Author: Tulunada Surya

ಮಂಗಳೂರು :- ಕೈಗಾರಿಕೆಗಳು ಹಾಗೂ ಜನವಸತಿ ಪ್ರದೇಶಗಳಲ್ಲಿ ಅವಘಡ ಮತ್ತು ವಿಪತ್ತುಗಳಿಂದ ರಕ್ಷಿಸಲು ಏಕೀಕೃತ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ ಪಿ ಕರೆ ನೀಡಿದ್ದಾರೆ.ಅವರು ಗುರುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ 54ನೇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ರಿಸ್ಕ್ ಕೈಗಾರಿಕೆಗಳು ಸೇರಿದಂತೆ ವಿವಿಧ ರೀತಿಯ ಉದ್ಯಮಗಳು ಇವೆ. ಇವು ತಮ್ಮ ಸುರಕ್ಷತಾ ವ್ಯವಸ್ಥೆಯನ್ನು ಆಗಿಂದ್ದಾಗೆ ಪರಿಶೀಲಿಸುತ್ತಿರಬೇಕು. ಯಾವುದೇ ಅನಾಹುತಗಳಾದರೆ ಅವುಗಳ ಪರಿಣಾಮ ಇತರೆ ಪ್ರದೇಶಗಳಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಕೈಗಾರಿಕೆಗಳು ಮತ್ತು ಜನವಸತಿ ಪ್ರದೇಶಗಳ ಸುರಕ್ಷತೆಗೆ ಎಲ್ಲಾ ಭಾಗೀದಾರಿ ಇಲಾಖೆಗಳು ಹಾಗೂ ಸುರಕ್ಷತಾ ಏಜೆನ್ಸಿಗಳು ಏಕೀಕೃತವಾದ ಸುರಕ್ಷತಾ ವ್ಯವಸ್ಥೆಯನ್ನು ಹೊಂದಬೇಕು. ಇದರಿಂದ ಯಾವುದೇ ಅನಾಹುತಗಳ ಸಂದರ್ಭದಲ್ಲಿ ಜೀವ ಹಾನಿ ಮತ್ತು ನಷ್ಟದ ಪ್ರಮಾಣವನ್ನು ತಗ್ಗಿಸಬಹುದಾಗಿದೆ ಎಂದು ಅವರು ಹೇಳಿದರು.ನಾಗರೀಕರು ತಮ್ಮ ದೈನಂದಿನ ಬದುಕಿನಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನು ಆಗಿಂದ್ದಾಗೆ ಪರಿಶೀಲಿಸಬೇಕು. ಯಾವುದೇ ಅನಾಹುತಗಳಿಂದ ಮಾನಸಿಕ ಸ್ಥಿರತೆ…

Read More

ಉಡುಪಿ ತಾಲೂಕಿನ ಮಲ್ಪೆಯಲ್ಲಿ ಮೀನು ಕಳ್ಳತನದ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವಂತಹ ಅಮಾನವೀಯ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಡಿಸಿ ಮತ್ತು ಎಸ್ಪಿ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಕೂಡಲೇ ಮೂವರು ಆರೊಪಿಗಳನ್ನು ಬಂಧಿಸಿದ್ದಾರೆ‌. ಈ ಬಗ್ಗೆ ಸಿ.ಎಂ ಸಿದ್ದರಾಮಯ್ಯ ತಮ್ಮ x ಖಾತೆಯಲ್ಲಿ ಆಕ್ರೋಶ ಹೊರಹಾಕಿದ್ದುಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು.ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ. ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ, ದೂರು ದಾಖಲಿಸಿದರೆ ಪೊಲೀಸರು ತನಿಖೆ…

