Author: Tulunada Surya

ಉಡುಪಿ: ಉಡುಪಿ ತಾಲೂಕಿನ ನೇಜಾರು ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಸುಲೋಚನ ಅವರು ನೀಡಿದ ಗಂಭೀರ ದೂರಿಗೆ ನ್ಯಾಯ ವಿಳಂಬವಾಗುತ್ತಿರುವುದನ್ನು ಖಂಡಿಸಿ, ಪ್ರಕರಣವನ್ನು ಸಿ.ಐ.ಡಿ. ತನಿಖೆಗೆ ಒಪ್ಪಿಸಬೇಕೆಂದು ತುಳುನಾಡ ರಕ್ಷಣಾ ವೇದಿಕೆ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ಆಗ್ರಹಿಸಿದ್ದಾರೆ. ಫೆಬ್ರವರಿ 9ರಂದು ಉಡುಪಿ ಪತ್ರಿಕಾ ಭವನದಲ್ಲಿ ಸಂತ್ರಸ್ತ ಮಹಿಳೆಯ ಪರವಾಗಿ ಸಂಘಟನೆಗಳ ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮಣಿಪಾಲ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಮುಖ್ಯಸ್ಥರಿಂದ ದೌರ್ಜನ್ಯ, ಜಾತಿ ನಿಂದನೆ, ಲೈಂಗಿಕ ಕಿರುಕುಳ ಹಾಗೂ ಅಕ್ರಮ ಹಣಕಾಸು ವ್ಯವಹಾರ ನಡೆದಿದೆ ಎಂಬ ಸಂತ್ರಸ್ತೆಯ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಂತ್ರಸ್ತೆ ಮನೆ ರಿಪೇರಿಗಾಗಿ ಸಾಲ ಪಡೆಯಲು ತೆರಳಿದ ಸಂದರ್ಭದಲ್ಲಿ ಖಾತೆ ದುರುಪಯೋಗಪಡಿಸಿಕೊಂಡು ಲಕ್ಷಾಂತರ ರೂಪಾಯಿ ಅಕ್ರಮ ವ್ಯವಹಾರಕ್ಕೆ ಒತ್ತಾಯಿಸಲಾಗಿದೆ, ವಿರೋಧಿಸಿದಾಗ ಸುಳ್ಳು ಪ್ರಕರಣದ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಲಾಗಿದೆ ಹಾಗೂ ಫೆಬ್ರವರಿ 6ರಂದು ಮನೆಗೆ ನುಗ್ಗಿ ಜಾತಿ ನಿಂದನೆ ಮತ್ತು ಲೈಂಗಿಕ ಕಿರುಕುಳ…

