Author: Tulunada Surya

ಉಡುಪಿ | ಶಿರ್ವ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದ್ವಿಚಕ್ರ ವಾಹನ ಕಳವು ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ, ಅಂತರ್‌ರಾಜ್ಯ ಮಟ್ಟದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಸ್ಕೂಟರ್ ಕಳವು ಪ್ರಕರಣದ ವಿವರ ಶಿರ್ವ ಪಿರ್ಯಾದಿದಾರರಾದ ಶ್ರೀಮತಿ ಗುಣವತಿ ಅವರ ಪುತ್ರ ಕೌಶಿಕ್ ಅವರು ದಿನಾಂಕ 05-12-2025ರಂದು ಪಿರ್ಯಾದಿದಾರರ ಮಾಲೀಕತ್ವದ KA-20 HD-8622 ಹೊಂಡಾ ಆಕ್ಟಿವಾ ಸ್ಕೂಟರ್ ಅನ್ನು ಬಂಟಕಲು ಮಧ್ವ ವಾದಿರಾಜ ಇಂಜಿನಿಯರಿಂಗ್ ಕಾಲೇಜಿಗೆ ತೆಗೆದುಕೊಂಡು ಹೋಗಿದ್ದರು. ಮಧ್ಯಾಹ್ನ 12:45ರ ಸುಮಾರಿಗೆ ಊಟದ ವಿರಾಮದ ವೇಳೆ ಬಂಟಕಲು ದುರ್ಗಾ ಪರಮೇಶ್ವರಿ ದೇವಸ್ಥಾನದ ಬಳಿ ಸ್ಕೂಟರ್ ಪಾರ್ಕಿಂಗ್ ಮಾಡಿ ಊಟಕ್ಕೆ ತೆರಳಿದ್ದು, ಮಧ್ಯಾಹ್ನ 1:15ಕ್ಕೆ ಮರಳಿ ಬಂದಾಗ ಸ್ಕೂಟರ್ ಕಳವು ಆಗಿರುವುದು ಗೊತ್ತಾಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪಿರ್ಯಾದಿ ದಾಖಲಾಗಿದ್ದು, ಕಳವಾದ ಸ್ಕೂಟರಿನ ಅಂದಾಜು ಮೌಲ್ಯ ರೂ.60,000 ಆಗಿದೆ. ವಿಶೇಷ ತಂಡದ ಕಾರ್ಯಾಚರಣೆ ಪ್ರಕರಣದ ಗಂಭೀರತೆಯನ್ನು ಮನಗಂಡ…

Read More

ಕಲ್ಲೂರು ಪ್ರತಿಷ್ಠಾನದ ಆಶ್ರಯದಲ್ಲಿ ಪೇಜಾವರ ಶ್ರೀ ವಿಶ್ವೇಶ್ವರತೀರ್ಥರ ಸ್ಮರಣೆ ಮತ್ತು ಆದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ‘ಪೇಜಾವರ ಶ್ರೀ ವಿಶ್ವೇಶ್ವರತೀರ್ಥ ನಮನ – 2025’ ಕಾರ್ಯಕ್ರಮವನ್ನು ದಿನಾಂಕ 29 ಡಿಸೆಂಬರ್ 2025, ಸೋಮವಾರ ಮಂಗಳೂರಿನ ವಾದಿರಾಜ ಮಂಟಪದಲ್ಲಿ ಭಕ್ತಿಭಾವದಿಂದ ಆಯೋಜಿಸಲಾಯಿತು. ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಮಾಜಕ್ಕೆ ವಿಶಿಷ್ಟ ಸೇವೆ ಸಲ್ಲಿಸಿದ ಗಣ್ಯರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಸಮಾರಂಭವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿ ಸಮಾಜಸೇವೆಯಲ್ಲಿ ಸುದೀರ್ಘ ಹಾಗೂ ನಿರಂತರ ಸೇವೆ ಸಲ್ಲಿಸಿರುವ ಗಣ್ಯರಿಗೆ‘ಪೇಜಾವರ ಶ್ರೀ ವಿಶ್ವೇಶ್ವರತೀರ್ಥ ಜೀವಮಾನ ಸಾಧನಾ ಪ್ರಶಸ್ತಿ’ಪ್ರದಾನಿಸಿ ಗೌರವಿಸಲಾಯಿತು. ಈ ಗೌರವವನ್ನು ಸ್ವೀಕರಿಸಿದವರುಶ್ರೀ ಜೇಮ್ಸ್ ವಿನ್ಸಂಟ್ ಮೆಂಡೋನ್ಸಾ (ಸಮಾಜಸೇವಕ, ಶಿಕ್ಷಣ ಪ್ರೋತ್ಸಾಹಕ ಹಾಗೂ ವಿವಿಧ ಸಂಘ–ಸಂಸ್ಥೆಗಳೊಂದಿಗೆ ಸಕ್ರಿಯವಾಗಿ ಕಾರ್ಯನಿರ್ವಹಿಸಿದ ಗಣ್ಯರು) ಪಾಲಿಮಾರು ಮಠ, ಪೇಜಾವರ ಮಠ, ಏದನೀರು ಮಠ ಹಾಗೂ ಮೂಡಬಿದ್ರೆ ಜೈನ ಮಠಗಳ ಶ್ರೀ ಶ್ರೀ ಸ್ವಾಮೀಜಿಗಳ ಪವಿತ್ರ ಸಾನ್ನಿಧ್ಯದಲ್ಲಿ ಪ್ರಶಸ್ತಿ…

