೇವಕಿಕೃಪಾ ಕಟ್ಟಡದ ಮೇಲಂತಸ್ತಿನ ಎರಡು ಕೊಠಡಿಗಳು ಹಾಗೂ ಪಕ್ಕದ ಎಸ್‌ಬಿಬಿ ಟವರ್‌ನ ಒಂದು ಕೊಠಡಿಯಲ್ಲಿ ಈ ಬಂದೂಕುಗಳನ್ನು ದಾಸ್ತಾನು ಮಾಡಲಾಗಿತ್ತು. ಶುಕ್ರವಾರ ಮಧ್ಯಾಹ್ನ ಮತ್ತು ಸಂಜೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳ ಪರಿಶೀಲನೆ ನಡೆಸಿದ ಎಸಿ, ಕೋವಿ ಠೇವಣಿ ಇರಿಸಲಾಗಿದ್ದ ಕೊಠಡಿಗಳನ್ನು ಸೀಲ್ ಮಾಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿದ ಎಸಿ ಸ್ಟೆಲ್ಲಾ ವರ್ಗೀಸ್, “ಪರಿಶೀಲನೆ ವೇಳೆ ಕೇಂದ್ರದಲ್ಲಿ 1500ಕ್ಕೂ ಹೆಚ್ಚು ಕೋವಿಗಳು ಪತ್ತೆಯಾಗಿವೆ. ಜೊತೆಗೆ ಇರುವ ಮದ್ದುಗುಂಡುಗಳ ನಿಖರ ಪ್ರಮಾಣದ ಕುರಿತು ಎರಡು ದಿನಗಳೊಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ…
ಶ್ರೀ ಹರಿಹರ ಪಾಂಡುರಂಗ ವಿಠ್ಠಲ ಭಜನಾ ಮಂದಿರ ಟ್ರಸ್ಟ್ (ರಿ ). ಬಿಕರ್ನಕಟ್ಟೆ. ಮಂಗಳೂರು . ಈ ಮಂದಿರದ ಸಭಾಂಗಣದಲ್ಲಿ 101.ನೇ. ವರ್ಷದ ಭಕ್ತರ ಸಭೆಯು ಶ್ರೀ ಪ್ರೊ. ವಿ ಜಯರಾಮ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪದಾಧಿಕಾರಿಗಳ ಆಯ್ಕೆ ನಡೆಯಿತು . ಸರ್ವನು ಮತದಿಂದ ಶ್ರೀ ಅಡ್ಯಾರ್ ಗುತ್ತು, ಮನೋಹರ್ ರೈ ಯವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಯಿತು . ಗೌರವ ಅಧ್ಯಕ್ಷರಾಗಿ ಭರತೇಶ್ ಕುಮಾರ್ ಆಯ್ಕೆಯಾದರು ಹಾಗು ಉಪ ಅಧ್ಯಕ್ಷರಾಗಿ ಡಾ ಚಂದ್ರಶೇಖರ್, ಶರತ್ ಬಿಕರ್ನಕಟ್ಟೆ, ಉಮಾವತಿ . ಕಾರ್ಯದರ್ಶಿಯಾಗಿ ಜಗದೀಶ್ ಆಚಾರ್ಯಜೊತೆ ಕಾರ್ಯದರ್ಶಿಯಾಗಿ ಶೋಭಾ ಶೇಖರ್ ಕೊಟ್ಟಾರಿ, ಅವಿನಾಶ್ , ಲೋಲಾಕ್ಷ ಆಚಾರ್ಯ ಮತ್ತು ಕೋಶಾಧಿಕಾರಿಯಾಗಿ ಶ್ರೀಮತಿ ಸುಚಿತ್ರ ಪ್ರಶಾಂತ್,ಭಜನಾ ಸಂಚಾಲಕರಾಗಿ ಶ್ರೀ ಶ್ರೇಯಸ್ (ವಕೀಲರು ) ಆಯ್ಕೆಯಾದರು ಇನ್ನಿತರ ಪದಾಧಿಕಾರಿಗಳ ಆಯ್ಕೆಯಾಯಿತು .