Read More

ಉಡುಪಿ: ಇಸ್ಪೀಟು ಜುಗಾರಿ ಅಂದರ್-ಬಾಹರ್ ಆಡುತ್ತಿದ್ದ ವೇಳೆ ಪೊಲೀಸ್‌ ದಾಳಿ ನಡೆಸಿ ಏಳು ಮಂದಿಯನ್ನು ವಶಕ್ಕೆ ಪಡೆದ ಘಟನೆ ಬೀಡನಗುಡ್ಡೆ ಮಹಾತ್ಮಗಾಂಧಿ ಬಯಲು ರಂಗ ಮಂದಿರದ ಬಳಿ ನಡೆದಿದೆ. ಬಂಧಿತರನ್ನು ನಾಗರಾಜ್, ಯಮುನಪ್ಪ, ಮಂಜುನಾಥ, ಅಮಿನ್ ಸಾಬ್, ಸಿದ್ದಪ್ಪ, ಗುರು, ಪರಶುರಾಮ ಎಂದು ಗುರುತಿಸಲಾಗಿದೆ. ಬೀಡನಗುಡ್ಡೆ ಮಹಾತ್ಮಗಾಂಧಿ ಬಯಲು ರಂಗ ಮಂದಿರದ ಬಳಿ ಮಾ.16ರಂದು ಇಸ್ಪೀಟು ಜುಗಾರಿ ಅಂದರ್-ಬಾಹರ್ ಆಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು 32,800ರೂ. ನಗದು ಸ್ವಾಧೀನ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ಮಸ್ಕಿರಿ ಕುಡ್ಲ ಅರ್ಪಿಸುವ ತುಳು ರಂಗಭೂಮಿಯಲ್ಲಿ ವಿಶೇಷ ರೀತಿಯಾ ರಂಗಪ್ರಯೋಗದಲ್ಲಿ ಮಿನುಗುತ್ತಿರುವ ಈ ವರ್ಷದ ಸೂಪರ್ ಹಿಟ್ ನಾಟಕ ಶಿರಡಿ ಸಾಯಿಬಾಬಾ ಮಂದಿರ ಆಶ್ರಿತ ಸಾಯಿಶಕ್ತಿ ಕಲಾ ಬಳಗ ಅರ್ಪಣೆ ಮಾಡುವ ಎರಡನೇ ಕಲಾಕಾಣಿಕೆ ಜೋಡು ಜೀಟಿಗೆ ನಾಟಕದ 25ನೇ ಅದ್ದೂರಿ ಪ್ರದರ್ಶನ ಮಂಗಳೂರಿನ ಪುರಭವನದಲ್ಲಿ ಇದೇ ಬರುವ ತಾರೀಕು ಮಾರ್ಚ್ 23, 2025, ಭಾನುವಾರ ಸಂಜೆ 5:30ಕ್ಕೆ ನಡೆಯಲಿದೆ. ತುಳು ರಂಗಭೂಮಿಯ ಇತಿಹಾಸದಲ್ಲಿ ಅದ್ಭುತ ಸಾಧನೆಯೊಂದಕ್ಕೆ ಸಾಯಿಶಕ್ತಿ ಕಲಾ ಬಳಗ ಮುನ್ನುಗ್ಗಿದೆ ಈ ನಾಟಕವು ಮುಂಬಯಿ ಮತ್ತು ಉಡುಪಿ ಮತ್ತು ಕಾಸರಗೋಡಿನಲ್ಲಿ ಏಕಕಾಲದಲ್ಲಿ ಪ್ರದರ್ಶನಗೊಳ್ಳುವ ಮೂಲಕ ವಿಶಿಷ್ಟ ಸಾಧನೆ ಮಾಡಿದೆ. ಶ್ರೀಮತಿ ಲಾವಣ್ಯ ವಿಶ್ವಾಸ್ ದಾಸ್ ಇವರ ನಿರ್ಮಾಣ ಮತ್ತು ನಿರ್ದೇಶನದ ಶ್ರೀಯುತ ಕೀರ್ತನ್ ಭಂಡಾರಿ ಕುಲಾಯಿ ರಚನೆಯ,ಗೌರವ್ ಶೆಟ್ಟಿಗಾರ್ ಮಠದಕಣಿ ಇವರ ನಿರ್ವಹಣೆಯಲ್ಲಿ ನಾಟಕ ಮೂಡಿ ಬರಲಿದೆ. ಕಾರ್ಯಕ್ರಮದ ಅತಿಥಿಗಳಾಗಿ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್, ಶ್ರೀ ಶಿರಡಿ ಸಾಯಿಬಾಬ ಮಂದಿರ, ಚಿಲಿಂಬಿಯ…