Read More

ಮಂಗಳೂರು: ಕಾಸರಗೋಡಿನಲ್ಲಿ ದೈವದರ್ಶನಕ್ಕೆಂದು ತೆರಳಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೊಳಗಾಗಿ ನಿಧನ ಹೊಂದಿದ ದರ್ಶನ ಪಾತ್ರಿ ಜಾರಿಗೆಕಟ್ಟೆ ದಿವಾಕರ ಪೂಜಾರಿ ತಮ್ಮ ವೃತ್ತಿ ಜೀವನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ವೀರೇಂದ್ರ ಹೆಗ್ಗಡೆಯವರಿಂದ ದೀಕ್ಷೆ ಪಡೆದು, ದೈವಾರಾಧನೆ ಕ್ಷೇತ್ರ ಮತ್ತು ಸಾವಿರಾರು ಕುಟುಂಬಗಳಲ್ಲಿ ಪಂಜುರ್ಲಿ ದರ್ಶನ ಸೇವೆ ಮೂಲಕ ಜನಾನುರಾಗಿಯಾಗಿದ್ದರು. ಇವರು ಜಾರಿಗೆಕಟ್ಟೆ ಕೊರಗಜ್ಜ ಕೊರಗ ಪಂಜುರ್ಲಿ ಕ್ಷೇತ್ರದ ಧರ್ಮದರ್ಶಿಯಾಗಿ ದೇವಾರಾಧನೆ ಕ್ಷೇತ್ರದಲ್ಲಿ ಮಾದರಿ ಸೇವಕರಾಗಿ ಗುರುತಿಸಿಕೊಂಡಿದ್ದರು. ಇವರ ಮಾರ್ಗದರ್ಶನದಲ್ಲಿ ಸಾವಿರಾರು ದೈವಾರಾಧನೆ ಕ್ಷೇತ್ರ ಹಾಗೂ ಕುಟುಂಬಗಳು ಶ್ರೇಯೋಭಿವೃದ್ಧಿ ಹೊಂದಿರುತ್ತವೆ. ಜಾರಿಗೆಕಟ್ಟೆಯಲ್ಲಿರುವ ಕೊರಗಜ್ಜ ಕೊರಗ ಪಂಜುರ್ಲಿ ಕ್ಷೇತ್ರದಲ್ಲಿ ಸಾವಿರಾರು ಜಾತ್ಯಾತೀತ ಭಕ್ತರು ಆಗಮಿಸಿ ತಮ್ಮ ಅಹವಾಲು ಕೋರಿ ಪರಿಹಾರ ಕಂಡುಕೊಂಡಿದ್ದಾರೆ. ಮೃತರು ಪೋಸ್ಟಲ್ ಬ್ರಹ್ಮ ಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷರಾಗಿದ್ದು, ಇತ್ತೀಚೆಗೆ ಸಂಘದ ನೂತನ ಕಟ್ಟಡ ನಿರ್ಮಾಣದಲ್ಲೂ ಪ್ರಮುಖ ಪಾತ್ರ ವಹಿಸಿದ್ದರು. ಇವರ ನಿಧನದಿಂದ ದೈವಾರಾಧನೆ ಕ್ಷೇತ್ರದ ಮಾದರಿ ಸೇವಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ನಮ್ಮೂರು ಆಟ ಕೂಟ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷ ಮುಲ್ಕಿ ಕರುಣಾಕರ…

Read More

ಕುಂದಾಪುರ: ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಹು ಪ್ರಕರಣಗಳ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಶಶಾಂಕ್ ಶೆಟ್ಟಿ (32) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 7 ಪ್ರಕರಣಗಳು ದಾಖಲಾಗಿದ್ದು, ಹೆಬ್ರಿ, ಕಲಘಟಕಿ, ಕೋಟ ಹಾಗೂ ಬೆಂಗಳೂರು ಚಂದ್ರಲೇಔಟ್ ಠಾಣೆಗಳಲ್ಲೂ ತಲಾ ಪ್ರಕರಣಗಳಿವೆ. ಕಳ್ಳತನ, ಸುಲಿಗೆ ಹಾಗೂ ಹನಿಟ್ರ್ಯಾಪ್ ಸೇರಿದಂತೆ ಒಟ್ಟು 11 ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದಾನೆ. ನ್ಯಾಯಾಲಯವು ಈತನ ವಿರುದ್ಧ ಈಗಾಗಲೇ 12 ಬಾರಿ ವಾರಂಟ್ ಜಾರಿ ಮಾಡಿದ್ದರೂ, ಸುಮಾರು ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದನು. ಆರೋಪಿ ಪತ್ತೆಗೆ ಪೊಲೀಸರು ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಖಚಿತ ಮಾಹಿತಿಯ ಆಧಾರದಲ್ಲಿ ಫೆಬ್ರವರಿ 15ರಂದು ಕುಂದಾಪುರ ತಾಲೂಕು ಬಿದ್ಮಲ್ ಕಟ್ಟೆ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಕುಂದಾಪುರ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ ಹಾಗೂ ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಎ. ಕಾಯ್ಕಿಣಿ ಅವರ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರಾದ ನಾಸೀರ್ ಹುಸೇನ್…

