Author: Tulunada Surya

ಉಡುಪಿ : ದಿನಾಂಕ10/04/2025 ರ ಗುರುವಾರ ಉಡುಪಿ ಜಿಲ್ಲೆಯ, ಬೋಧಿಸತ್ವ ಬುದ್ಧ ಫೌಂಡೇಶನ್ , ಹಾಗೂ ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ.ಇವರ ಜಂಟಿ ‌ಸಹಯೋಗದಲ್ಲಿ ಮಹಾನಾಯಕ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತಿಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಬಾಬಾಸಾಹೇಬ್ ಅಂಬೇಡ್ಕರ್ ರವರ ಕುರಿತ ಸರ್ಧೆಗಳು ಹಾವಂಜೆಯ ಮಂಜುನಾಥ ಸಭಾಭವನದಲ್ಲಿ ನಡೆಯಿತು. ಉಪಾಸಕ, ಬ್ರಹ್ಮಾವರ ತಾಲೂಕು ಶಿಕ್ಷಣ ಸಂಯೋಜಕರು ಪ್ರಕಾಶ ಬಿ ಬಿ ರವರ ಪ್ರಸ್ತಾವಿಕ ಮಾತುಗಳಲ್ಲಿ ಮಕ್ಕಳಿಗೆ ಬಾಬಾ ಸಾಹೇಬರ ಕುರಿತು ಪರಿಚಯಿಸಿದರು.” ಇಂದಿನ ಮಕ್ಕಳು ಮಾದ್ಯಮಗಳಿಂದ ಮತ್ತು ಅಂತರ್ ಜಾಲಗಳಿಂದ ಯಾರನ್ನು ಆದರ್ಶ ವ್ಯಕ್ತಿಗಳಾಗಿ ಕಾಣಬೇಕು..?ಮನುಕುಲಕ್ಕೆ ಮಾನವ ಪ್ರೀತಿ,ಶಾಂತಿಯನ್ನು ಸಾರಿದ ಸಾಮಾಜಿಕ ವಿಜ್ಞಾನಿ ಗುರು ಗೌತಮ ಬುದ್ಧ ಮತ್ತು ಸಮಸಮಾಜ ಮತ್ತು ಸೌಹಾರ್ದತೆಯ ಆಶಯಗಳನ್ನು ನೀಡಿದ ಡಾ. ಬಿ ಆರ್ ಅಂಬೇಡ್ಕರ್ ರವರನ್ನು ಆದರ್ಶ ವ್ಯಕ್ತಿಗಳಾಗಿ ಕಾಣುವ-ಅನುಸರಿಸುವ ತುರ್ತು ಅಗತ್ಯವಿದೆ. ಕರಾವಳಿಯಲ್ಲಿ ದಮ್ಮದ ಬೆಳಕನ್ನು ಚೆಲ್ಲುವ ಕಾರ್ಯವನ್ನು ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ ಹಾವಂಜೆ. ಮಾಡುತ್ತಾ…

