- ಸೇವಾ ಸಂಕಲ್ಪ ಅಭಿಯಾನಕ್ಕೆ ಮಾದರಿ ಹೆಜ್ಜೆ ಕುಲಶೇಖರ ಕಲ್ಪನೆ ಪರಿಸರದಲ್ಲಿ ನವೀಕೃತ ಬಸ್ ನಿಲ್ದಾಣ ಉದ್ಘಾಟನೆ
- ಮಾಡೂರು ಶ್ರೀ ಶಿವ ದುರ್ಗಾಂಬಾ ಮಠದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವ ವಿಶೇಷ ಪೂಜೆ, ಗಣಹೋಮ, ಮಹಾ ಚಂಡಿಕಾಯಾಗ, ಅಖಂಡ ಭಜನೆ ಹಾಗೂ ಅನ್ನಸಂತರ್ಪಣೆ
- ಗಾಂಧಿ ಜಯಂತಿ ಅಂಗವಾಗಿ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ವಿಶೇಷ ಕಾರ್ಯಕ್ರಮ ಗಾಂಧೀಜಿ ತತ್ವಗಳನ್ನು ಸ್ಮರಿಸಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ
- ಅ.5ರಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ
- MRPL ಸ್ಫೋಟ ಪ್ರಕರಣ: ನಿರ್ಲಕ್ಷ್ಯದ ಆರೋಪದಡಿ FIR ಗಂಭೀರ ಗಾಯಗೊಂಡ ಕಾರ್ಮಿಕ ಮನೀಶ್ ಕರ್ಕಡ ಸಾವು; ಸುತ್ತಮುತ್ತ 54 ಮನೆಗಳಿಗೆ ಹಾನಿ
- ಎಂಆರ್ಪಿಎಲ್ ಸ್ಫೋಟ: ಸ್ಥಳೀಯರ ಸುರಕ್ಷತೆಯೊಂದಿಗೆ ಯಾವುದೇ ರಾಜಿ ಬೇಡ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ, ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಿ ಕೈಗಾರಿಕೆ ಆರಂಭದ ವೇಳೆ ನೀಡಿದ ಭರವಸೆಗಳು ಅನುಷ್ಠಾನವಾಗಲಿ: ಯೋಗಿಶ್ ಶೆಟ್ಟಿ ಜಪ್ಪು
- ಎಂಆರ್ಪಿಎಲ್ನಲ್ಲಿ ಭಾರೀ ಸ್ಫೋಟ: ಎಂಟು ಮಂದಿ ಗಾಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಬೆಂಕಿ; ಓರ್ವನಿಗೆ ಶೇ.35ರಷ್ಟು ಸುಟ್ಟ ಗಾಯ
- ಎಂಆರ್ಪಿಎಲ್ ಘಟಕದಲ್ಲಿ ಭಾರೀ ಸ್ಫೋಟದ ಸದ್ದು: ಬೆಂಕಿ, ದಟ್ಟ ಹೊಗೆಯಿಂದ ಸ್ಥಳೀಯರಲ್ಲಿ ಆತಂಕ
Author: Tulunada Surya
ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ಮಹತ್ವದ ಸಹಕಾರ ಕಾರ್ಯಕ್ರಮ ನಡೆಯಿತು. ಬೋಳಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ದಾಮೋದರ ಕಾಮತ್ ಅವರು ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ಜೀಪಿನ ಕೀ ಯನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿರಾಮ್ ಶಂಕರ್, ಐಪಿಎಸ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಉಪಾಧೀಕ್ಷಕರಾದ ಶ್ರೀ ತಿಮ್ಮಪ್ಪ ಗೌಡ (ಡಿಎಆರ್, ಉಡುಪಿ), ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ನಿರೀಕ್ಷಕರಾದ ಶ್ರೀ ರವಿ ಕುಮಾರ್ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಶ್ರೀ ಪ್ರಸನ್ನ ಅವರು ಉಪಸ್ಥಿತರಿದ್ದರು. ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಮತ್ತು ಸಾರ್ವಜನಿಕ ಸೇವೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಖಾಸಗಿ ಸಂಸ್ಥೆಯೊಂದು ನೀಡಿದ ಈ ಸಹಕಾರವನ್ನು ಪೊಲೀಸ್ ವಲಯದಿಂದ ಅಭಿನಂದಿಸಲಾಯಿತು.