Read More

ಮಂಗಳೂರು: ಕರಾವಳಿಯ ಸಾಂಸ್ಕೃತಿಕ ವೈಭವವನ್ನು ಸಮುದ್ರದ ಅಲೆಗಳೊಂದಿಗೆ ಜೋಡಿಸುವ ವಿಶಿಷ್ಟ ಪ್ರಯತ್ನವಾಗಿ “ಯಕ್ಷಧ್ರುವ ಸಮುದ್ರಯಾನ”ಕ್ಕೆ ಭಾನುವಾರ ಅಧಿಕೃತ ಚಾಲನೆ ದೊರೆಯಿತು. ಮೇ 31ರಿಂದ ಜೂನ್ 6ರವರೆಗೆ ನಡೆಯಲಿರುವ ಲಕ್ಷದ್ವೀಪ ಪ್ರಯಾಣದ ಉದ್ಘಾಟನೆ ಬಲ್ಲಾಲ್ ಭಾಗ್‌ನ ಪತ್ತುಮುಡಿ ಸೌಧದಲ್ಲಿ ನೆರವೇರಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಹಾದಾನಿ ಬರೋಡ ಶಶಿಧರ ಶೆಟ್ಟಿ ಬ್ಯಾನರ್ ಅನಾವರಣಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭವಾನಿ ಶಿಪ್ಪಿಂಗ್ ಸರ್ವಿಸಸ್, ಮುಂಬಯಿಯ ಸಂಪೂರ್ಣ ಸಹಕಾರದೊಂದಿಗೆ ಹಾಗೂ ತ್ರಿರಂಗ ಸಂಗಮ ಮುಂಬಯಿ ಸಂಯೋಜನೆಯಲ್ಲಿ ಈ ಸಮುದ್ರಯಾನವನ್ನು ಆಯೋಜಿಸಲಾಗಿದೆ. ಈ ಕುರಿತು ಮಾತನಾಡಿದ ಬರೋಡ ಶಶಿಧರ ಶೆಟ್ಟಿ, “ಫೌಂಡೇಶನ್ ಸದಸ್ಯರು, ಊರಿನ ಹಿತೈಷಿಗಳು, ಮುಂಬಯಿ ಹಾಗೂ ವಿದೇಶದ ಅಭಿಮಾನಿಗಳನ್ನು ಒಂದೇ ವೇದಿಕೆಯಲ್ಲಿ — ಹಡಗಿನಲ್ಲೇ — ಸೇರಿಸಿ ಯಕ್ಷಗಾನ, ತಾಳಮದ್ದಲೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದು ಈ ಯಾನ ವಿಶೇಷತೆ” ಎಂದರು. ಮೇ 31ರಂದು ಮಂಗಳೂರಿನಿಂದ ಮುಂಬೈಗೆ ತೆರಳಿ, ಜೂನ್ 1ರಂದು ಹಡಗಿನಲ್ಲಿ ಲಕ್ಷದ್ವೀಪಕ್ಕೆ ಪ್ರಯಾಣಿಸಿ, ಜೂನ್ 6ರಂದು ಮಂಗಳೂರಿಗೆ ವಾಪಸ್ಸಾಗುವ…