ನಂತರ ಭಕ್ತಭಿಮಾನಿಗಳ ಉಪಸ್ಥಿತಿಯಲ್ಲಿ ಮಂದಿರದ ಸದಸ್ಯರಿಂದ ಭಕ್ತಿ ರಸಮಂಜರಿ ನಡೆಯಿತು..ಡಾ. ಚಂದ್ರಶೇಖರ ಸ್ವಾಗತಿಸಿದರು ರಾಜೇಶ್ ಶೆಟ್ಟಿ ಶಕ್ತಿನಗರ ಧನ್ಯವಾದಗೈದರು. ಶ್ರೇಯಸ್ ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು: ರೆಡ್ ಕ್ರಾಸ್ ಡಿ.ಕೆ. ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಫೆ. 22ರಂದು ಚುನಾವಣೆ ನಡೆಯಲಿದ್ದು, ತಮದೇ ನೇತೃತ್ವದ ತಂಡದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮಂಡಳಿ ಅಧ್ಯಕ್ಷ ಸಿ.ಪಿ. ಶಾಂತಾರಾಮ ಶೆಟ್ಟಿ ಮನವಿ ಮಾಡಿದ್ದಾರೆ. ವಿಧಿ ಪ್ರಕಾರಗಳಲ್ಲಿ ಮುಂದುವರಿದ ಸರ್ವದರ್ಶಿ ಅಭ್ಯರ್ಥಿಗಳಾದ ಡಾ. ಸತೀಶ್ ರಾವ್, ಯುವರಾಜ್ ಭಂಡಾರಿ, ಡಾ. ಬಿ. ಸುದರ್ಶನ ರಾವ್, ಸಚೇತಾ ಸುಭಾಷ್, ಡಾ. ಸುಮನ ಎಸ್., ಪ್ರಭುರಾಜ್ ಜೈನ್, ಗುರುದತ್ ನಾಯಕ್, ವಸಂತ, ನ್ಯಾಯವಾದಿ ರಾಘವೇಂದ್ರ ರಾವ್ ಮತ್ತು ಹಿರಿಯ ಪತ್ರಕರ್ತ ಪಿ.ವಿ. ಹರಿಪ್ರಸಾದ್ ಇವರನ್ನು ಸಿ.ಪಿ. ಶಾಂತಾರಾಮ ಶೆಟ್ಟಿ ನೇತೃತ್ವದ ತಂಡದ ಅಭ್ಯರ್ಥಿಗಳಾಗಿ ಸ್ಪರ್ಧೆಗಿಳಿಸಿದ್ದಾರೆ. ಕಳೆದ ಆಡಳಿತ ಮಂಡಳಿಯ ಅವಧಿಯಲ್ಲಿ ರೆಡ್ ಕ್ರಾಸ್ ಸಂಸ್ಥೆಯಲ್ಲಿ ನಡೆದ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಅವಕಾಶ ಸಿಗುವಂತೆ ಮಾಡಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಡಿ.ಕೆ. ಜಿಲ್ಲಾ ಘಟಕ ಸೇವಾ ಕಾರ್ಯಗಳಲ್ಲಿ ಇನ್ನಷ್ಟು ನೆರವಾಗಲಿದೆ ಎಂದು ಸಿ.ಪಿ. ಶಾಂತಾರಾಮ ಶೆಟ್ಟಿ ತಿಳಿಸಿದ್ದಾರೆ.