Read More

ಮಂಗಳೂರು:ಭಗವಾನ್ ಶ್ರೀ ಮಹಾವೀರರು ಈ ಜಗತ್ತನ್ನು ಸತ್ಯದ ನೆಲೆಯಲ್ಲಿ ರೂಪಿಸಿ, ಉತ್ತಮ ಸಮಾಜ ರಚಿಸಲು ಪರಿಶ್ರಮಿಸಿದ್ದಾರೆ. ಅವರ ಸಂದೇಶ ಇಡೀ ವಿಶ್ವಕ್ಕೆ ಇಂದು ಪ್ರಸ್ತುತ ವಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.ಅವರು ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜೈನ್ ಸೊಸೈಟಿ ಮತ್ತು ಜೈನ್ ಮಿಲನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಭಗವಾನ್ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಾವೀರರ ಸಂದೇಶಗಳನ್ನು ಯಾವುದೇ ಧರ್ಮ ಅಥವಾ ಪ್ರದೇಶಕ್ಕೆ ಸೀಮಿತಗೊಳಿಸಬಾರದು. ತಾಳ್ಮೆ ಮತ್ತು ಪ್ರೀತಿಯಿಂದ ಸಮಾಜವನ್ನು ಕಟ್ಟಬೇಕೆಂಬ ಅವರ ನೀತಿಯು ಮಾದರಿಯಾಗಿದೆ. ಮಹಾಪುರುಷರ ಜಯಂತಿ ಕಾರ್ಯಕ್ರಮ ಯಾವುದೇ ನಿರ್ದಿಷ್ಟ ಜಾತಿ, ಪಂಗಡಗಳಿಗೆ ಸೀಮಿತವಾಗಬಾರದು. ಎಲ್ಲ ವರ್ಗದ ಜನರು ಭಾಗವಹಿಸಿ ಆಚರಿಸಿದರೆ ಮಹಾಪುರುಷರ ಸಂದೇಶವು ಸರ್ವರಿಗೂ ತಲುಪಲಿದೆ ಎಂದು ಯು.ಟಿ. ಖಾದರ್ ತಿಳಿಸಿದರು.ತಮ್ಮ ಜೀವನವನ್ನೇ ಜನರಿಗೆ ಮಾದರಿಯಾಗಿಸಿ, ಅವರ ಹೃದಯ ಗೆದ್ದ ವ್ಯಕ್ತಿತ್ವ ಮಹಾವೀರರದ್ದಾಗಿದೆ ಎಂದರು.ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸತ್ಯ ಮತ್ತು…

Read More

ಮಂಗಳೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಏಪ್ರಿಲ್ 14 ರ ಅಂಬೇಡ್ಕರ್ ದಿನಾಚರಣೆಯ ದಿನದಂದು ಡಾ. ಅಂಬೇಡ್ಕರ್ ಪ್ರತಿಮೆ ಸಹಿತ ಅಂಬೇಡ್ಕರ್ ವೃತ್ತ ನಿರ್ಮಾಣದ ಕಾಮಗಾರಿ ಆರಂಭಿಸಲು ಅಗತ್ಯ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಅವರ ನೇತೃತ್ವದಲ್ಲಿ ನಗರದ ನಾಗರಿಕ ಸಂಘಟನೆಗಳ ನೇತಾರರ ನಿಯೋಗವೊಂದು ಇಂದು ಜಿಲ್ಲಾಧಿಕಾರಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಅವರನ್ನು ಭೇಟಿ ಮಾಡಿ ಆಗ್ರಹಿಸಿತು. ನಿಯೋಗದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿ ಎ ಎಂ ಹನೀಫ್, ಅಹಿಂದ ಚಳುವಳಿ ಅಧ್ಯಕ್ಷ ಭರತೇಶ್ ಮತ್ತು ಆರ್ ಟಿ ಐ ಕಾರ್ಯಕರ್ತ ಪ್ರಶಾಂತ್ ಭಟ್ ಕಡಬ ಉಪಸ್ಥಿತರಿದ್ದರು.

