- ಕರಂಬಾರಿನಲ್ಲಿ ನಾಗರಿಕ ಸೇವಾ ಸಮಿತಿ ಭವ್ಯವಾಗಿ ನೆರವೆರಿದ 12ನೇ ವಾರ್ಷಿಕೋತ್ಸವ
- ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಪಾತ ಪ್ರಕರಣ: ಶಿಕ್ಷಕ ಬಂಧನ
- ಹೆಬ್ರಿ: ರಸ್ತೆ ದಾಟುವ ವೇಳೆ ಮಿನಿ ಗೂಡ್ಸ್ ಡಿಕ್ಕಿ – ವಿದ್ಯಾರ್ಥಿನಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ ಸ್ಥಳೀಯರಿಂದ ಪ್ರತಿಭಟನೆ
- ಮಂಗಳೂರು: ಪ್ರೀತಿಯಲ್ಲಿ ಮನಸ್ತಾಪ – 22ರ ಯುವಕ ಆತ್ಮಹತ್ಯೆ, ಯುವತಿಯ ವಿರುದ್ಧ ಆರೋಪ
- ಉಡುಪಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಅಗ್ರ ಸಾಧನೆಗೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಅಭಿನಂದನೆ
- ಮಂಗಳೂರು :ಏಪ್ರಿಲ್ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವದ ಅಧಿವೇಶನ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ
- ಬೆಂಗಳೂರು–ಮೈಸೂರು ಮಾರ್ಗಕ್ಕೆ ಇನ್ನಷ್ಟು ವೇಗ ಮತ್ತು ಸುಧಾರಣೆ : ಕುಮಾರಸ್ವಾಮಿ ಮೈಸೂರು ವಿಭಾಗದಲ್ಲಿ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿದೆ: ಸೋಮಣ್ಣ
- ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲನೆ ಕಡ್ಡಾಯ: ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ ಎಚ್ಚರಿಕೆ
Author: Tulunada Surya
ಉಡುಪಿ: ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೋಡಗಿರುವ ಮೂವರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ. ಅವರಿಂದ ನಗದು, ಕಾರು ಮತ್ತು ಮೊಬೈಲ್ ಸೇರಿ ಒಟ್ಟು 12,16,700 ರೂ. ಮೊತ್ತದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು ಕುಂದಾಪುರ ಕೊರ್ಗಿಯ ಸಂದೀಪ್ (34), ಕುಂದಾಪುರ ಬೇಳೂರಿನ ಶ್ರೀರಾಜ್ (33) ಹಾಗೂ ಮೊಳಹಳ್ಳಿಯ ಮಧುಕರ್ (44) ಎಂದು ಗುರುತಿಸಲಾಗಿದೆ. ಇವರು ಐಪಿಎಲ್ ಪಂದ್ಯಗಳ ಅಕ್ರಮವಾಗಿ ಬೆಟ್ಟಿಂಗ್ ದಂಧೆ ನಡೆಸುತ್ತಾ, ಇತರೇ ಬೇರೆ ಬೇರೆ ವ್ಯಕ್ತಿಗಳಿಗೆ ಕರೆ ಮಾಡಿ ಅವರವರ ತಂಡ ತಿಳಿಸಿ ಅವರಿಂದ ಹಣವನ್ನು ಸಂಗ್ರಹ ಮಾಡುತ್ತಾ ಅವರಿಗೆ ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ನ್ನು ಡೌನ್‌ಲೋಡ್ ಮಾಡಿಕೊಟ್ಟು ಅವರಿಂದ ಹಣವನ್ನು ಸಂಗ್ರಹಿಸುತಿದ್ದರು ಎಂದು ಮಾಹಿತಿ ತಿಳಿದು ಬಂದಿದೆ. ಈ ಮೂವರು ಸಂಜೆ ಅಜ್ಜರಕಾಡಿನ ಭುಜಂಗ ಪಾರ್ಕ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಪಾರ್ಕರ್ ಎಂಬ ಬೆಟ್ಟಿಂಗ್ ಮೊಬೈಲ್ ಆ್ಯಪ್ ಸಹಾಯದಿಂದ ತಮ್ಮ ಸ್ಮಾರ್ಟ್ ಫೋನ್ ಮೂಲಕ ಐಪಿಎಲ್‌ನಲ್ಲಿ ಹೈದರಾಬಾದ್‌ನ ಸನ್‌ರೈಸರ್ ಹಾಗೂ ಮುಂಬಯಿ ಇಂಡಿಯನ್ಸ್ ತಂಡಗಳ ನಡುವೆ ನಡೆದ…
ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರಗಾಮಿ ದಾಳಿ ಮಾನವೀಯತೆಯ ಮೇಲೆ ನಡೆದ ಘೋರ ದಾಳಿಯಾಗಿದೆ. ತುಳುನಾಡ ರಕ್ಷಣಾ ವೇದಿಕೆ ಇದನ್ನು ತೀವ್ರ ಕಠಿಣವಾಗಿ ಖಂಡಿಸುತ್ತದೆ. *ಕಾಶ್ಮೀರ ಕಣಿವೆ ಸಹಜತೆಗೆ ಮರಳಿದೆ ಎಂಬ ಧೈರ್ಯ ವಿಶ್ವಾಸ ಹೆಚ್ಚಾಗುತ್ತಿರುವ ಮಧ್ಯೆಯೇ ಈ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. ನಿಸ್ಸಹಾಯಕ ಮಹಿಳೆ ಮತ್ತು ಮಕ್ಕಳೆದುರು ಅವರ ತಂದೆಯನ್ನು , ಪತ್ನಿ ಮುಂದೆ ಗಂಡಂದಿರನ್ನು ಕೊಲ್ಲುವವರು ಮನುಷ್ಯರೇ ಅಲ್ಲ. ಕಾಶ್ಮೀರದಲ್ಲಿ ಪ್ರವಾಸೋದ್ಯಮ ನಂಬಿ ಬದುಕುವ ಜನರು ಇಂತಹ ಘಟನೆಯಿಂದ ಕಂಗಾಲಾಗಿದ್ದಾರೆ. ಬದುಕಿನ ಕೆಲ ದಿನಗಳನ್ನು ಸಂತೋಷ ಮೋಜು ಮಾಡಲು ದೇಶ ವಿದೇಶಗಳಿಂದ ಬರುವ ಭೂಲೋಕದ ಸ್ವರ್ಗ ಎಂಬ ಖ್ಯಾತಿಯ ಕಾಶ್ಮೀರದಲ್ಲಿ ಮುಂದೆಂದೂ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೇಂದ್ರ ಸರಕಾರ ಕೈಗೊಳ್ಳಬೇಕೆಂದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಆಗ್ರಹಿಸಿದರು ಎಂದು ತುಳುನಾಡ ರಕ್ಷಣಾ ವೇದಿಕೆ ಪ್ರಕಟನೆ ತಿಳಿಸಿದೆ
ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಗ್ರಾಮ ಪಂಚಾಯತ್ ಕೋಟ ತಟ್ಟು, ಉಸಿರು ಕೋಟ, ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಬ್ರಹ್ಮಾವರ, ಗೀತಾನಂದ ಪೌಂಡೇಶನ್ ಮಾಣೂರು ಪಡುಕೆರೆ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟ ತಟ್ಟು ಆಸರೆಯಲ್ಲಿ ಮೇ 4 ರಂದು ಕೋಟಾದ ಕಾರಂತ ಥೀಮ್ ಪಾರ್ಕ್ ನಲ್ಲಿ ನಡೆಯುವ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಂಘಟಕ, ಕುಂದಾಪ್ರ ಕನ್ನಡ ಹರಿಕಾರ, ಶಿಕ್ಷಕ ಪ್ರಖರ ವಾಗ್ಮಿ ನಾಡು ನುಡಿ ನೆಲ ಜಲದ ಬಗ್ಗೆ ಕಾರ್ಯವೆಸಗುತ್ತಿರುವ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ಆಯ್ಕೆಯಾಗಿರುತ್ತಾರೆ. ಎಂದು ಪ್ರಕಟಣೆಯಲ್ಲಿ ಕಾರ್ಯಧ್ಯಕ್ಷರಾದ ಆನಂದ ಸಿ.ಕುಂದರ್, ಅಧ್ಯಕ್ಷರಾದ ಸತೀಶ್ ಬಾರಿಕೆರೆ, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪಿ.ಡಿ.ಒ ರವೀಂದ್ರ ರಾವ್ ತಿಳಿಸಿದ್ದಾರೆ.
