- ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆ ಖಂಡನೀಯ: ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಉಡುಪಿ ಪತ್ರಕರ್ತರ ಸಂಘ ಆಗ್ರಹ
- ಆರೂರು ಅಡ್ಜಿಲು ಭಾಗದ ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಮೆಸ್ಕಾಂ ಒಂದು ತಿಂಗಳೊಳಗೆ ಹೊಸ ಟಿಸಿ ಅಳವಡಿಸುವ ಭರವಸೆ – ತುಳುನಾಡು ರಕ್ಷಣಾ ವೇದಿಕೆ ಆಗ್ರಹ
- ಆಗಸ್ಟ್ 23ರಂದು ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ “ಮರಿಯಾಳದ ಮಿನದನ” ಪೂರ್ವಭಾವಿ ಸಭೆ
- ₹5 ಕೋಟಿ ನಕಲಿ ಔಷಧಿ ಜಾಲ ಬಯಲು: ಫಾರ್ಮ್ಹೌಸ್ನಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗೆ ಅಧಿಕಾರಿಗಳ ದಾಳಿ ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಲೇಬಲ್ ಅಂಟಿಸಿ ಔಷಧಿಗಳ ಮರುಪ್ಯಾಕಿಂಗ್ – ಅವಧಿ ಮೀರಿದ ಔಷಧಿಗಳೂ ಪತ್ತೆ
- ಉಡುಪಿ: ತುಳುನಾಡಿನ ಸಂಸ್ಕೃತಿ, ಪರಂಪರೆ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಸೂರಜ್ ನಾಯಕ್ ಸೋನಿ
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
Author: Tulunada Surya
ಬೈರಂಪಳ್ಳಿ, ಜು. 30: ತುಳುನಾಡಿನ ಭಾಷೆ, ಸಂಸ್ಕೃತಿ, ಸಂಪ್ರದಾಯ, ಆಚರಣೆ, ವಿಚಾರಧಾರೆ ಹಾಗೂ ಶ್ರೀಮಂತ ಪರಂಪರೆಯ ಸಂರಕ್ಷಣೆ ಮತ್ತು ಅಭಿವೃದ್ಧಿಯನ್ನು ಧ್ಯೇಯವನ್ನಾಗಿಸಿಕೊಂಡು ಹಲವು ವರ್ಷಗಳಿಂದ ಜನಪರ ಹಾಗೂ ಸಾಂಸ್ಕೃತಿಕ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿರುವ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಕಾಪು ತಾಲೂಕು ಹಾಗೂ ಬೈರಂಪಳ್ಳಿ ಘಟಕದ ಆಶ್ರಯದಲ್ಲಿ ಆಗಸ್ಟ್ 2ರಂದು (ಭಾನುವಾರ) ಕಾರ್ಯಕರ್ತರ ಸ್ನೇಹ ಸಮ್ಮಿಲನ ಹಾಗೂ ನೂತನ ಕಾರ್ಯಕರ್ತರ ಸದಸ್ಯತ್ವ ಸೇರ್ಪಡೆ ಕಾರ್ಯಕ್ರಮವನ್ನು ಸಾಂತ್ಯರ್ ಅಂಬೇಡ್ಕರ್ ಸಭಾಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು, ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ನಾಗಲಕ್ಷ್ಮಿ ಸುಬ್ರಹ್ಮಣ್ಯನಗರ, ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮೀನಗರ, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಸಂಘಟನೆಯ ಸದಸ್ಯರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸಂಘಟನೆಯು ಕಳೆದ ಒಂದು ವರ್ಷದಲ್ಲಿ ಕೈಗೊಂಡಿರುವ ವಿವಿಧ ಜನಪರ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ…