Read More

ಮಂಗಳೂರು : ಡಾ ವಾಮನ ನಂದಾವರ ಅವರ ಜಾನಪದ ಅಧ್ಯಯನದಲ್ಲಿ ವೈಜ್ಞಾನಿಕ ಶಿಸ್ತು ಇತ್ತು ಅದರ ಜೊತೆಗೆ ಹಳ್ಳಿಯ ಸೊಗಡು ಕೂಡ ಇತ್ತು, ಸಂಶೋಧಕನ ಸಹಜ ಚಿಂತನಾ ದೃಷ್ಟಿಕೋನ ಹಾಗೂ ಕವಿತೆ ಕಟ್ಟುವ ಕವಿತ್ವದ ಸಮಚಿತ್ತ ಅವರದ್ದಾಗಿತ್ತು ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಬಿ.ಎ. ವಿವೇಕ ರೈ ಅವರು ಅಭಿಪ್ರಾಯಪಟ್ಟರು.ಇತ್ತೀಚೆಗೆ ನಿಧನರಾದ ಕರ್ನಾಟಕ ತುಳು ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಡಾ.ವಾಮನ ನಂದಾವರ ಅವರಿಗೆ ಮಂಗಳೂರಿನ ತುಳುಭವನದಲ್ಲಿ ಹಮ್ಮಿಕೊಳ್ಳಲಾದ ಶ್ರದ್ಧಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿ ಅವರು ಮಾತನಾಡಿದರು.ಡಾ ವಾಮನ ನಂದಾವರ ಅವರ ‘ಕೋಟಿ ಚೆನ್ನಯ’ ಗ್ರಂಥವು ಅತ್ಯಂತ ತಳಸ್ಪರ್ಶಿ ಕ್ಷೇತ್ರ ಕಾರ್ಯದ ಅಧ್ಯಯನದ ಮೂಲಕ ಪ್ರಕಟಗೊಂಡ ಶ್ರೇಷ್ಠ ಕೃತಿಯಾಗಿದೆ. ಕೋಟಿ ಚೆನ್ನಯರ ಬಗ್ಗೆ ಹಾಗೂ ತುಳು ಜಾನಪದ ಅಧ್ಯಯನ ಸಲುವಾಗಿ ಬಂದಂತಹ ಅಂತರಾಷ್ಟ್ರೀಯ ಸಂಶೋಧಕರೆಲ್ಲರೂ ಡಾ.ವಾಮನ ನಂದಾವರ ಅವರನ್ನು ಎಲ್ಲಾ ಸಂದರ್ಭದಲ್ಲೂ ಉಲ್ಲೇಖಿಸಿರುತ್ತಾರೆ ಅನ್ನುವುದು ಅವರ ಅಧ್ಯಯನಕ್ಕೆ ಸಂದ ಗೌರವವಾಗಿದೆ ಎಂದು ಪ್ರೊ.ಬಿ.ಎ.ವಿವೇಕ ರೈ ಅವರು ಹೇಳಿದರು. 1997ರಲ್ಲಿ…