Read More

ಶ್ರೀ ಮಂಗಳಾದೇವಿ ಅಯ್ಯಪ್ಪ ಭಕ್ತ ವೃಂದದ ಆಶ್ರಯದಲ್ಲಿ 54ನೇ ವರ್ಷದ ಶಬರಿಮಲೆ ಯಾತ್ರೆಯ ಅಂಗವಾಗಿ ಆಯೋಜಿಸಲಾದ 43ನೇ ವರ್ಷದ ಮಂಡಲಪೂಜೆಯ ಭಜನಾ ಮಹೋತ್ಸವವು ಡಿಸೆಂಬರ್ 27, 2025ರ ಶನಿವಾರ ಭಕ್ತಿಭಾವ ಮತ್ತು ವೈಭವದಿಂದ ನೆರವೇರಿತು. ಸೂರ್ಯಾಸ್ತದ ಸಮಯ ಸಂಜೆ 6.02ಕ್ಕೆ ಶ್ರೀ ನಾಗರಾಜ್–ರೇಖಾ ನಾಗರಾಜ್ ದಂಪತಿಗಳು ನಂದಾದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಗುರುಪುರ ವಜ್ರದೇಹಿ ಮಠದ ಯತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಸಂಕೀರ್ತನೆಯೊಂದಿಗೆ ಭಜನಾ ಮಹೋತ್ಸವವನ್ನು ಉದ್ಘಾಟಿಸಿ ಭಕ್ತರಿಗೆ ಆಶೀರ್ವಚನ ನೀಡಿದರು. ರಾತ್ರಿ 8.00 ಗಂಟೆಗೆ ಮಂಡಲಪೂಜೆಯ ವಿಶೇಷ ಪೂಜೆ ನೆರವೇರಿದ್ದು, ಬಳಿಕ ಮರುದಿನ ಸೂರ್ಯೋದಯದವರೆಗೆ ನಿರಂತರ ಭಜನಾ ಕಾರ್ಯಕ್ರಮ ನಡೆಯಿತು. ವಿವಿಧ ಭಜನಾ ತಂಡಗಳು ಸಂಕೀರ್ತನೆಗಳಲ್ಲಿ ಭಾಗವಹಿಸಿ ಸಂಪೂರ್ಣ ವಾತಾವರಣವನ್ನು ಭಕ್ತಿಮಯವನ್ನಾಗಿ ಮಾಡಿದರು. ಈ ಅವಧಿಯಲ್ಲಿ ಪ್ರತಿ ಎರಡು ಗಂಟೆಗೊಮ್ಮೆ ಜಾಮ ಪೂಜೆಗಳು ಭಕ್ತಿಪೂರ್ವಕವಾಗಿ ನೆರವೇರಿದವು. ಕಾರ್ಯಕ್ರಮದಲ್ಲಿ ಶಾಸಕ ಶ್ರೀ ವೇದವ್ಯಾಸ ಕಾಮತ್, ಮಾಜಿ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಸಾಸ್…