ಮಂಗಳೂರು :- ಅಗ್ನಿ ಸುರಕ್ಷತಾ ಸೇವಾ ಸಪ್ತಾಹದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಸಭಾಂಗಣದಲ್ಲಿ ಬೆಂಕಿ ಅವಘಡದಿಂದ ಆಗುವ ದುಷ್ಪರಿಣಾಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಮತ್ತು ಪ್ರಾತ್ಯಕ್ಷಿಕೆಯನ್ನು ಅಗ್ನಿಶಾಮಕ ಇಲಾಖೆ ವತಿಯಿಂದ ನೀಡಲಾಯಿತು. ಅಗ್ನಿ ಸುರಕ್ಷಿತ ಭಾರತವನ್ನು ಹುಟ್ಟು ಹಾಕಲು ಒಂದಾಗೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು ಮತ್ತು ಜಾಗೃತಿ ಮೂಡಿಸಲು ಕರ ಪತ್ರಗಳನ್ನು ಹಂಚಲಾಯಿತು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜೆಸಿಂತಾ ಉಪಸ್ಥಿತರಿದ್ದರು.
ಮಂಗಳೂರು : ಕನ್ನಡ ಚಿತ್ರ ನಟ ಡಾ. ರಾಜ್‍ಕುಮಾರ್ ಅವರು ತಾನು ನಟಿಸಿದ ಚಲನಚಿತ್ರಗಳಲ್ಲಿ ಅಥವಾ ವೈಯಕ್ತಿಕ ಬದುಕಿನಲ್ಲಿ ಸಮಾಜಕ್ಕೆ ಕೆಡುಕನ್ನುಂಟು ಮಾಡುವ ಯಾವುದೇ ಅಂಶಗಳನ್ನು ತೋರಿಸದೆ, ತನ್ನ ಬದುಕನ್ನೇ ಆದರ್ಶವನ್ನಾಗಿ ತೋರಿಸಿದ್ದಾರೆ ಎಂದು ಕರ್ನಾಟಕ ಗೇರು ಅಭಿವೃಧ್ದಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಪಿ ದಯಾನಂದ ಪೈ ಪಿ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಇವರ ಸಹಕಾರದೊಂದಿಗೆ ಕನ್ನಡ ಚಿತ್ರನಟ ಡಾ. ರಾಜಕುಮಾರ್ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಅಪ್ರತಿಮ ನಟನಾಗಿ ಅವರು ಸಮಾಜಕ್ಕೆ ನೀಡಿದ ಸಂದೇಶ ಸ್ಮರಣೀಯ. ರಾಜಕುಮಾರ್ ಅವರನ್ನು ಸಮಾಜದ ಮಾದರಿ ವ್ಯಕ್ತಿ ಅಂದರೆ ತಪ್ಪಾಗಲಾರದು. ಅವರ ಜೀವನ ಚರಿತ್ರೆಯನ್ನು ಇಂದಿನ ಯುವ ಪೀಳಿಗೆ ಸ್ಮರಿಸುವುದು ಬಹಳ ಅತ್ಯಗತ್ಯ. ಅವರ ಆದರ್ಶ, ಜೀವನ ಮೌಲ್ಯಗಳು ನಮ್ಮಲ್ಲಿ ಅಳವಡಿಸಿಕೊಂಡರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು…
ಮಂಗಳೂರು :- ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ದಿನಾಂಕ 24/04/2025ರಂದು ಸಂಭವಿಸುತ್ತಿರುವ ಶೂನ್ಯ ನೆರಳಿನ ವಿದ್ಯಮಾನವನ್ನು ವೀಕ್ಷಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಈ ವಿದ್ಯಮಾನದ ಬಗ್ಗೆ ವಿವರಣೆಯನ್ನು ಮತ್ತು ಅದಕ್ಕೆ ಸಂಬಂಧಪಟ್ಟ ಪ್ರಾತ್ಯಕ್ಷಿಕೆಗಳನ್ನು ಆಸಕ್ತ ಸಂದರ್ಶಕರಿಗೆ ಏರ್ಪಡಿಸಲಾಗಿತ್ತು. ಸಂದರ್ಶಕರು ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿ ಸಂದೇಹಗಳನ್ನು ಪರಿಹರಿಸಿಕೊಂಡರು. ಆದರೆ ಶೂನ್ಯ ನೆರಳಿನ ವಿದ್ಯಮಾನ ಸಂಭವಿಸುತ್ತಿರುವ ಸಮಯದಲ್ಲಿ ಮೋಡ ಕವಿದ ವಾತಾವರಣವಿದ್ದ ಕಾರಣ ಅದರ ಅನುಭವವನ್ನು ಪಡೆಯಲು ಸಾಧ್ಯವಾಗಲಿಲ್ಲ. ವೀಕ್ಷಕರಿಗೆ ಸೋಲಾರ್ ಫಿಲ್ಟರ್ ಅಳವಡಿಸಿದ ದೂರದರ್ಶಕದ ಮೂಲಕ ಸೌರಕಲೆಗಳನ್ನು ವೀಕ್ಷಿಸಲು ಅನುವು ಮಾಡಿಕೊಡಲಾಯಿತು.