Read More

ಉಡುಪಿ: ಸಾತ್ವಿಕರ ನೆಲೆವೀಡಾದ ಕೃಷ್ಣನೂರಿನ ಮಲ್ಪೆ ಬಂದರಿನಲ್ಲಿ ಮೀನು ಕದ್ದಿದ್ದಾರೆ ಎಂಬ ಆರೋಪದಡಿ ದಲಿತ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಅಮಾನುಷ ಘಟನೆಯು ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.  ಮಹಿಳೆ ಮೀನು ಕದ್ದಿದ್ದರೇ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸುವ ಹಕ್ಕು ಮೀನಿನ ಮಾಲೀಕರಿಗಿತ್ತು. ಆದರೆ ಕಾನೂನನ್ನು ಕೈಗೆತ್ತಿಕೊಂಡು ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ, ಶೌರ್ಯ ಮೆರೆಯುವುದು ಎಷ್ಟು ಸರಿ. ಈ ವಿಕೃತ ಮನಸ್ಥಿತಿಯ ಕೆಲವು ಪುಂಡರಿಂದ ಇಡೀ ಉಡುಪಿ ತಲೆ ತಗ್ಗಿಸುವಂತಾಗಿದೆ.  ಘಟನೆ ನಡೆದ ತಕ್ಷಣ ಪ್ರಕರಣ ದಾಖಲಿಸಬೇಕಾಗಿದ್ದ ಪೋಲಿಸರು ತಡವಾಗಿ ಪ್ರಕರಣ ದಾಖಲಿಸಿರುವ ಹಿಂದೆ ಕಾಣದ ಕೈಗಳ ಕೈವಾಡವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇನ್ನಾದರೂ ಪೋಲಿಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆಗೊಳಗಾದ ಮಹಿಳೆಗೆ ಸೂಕ್ತ ನ್ಯಾಯ ದೊರಕಿಸಬೇಕೆಂದು ಅವರು ಆಗ್ರಹಿಸಿದ್ದಾರೆ

Read More

ಮೂಡುಬಿದಿರೆ: ಮಾನ್ಯವರ್ ಕಾನ್ಸಿ ರಾಮ್ ರವರು ಬಹುಜನ ಚಳುವಳಿಗೆ ಮಾಡಿದ ತ್ಯಾಗ ಹಾಗೂ ಕೊಡುಗೆಯ ಫಲವಾಗಿ ಬಿ.ಏಸ್.ಪಿ.ಯು ರಾಷ್ಟ್ರ ಮಟ್ಟದಲ್ಲಿ 3ನೇ ಪಾರ್ಟಿಯಾಗಿ ಬೆಳೆದಿದೆ ಎಂದು ಬಿ. ಏಸ್. ಪಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಟಿ. ರಾಧಕೃಷ್ಣ ಹೇಳಿದರು. ದ. ಕ. ಮೂಡಬಿದ್ರಿ ಸಮಾಜ ಮಂದಿರದಲ್ಲಿ ಬಹುಜನ ಸಮಾಜ ಪಾರ್ಟಿ, ದ. ಕ. ಜಿಲ್ಲಾ ಘಟಕ ಇದರ ವತಿಯಿಂದ ರವಿವಾರ ಹಮ್ಮಿಕೊಂಡಿದ್ದ ಮಾನ್ಯವರ್ ಕಾನ್ಸಿರಾಮ್ ರವರ ಹುಟ್ಟುಹಬ್ಬವನ್ನು ಬಹುಜನ ದಿವಸ ಆಚರಣೆ ಪ್ರಯುಕ್ತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಬಿಎಸ್. ಪಿ. ಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್ ರವರು ಬಿ. ಏಸ್. ಪಿ. ಜಿಲ್ಲಾ ಘಟಕ ಏರ್ಪಡಿಸಿದ ವಿಚಾರ ಸಂಕಿರಣದಲ್ಲಿ ಮಾನವ್ಯರ್ ಕಾನ್ಸಿರಾಮ್ ರವರ ಸಿದ್ಧಾಂತ ಹಾಗೂ ರಾಜಕಾರಣ ಎಂಬ ವಿಷಯದಲ್ಲಿ ವಿಚಾರ ಮಂಡಸಿ ಮಾತನಾಡುತ್ತ ಬಹುಜನ ಸಮಾಜ ಪಾರ್ಟಿಯ ಸ್ಥಾಪಕ ಮಾನ್ಯವರ್ ಕಾನ್ಸಿರಾಮ್ ರವರು ಈ ದೇಶ ಕಂಡ ಮಹಾನ್ ರಾಜಕೀಯ ಮುತ್ಸದಿ. ಉತ್ತರ…