Read More

ಬಂಟ್ವಾಳ: ಸಮಾಜ ಸೇವೆಗೆ ಜಿಲ್ಲಾ ರಾಜ್ಯೋತ್ಸವ ಗೌರವ ಪಡೆದು 25 ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ರಕ್ತೇಶ್ವರಿ ಯುವಕ ಮಂಡಲ ನೇರಂಬೋಳು ಬಂಟ್ವಾಳತುಳುಧ್ವಜ ಅರಳಿಸಿ, ತುಳು ಶಾಲನ್ನ ಹೊದಿಸಿ ತುಳು ಭಾಷಾ ಜನಜಾಗೃತಿ ಮೂಡಿಸಿದರು.ಸಮಾಜ ಮುಖಿ ಸೇವೆಗಾಗಿ ಕಳೆದ 25 ವರ್ಷಗಳಿಂದ ಹೆಣಗಿದ ಯುವಕ ಮಂಡಲದ ನಾಯಕರುಗಳನ್ನ ಸನ್ಮಾನಿಸಲಾಯಿತು. ಸಾಮಾಜಿಕ ಹೋರಾಟಗಾರ ಕನ್ನಡ ಕಟ್ಟೆ ಅಧ್ಯಕ್ಷ ಸರ್ವಜ್ಞ ಸೆಕೆಂಡ್ ಒಪೀನಿಯನ್ ಸೆಂಟರ್ ಮುಖ್ಯಸ್ಥ ಅಣ್ಯಯ ಕುಲಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಬೀಡಿ ಉದ್ಯಮಿ ಮೋನಪ್ಪ ಮೂಲ್ಯ ನಿರಂಬೋಳು , ಯಕ್ಷ ಗುರುಗಳು ಮತ್ತು ಭಾಗವತರು ಸಂಜೀವ ಕಜೆ ಪದವು , ಕುಂಜಿರ ಗುರುಸ್ವಾಮಿ ಚಾರ್ಮಾಡಿ, ನಾಟಿ ವೈದ್ಯ ಸಂಜೀವ ಮೂಲ್ಯ ನೇರಂಬೋಳು, ರವರಿಗೆ ಸಭೆಯಲ್ಲಿ ಸನ್ಮಾನ ನಡೆಯಿತು.ಹಲವಾರು ಗಣ್ಯರ ಉಪಸ್ಥಿತಿ ಯೊಂದಿಗೆ ಸತ್ಯನಾರಾಯಣ ಪೂಜೆ ಸಾರ್ವಜನಿಕ ಅನ್ನಸಂಪರ್ಪಣೆ ನಡೆಯಿತು.ಮಹಿಷ ಮರ್ದಿನಿ ಯಕ್ಷಗಾನ ಬಯಲಾಟ ಕೋಟಿ ಚೆನ್ನಯ ತುಳು ಯಕ್ಷಗಾನ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಿತು.ಸ್ಥಳೀಯ ಪ್ರತಿಭೆಗಳಿಂದ ವಿವಿಧ ವಿನೋದಾವಳಿಗಳು ನಡೆಯಿತು.

Read More

ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ “ಪಂಪ ಸದ್ಭಾವನ “ರಾಜ್ಯ ಪ್ರಶಸ್ತಿ ಪ್ರದಾನ ರಂಗ ಸಂಭ್ರಮ 2025 ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏಪ್ರಿಲ್ ಐದರಂದು ಶನಿವಾರ ನಡೆಯಿತು. ಕಾರ್ಯಕ್ರಮವನ್ನು ನಾಟಕ ಅಕಾಡೆಮಿ ಅಧ್ಯಕ್ಷರಾದ ಕೆ.ವಿ.ನಾಗರಾಜು ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ ಪಂಪ ಸದ್ಭಾವನಾ 2025 ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದರು. ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಸೇವೆಗಾಗಿ ಪ್ರತಿಷ್ಠಿತ “ಪಂಪ ಸದ್ಭಾವನಾ” ರಾಜ್ಯ ಪ್ರಶಸ್ತಿಯನ್ನು ನಿವೃತ ಲೋಕಾಯುಕ್ತ ಹಾಗೂ ನ್ಯಾಯಮೂರ್ತಿಗಳಾದ ಎನ್ ಸಂತೋಷ ಹೆಗ್ಡೆ ಅವರು ಪ್ರಧಾನ ಮಾಡಿದರು. ಮುಖ್ಯ ಅತಿಥಿಗಳಾಗಿ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತರಾವ್ ಪಾಟೀಲ್ ,ನಿವೃತ್ತ ಡಿ.ಸಿ ಡಾ. ಡಿ ವಿಶ್ವನಾಥ್ ,ಡಾ ಲಕ್ಷ್ಮೀದೇವಿ ಬೆಂಗಳೂರು. ಕಲಾಜಗತು ರೂವಾರಿ ತೋನ್ಸೆ ವಿಜಯ ಕುಮಾರ್ ಶೆಟ್ಟಿ ,ಡಾ‌.ಪುತೂರಾಯ, ರಾಷ್ಟ್ರೀಯ ಭಷ್ಟೃಚಾರ ನಿಗ್ರಹ ದಳದ ಡಾ .ಪ್ರವೀಣ್ ಹೀರೆಮಠ್ ,ವೇದ…