Read More

ಮಂಗಳೂರು: ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಸಿಟಿಯಲ್ಲಿ ಮಂಗಳೂರು ಕಂಬಳ ಸಮಿತಿಯ ವತಿಯಿಂದ ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ 9ನೇ ವರ್ಷದ ಮಂಗಳೂರು ಕಂಬಳ ಅದ್ದೂರಿಯಾಗಿ ನೆರವೇರಿತು. ಪರಂಪರೆ, ಸಂಭ್ರಮ ಮತ್ತು ಸ್ಪರ್ಧಾತ್ಮಕತೆಯ ಸಂಗಮವಾಗಿ ಮೂಡಿಬಂದ ಈ ಕಂಬಳ ಕೂಟದಲ್ಲಿ ಒಟ್ಟು 141 ಜೊತೆ ಕೋಣಗಳು ಭಾಗವಹಿಸಿ ಪ್ರೇಕ್ಷಕರನ್ನು ರಂಜಿಸಿವೆ. ವಿಭಾಗವಾರು ಸ್ಪರ್ಧೆಯಲ್ಲಿ ಕನೆಹಲಗೆ ವಿಭಾಗದಲ್ಲಿ 9 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 10 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 17 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 26 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 19 ಜೊತೆ ಹಾಗೂ ನೇಗಿಲು ಕಿರಿಯ ವಿಭಾಗದಲ್ಲಿ 60 ಜೊತೆ ಕೋಣಗಳು ಪೈಪೋಟಿ ನಡೆಸಿದವು. ಫಲಿತಾಂಶಗಳು: ಅಡ್ಡಹಲಗೆ ವಿಭಾಗ ಹಗ್ಗ ಹಿರಿಯ ವಿಭಾಗ ಹಗ್ಗ ಕಿರಿಯ ವಿಭಾಗ ನೇಗಿಲು ಹಿರಿಯ ವಿಭಾಗ ನೇಗಿಲು ಕಿರಿಯ ವಿಭಾಗ ಪರಂಪರೆಯ ಕ್ರೀಡೆಗೆ ಹೊಸ ಉತ್ಸಾಹ ತುಂಬಿದ ಈ ವರ್ಷದ ಮಂಗಳೂರು ಕಂಬಳ ಕೂಟವು ಅಪಾರ ಜನಸ್ತೋಮದ ನಡುವೆ ಯಶಸ್ವಿಯಾಗಿ ಸಂಪನ್ನವಾಯಿತು.

Read More

ಪ್ರಮುಖ ಅರ್ಥಧಾರಿಗಳಾದ ಡಾ. ಎಂ. ಪ್ರಭಾಕರ ಜೋಶಿ, ಭಾಸ್ಕರ ರೈ ಕುಕ್ಕುವಳ್ಳಿ, ಜಬ್ಬಾರ್ ಸಮೋ ಸಂಪಾಜೆ ಮತ್ತು ಪ್ರಸಾದ ಪೂಜಾರಿ ಭಟ್ಕಳ ವಿವಿಧ ಪಾತ್ರ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುತ್ತಿರುವ ಜಿಲ್ಲಾ ಕರಾವಳಿ ಉತ್ಸವ – 2025 ಅಂಗವಾಗಿ ದಶಂಬರ 21ರಂದು ದಕ್ಷಿಣೋತ್ತರ ಕನ್ನಡ ಜಿಲ್ಲೆಗಳ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ಜರಗಿತು. ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ನೇತೃತ್ವದ ಆಕಾಶವಾಣಿ ಮತ್ತು ದೂರದರ್ಶನ ಖ್ಯಾತಿಯ ಕರ್ನಾಟಕ ಯಕ್ಷ ಭಾರತಿ ಪುತ್ತೂರು ತಂಡವು ಕರಾವಳಿ ಉತ್ಸವದ ವಸ್ತು ಪ್ರದರ್ಶನ ವೇದಿಕೆಯಲ್ಲಿ ‘ವೀರಮಣಿ ಕಾಳಗ’ ಪ್ರಸಂಗವನ್ನು ಪ್ರಸ್ತುತಪಡಿಸಿತು. ಯಕ್ಷಗಾನ ರಂಗದ ಪ್ರಮುಖ ಅರ್ಥಧಾರಿಗಳಾದ ಡಾ. ಎಂ. ಪ್ರಭಾಕರ ಜೋಶಿ, ಭಾಸ್ಕರ ರೈ ಕುಕ್ಕುವಳ್ಳಿ, ಜಬ್ಬಾರ್ ಸಮೋ ಸಂಪಾಜೆ ಮತ್ತು ಪ್ರಸಾದ ಪೂಜಾರಿ ಭಟ್ಕಳ ವಿವಿಧ ಪಾತ್ರಗಳನ್ನು ನಿರ್ವಹಿಸಿದರು. ಭಾಗವತ ಹರೀಶ ಶೆಟ್ಟಿ ಸೂಡ ಅವರ ಹಾಡುಗಾರಿಕೆಗೆ ವಿಕಾಸ್ ರಾವ್ ಕೆರೆಕಾಡ್ , ಶ್ರೀಶ ರಾವ್ ನಿಡ್ಲೆ…