Read More

ಮಂಗಳೂರು ನಗರದ ಹೃದಯಭಾಗದಲ್ಲಿ ಹೊಸತನದ ಸೊಗಡಿನಿಂದ ಆರಂಭಗೊಂಡಿರುವ “MFC CHAI Bank” ಸಂಸ್ಥೆಯ ಭವ್ಯ ಉದ್ಘಾಟನಾ ಸಮಾರಂಭವು ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನೆರವೇರಿತು. ಸಮಾಜದ ವಿವಿಧ ಕ್ಷೇತ್ರಗಳ ಮುಖಂಡರು, ರಾಜಕೀಯ ನಾಯಕರು ಹಾಗೂ ಸಿನಿ ಕ್ಷೇತ್ರದ ಗಣ್ಯರು ಭಾಗವಹಿಸಿ ಶುಭಾಶಯ ಕೋರಿದರು.ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ Ivan D’Souza ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, “ಇಂತಹ ಹೊಸ ಉದ್ಯಮಗಳು ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ನಗರದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತವೆ. MFC CHAI Bank ಉತ್ತಮ ಗುಣಮಟ್ಟದ ಸೇವೆಯ ಮೂಲಕ ಜನಮನ ಗೆಲ್ಲಲಿ” ಎಂದು ಶುಭ ಹಾರೈಸಿದರು. ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ Satish Kumpala ಮಾತನಾಡಿ, ಸ್ಥಳೀಯ ವ್ಯಾಪಾರ ವಲಯದಲ್ಲಿ ಇಂತಹ ನವೀನ ಪ್ರಯತ್ನಗಳು ಸ್ವಾಗತಾರ್ಹ ಎಂದು ಅಭಿಪ್ರಾಯಪಟ್ಟರು. ತುಳುನಾಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ Yogish Shetty Jappu ಸಂಸ್ಥೆಯ ಮುಂದಿನ ಬೆಳವಣಿಗೆಗೆ ಹಾರೈಕೆ ಸಲ್ಲಿಸಿದರು.ಮಾಜಿ ಮೇಯರ್‌ಗಳಾದ Divakar Pande ಹಾಗೂ Ashraf, ಮಾಜಿ ಕಾರ್ಪೋರೇಟರ್ Latif…

Read More

ಮಂಗಳೂರು: ತನ್ನ ಪತ್ನಿ ಮಾಜಿ ಸಂಸದರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿಸಿದ ಆರೋಪದಲ್ಲಿ ಪತಿಗೆ ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ 3ನೇ ನ್ಯಾಯಾಲಯ ತೀರ್ಪು ನೀಡಿದೆ. ಮುಂಬೈ ನಗರದ ಥಾಣೆ ಜಿಲ್ಲೆಯ ಮೀರಾ ರೋಡ್ ಈಸ್ಟ್ ನಿವಾಸಿ ಸತೀಶ್ ಶೆಟ್ಟಿ ಶಿಕ್ಷೆಗೆ ಒಳಗಾದ ಆರೋಪಿ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸುರೇಶ್ ಇ.ಎಸ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 509ರಡಿ ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ 5,000 ರೂಪಾಯಿ ದಂಡ ವಿಧಿಸಿದ್ದಾರೆ. ದಂಡವನ್ನು ಪಾವತಿಸಲು ವಿಫಲವಾದಲ್ಲಿ ಇನ್ನೂ ಒಂದು ತಿಂಗಳ ಹೆಚ್ಚುವರಿ ಸಾದಾ ಶಿಕ್ಷೆಯನ್ನು ಅನುಭವಿಸಬೇಕೆಂದು ನ್ಯಾಯಾಲಯ ಸೂಚಿಸಿದೆ. ಪ್ರಕರಣದ ಹಿನ್ನೆಲೆ ಸಂತ್ರಸ್ತೆಯ ದೂರಿನ ಪ್ರಕಾರ, ವಿವಾಹದ ನಂತರ ದಂಪತಿಗಳ ನಡುವೆ ಕುಟುಂಬ ಕಲಹ ಉಂಟಾಗಿದ್ದು, ಮಕ್ಕಳಾದ ಬಳಿಕ ಪತಿ ಮಾನಸಿಕ…