Read More

ಮಂಗಳೂರು: ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಸಂಸ್ಥಾಪಕ ಡಾ. ಎ.ಸದಾನಂದ ಶೆಟ್ಟಿ ಅವರ ನೇತೃತ್ವದಲ್ಲಿ ವರ್ಷಪ್ರತಿ ಜರಗುವ ತುಳುವರ ಸೌರಮಾನ ಯುಗಾದಿ ‘ಬಿಸು ಪರ್ಬೊ’ ಸಂಭ್ರಮವನ್ನು ಈ ಬಾರಿ ಏಪ್ರಿಲ್ 16ರಂದು ಮಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಈ ಬಗ್ಗೆ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಟ್ರಸ್ಟ್ ಪದಾಧಿಕಾರಿಗಳ ಸಭೆ ಏಪ್ರಿಲ್ 1ರಂದು ಬಲ್ಮಠದ ಕುಡ್ಲ ಸದಾಶಯ ಕಚೇರಿಯಲ್ಲಿ ಕಾರ್ಯಾಧ್ಯಕ್ಷ ದೇವಿ ಚರಣ್ ಶೆಟ್ಟಿ ಅಧ್ಯಕ್ಷತೆ ಯಲ್ಲಿ ಜರುಗಿತು ಬಿಸುಕಣಿ – ಪದ ನಲಿಕೆ:ತುಳುನಾಡಿನ ಕೃಷಿ ಸಮೃದ್ಧಿಯನ್ನು ಬಿಂಬಿಸುವ ತುಳುವರ ಯುಗಾದಿಯನ್ನು ಅರ್ಥವತ್ತಾಗಿ ಆಚರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಅಲ್ಲದೆ ತುಳು ಸಂಸ್ಕೃತಿಯನ್ನು ಬಿಂಬಿಸುವ ‘ಪದ – ನಲಿಕೆ’ ಹಾಡು ಮತ್ತು ಕುಣಿತಗಳ ‘ಬಿಸು ಮಿನದನ’ ಕಾರ್ಯಕ್ರಮವನ್ನು ವಿವಿಧ ಬಂಟರ ಸಂಘಗಳ ವತಿಯಿಂದ ನಡೆಸಲಾಗುವುದು; ಇದರೊಂದಿಗೆ ವಿಷು ಹಬ್ಬದ ಮಹತ್ವವನ್ನು ತಿಳಿಸುವ ಸಲುವಾಗಿ ತಜ್ಞರಿಂದ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗುವುದು ಎಂದು ಸಭಾಧ್ಯಕ್ಷರು ನುಡಿದರು‌. ‘ಎಪ್ರಿಲ್ 14ರಂದು ನಾಡಿನೆಲ್ಲೆಡೆ ಹಬ್ಬದ ಸಂಭ್ರಮವಿರುವುದರಿಂದ ಈ ಕಾರ್ಯಕ್ರಮವನ್ನು 2025 ಏಪ್ರಿಲ್…

Read More

ಕುಂದಾಪುರ : ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್. ಆ‌ರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ರಶ್ಮಿ ಅವರು 2014ನೇ ಬ್ಯಾಚ್ ಕೆ.ಎ.ಎಸ್ ಅಧಿಕಾರಿ. 2017ರಲ್ಲಿ ದ.ಕ ಜಿಲ್ಲೆಯಲ್ಲಿ ಪ್ರೊಬೇಷನರಿ ಮುಗಿಸಿ, 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು. 2023ರಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದ ಅವರು. ಜುಲೈ 2024ರಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದರು. ಬಳಿಕ ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಯಾಗಿದ್ದರು. ಇದೀಗ ಮತ್ತೆ ಕುಂದಾಪುರಕ್ಕೆ ವರ್ಗಾವಣೆಗೊಂಡಿದ್ದಾರೆ