Read More

ಮಂಗಳೂರು: ರಾಜ್ಯದ ಕಾರಾಗೃಹ ವ್ಯವಸ್ಥೆಯ ಮೇಲ್ವಿಚಾರಣೆಯ ಭಾಗವಾಗಿ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರು ಮಂಗಳೂರು ಸೂಕ್ಷ್ಮ ಕಾರಾಗೃಹಕ್ಕೆ ಔಪಚಾರಿಕವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ ಒಟ್ಟು 54 ಕಾರಾಗೃಹಗಳಿದ್ದು, ಅವುಗಳನ್ನು ಸಮಯಕ್ಕೆ ಸರಿಯಾಗಿ ಪರಿಶೀಲಿಸುವುದು ಅಗತ್ಯವಿದೆ ಎಂದು ಅವರು ಹೇಳಿದರು. ಮಂಗಳೂರು ಕಾರಾಗೃಹವನ್ನು ‘ಸೂಕ್ಷ್ಮ’ ಎಂದು ಗುರುತಿಸಿದ ಡಿಜಿಪಿ, ಈಗಾಗಲೇ ಇಲ್ಲಿ ವಿವಿಧ ರೈಡ್‌ಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು. ಒಳಗಡೆ ಗಲಾಟೆ ಸೃಷ್ಟಿಸಿದ ಖೈದಿಗಳನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಲಾಗಿದ್ದು, ಇನ್ನೂ ಕೆಲವರನ್ನು ಸ್ಥಳಾಂತರಿಸುವ ಪ್ರಕ್ರಿಯೆ ನಡೆಯಲಿದೆ ಎಂದರು. ಉತ್ತಮ ನಡತೆ ಹೊಂದಿರುವ ಖೈದಿಗಳಿಗೆ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು. ಕಾರಾಗೃಹದೊಳಗೆ ನಿಷೇಧಿತ ವಸ್ತುಗಳ ಪ್ರವೇಶವನ್ನು ತಡೆಗಟ್ಟುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದ್ದು, ಯಾವ ರೀತಿಯಲ್ಲಿ ಅಕ್ರಮ ವಸ್ತುಗಳು ಒಳಗೆ ಬರುತ್ತಿವೆ ಎಂಬುದರ ಕುರಿತು ಸಮಗ್ರ ಪರಿಶೀಲನೆ ನಡೆಯುತ್ತಿದೆ ಎಂದರು. ಈ ಹಿನ್ನೆಲೆಯಲ್ಲಿ ಟ್ರಯಲ್ ಬೇಸಿಸ್‌ನಲ್ಲಿ ಎಐ (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಅದರ ಪರಿಣಾಮಕಾರಿತ್ವವನ್ನು…