ಮಂಗಳೂರು, ಜು. 29: ಚಿನ್ನಾಭರಣ ದೋಚುವ ಉದ್ದೇಶದಿಂದ 2021ರ ಜನವರಿ 25ರಂದು ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೇಲಿ ನಿವಾಸಿ 80 ವರ್ಷದ ಹಿರಿಯ ಮಹಿಳೆ ಬೆನೆಡಿಕ್ಟ್ ಕಾರ್ಲೋ ಅವರಿಗೆ ವಿಷಪ್ರಾಶನ ಮಾಡಿ, ಬಳಿಕ ಉಸಿರುಗಟ್ಟಿಸಿ ಹತ್ಯೆಗೈದ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.ಜೀವಾವಧಿ ಶಿಕ್ಷೆಗೆ ಗುರಿಯಾದವರು ಅಮ್ಮಾಡಿ ಹೀರಾ ನಿವಾಸಿ ವಿಲ್ಮಾ ಪ್ರಶಿತಾ ಬಾರೆಟ್ಟೊ (30), ನರಿಕೊಂಬು ಅಂತರಹಾಸ್ ನಿವಾಸಿ ಸತೀಶ್ (33) ಹಾಗೂ ನರಿಕೊಂಬು ಪದಕೆಟ್ಟೆ ಹೊಯಿಗೆಬೈಲು ನಿವಾಸಿ ಚರಣ್ ಕುಮಾರ್ (34). ಪ್ರಕರಣದ ಹಿನ್ನೆಲೆ:ಬೆನೆಡಿಕ್ಟ್ ಕಾರ್ಲೋ ಅವರು ತಮ್ಮ ಪತಿ ಇನಾಸ್ ಕಾರ್ಲೋ ಅವರೊಂದಿಗೆ ಅಮ್ಮುಂಜೆಯ ಪಾಂಡೇಲಿಯಲ್ಲಿ ವಾಸವಾಗಿದ್ದರು. ಪಾರ್ಶ್ವವಾಯು ಪೀಡಿತರಾಗಿದ್ದ ಇನಾಸ್ ಕಾರ್ಲೋ ಅವರ ಆರೈಕೆಗೆ ವಿಲ್ಮಾ ಪ್ರಶಿತಾ ಬಾರೆಟ್ಟೊ ಸುಮಾರು ಎರಡು ತಿಂಗಳಿನಿಂದ ಕೆಲಸ ಮಾಡುತ್ತಿದ್ದರು.ಈ ವೇಳೆ ಬೆನೆಡಿಕ್ಟ್ ಕಾರ್ಲೋ ಅವರ ಬಳಿ ಹೆಚ್ಚಿನ ಪ್ರಮಾಣದ ಚಿನ್ನಾಭರಣಗಳಿರುವುದನ್ನು…
ಬೆಂಗಳೂರು, ಜುಲೈ 28: ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುತ್ತಿರುವ ಸೈಬರ್ ವಂಚನೆಗಳು ದಿನದಿಂದ ದಿನಕ್ಕೆ ಹೊಸ ರೂಪ ಪಡೆಯುತ್ತಿದ್ದು, ಇದೀಗ ಫೇಸ್ಬುಕ್ನಲ್ಲಿ ಪರಿಚಯ ಮಾಡಿಕೊಂಡ ವಿಚ್ಛೇದಿತ ಮಹಿಳೆಯೊಬ್ಬರನ್ನು ಪ್ರೀತಿ, ವಿಶ್ವಾಸ ಮತ್ತು ಉಡುಗೊರೆಯ ಆಮಿಷದ ಮೂಲಕ ವಂಚಿಸಿ, ಕಸ್ಟಮ್ಸ್ ಶುಲ್ಕದ ನೆಪದಲ್ಲಿ ಬರೋಬ್ಬರಿ ₹1.75 ಕೋಟಿ ಹಣ ಕಸಿದುಕೊಂಡಿರುವ ಬೆಚ್ಚಿಬೀಳಿಸುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.ಈ ಸಂಬಂಧ ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 52 ವರ್ಷದ ಉದ್ಯೋಗಸ್ಥ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಫೇಸ್ಬುಕ್ ಸ್ನೇಹದಿಂದ ಆರಂಭವಾದ ವಂಚನೆಮಹಿಳೆ ಯೂಟ್ಯೂಬ್ನಲ್ಲಿ ಹೂಡಿಕೆ ಸಂಬಂಧಿತ ವಿಡಿಯೋಗಳು ಹಾಗೂ ಜಾಹೀರಾತುಗಳನ್ನು ವೀಕ್ಷಿಸುತ್ತಿದ್ದ ವೇಳೆ, ಫೇಸ್ಬುಕ್ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಪರಿಚಯ ಮಾಡಿಕೊಂಡಿದ್ದ. ಆತ ತನ್ನನ್ನು ದಕ್ಷಿಣ ಕೊರಿಯಾ ಮೂಲದ ಉದ್ಯಮಿ ಎಂದು ಪರಿಚಯಿಸಿಕೊಂಡು, ಸುಳ್ಳು ಹೆಸರಿನಲ್ಲಿ ಮಹಿಳೆಯ ವಿಶ್ವಾಸ ಗಳಿಸಿದ್ದಾನೆ.ಪ್ರತಿದಿನ ನಿರಂತರವಾಗಿ ಸಂದೇಶ ಕಳುಹಿಸುವುದು, ವಿಡಿಯೋ ಕರೆಗಳ ಮೂಲಕ ಆತ್ಮೀಯತೆ ಬೆಳೆಸುವುದು ಹಾಗೂ ಭಾವನಾತ್ಮಕವಾಗಿ ಹತ್ತಿರವಾಗುವಂತೆ ನಡೆದುಕೊಳ್ಳುವ…