Read More

ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ – ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದಿನಾಂಕ:01-04-2025 ರಿಂದ 30-04-2025 ರವರೆಗೆ 30 ದಿನಗಳು ಪ್ರಮುಖ ದುರಸ್ತಿ ಕಾಮಗಾರಿಯನ್ನು ನಡೆಯಲಿದೆ. ಈಗಾಗಿ ಒಂದು ಸೇತುವೆಯಲ್ಲಿ (ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ) ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಇದರಿಂದ ಪಂಪುವೆಲ್ನಿಂದ ತೊಕ್ಕೊಟ್ಟು ವರೆಗೆ ಸದ್ರಿ ಹೆದ್ದಾರಿಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ. ಆದ್ದರಿಂದ ಹಳೆಯ ನೇತ್ರಾವತಿ ಸೇತುವೆಯಲ್ಲಿ ದುರಸ್ತಿ ಕಾಮಗಾರಿ ನಡೆಯುವ ದಿನಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾದ್ಯತೆಗಳಿದ್ದು, ನೇತ್ರಾವತಿ ಸೇತುವೆಯ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು/ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸಬೇಕು ಹಾಗೂ ಪೀಕ್ ಅವರ್ಸ್ ಗಳಲ್ಲಿ ಸದರಿ ಮಾರ್ಗದಲ್ಲಿ ವಾಹನ ಸಂಚಾರವನ್ನು avoid ಮಾಡಲು ಕೋರಿದೆ. ಸಾರ್ವಜನಿಕರಿಗೆ ಉಪಯೋಗಿಸಬಹುದಾದ ಇತರೆ ಮಾರ್ಗಗಳು *ಮುಡಿಪು-ಕೊಣಾಜೆ-ದೇರಳಕಟ್ಟೆ ಕಡೆಯಿಂದ ಮಂಗಳೂರು ನಗರ ಕಡೆಗೆ ಸಂಚರಿಸುವ…

Read More

ಕರ್ನಾಟಕ ಸರ್ಕಾರವು 2024 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ 197 ಪೊಲೀಸ್ ಅಧಿಕಾರಿಗಳನ್ನು ಘೋಷಿಸಿದ್ದು, ಅದರಲ್ಲಿ ಮಂಗಳೂರು ಸುತ್ತ ಮುತ್ತಲಿನ ಪೊಲೀಸ್ ಅಧಿಕಾರಿಗಳನ್ನು ಅವರ ಅಸಾಧಾರಣ ಸೇವೆಗಾಗಿ ಅವರನ್ನು ಗುರುತಿಸಿ ಮುಖ್ಯಮಂತ್ರಿ ಪದಕ ನೀಡಿದೆ. ಪ್ರಶಸ್ತಿ ಪುರಸ್ಕೃತರಲ್ಲಿ, ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ, ಮತ್ತು ಮಂಗಳೂರು ಉಪವಿಭಾಗದ ಎಸಿಪಿ ಧನ್ಯಾ ನಾಯಕ್, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಶಿವಕುಮಾರ್ ಬಿ, ಉಳ್ಳಾಲ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ಮತ್ತು ಪಿಎಸ್‌ಐ ಸಂತೋಷ್ ಕುಮಾರ್ ಡಿ ಅವರನ್ನು ಗುರುತಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್‌ಐ ರಾಘವೇಂದ್ರ ಮಂಜುನಾಥ್ ನಾಯಕ್,ಹೆಡ್ ಕಾನ್ ಸ್ಟೇಬಲ್ ಅಣ್ಣಪ್ಪ ವಂಡ್ಸೆ ಮತ್ತು ಹೆಡ್ ಕಾನ್ ಸ್ಟೇಬಲ್ ಉಮೇಶ್ ಕೊಟ್ಟಾರಿ ಹಾಗೂ ಕಂಕನಾಡಿ ಪೊಲೀಸ್ ಠಾಣಾಧಿಕಾರಿ ರೇಜಿ ವಿ ಎಂ ಆಯ್ಕೆ ಮಾಡಲಾಗಿದೆ. ಮಂಗಳೂರಿನ ಕೇಂದ್ರ ಅಪರಾಧ ಶಾಖೆಯ (ಸಿಸಿಬಿ) ಅಧಿಕಾರಿಗಳಾದ ಶೀನಪ್ಪ, ರಿತೇಶ್,…