ಮೂಡುಬಿದಿರೆ, ಫೆ. 20: ಹೆಕ್ಕಡ್ಕ–ಬೈಲೂರು ಭಾಗದ ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಸೇವೆ ಸಲ್ಲಿಸಿದ್ದ ಸೌಟಬೆಟ್ಟು ಗುತ್ತುಮಾಳದ ಹಿರಿಯ ಶಿಕ್ಷಕ ಶ್ರೀ ಭುಜಬಲಿ ಅಧಿಕಾರಿಯವರು (85) ಶುಕ್ರವಾರ ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದರೆಂಬ ಸುದ್ದಿ ತಿಳಿದು ಬಂದಿದೆ.ಹಳೆ ಕನ್ನಡ ಸಾಹಿತ್ಯದ ಮೇಲೆ ಅಪಾರ ಆಸಕ್ತಿ ಮತ್ತು ಪಾಂಡಿತ್ಯ ಹೊಂದಿದ್ದ ಶ್ರೀಯುತರು, ಪ್ರಾಚೀನ ಕನ್ನಡ ಕೃತಿಗಳನ್ನು ಸುಲಭ ಹಾಗೂ ಅರ್ಥಪೂರ್ಣವಾಗಿ ವಿದ್ಯಾರ್ಥಿಗಳಿಗೆ ತಿಳಿಸುವಲ್ಲಿ ವಿಶೇಷ ಖ್ಯಾತಿ ಪಡೆದಿದ್ದರು. ಶಿಕ್ಷಕರಾಗಿ ಮಾತ್ರವಲ್ಲದೆ ಮಾರ್ಗದರ್ಶಕರಾಗಿಯೂ ಅನೇಕ ವಿದ್ಯಾರ್ಥಿಗಳ ಬದುಕಿಗೆ ದಿಕ್ಕು ತೋರಿದ ಆದರ್ಶಗುರುರಾಗಿದ್ದರು.ಹೆಕ್ಕಡ್ಕ, ಬೈಲೂರು, ಅಳಿಯೂರು, ಬಜಗೋಳಿ, ಪಡಂಗಡಿ, ಕೂಡಬೆಟ್ಟು, ನಲ್ಲೂರು ಮೊದಲಾದ ಪ್ರದೇಶಗಳ ಪ್ರಾಥಮಿಕ ಶಾಲೆಗಳಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಜನಪ್ರಿಯ ಶಿಕ್ಷಕರಾಗಿ ನಿವೃತ್ತಿ ಹೊಂದಿದ್ದರು. ಶಿಸ್ತು, ಪ್ರಾಮಾಣಿಕತೆ ಮತ್ತು ಮಮತೆಯ ಸಂಯೋಜನೆಯೇ ಅವರ ವ್ಯಕ್ತಿತ್ವದ ವಿಶೇಷತೆಯಾಗಿತ್ತು.ಇವರು ಮಾಜಿ ಕೇಂದ್ರ ಸಚಿವರಾದ Dhananjaya Kumar ಅವರ ಬಂಧುತನ ಹೊಂದಿದ್ದರು. ಪತ್ನಿ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದು, ಇಬ್ಬರು ಪುತ್ರರು…
ಮಂಗಳೂರಿನ ಶಿಖಾ ಸುಶೀಲ್ ಪ್ರತಿಷ್ಟಿತ ಹಿಸ್ನಾ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಶನಿವಾರ ರಾತ್ರಿ ಮಂಗಳೂರಿನ ಮಿಲಾಗ್ರಿಸ್ ಸಭಾಭವನದಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಶಿಖಾ ಸುಶೀಲ್ ಇವರನ್ನ ವಿಜೇತರೆಂದು ಘೋಷಿಸಲಾಯಿತು. ಸೆರೆನಾ ಎವ್ಜಿನ್ ಪ್ರಥಮ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡರೆ ಫೇ ಮಾರ್ಟಿಸ್ ದ್ವಿತೀಯ ರನ್ನರ್ ಅಪ್ ಪ್ರಶಸ್ತಿಗೆ ಭಾಜನಾರದರು. ದೇಶ ವಿದೇಶಗಳಿಂದ ಹೆಚ್ಚಿನ ಸ್ಪರ್ಧಿಗಳು ಭಾಗವಹಿಸಿದ್ದ ಈ ಸೌಂದರ್ಯ ಸ್ಪರ್ಧೆಯಲ್ಲಿ ದ್ವಿತೀಯ ಹಂತಕ್ಕೆ ಇಪ್ಪತ್ತೈದು ಸ್ಪರ್ಧಿಗಳು ಆಯ್ಕೆಯಾಗಿದ್ದರು. ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಆತ್ಮಸ್ಥೈರ್ಯ, ಸ್ವ ಪರಿಚಯಿಸುವಿಕೆ, ರೇಂಪ್ ವಾಕ್, ಪ್ರಶ್ನೋತ್ತರಿ, ಹಾಗೂ ಎಕ್ಸ್ ಫಾಕ್ಟರ್ ವಿಭಾಗಳಲ್ಲಿ ಮಿಂಚಿದ ಶಿಖಾ ಸುಶೀಲ್, ಹಿಸ್ನಾ ಮಿಸ್ಸ್ ದಾಯ್ಜಿವರ್ಲ್ಡ್ ಕಿರೀಟಕ್ಕೆ ಭಾಜನರಾದರು. ಹಿಸ್ನಾ ಇಂಟರ್ ನ್ಯಾಶನಲ್ ನಿರ್ದೇಶಕರಾದ ರೊನಾಲ್ಡ್ ಪಿಂಟೊ , ಪತ್ನಿ ದೊರೊತಿ ಪಿಂಟೊ, ವಿಜೇತರನ್ನು ಕಿರೀಟದ ಜೊತೆಗೆ ತಲಾ ಮೂರು, ಎರಡು ಹಾಗೂ ಒಂದು ಲಕ್ಷದ ನಗದು ಬಹುಮಾನಗಳನ್ನು ನೀಡಿ ಗೌರವಿಸಿದರು. ಅಂತಿಮ ಸುತ್ತಿಗೆ ಪ್ರವೇಶಿಸಿದ ಇತರ ಒಂಭತ್ತು ಸ್ಪರ್ಧಿಗಳು…