ಬೆಂಗಳೂರಿನ ಜವಾಹರ್‍ಲಾಲ್ ನೆಹರು ತಾರಾಲಯ, ಚೆನ್ನೈನ ಪೆರಿಯಾರ್ ವಿಜ್ಞಾನ ಮತ್ತು ತಂತ್ರಜ್ಞಾನ ಮ್ಯೂಸಿಯಂ ಮತ್ತು ಇನ್ನಿತರ ಕೇಂದ್ರಗಳ ಸಮನ್ವಯತೆಯೊಂದಿಗೆ ಭೂಮಿಯ ಸುತ್ತಳತೆ, ಭೂಮಿ ತಿರುಗುವ ವೇಗ ಮತ್ತು ನಿಜ ಉತ್ತರ ದಿಕ್ಕುಗಳನ್ನು ಕಂಡುಹಿಡಿಯುವ ಪ್ರಯೋಗಗಳನ್ನು ಕೈಗೊಳ್ಳಲಾಗಿತ್ತು.ಕೇಂದ್ರದ ವೈಜ್ಞಾನಿಕ ಅಧಿಕಾರಿ ವಿಘ್ನೇಶ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು ಹಾಗೂ ಕೇಂದ್ರದ ಸಿಬ್ಬಂದಿ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸುವಲ್ಲಿ ಸಹಕರಿಸಿದರು.
“ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ ಲಾಡ್ ಅವರ ಮುಖಂಡತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ ಎಂದು ತಿಳಿಸಿದರು. ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ…
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನ ಬೈಸರನ್ ಕಣಿವೆ ಪ್ರದೇಶದಲ್ಲಿ ನಡೆದ ಶಂಕಿತ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ಜಮ್ಮು ಕಾಶ್ಮೀರದಲ್ಲಿ ಕರ್ನಾಟಕ ರಾಜ್ಯದ ಇಬ್ಬರು ಸೇರಿ 27 ಪ್ರವಾಸಿಗರು ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. 12 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ‘ಮಿನಿ-ಸ್ವಿಟ್ಟರ್ಲೆಂಡ್’ ಎಂದು ಕರೆಯಲ್ಪಡುವ ಅನಂತನಾಗ್ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣದಲ್ಲಿ, ಪ್ರವಾಸಿ ಋತುವಿನ ಗರಿಷ್ಠ ಸಮಯದಲ್ಲಿ ಈ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರ ಮೂಲದ ಭಯೋತ್ಪಾದಕ ಗುಂಪು ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರು ಹರಿದು ಬರುತ್ತಿರುವ ಮತ್ತು ಅಮರನಾಥ ಯಾತ್ರೆ ಜುಲೈನಲ್ಲಿ ಪ್ರಾರಂಭವಾಗಲಿರುವ ಸಮಯದಲ್ಲಿ ಈ ಘಟನೆ ನಡೆದಿದೆ. ರೆಸಿಸ್ಟೆನ್ಸ್ ಫ್ರಂಟ್ ಎಂಬುದು ಲಷ್ಕರ್-ಎ-ತೈಬಾ ಒಂದು ಶಾಖೆಯಾಗಿದ್ದು, ಆಗಸ್ಟ್ 2019 ರಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಹೊರಹೊಮ್ಮಿದ ಸಂಘಟನೆ. 370 ನೇ ವಿಧಿಯ ರದ್ದಿತಿಯಾದ ಆರು ತಿಂಗಳೊಳಗೆ, ಲಷ್ಕರ್-ಎ-ತೈಬಾ ಸೇರಿದಂತೆ ವಿವಿಧ ಬಣಗಳ ಉಗ್ರಗಾಮಿಗಳನ್ನು ಸಂಯೋಜಿಸುವ…