ಸಮ್ಮೇಳನ ಉದ್ಘಾಟನೆ | ಹಿರಿಯಡ್ಕದಲ್ಲಿ ತುಳುನಾಡ ರಕ್ಷಣಾ ವೇದಿಕೆ ಕಾಪು ತಾಲೂಕು ವತಿಯಿಂದ ಆಯೋಜಿಸಲಾದ ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮವು ಭಾನುವಾರ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡು, ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷರು ಹಾಗೂ ರಾಜ್ಯ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಯೋಗೀಶ್ ಶೆಟ್ಟಿ ಜೆಪ್ಪು, ತುಳುನಾಡ ರಕ್ಷಣಾ ವೇದಿಕೆ ಬೆಳೆದು ಬಂದ ಹಾದಿ, ಸಂಘಟನೆಯ ಕಾರ್ಯವೈಖರಿ ಹಾಗೂ ತುಳುನಾಡಿನ ನೆಲ–ಜಲ–ಸಂಸ್ಕೃತಿ ರಕ್ಷಣೆಗೆ ನಡೆಸುತ್ತಿರುವ ಹೋರಾಟಗಳ ಕುರಿತು ವಿವರಿಸಿದರು. ಸಮಾಜಕ್ಕೆ ತುಳುನಾಡ ರಕ್ಷಣಾ ವೇದಿಕೆ ನೀಡುತ್ತಿರುವ ಕೊಡುಗೆಗಳನ್ನು ಸ್ಮರಿಸಿ, ಕಾರ್ಯಕರ್ತರು ಸಂಘಟನೆಯ ಬಲವಾಗಬೇಕು ಎಂದು ಕರೆ ನೀಡಿದರು. ಉಡುಪಿ ಜಿಲ್ಲಾ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಮಾತನಾಡಿ, ಜಿಲ್ಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಕೈಗೊಂಡ ಜನಪರ ಕಾರ್ಯಕ್ರಮಗಳು, ಹಲವಾರು ಸಮಾಜಮುಖಿ ಕಾರ್ಯಕ್ರಮಗಳು ನಡೆದ ಹಲವು ಹೋರಾಟಗಳು ಹಾಗೂ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ನಿಟ್ಟಿನಲ್ಲಿ ನಡೆದ ಪ್ರಯತ್ನಗಳನ್ನು…
ಪಂಪುವೆಲ್‌ನ ಮ್ಯಾಕ್ ಪಾರ್ಕ್ ಸ್ಕ್ವೇರ್‌ನಲ್ಲಿ ಆತ್ಮೀಯ ಕ್ಷಣಗಳಿಗೆ ಸಾಕ್ಷಿಯಾದ ಕಾರ್ಯಕ್ರಮ ಸುದ್ದಿ ವರದಿ : ಮಂಗಳೂರು : ಭವಿಷ್ಯದ ಪೋಷಕರಾಗಲಿರುವ ರಮೀಝಾ ಹಾಗೂ ಸಾಜಿದ್ ದಂಪತಿಯವರ ಸಂತಸದ ಕ್ಷಣಗಳನ್ನು ಹಂಚಿಕೊಳ್ಳುವ ‘ಬೇಬಿ ಶವರ್’ ಕಾರ್ಯಕ್ರಮವು ಜನವರಿ 4, 2026ರ ಭಾನುವಾರ ಮಧ್ಯಾಹ್ನ 12.30ಕ್ಕೆ ಪಂಪ್‌ವೆಲ್‌ನ ಮ್ಯಾಕ್ ಪಾರ್ಕ್ ಸ್ಕ್ವೇರ್‌ನಲ್ಲಿ ಹೃದಯಂಗಮವಾಗಿ ನಡೆಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಕುಟುಂಬಸ್ಥರು, ಬಂಧುಗಳು ಹಾಗೂ ಆಪ್ತರು ಭಾಗವಹಿಸಿ ದಂಪತಿಗಳಿಗೆ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಈ ವೇಳೆ ತುಳುನಾಡ ರಕ್ಷಣಾ ವೇದಿಕೆಯ ಯೋಗೀಶ್ ಶೆಟ್ಟಿ ಜಪ್ಪು ಅವರು ಉಪಸ್ಥಿತರಾಗಿ ದಂಪತಿಗಳಿಗೆ ಆಶೀರ್ವಾದ ಹಾಗೂ ಶುಭ ಹಾರೈಕೆಗಳನ್ನು ಸಲ್ಲಿಸಿದರು. ಆತ್ಮೀಯತೆ, ಸಂತಸ ಮತ್ತು ಸಂಭ್ರಮದಿಂದ ತುಂಬಿದ್ದ ಈ ಕಾರ್ಯಕ್ರಮವು ನೆರೆದವರ ಮನಸ್ಸಿನಲ್ಲಿ ಸ್ಮರಣೀಯ ಕ್ಷಣವಾಗಿ ಉಳಿಯಿತು.