ಅತೀ ಕಿರಿಯ ವಿದೂಷಿ ಎಂಬ ಅಪರೂಪದ ಸಾಧನೆಯನ್ನು ತಮ್ಮದಾಗಿಸಿಕೊಂಡಿರುವ ಕುಮಾರಿ ಶ್ರೇಯ ರಾವ್ ಸಣ್ಣಯ್ಯರ ಭರತನಾಟ್ಯ ರಂಗಪ್ರವೇಶ ಸಮಾರಂಭವು ಫೆಬ್ರವರಿ 22ರಂದು ಸಂಜೆ 5 ಗಂಟೆಗೆ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಭವ್ಯವಾಗಿ ನಡೆಯಲಿದೆ ಎಂದು ನೃತ್ಯ ಸುಧಾ (ರಿ) ಸಂಸ್ಥೆಯ ಸ್ಥಾಪಕಿ ಸೌಮ್ಯ ಸುಧೀಂದ್ರ ರಾವ್ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೇಯ ಅವರ ರಂಗಪ್ರವೇಶವು ನೃತ್ಯಪ್ರಿಯರಿಗೆ ಒಂದು ವಿಶಿಷ್ಟ ಸಂಭ್ರಮವಾಗಲಿದೆ ಎಂದು ಹೇಳಿದರು. ಕಿರಿಯ ವಯಸ್ಸಿನಲ್ಲೇ ಭರತನಾಟ್ಯದಲ್ಲಿ ಸಾಧನೆ ಮಾಡಿರುವ ಶ್ರೇಯ ಅವರ ಪ್ರತಿಭೆ ಗಮನಾರ್ಹವಾಗಿದ್ದು, ಈ ಕಾರ್ಯಕ್ರಮವು ಅವರ ಕಲಾಜೀವನದ ಮಹತ್ವದ ಮೈಲುಗಲ್ಲಾಗಲಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮಕ್ಕೆ ಆಶೀರ್ವಚನ ನೀಡಲು ಶಾಂತಲಾ ಪ್ರಶಸ್ತಿ ಪುರಸ್ಕೃತ ನಾಟ್ಯಾಚಾರ್ಯ ಉಳ್ಳಾಲ ಮೊಹನ್ ಕುಮಾರ್ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಉಪಕುಲಪತಿ ರಿವ. ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ., ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪ್ರೊಫೆಸರ್ ಕೆ. ರಾಮ್ ಮೂರ್ತಿ ರಾವ್, ಮಾಜಿ ಸಂಸದ…
ಉಡುಪಿ: ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಆದಿ ಉಡುಪಿ ಶಾಖೆಯ ಕೆನರಾ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ. ಅಲೆವೂರು ಗ್ರಾಮದ ಬನ್ನಂಜೆ ಪ್ರದೇಶದ ನಿವಾಸಿ ಅವರು ನೀಡಿದ ಲಿಖಿತ ದೂರಿನ ಮೇರೆಗೆ 19-02-2026 ರಂದು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 12/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 74ರಡಿ ಪ್ರಕರಣ ದಾಖಲಾಗಿದೆ. ದೂರುದಾರರ ಹೇಳಿಕೆಯ ಪ್ರಕಾರ, 07-02-2026ರಂದು ಸಂಜೆ ಸುಮಾರು 5.30 ಗಂಟೆ ವೇಳೆಗೆ ಸಾಲ ಸಂಬಂಧಿತ ವಿಚಾರವಾಗಿ ಕರೆದುಕೊಂಡು ಹೋಗಿ, ಕಾರಿನಲ್ಲಿ ಅಸಭ್ಯವಾಗಿ ವರ್ತಿಸಿರುವುದಾಗಿ ಆರೋಪಿಸಲಾಗಿದೆ. ಈ ಸಂಬಂಧ ಕಾರು (ನಂ: HR-59 E-8192) ಬಳಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ಸ್ವೀಕರಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ತಿಳಿದುಬರುವುದಾಗಿ ಪೊಲೀಸ್ ಮೂಲಗಳು ತಿಳಿಸಿದ್ದಾರೆ.