Read More

ಮಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಡಿಸೆಂಬರ್‌ನಲ್ಲಿ ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯ ಸೀನಿಯರ್ ಗ್ರೇಡ್ ವಿಭಾಗದಲ್ಲಿ ಮಂಗಳೂರಿನ ಶಾರದ ವಿದ್ಯಾಲಯ ವಿದ್ಯಾರ್ಥಿನಿ ಚಿನ್ಮಯಿ ಎಸ್ ಅವರು ಅದ್ಭುತ ಸಾಧನೆಗೈದಿದ್ದಾರೆ. 536 ಅಂಕಗಳು (ಶೇ. 89.33) ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಚಿನ್ಮಯಿ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ರಾಜ್ಯ ಮಟ್ಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸಿದ್ದಾರೆ. ಅವರ ಈ ಸಾಧನೆ ಶಾಲೆಗೆ ಹಾಗೂ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಚಿನ್ಮಯಿ ಎಸ್ ಅವರು ಮಂಗಳೂರಿನ ಅತ್ತವರ ಬಾಬುಗುಡ್ಡೆ ನಿವಾಸಿಗಳಾದ ಶಾಂತಪ್ಪ ಯು ಮತ್ತು ನೀತಾ ದಂಪತಿಯ ಪುತ್ರಿಯಾಗಿದ್ದಾರೆ. ಅವರ ಈ ಸಾಧನೆಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Read More

ಮಂಗಳೂರು ಕೋಣಾಜೆ, ಪೆ, 12– ಪ್ರಪಂಚದಲ್ಲಿಯೇ ಶ್ರೇಷ್ಠ ಸಂವಿಧಾನ ನೀಡಿದವರು ಡಾ. ಬಿ ಆರ್ ಅಂಬೇಡ್ಕರ್ ರವರು ಎಂದು ಮಹಾತ್ಮ ಪ್ರೊ ಬಿ ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ತರೀಕೆರೆ ಎನ್ ವೆಂಕಟೇಶ್ ಹೇಳಿದರು. ಅವರು ಇಂದು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್ ಉಲ್ಲಾಳ ಇವರು ಮಂಗಳೂರಿ ಕೊಣಾಜೆ ಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಭಾಷಣ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಭಾರತದಲ್ಲಿ ಅಂದಿನ ಕಾಲದಲ್ಲಿ ಅತಿ ಹೆಚ್ಚು ಪದವಿಗಳನ್ನು ಪಡೆದು ವ್ಯಾಸಂಗ ಮಾಡಿದವರು, ಮಹಿಳೆಯರ ಮೇಲಿನ ಶೋಷಣೆ ಅಸಮಾನತೆಯ ವಿರುದ್ಧ ಹೋರಾಟ ಮಾಡಿದ್ದ ಅಂಬೇಡ್ಕರ್ ರವರಂತೆ ಮಕ್ಕಳು ಹೆಚ್ಚು ವಿದ್ಯಾಭ್ಯಾಸ ಮಾಡಬೇಕು, ಉನ್ನತ ಸ್ಥಾನಮಾನ ಪಡೆದು ದೇಶಕ್ಕೆ ಕೀರ್ತಿ ತರಬೇಕು ಎಂದು ಹೇಳಿದರು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ…