ಮಂಗಳೂರು:ಬ್ಯಾರಿ ಭಾಷೆ–ಸಾಹಿತ್ಯದ ಸಂರಕ್ಷಣೆ ಹಾಗೂ ವಿಕಸನಕ್ಕೆ ವೇದಿಕೆಯಾಗುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನವನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಜನವರಿ 4ರಂದು ಮಂಗಳೂರು ತಾಲೂಕಿನ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಹಮ್ಮಿಕೊಂಡಿದೆ. ದಿನವಿಡೀ ಸಾಹಿತ್ಯ, ಸಂಸ್ಕೃತಿ ಮತ್ತು ಕಲಾ ಕಾರ್ಯಕ್ರಮಗಳೊಂದಿಗೆ ಸಮ್ಮೇಳನ ನಡೆಯಲಿದೆ.ಸಮ್ಮೇಳನದ ಅಂಗವಾಗಿ ಬೆಳಿಗ್ಗೆ 9.30ಕ್ಕೆ ಗುರುಪುರ ಕೈಕಂಬದ ಸಬೀಲುಲ್ ಹುದಾ ಅಲ್‌ಬಿರ್ರ್ ಶಾಲಾ ವಠಾರದಿಂದ ಸಭಾಂಗಣದವರೆಗೆ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯನ್ನು ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಹಾಜಿ ಎಂ.ಹೆಚ್. ಮೊಹಿದಿನ್ ಅಡ್ಡೂರು ಉದ್ಘಾಟಿಸಲಿದ್ದು, ಬೆಳಿಗ್ಗೆ 10.00ಕ್ಕೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್. ಧ್ವಜಾರೋಹಣ ನೆರವೇರಿಸಲಿದ್ದಾರೆ.ಬೆಳಿಗ್ಗೆ 10.15ಕ್ಕೆ ನಡೆಯುವ ಉದ್ಘಾಟನಾ ಸಮಾರಂಭವನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು ಸಮ್ಮೇಳನಾಧ್ಯಕ್ಷರಾಗಿ ಭಾಷಣ ಮಾಡಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ…
ಮಂಗಳೂರು:ಸಚಿವ ಜಮೀರ್ ಅಹ್ಮದ್ ಪುತ್ರ ನಟ ಝೈದ್ ಖಾನ್ ಅಭಿನಯದ ಬಹು ನಿರೀಕ್ಷಿತ ಕನ್ನಡ ಸಿನಿಮಾ ‘ಕಲ್ಟ್’ ಜನವರಿ 23ರಂದು ಕರ್ನಾಟಕದಾದ್ಯಂತ ಸುಮಾರು 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಕೆವಿಎನ್ ಪ್ರೊಡಕ್ಷನ್ಸ್ ಅರ್ಪಿಸುವ ಹಾಗೂ ಲೋಕಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರಕ್ಕೆ ‘ಉಪಾಧ್ಯಕ್ಷ’ ಖ್ಯಾತಿಯ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನ ನೀಡಿದ್ದಾರೆ. ⸻ 🎥 ಪತ್ರಿಕಾಗೋಷ್ಠಿಯಲ್ಲಿ ಝೈದ್ ಖಾನ್ ಹೇಳಿದ್ದೇನು? ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಝೈದ್ ಖಾನ್, “‘ಕಲ್ಟ್’ ನನ್ನ ಎರಡನೇ ಸಿನಿಮಾ. ‘ಬನಾರಸ್’ ಮೂಲಕ ಚಿತ್ರರಂಗ ಪ್ರವೇಶಿಸಿದ ಬಳಿಕ ಈ ಚಿತ್ರ ನನ್ನ ಪಾಲಿಗೆ ವಿಶೇಷವಾಗಿದೆ. ಪ್ರೀತಿ, ಆ್ಯಕ್ಷನ್ ಮತ್ತು ಭಾವನಾತ್ಮಕ ಅಂಶಗಳ ಮಿಶ್ರಣವೇ ಈ ಚಿತ್ರದ ಬಲ” ಎಂದು ಹೇಳಿದರು. ಚಿತ್ರದಲ್ಲಿ ರಚಿತಾ ರಾಮ್ ಹಾಗೂ ಮಲೈಕಾ ಟಿ. ವಸುಪಾಲ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ⸻ 🎞️ ಉಡುಪಿ ಸುತ್ತಮುತ್ತ 90% ಚಿತ್ರೀಕರಣ ಚಿತ್ರದ ಚಿತ್ರೀಕರಣವನ್ನು ಕರ್ನಾಟಕದ ವಿವಿಧ ಭಾಗಗಳಲ್ಲಿ ಸುಮಾರು 85 ದಿನಗಳ ಕಾಲ…
ಮನಪಾ ವ್ಯಾಪ್ತಿಯಲ್ಲಿ ಬೇಸಿಗೆಗೂ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಒಂದು ವಾರದೊಳಗೆ ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಿ ಎಂದು ಪಾಲಿಕೆ ಅಧಿಕಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಸೂಚನೆ ನೀಡಿದರು. ಪಾಲಿಕೆಯ ವಾರ್ಡ್ ಸಂಖ್ಯೆ 25, 26, 27, 41 ಹಾಗೂ 53 ರಲ್ಲಿ ಕುಡಿಯುವ ನೀರಿನ ಅಭಾವವುಂಟಾಗಿದ್ದು ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಕುಡಿಯುವ ನೀರಿನ ಸಮಸ್ಯೆ ಎದುರಾದ ತಕ್ಷಣ ಜನರ ಸಮಸ್ಯೆಗೆ ತುರ್ತಾಗಿ ಸ್ಪಂದನೆ ಸಿಗುತ್ತಿತ್ತು. ಯಾವಾಗ ಬಿಜೆಪಿಯ ಅವಧಿ ಅಂತ್ಯವಾಯಿತೋ ಅಲ್ಲಿಂದ ಜನರ ಸಮಸ್ಯೆಯನ್ನು ಕೇಳುವವರೇ ಇಲ್ಲವಾಗಿದೆ. ಸದ್ಯ ಪಾಲಿಕೆಯು ಕಾಂಗ್ರೆಸ್ ನೇತೃತ್ವದ ಆಡಳಿತಾಧಿಕಾರಿಯ ಮೂಲಕ ನಡೆಯುತ್ತಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರವೇ ಇಲ್ಲವಾಗಿದೆ. ಕೂಡಲೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಸೂಚನೆ ನೀಡಿದರು. ಬಿಜೆಪಿಯ ನಿಕಟಪೂರ್ವ ಪಾಲಿಕೆ ಸದಸ್ಯರುಗಳಾದ ಪೂರ್ಣಿಮಾ ಎಂ, ಗಣೇಶ್ ಕುಲಾಲ್, ಜಯಲಕ್ಷ್ಮಿ ಶೆಟ್ಟಿ, ಜಗದೀಶ್ ಶೆಟ್ಟಿ, ಬಿಜೆಪಿ…
ಸಿದ್ದಾಪುರ | ಕುಂದಾಪುರಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಜನ್ಸಾಲೆ ಪ್ರದೇಶದಲ್ಲಿರುವ ತೆಂಗಿನ ಎಣ್ಣೆ ಮಿಲ್ ಒಂದರಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿ ಅಪಾರ ಆರ್ಥಿಕ ನಷ್ಟ ಉಂಟಾದ ಘಟನೆ ವರದಿಯಾಗಿದೆ.ಶ್ರೀ ಮಧುಮಾಯ ಆಯಿಲ್ಸ್ (ಮಧು) ಫ್ಯಾಕ್ಟರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಕುಂದಾಪುರ, ಬೈಂದೂರು ಹಾಗೂ ಹೊಸಂಗಡಿ ಕೆಪಿಟಿಸಿಎಲ್‌ನಿಂದ ತಲಾ ಒಂದೊಂದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡವು.ತೆಂಗಿನೆಣ್ಣೆ ಸಂಗ್ರಹ ಹೆಚ್ಚಿದ್ದರಿಂದ ಬೆಂಕಿಯ ತೀವ್ರತೆ ಹೆಚ್ಚಾಗಿ ನಿಯಂತ್ರಣಕ್ಕೆ ತರಲು ಸಾಕಷ್ಟು ಸಮಯ ತೆಗೆದುಕೊಂಡಿತು. ಸ್ಥಳೀಯರ ಸಹಕಾರದೊಂದಿಗೆ ರಾತ್ರಿಯಿಂದ ಬೆಳಿಗ್ಗೆ ಸುಮಾರು 9 ಗಂಟೆಯವರೆಗೆ ನಿರಂತರವಾಗಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಯಿತು.ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಂಗಳೂರು | ಜನವರಿ 2 ಯುನಿವೆಫ್ ಕರ್ನಾಟಕದ ವತಿಯಿಂದ ಸೆಪ್ಟೆಂಬರ್ 19ರಿಂದ ಜನವರಿ 2ರವರೆಗೆ ನಡೆಯುತ್ತಿರುವ “ಅರಿಯಿರಿ ಮನುಕುಲದ ಪ್ರವಾದಿಯನ್ನು” ಎಂಬ ಪ್ರವಾದಿ ಸಂದೇಶ ಪ್ರಚಾರ ಅಭಿಯಾನದ ಸಮಾರೋಪ ಸಮಾರಂಭವು (ಜನವರಿ 2) ಶುಕ್ರವಾರ ಸಂಜೆ 6.45ಕ್ಕೆ ನಗರದ ಪುರಭವನದಲ್ಲಿ ಜರಗಲಿದೆ ಎಂದು ಅಭಿಯಾನ ಸಂಚಾಲಕರಾದ ಯು. ಕೆ. ಖಾಲಿದ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. “ಶೋಷಿತ ಸಮಾಜ, ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ)” ಎಂಬ ಕೇಂದ್ರೀಯ ವಿಷಯದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಚಿಕ್ಕಮಗಳೂರಿನ ವಿಶ್ವಧರ್ಮಪೀಠ, ಜಯಬಸವಾನಂದ ತಪೋವನದ ಡಾ. ಶ್ರೀ ಜಯಬಸವಾನಂದ ಸ್ವಾಮೀಜಿ, ಸಿ.ಆರ್.ಐ ಅಧ್ಯಕ್ಷ ಹಾಗೂ ಪ್ಯಾರಿಷ್ ಧರ್ಮಗುರು ರೆವೆ. ಡಾ. ಡೊಮಿನಿಕ್ ವಾಸ್, ಕರ್ನಾಟಕ ಸರ್ಕಾರದ ಮಾಜಿ ಸಚಿವ ಬಿ. ರಮಾನಾಥ ರೈ ಮತ್ತು ಯುನಿವೆಫ್ ಕರ್ನಾಟಕದ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ವಾರ್ತಾಭಾರತಿ ದೈನಿಕದ ಪ್ರಧಾನ ಸಂಪಾದಕ ಜನಾಬ್ ಅಬ್ದುಸ್ಸಲಾಮ್ ಪುತ್ತಿಗೆ ವಹಿಸಲಿದ್ದಾರೆ. ಸದ್ಭಾವನಾ ವೇದಿಕೆ ಜೆಪ್ಪು ಅಧ್ಯಕ್ಷ ಹಾಗೂ…
ಉಡುಪಿ | ಜನವರಿ 1, 2026 ಸಂತೆಕಟ್ಟೆ, ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಔರೋ ಸ್ಕಿಲ್ಲಿಯುವಂ ಅಕಾಡೆಮಿ ಎಲ್‌ಎಲ್‌ಪಿ ಸಂಸ್ಥೆಯ ಸ್ಥಾಪಕರಾದ ಅನುಶ್ರೀ ಚಂದ್ರಶೇಖರ ಹಾಗೂ ಅಭಿಷೇಕ್ ಜಿ. ಅವರಿಗೆ ಜೀವ ಬೆದರಿಕೆ, ಸುಲಿಗೆ ಮತ್ತು ಸಂಸ್ಥೆ ಮುಚ್ಚುವಂತೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ, ಆರೋಪಿಗಳ ವಿರುದ್ಧ ತ್ವರಿತ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತರಿಗೆ ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ತುಳುನಾಡ ರಕ್ಷಣಾ ವೇದಿಕೆ (ರಿ) ಉಡುಪಿ ಜಿಲ್ಲಾ ಘಟಕವು ಒತ್ತಾಯಿಸಿದೆ. ಈ ಕುರಿತು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಅವರು, ಈ ಪ್ರಕರಣ ಅತ್ಯಂತ ಗಂಭೀರ ಹಾಗೂ ಸಮಾಜದ ಶಾಂತಿ ಮತ್ತು ಕಾನೂನು ವ್ಯವಸ್ಥೆಗೆ ಸವಾಲು ಎಸೆಯುವಂತಹದ್ದು ಎಂದು ಹೇಳಿದರು. ಸಂತ್ರಸ್ತರು ನೀಡಿರುವ ದೂರಿನ ಪ್ರಕಾರ, ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲ ಸಿಬ್ಬಂದಿಗಳು ನಂಬಿಕೆ ದ್ರೋಹ ನಡೆಸಿ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿ…
ಮಂಗಳೂರು: ತುಳುನಾಡಿನ ಸರ್ವಧರ್ಮೀಯರ ಹಬ್ಬಗಳು, ಆಚರಣೆಗಳು ಹಾಗೂ ಆಯನ ಜಾತ್ರೆ ಸೇರಿದಂತೆ ನಾಡಿನ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಸಮಗ್ರವಾಗಿ ದಾಖಲಿಸಿರುವ “ಕಾಲ ಕೋಂದೆ” ತುಳು ದಿನದರ್ಶಿಕೆಯ 13ನೇ ವರ್ಷದ ಸಂಚಿಕೆ ನಗರದ ಪತ್ರಿಕಾಭವನದಲ್ಲಿ ಅಧಿಕೃತವಾಗಿ ಬಿಡುಗಡೆಗೊಂಡಿತು. ತುಳುನಾಡಿನ ಆಚರಣೆಗಳ ಜೀವಂತ ದಾಖಲೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಥಮ ಡಿಜಿಟಲ್ ತುಳು ಲಿಪಿ ವಿನ್ಯಾಸಕ ಡಾ. ಪ್ರವೀಣ್ ರಾಜ್ ಎಸ್. ರಾವ್ ಅವರು, ತುಳುವರ ‘ಸಿಂಗೊಡೆ’ಯಿಂದ ಆರಂಭಿಸಿ ಸಂಕ್ರಾಂತಿ, ತಿಥಿ, ನಕ್ಷತ್ರಗಳು (ಭರಣಿ, ಕೃತ್ತಿಕೆ ಮೊದಲಾದವು), ಕೆಡ್ವಾಸ, ತುಳು ದೀಪಾವಳಿ ಬಲಿಲೆಪ್ಪುನ ದಿನ, ಪತ್ತನಾಜೆ, ಆಟಿ, ಸೋಣ, ಮಾರ್ನಮಿ, ಆಯನೊ, ಕೋಲ, ಕೊಡಿ, ತೇರ್ ಹಾಗೂ ವಿವಿಧ ಜಾತ್ರೆಗಳ ವಿವರಗಳನ್ನು ಈ ಕ್ಯಾಲೆಂಡರ್ ಒಳಗೊಂಡಿದೆ ಎಂದು ತಿಳಿಸಿದರು. ಜೊತೆಗೆ ಮೌಡ್ಯ ಹಾಗೂ ಗ್ರಹಣ ಕಾಲಗಳ ನಿಖರ ಮಾಹಿತಿಯೊಂದಿಗೆ ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ, ಬೌದ್ಧ ಹಾಗೂ ಜೈನ ಧರ್ಮಗಳ ಹಬ್ಬಗಳ ವಿವರಗಳನ್ನು ನೀಡಿರುವ ಈ ದಿನದರ್ಶಿಕೆ ನಾಡಿನ ಸಮಸ್ತ ಜನತೆಗೆ ಬಹುಪಯೋಗಿಯಾಗಲಿದೆ ಎಂದರು. ‘ತೌಳವ’ ಲಿಪಿಯಲ್ಲಿ ರೂಪಿತ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