ಮಂಗಳೂರು: Mangaluru ನಗರ ಪೊಲೀಸ್ ಕಮಿಷನರೇಟ್ ಹಾಗೂ Udupi ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಹಲವು ಗಂಭೀರ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಅನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತನನ್ನು ಹಳೆಯಂಗಡಿ ವಿಲೇಜ್ ನಿವಾಸಿ ಸಜ್ವಾನ್ ಹುಸೈನ್ (42) ಎಂದು ಗುರುತಿಸಲಾಗಿದೆ. ಈತನ ವಿರುದ್ಧ 02 ಕೊಲೆ, 04 ಕೊಲೆಯತ್ನ, ಗ್ಯಾಂಗ್ ರೇಪ್, 05 ದರೋಡೆ, ಅಪಹರಣ, ಸುಲಿಗೆ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, ಜೈಲಿನಲ್ಲಿಯೇ ಸಹಖೈದಿಗಳ ಮೇಲೆ ಹಲ್ಲೆ, ಅಕ್ರಮ ಕೂಟ ಸೇರಿ ಹಲ್ಲೆ, ಕೊಲೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ, ದರೋಡೆಗೆ ತಯಾರಿ ಹಾಗೂ ಸಂಚು ಸೇರಿದಂತೆ ವಿವಿಧ ಗಂಭೀರ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 21 ಪ್ರಕರಣಗಳು ದಾಖಲಾಗಿವೆ.ಈತನ ವಿರುದ್ಧ Mulkhi Police Station ವ್ಯಾಪ್ತಿಯಲ್ಲಿ 2008ರಲ್ಲಿ ದಾಖಲಾಗಿದ್ದ ಪ್ರವೀಣ್ ಎಂಬವರ ಅಪಹರಣ, ದರೋಡೆ ಹಾಗೂ ಕೊಲೆ ಪ್ರಕರಣದಲ್ಲಿ ಮಾನ್ಯ Karnataka High Court ದಿನಾಂಕ…
ಮಂಗಳೂರು: ಖ್ಯಾತ ಶಿಕ್ಷಣ ತಜ್ಞ, ದೀರ್ಘದೃಷ್ಟಿಯ ಶಿಕ್ಷಣ ಸಂಸ್ಥಾಪಕ ಹಾಗೂ ಲೋಕೋಪಕಾರಿ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್ ಅವರು ಫೆಬ್ರವರಿ 17, ಮಂಗಳವಾರ ತಮ್ಮ 88ನೇ ವಯಸ್ಸಿನಲ್ಲಿ ನಿಧನರಾದರು. ಅವರ ಅಗಲಿಕೆ ಕರಾವಳಿ ಭಾಗದ ಶಿಕ್ಷಣ ಹಾಗೂ ವಾಣಿಜ್ಯ ವಲಯಕ್ಕೆ ಅಪಾರ ನಷ್ಟವಾಗಿದೆ.ಶಿಕ್ಷಣ ಕ್ಷೇತ್ರದ ಮಹತ್ವದ ದೃಷ್ಟಿಕೋನ“ಎಲ್ಲರಿಗೂ ಗುಣಮಟ್ಟದ ಹಾಗೂ ಸುಸ್ಥಿರ ಶಿಕ್ಷಣ” ಎಂಬ ಧ್ಯೇಯದೊಂದಿಗೆ ಅವರು 1988ರಲ್ಲಿ A. Shama Rao Foundation (ಎ. ಶಾಮ ರಾವ್ ಪ್ರತಿಷ್ಠಾನ)ವನ್ನು ಸ್ಥಾಪಿಸಿದರು. ಈ ಪ್ರತಿಷ್ಠಾನದ ಅಡಿಯಲ್ಲಿ ರೂಪುಗೊಂಡ Srinivas Group of Colleges ಇಂದು ರಾಜ್ಯದ ಪ್ರಮುಖ ಶೈಕ್ಷಣಿಕ ಜಾಲವಾಗಿ ಬೆಳೆದಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸಿದೆ.ಕೇವಲ ಏಳು ವಿದ್ಯಾರ್ಥಿಗಳೊಂದಿಗೆ ಆರಂಭವಾದ Srinivas College of Hotel Management ನಂತರ ಹಲವು ವೃತ್ತಿಪರ, ತಾಂತ್ರಿಕ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಾಗಿ ವಿಸ್ತರಿಸಿತು. ವೈದ್ಯಕೀಯ, ದಂತ, ನರ್ಸಿಂಗ್, ಇಂಜಿನಿಯರಿಂಗ್, ಮ್ಯಾನೇಜ್ಮೆಂಟ್, ಫಾರ್ಮಸಿ, ಶಿಕ್ಷಣ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ…
ಉಡುಪಿ: ಕರ್ನಾಟಕ ಕರಾವಳಿ ಜಿಲ್ಲೆಯ ಮೀನುಗಾರರು ಎದುರಿಸುತ್ತಿರುವ ಅಂತಾರಾಜ್ಯ ಮೀನುಗಾರಿಕಾ ಸಮಸ್ಯೆಗಳ ಕುರಿತು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಮಹಾರಾಷ್ಟ್ರ ಸರ್ಕಾರದ ಮೀನುಗಾರಿಕೆ ಮತ್ತು ಬಂದರು ಸಚಿವ ನಿತೇಶ್ ರಾಣೆ ಅವರನ್ನು ಸಚಿವಾಲಯದ ಕಚೇರಿಯಲ್ಲಿ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು. ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಾವಿರಾರು ಮೀನುಗಾರರು ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ವೇಳೆ ರಾಜ್ಯಗಳ ಗಡಿಭಾಗ ಹಾಗೂ ನಿಯಮಾವಳಿಗಳ ಬಗ್ಗೆ ಸಮನ್ವಯ ಕೊರತೆಯಿಂದಾಗಿ ಅನೇಕ ಬಾರಿ ಮಹಾರಾಷ್ಟ್ರ ಮೀನುಗಾರಿಕಾ ಇಲಾಖೆ ಪ್ರಕರಣಗಳನ್ನು ದಾಖಲಿಸಿ ಭಾರೀ ದಂಡ ವಿಧಿಸುವ ಘಟನೆಗಳು ನಡೆಯುತ್ತಿವೆ. ಇದರಿಂದ ಕರಾವಳಿ ಮೀನುಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿರುವುದನ್ನು ಶಾಸಕ ಸುವರ್ಣ ಸಚಿವರ ಗಮನಕ್ಕೆ ತಂದರು. ಅಂತಾರಾಜ್ಯ ಮಟ್ಟದಲ್ಲಿ ಸಮನ್ವಯ ವ್ಯವಸ್ಥೆ ರೂಪಿಸಿ ಇಂತಹ ಪ್ರಕರಣಗಳನ್ನು ಮರುಪರಿಶೀಲಿಸಿ ಮೀನುಗಾರರಿಗೆ ನ್ಯಾಯ ಒದಗಿಸುವಂತೆ ಮನವಿ ಸಲ್ಲಿಸಲಾಯಿತು. ಜೊತೆಗೆ ದೇಶದ ಪಶ್ಚಿಮ ಮತ್ತು ಪೂರ್ವ ಕರಾವಳಿಯ ರಾಜ್ಯಗಳ ನಡುವೆ ಸಮಗ್ರ ಸಮನ್ವಯ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