Read More

ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿ (ರಿ) ಮತ್ತು ತುಳುನಾಡ ರಕ್ಷಣಾ ವೇದಿಕೆ ಸಹಭಾಗಿತ್ವದಲ್ಲಿ ತುಳುನಾಡ ವೀರ ರೈತರಿಂದ ನಡೆದ ಸ್ವಾತಂತ್ರ್ಯ ಸಂಗ್ರಾಮ ತುಳುನಾಡ ಅಮರ ಸುಳ್ಯ ಸಮರ _1837 ಸಂಸ್ಮರಣಾ ಮತ್ತು ವಿಜಯದಿನಾಚರಣೆ ಕಾರ್ಯಕ್ರಮ ಪ್ರಯುಕ್ತ ಚಿತ್ರ ಕಲಾ ಸ್ಪರ್ಧೆಗಳ ನಡೆಯಲಿದೆ. ಮಂಗಳೂರು ಬಾವುಟ ಗುಡ್ಡೆಯಲ್ಲಿ ದಿನಾಂಕ 05-04-2025 ರಂದು ಸಮಯ ಬೆಳಿಗ್ಗೆ 9.00 ರಿಂದ ವಿವಿಧ ವಿಭಾಗಗಳಲ್ಲಿ ವಿವಿಧ ವಿಷಯಗಳ ಬಗ್ಗೆ ಚಿತ್ರ ರಚಿಸುವ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ಬಹುಮಾನ ಮತ್ತು ಭಾಗವಹಿಸುವ ಪ್ರತಿಯೊಬ್ಬರಿಗೆ ಪ್ರಮಾಣ ಪತ್ರ ಸಿಗಲಿದೆ. ನೋಂದಣೆಗೆ ಕೊನೆ ದಿನಾಂಕ 02-04-2025 ಸಂಪರ್ಕ ಸಂಖ್ಯೆ – 9448254396 , 9449231665 ,9480594101

Read More

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ. ಕೆ.ಬಿ. ಶಿವಕುಮಾರ್ ಅವರು ಭಾನುವಾರ ಮಂಗಳೂರಿಗೆ ಆಗಮಿಸಿ, ಜಿಲ್ಲಾ ವೆನ್ ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಗಳಿಗೆ ಭೇಟಿ ನೀಡಿದರು.ಮೊದಲು ವೆನ್ ಲಾಕ್ ಗೆ ಆಗಮಿಸಿದ ಅವರು, ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ದೊರಕುತ್ತಿರುವ ಸೌಲಭ್ಯಗಳ ಮಾಹಿತಿ ಪಡೆದ ಅವರು, ಸ್ವಚ್ಛತೆ ಮತ್ತು ಆಸ್ಪತ್ರೆ ಪರಿಸರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೆನ್ ಲಾಕ್ ಮೂಲಸೌಕರ್ಯವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಸಿಬ್ಬಂಧಿ ನೇಮಕಾತಿಯ ಬಗ್ಗೆ ಬೇಡಿಕೆ ಬಂದಿದ್ದು, ಸರಕಾರದ ಮಟ್ಟದಲ್ಲಿ ಇದನ್ನು ಪರಿಶೀಲಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.ಬಳಿಕ ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಅಲ್ಲಿನ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನವಜಾತ ಶಿಶುಘಟಕ ವೀಕ್ಷಿಸಿದ ಅವರು, ಆಸ್ಪತ್ರೆಯಲ್ಲಿ ಹ್ಯೂಮನ್ ಮಿಲ್ಕ್ ಬ್ಯಾಂಕ್ ಸ್ಥಾಪನೆಯಿಂದ ಶಿಶುಮರಣ ಪ್ರಮಾಣ ಕಡಿಮೆಗೊಂಡಿರುವುದಕ್ಕೆ ಶ್ಲಾಘಿಸಿದರು. ಸಿಎಸ್ಆರ್ ಅನುದಾನದಿಂದ ರೋಗಿಗಳಿಗೆ ಅತ್ಯಾಧುನಿಕ ಸೌಲಭ್ಯ ಗಳನ್ನು ಒದಗಿಸಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ,…