Read More

ಮಂಗಳೂರು ; ಕ್ರಿಸ್‌ಮಸ್ ಹಬ್ಬದ ಈ ಪವಿತ್ರ ಸಂದರ್ಭದಲ್ಲಿ, ಯೇಸು ಕ್ರಿಸ್ತರು ಈ ಜಗತ್ತಿಗೆ ತಂದ ಪ್ರೀತಿ, ಶಾಂತಿ ಮತ್ತು ಮಾನವೀಯತೆಯ ಶಾಶ್ವತ ಸಂದೇಶವನ್ನು ನಾವು ಇವತ್ತು ಕೃತಜ್ಞತೆಯಿಂದ ಸ್ಮರಿಸುತ್ತೇವೆ. ಈ ಹಬ್ಬವು ಸಮಾಜದಲ್ಲಿ ಸತ್ಯ, ನ್ಯಾಯ ಹಾಗೂ ಸಹಜೀವನದ ಮೌಲ್ಯಗಳನ್ನು ಮರುಸ್ಥಾಪಿಸುವ ವಿಶಿಷ್ಟ ಅವಕಾಶವನ್ನು ಒದಗಿಸುತ್ತದೆ ಎಂದು ನಾವು ಸ್ಪಷ್ಟವಾಗಿ ಹೇಳಬಹುದು ಎಂದು ಧರ್ಮಾಧ್ಯಕ್ಷರಾದ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ ರವರು ತಿಳಿಸಿದ್ದಾರೆ. ನಮ್ಮ ಸಮಾಜದಲ್ಲಿ ಹಿಂಸೆ, ವಂಚನೆ, ತಪ್ಪು ಮಾಹಿತಿ ಮತ್ತು ಪರಸ್ಪರ ಅವಿಶ್ವಾಸವನ್ನು ಉತ್ತೇಜಿಸುವ ಸವಾಲುಗಳು ಹೆಚ್ಚುತ್ತಲೇ ಇವೆ. ಸಾರ್ವಜನಿಕ ವಲಯಗಳಲ್ಲಿ ಸತ್ಯ, ನ್ಯಾಯ, ಮತ್ತು ಸೌಹಾರ್ದ ಕುಂದುತ್ತಿರುವುದು ದೇಶದ ಭವಿಷ್ಯದ ಹಿತದೃಷ್ಟಿಯಿಂದ ಚಿಂತಾಜನಕವಾಗಿ ಪರಿಣಮಿಸಿವೆ. ವ್ಯಕ್ತಿಯ ಖಾಸಗಿತನ, ಗೌರವಯುತ ಜೀವನ, ಹಾಗೂ ಧಾರ್ಮಿಕ ಸ್ವಾತಂತ್ರ್ಯದಂತಹ ಮೂಲಭೂತ ಹಕ್ಕುಗಳು ದಿನದಿಂದ ದಿನಕ್ಕೆ ಅಪಾಯದ ಅಂಚಿಗೆ ಹೋಗುತ್ತಿವೆಯೇನೋ ಎಂಬಂತೆ ಕಾಣುತ್ತಿವೆ. ಜಾತಿ-ಧರ್ಮ-ಕುಲ-ಅಂತಸ್ತು ಇವುಗಳ ಆಧಾರದ ಮೇಲೆ ಒಬ್ಬರಿಗೊಬ್ಬರನ್ನು ಎತ್ತಿಕಟ್ಟುವುದು ಜಾಸ್ತಿಯಾಗುತ್ತಾ ಇದೆ. ಪ್ರತಿ ದಿನ ಸಾಕಷ್ಟು ಮುಗ್ಧ ಜನರು ವಂಚಕರ…

Read More

ಎಂ.ಆರ್.ಜಿ. ಗ್ರೂಪ್‌ನ ಆಶಾ–ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆ ‘ನೆರವು–2025’ ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಸುಮಾರು 4,000 ಕುಟುಂಬಗಳು ಹಾಗೂ 100ಕ್ಕೂ ಅಧಿಕ ಸಂಘ–ಸಂಸ್ಥೆಗಳಿಗೆ ಒಟ್ಟು ₹9.5 ಕೋಟಿ ಮೊತ್ತದ ನೆರವು ವಿತರಿಸಲಾಗಲಿದೆ ಎಂದು ಎಂ.ಆರ್.ಜಿ. ಗ್ರೂಪ್‌ನ ಚೇರ್ಮನ್ ಡಾ. ಪ್ರಕಾಶ್ ಶೆಟ್ಟಿ ಪ್ರಕಟಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೆರವು’ ಯೋಜನೆ ಈ ವರ್ಷ ಏಳನೇ ವರ್ಷಕ್ಕೆ ಕಾಲಿಟ್ಟಿದ್ದು, ಮುಂದಿನ ಮೂರು ವರ್ಷಗಳ ಕಾಲ ಮುಂದುವರಿಯಲಿದೆ ಎಂದು ತಿಳಿಸಿದರು. ದಶಮಾನೋತ್ಸವದ ನಂತರ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಯೋಜನೆಗೆ ಸಾಮೂಹಿಕ ಸ್ವರೂಪ ನೀಡುವ ಚಿಂತನೆ ಇದೆ. ಈ ವಿಸ್ತರಣೆಯಿಂದ ಮುಂದಿನ ದಿನಗಳಲ್ಲಿ ಪ್ರತಿವರ್ಷ ಕನಿಷ್ಠ 14,000 ಕುಟುಂಬಗಳಿಗೆ ನೆರವು ನೀಡುವ ಸಾಧ್ಯತೆ ಇದೆ ಎಂದು ಹೇಳಿದರು. ಆಧುನಿಕ ತಂತ್ರಜ್ಞಾನ ಯುಗದಲ್ಲಿಯೂ ವೈದ್ಯಕೀಯ ಚಿಕಿತ್ಸೆ ಎಲ್ಲರಿಗೂ ಸುಲಭವಾಗಿ ಲಭ್ಯವಾಗುತ್ತಿಲ್ಲ ಎಂಬ ವಾಸ್ತವವನ್ನು ಉಲ್ಲೇಖಿಸಿದ ಡಾ. ಶೆಟ್ಟಿ, ಈ ಬಾರಿ…