ಕಾರ್ಕಳ: ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆಗಾಗಿ ಹಿರಿಯಡ್ಕದ ಸೌಮ್ಯ ಕ್ಲಿನಿಕ್ ನ ಡಾ. ಶೋಭಿತಾ ಅವರು ಈ ವರ್ಷ ‘ಕರ್ನಾಟಕ ಮಹಿಳಾ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಕರ್ನಾಟಕ ಪ್ರೆಸ್ ಕ್ಲಬ್ ನೀಡಲಿದ್ದು, ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಗೌರವಿಸುವ ಉದ್ದೇಶದಿಂದ ಈ ಮಾನ್ಯತೆ ನೀಡಲಾಗುತ್ತಿದೆ. ಏಪ್ರಿಲ್ 24ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಖ್ಯಾತ ಚಲನಚಿತ್ರ ನಟಿ ಶೃತಿ ಭಾಗವಹಿಸಲಿದ್ದಾರೆ. ಪ್ರಶಸ್ತಿಗೆ ಆಯ್ಕೆ ಯಾದ ಶೋಭಿತ ರವರಿಗೆ ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ರವೀಂದ್ರ ಮತ್ತು ಜಿಲ್ಲಾ ಘಟಕ ಅಧ್ಯಕ್ಷ ಡಾ ಸಂದೀಪ್ ಸನಿಲ್ ಶುಭ ಹಾರೈಸಿದ್ದಾರೆ.
ಮಂಗಳೂರು ; ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ಬಂದು ಕೇರಳದ ಉಪ್ಪಳದಲ್ಲಿ ವಾಸವಾಗಿದ್ದ ಯುವತಿಯನ್ನು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಏಪ್ರಿಲ್ 16 ರ ರಾತ್ರಿ ಈ ಹೇಯ ಕೃತ್ಯ ನಡೆದಿದ್ದು, ಅಟೋ ಚಾಲಕ ಸೇರಿ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಿಥುನ್ ಕುಂಪಲ,ಮನೀಷ್ ,ಪ್ರಭುರಾಜ್ ಎಂದು ತಿಳಿದುಬಂದಿದೆ. ಉಪ್ಪಳದಲ್ಲಿ ವಾಸವಾಗಿದ್ದ ಯುವತಿ ಸ್ನೇಹಿತನ ಜೊತೆಯಲ್ಲಿ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದಿದ್ದು, ಇಲ್ಲಿ ಇಬ್ಬರಿಗೂ ಜಗಳವಾಗಿ ಬೇರೆ ಬೇರೆಯಾಗಿದ್ದಾರೆ. ಈ ವೇಳೆ ಜಗಳದಲ್ಲಿ ಯುವತಿಯ ಮೊಬೈಲ್ ಪುಡಿಯಾಗಿದ್ದು ದಾರಿ ತೋಚದೆ ಕಂಗಾಲಾಗಿದ್ದಾಳೆ. ಇದೇ ಸಮಯದಲ್ಲಿ ಬಗಂಬಿಲದ ಅಟೋ ಚಾಲಕನೊಬ್ಬ ಆಕೆಗೆ ಸಹಾಯ ಮಾಡಲು ಮುಂದಾಗಿದ್ದು, ಆಕೆಯ ಮೊಬೈಲ್ ರಿಪೇರಿ ಮಾಡಲು ಸಹಾಯ ಮಾಡಿದ್ದಾನೆ. ಬಳಿಕ ಆಕೆಗೆ ತಿನ್ನಲು ಆಹಾರ ತೆಗೆದುಕೊಟ್ಟಿದ್ದಾನೆ. ಇದರಿಂದ ಆತನ ಮೇಲೆ ವಿಶ್ವಾಸದಿಂದ ತನ್ನನ್ನು ರೈಲ್ವೇ ಸ್ಟೇಷನ್ ತನಕ ಬಿಡುವಂತೆ ಕೋರಿಕೊಂಡಿದ್ದಾಳೆ. ಇದಾದ ಬಳಿಕ ಅಟೋ ಏರಿದ ಯುವತಿ ಪ್ರಜ್ಞೆ ಕಳೆದುಕೊಂಡಿದ್ದು ಎಚ್ಚರವಾದಗ ಅಟೋ ಚಾಲಕ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