Read More

ಮಂಗಳೂರು ; ಮಂಗಳೂರಿನ ಅಗ್ನಿಶಾಮಕ ಕೇಂದ್ರ ದ ಹತ್ತಿರ ಬಿ.ಆರ್ ಕರ್ಕೇರ ರಸ್ತೆ ಬಳಿ ಡಾ. ಎಂ.ಆರ್ ಶೆಟ್ಟಿ ಸ್ಮಾರಕ ವೃತ್ತವನ್ನು ಉಧ್ಘಾಟಿಸಲಾಯಿತು. ಕಾರ್ಯಕ್ರಮವನ್ನು ವಿಧಾನ ಸಭಾ ಸಭಾದ್ಯಕ್ಷರು ಯು.ಟಿ ಖಾದರ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ವೇದಿಕೆಯಲ್ಲಿರುವ ಗಣ್ಯರಿಗೆ ಹಿಮಾ ಊರ್ಮಿಳಾ ಶೆಟ್ಟಿಯವರು ಕಿರುಕಾಣಿಕೆ ನೀಡಿ ಸ್ವಾಗತಿಸಿದರು. ಬಳಿಕ ಮಾತನಾಡಿದ ವಿಧಾನ ಸಭಾ ಸಭಾದ್ಯಕ್ಷ ಯು.ಟಿ ಖಾದರ್ ಅವರು ಎಮ್.ಆರ್ ವೃತ್ತ ಇದು ಮಂಗಳೂರಿಗೆ ಬೇಕಾದ ಶೈಕ್ಷಣಿಕ ಅಭಿವೃದ್ಧಿಗೆ ನೆನಪು,ಅಭಿವೃದ್ದಿಗೆ ಪೂರಕವಾದ ಕೊಡುಗೆ ಎಂಆರ್ ಶೆಟ್ಟಿಯವರು ನೀಡಿದು. ರಾಜ್ಯದಲ್ಲಿ ಮೊದಲಬಾರಿಗೆ ಪ್ರಾರಂಭವಾದ ಕೊರ್ಸ್ ಅಂದರೆ ಫಿಸಿಯೊಥೆರಫಿ,ಅವತ್ತಿನ ಕಾಲದಲ್ಲಿ ಪ್ರಾರಂಭ ಮಾಡಿದ ಸಂಸ್ಥೆ ಇಂದು ಮರವಾಗಿ ಬೆಳೆದಿದೆ. ಭವಿಷ್ಯದ ಜನರಿಗೆ ಕ್ಕೆ ಅವರನ್ನು ನೆನೆಪಿಸಿಕೊಳ್ಳಲು ಇದು ಒಂದು ಸಮಯವೆಂದರು,ವಿಧ್ಯಾರ್ಥಿ ನಾಯಕನಾಗಿರುವಾಗ ಅವರನ್ನು ಅತ್ತಿರದಿಂದ ನಾನು ಕಂಡಿದ್ದೇನೆ,ಯಾವಗಲೂ ನಗುಮುಖದಿಂದ ಇರುವ ಅವರ ನೆನಪು ಸ್ಮರಣೀಯ ಎಂದರು .ವ್ಯಕ್ತಿಗತವಾಗಿ ಅವರಂತೂ ವಿಶಿಷ್ಟ, ಹುಟ್ಟುವಾಗ ಉಸಿರು ಇರುತ್ತದೆ ಮೃತಪಟ್ಟ ಮೇಲೆ ಹೆಸರು ಮಾತ್ರ ಇರುವುದು ಎಂದು…

Read More