Read More

ಉಡುಪಿ: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್‌ಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ ಘಟನೆ ಕಾಪು ಠಾಣಾ ವ್ಯಾಪ್ತಿಯ ನಡ್ಸಾಲು ಎಂಬಲ್ಲಿ ನಡೆದಿದೆ. ಉಚ್ಚಿಲ ಪೊಲ್ಯದ ಯತಿರಾಜ ಪೊಲ್ಯ ಶೆಟ್ಟಿ(48), ಮತ್ತು ಕಾಡಿಪಟ್ಣ ನವೀನ್ ಪೂಜಾರಿ(39) ಬಂಧಿತ ಆರೋಪಿಗಳು. ಕಾಪು ತಾಲೂಕು ನಡ್ಸಾಲು ಗ್ರಾಮದ ರಾ.ಹೆ 66ರ ಪಕ್ಕದಲ್ಲಿರುವ ಮಹಾದೇವಿ ಟೂರಿಸ್ಟ್ ಹೋಮ್ ಲಾಡ್ಜ್‌ನಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿಯಂತೆ ಪಡುಬಿದ್ರಿ ಪೊಲೀಸರು ಕಾಪು ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Read More

ಧರ್ಮಸ್ಥಳ: ಪ್ರತಿಷ್ಠಿತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ 2026–28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಮಹಾ ಚುನಾವಣೆಯು ಇಂದು ಬೆಳಿಗ್ಗೆ 10.30 ಗಂಟೆಗೆ ಕಾಲೇಜಿನ ಎಸ್‌ಡಿಎಂ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ತಾರನಾಥ್ ಶೆಟ್ಟಿ ಅವರ ನೇತೃತ್ವದಲ್ಲಿ ಕಳೆದ ಹತ್ತು ದಿನಗಳಿಂದ ನಡೆಯುತ್ತಿದ್ದ ಚುನಾವಣಾ ಪ್ರಕ್ರಿಯೆ ಇಂದು ಮತ ಎಣಿಕೆ ಹಾಗೂ ವಿಜೇತ ಅಭ್ಯರ್ಥಿಗಳ ಘೋಷಣೆಯೊಂದಿಗೆ ಸಂಪೂರ್ಣಗೊಂಡಿತು. ಮತ ಎಣಿಕೆ ಪ್ರಕ್ರಿಯೆಯು ಕಾಲೇಜಿನ ಎರಡನೇ ಮಹಡಿಯಲ್ಲಿ ಶಾಂತ ಹಾಗೂ ಪಾರದರ್ಶಕ ರೀತಿಯಲ್ಲಿ ನಡೆಯಿತು. ಚುನಾವಣೆಯ ಫಲಿತಾಂಶದಂತೆ 2026–28ನೇ ಸಾಲಿನ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ರಾಘವೇಂದ್ರ ರಾವ್, ಉಪಾಧ್ಯಕ್ಷರಾಗಿ ಉಮೇಶ್ ಗಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಈ ದಿನಕರ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಜಯಶ್ರೀ ರಟ್ಟಿಹಳ್ಳಿ, ಸಂಚಾಲಕರಾಗಿ ಅಶ್ವಿನ್ ಹಾಗೂ ವಿನೋದ್ ಕುಮಾರ್ ಎ. ರವರು ಆಯ್ಕೆಯಾಗಿದ್ದಾರೆ. ಎಲ್ಲಾ ವಿಜೇತ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಗೆಲುವು ಸಾಧಿಸಿದ್ದಾರೆ. ಈ ಸಂದರ್ಭ ನಡೆದ…

Read More