Read More

ಮಂಗಳೂರು: ಹಳೆ ತಲೆಮಾರಿನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಪಟೇಲ ದಿ.ಬೊಂಡಾಲ ಜನಾರ್ಧನ ಶೆಟ್ಟಿ ಮತ್ತು ಅವರ ಪುತ್ರ ಹವ್ಯಾಸಿ ಯಕ್ಷಗಾನ ಕಲಾವಿದ, ನಿವೃತ್ತ ಭೂಮಾಪನ ಅಧಿಕಾರಿ ದಿ.ಬೊಂಡಾಲ ರಾಮಣ್ಣ ಶೆಟ್ಟರ ಹೆಸರಿನಲ್ಲಿ ನೀಡಲಾಗುವ ಬೊಂಡಾಲ ಪ್ರಶಸ್ತಿಗೆ ಕಟೀಲು ಮೇಳದ ಹಿರಿಯ ವೇಷಧಾರಿ ಲಕ್ಷ್ಮಣ ಶೆಟ್ಟಿ ತಾರೆಮಾರ್ ಆಯ್ಕೆಯಾಗಿದ್ದಾರೆ. ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟೀಲು ಮೇಳದಲ್ಲಿ ಸೇವೆಸಲ್ಲಿಸಿದ ಕಲಾವಿದರಿಗಾಗಿಯೇ ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ನೀಡುತ್ತಿರುವ ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ಜಾನಪದ,ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸಂಚಾಲಕರಾಗಿರುವ ಆಯ್ಕೆಸಮಿತಿ 2025-26 ನೇ ಸಾಲಿಗೆ ಲಕ್ಷ್ಮಣ ಶೆಟ್ಟರ ಹೆಸರನ್ನು ಶಿಫಾರಸು ಮಾಡಿದೆ. ಪ್ರಶಸ್ತಿಯು ರೂ.10,000/- ನಗದು,ಶಾಲು,ಸ್ಮರಣಿಕೆ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಲಕ್ಷ್ಮಣಶೆಟ್ಟಿ ತಾರೆಮಾರ್:ತೆಂಕುತಿಟ್ಟು ಯಕ್ಷಗಾನ ರಂಗದ ಪ್ರತಿಭಾನ್ವಿತ ಕಲಾವಿದರಾದ ಲಕ್ಷ್ಮಣ ಶೆಟ್ಟಿ ಅವರು ಬೆಳ್ತಂಗಡಿ ತಾಲೂಕಿನ ತಾರೆಮಾರಿನಲ್ಲಿ ಕೋಚಪ್ಪ ಶೆಟ್ಟಿ ಮತ್ತು ತುಂಗಮ್ಮ ದಂಪತಿಯ ಮಗನಾಗಿ 1978 ಸೆಪ್ಟೆಂಬರ್…

Read More

ಕಾರ್ಕಳ:ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಟ ನಡೆಸುತ್ತಿದ್ದ ಅಡ್ಡೆಗೆ ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿ 8 ಮಂದಿಯನ್ನು ಬಂಧಿಸಿರುವ ಘಟನೆ ಫೆಬ್ರವರಿ 7ರ ರಾತ್ರಿ ನಡೆದಿದೆ. ಖಚಿತ ಮಾಹಿತಿಯ ಆಧಾರದಲ್ಲಿ ಫೆಬ್ರವರಿ 7ರಂದು ರಾತ್ರಿ ಸುಮಾರು 8.45ರ ವೇಳೆಗೆ, ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ಬೈಲ್ ಬೆಟ್ಟು ಪ್ರದೇಶದಲ್ಲಿರುವ ಸಾದ್ವಿನ್ ಎಂಬುವರ ಮನೆಯ ಮೊದಲ ಮಹಡಿಯಲ್ಲಿ ಹಣವನ್ನು ಪಣವಾಗಿರಿಸಿ ಇಸ್ಪೀಟ್ ಎಲೆಗಳಿಂದ ‘ಅಂದರ್–ಬಾಹರ್’ ಜುಗಾರಿ ಆಟ ನಡೆಯುತ್ತಿದೆ ಎಂಬ ಮಾಹಿತಿ ಪಡೆದ ಕಾರ್ಕಳ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಮುರುಳೀಧರ ನಾಯ್ಕ್ ನೇತೃತ್ವದ ತಂಡ ದಾಳಿ ನಡೆಸಿತು. ದಾಳಿಯ ಸಂದರ್ಭದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳದಿಂದ 22,690 ರೂ. ನಗದು, 52 ಬಳಸಿದ ಇಸ್ಪೀಟ್ ಎಲೆಗಳು, 16 ಹೊಸ ಇಸ್ಪೀಟ್ ಎಲೆಗಳ ಪ್ಯಾಕೆಟ್‌ಗಳು, 10 ಪ್ಲಾಸ್ಟಿಕ್ ಕುರ್ಚಿಗಳು, 4 ಪ್ಲಾಸ್ಟಿಕ್ ಮೇಜುಗಳು ಹಾಗೂ 9 ಮೊಬೈಲ್ ಫೋನ್‌ಗಳನ್ನು…

Read More