Read More

25 ವರ್ಷದ ಹಿಂದೆ ನಾವು ಎಸ್ಟೇಟ್ ಅಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ನಿಮ್ಮ ಏರಿಯಕ್ಕೆ ಪೊಲೀಸ್ ಬಂದಿದ್ದಾರೆ ಅಂತ ಬೇರೆ ಏರಿಯದವರು ಹೇಳಿದರು. ಆಗ ಪೊಲೀಸ್ ಬಂದರು ಅಂತ ಹೇಳಿದರೆ ಭಯ ಇರುವ ಸಮಯ..ಎಲ್ಲರೂ ಭಯದಿಂದ ಏನಾಗಿರಬಹುದು ಯೋಚಿಸುವಾಗ ತಿಳಿಯಿತು ಇದು ನಮ್ಮ ಏರಿಯಾದ ಉಮೇಶಣ್ಣ ಪೊಲೀಸ್ ಇಲಾಖೆ ಯಲ್ಲಿ ಉದ್ಯೋಗ ಪಡೆದಿದ್ದಾರೆ ಎಂದು. ಏರಿಯಾದಲ್ಲಿ ಒಬ್ಬರು ಪೊಲೀಸ್ ಇಲಾಖೆಯಲ್ಲಿ ಕೆಲಸ ಪಡೆದದರು ಎಂಬ ಖುಷಿ ಬೇರೆ.ನಂತರ ತನ್ನ ಕರ್ತವ್ಯದ ಸಮಯದಲ್ಲಿ ಪ್ರತಿಸಲ ಊರಿಗೆ ಸಂಬಂಧಪಟ್ಟಂತಹ ಕೆಲಸಕ್ಕೆ ಅನೇಕ ಸಲಹೆಗಳನ್ನು ನೀಡುತ್ತಿದ್ದರು. ಏರಿಯಾದಲ್ಲಿ ಯಾವುದೇ ಸಣ್ಣಪುಟ್ಟ ಅಹಿತಕರ ಘಟನೆ ನಡೆದಾಗ ಅದರ ಬಗ್ಗೆ ಗಮನ ಕೊಟ್ಟು ತನ್ನ ಕರ್ತವ್ಯವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುತ್ತಿದ್ದರು. ತಾನು ಇಲಾಖೆಯಲ್ಲಿ ಇದ್ದೇನೆ ಎಂಬುದನ್ನು ಇಲ್ಲಿ ತನಕ ಯಾವುದೇ ಅಹಂಕಾರದಿಂದ ಇವರು ದರ್ಪ ತೋರಿಸಿದ ದಿನವೇ ಇಲ್ಲ. ಆದರೆ ಇವರ ಶಿಸ್ತು, ಮಾತಾಡುವ ರೀತಿ, ಸಮಸ್ಯೆಗಳ ಬಗ್ಗೆ ಕೊಡುವ ಸಲಹೆ ಸ್ವತಹ ನಮಗೆ ಪೊಲೀಸ್ ಇಲಾಖೆಯಲ್ಲಿ ಸೇರಿ ಇವರ…

Read More