ಹಾಸನ ಸಮೀಪ ಭೀಕರ ಅಪಘಾತ; ಹಿಂಬದಿಯಿಂದ ಬಂದ ಕಾರಿನ ಡಿಕ್ಕಿಗೆ ಕಾರು ಪಲ್ಟಿ – ಮೂವರಿಗೆ ಗಾಯ ಮುಲ್ಕಿ/ಹಾಸನ, ಜು. 27: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚೌಡೇನಹಳ್ಳಿ ಸಮೀಪ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಲ್ಕಿ ಮೂಲದ ಜನತಾದಳ (ಜಾತ್ಯತೀತ) ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಶಶಿಪ್ರಭಾ (47) ಅವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಶಶಿಪ್ರಭಾ ಅವರು ಮುಲ್ಕಿಯ ಕಾರ್ನಾಡ್ ಕೆ.ಎಸ್. ರಾವ್ ನಗರ, ಕೊರಂಟಬೆಟ್ಟು ನಿವಾಸಿಯಾಗಿದ್ದು, ಮುಲ್ಕಿ ನಗರ ಪಂಚಾಯತ್ನ ಮಾಜಿ ಅಧ್ಯಕ್ಷ ದಿವಂಗತ ಶಶಿಕಾಂತ್ ಶೆಟ್ಟಿ ಅವರ ಸಹೋದರಿಯಾಗಿದ್ದರು. ಅವರು ಜನತಾದಳ (ಜಾತ್ಯತೀತ) ಪಕ್ಷದ ಮುಲ್ಕಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದುದಲ್ಲದೆ, ಹಲವು ಸಾಮಾಜಿಕ, ಧಾರ್ಮಿಕ ಹಾಗೂ ಸೇವಾ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಮೆಚ್ಚುಗೆ ಗಳಿಸಿದ್ದರು. ಅಪಘಾತದಲ್ಲಿ ಗಾಯಗೊಂಡಿರುವ ಕಾರ್ಕಳ ನಿವಾಸಿ ದಿನೇಶ್ (34), ಮಂಡ್ಯ ನಿವಾಸಿ…
ಮಂಗಳೂರು, ಜು. 26: 1971ರ ಭಾರತ–ಪಾಕಿಸ್ತಾನ ಯುದ್ಧದಲ್ಲಿ ಬಳಸಲ್ಪಟ್ಟ ಹಾಗೂ ಸುಮಾರು ನಾಲ್ಕು ದಶಕಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಐತಿಹಾಸಿಕ ಟಿ-55 ಯುದ್ಧ ಟ್ಯಾಂಕ್ ಅನ್ನು ಮಂಗಳೂರಿನ ಕದ್ರಿಯ ಯುದ್ಧ ಸ್ಮಾರಕದ ಆವರಣದಲ್ಲಿ ಭಾನುವಾರ ಸಾರ್ವಜನಿಕರ ವೀಕ್ಷಣೆಗೆ ಲೋಕಾರ್ಪಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಾಗೂ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ವೇದವ್ಯಾಸ ಕಾಮತ್, ಮಾಜಿ ಸಚಿವ ನಾಗರಾಜ ಶೆಟ್ಟಿ, ನಿವೃತ್ತ ಯೋಧ ಕರ್ನಲ್ ಶರತ್ ಭಂಡಾರಿ, ಬ್ರಿಗೇಡಿಯರ್ ಜಿನನ್ ರೈ, ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ, ಡಿಎಫ್ ಅಧ್ಯಕ್ಷ ರಾಘವೇಂದ್ರ, ಸತ್ಯಜಿತ್ ಸುರತ್ಕಲ್ ಸೇರಿದಂತೆ ಅನೇಕ ಗಣ್ಯರು, ನಿವೃತ್ತ ಯೋಧರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನಿವೃತ್ತ ಸೈನಿಕರ ಸಂಘ, ರೋಟರಿ ಹಾಗೂ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಗಡಿಯಲ್ಲಿ ಸಾವಿರಾರು ಅಡಿ ಎತ್ತರದ ದುರ್ಗಮ ಪ್ರದೇಶಗಳಲ್ಲಿ ಬೆನ್ನಿಗೆ…
ಉಡುಪಿ, ಜು. 26: ತುಳುನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜನಪದ ಆಚರಣೆಗಳ ಪ್ರತೀಕವಾಗಿರುವ ‘ಆಟಿಡೊಂಜಿ ದಿನ’ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಯೋಜಿಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಘಟಕದ ಪೂರ್ವಭಾವಿ ಸಭೆಯು ಭಾನುವಾರ ಉಡುಪಿಯ ಕಾಪಿಯಾ ಹೋಟೆಲ್ ಸಮೀಪದ ಅಕ್ಷಯ ಟವರ್ಸ್ನಲ್ಲಿರುವ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಸಭೆಯು ಉಡುಪಿ ಜಿಲ್ಲಾ ಅಧ್ಯಕ್ಷರಾದ ಫ್ರಾಂಕಿ ಡಿಸೋಜಾ ಕೊಳಲಗಿರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಆಟಿಡೊಂಜಿ ದಿನಾಚರಣೆಯನ್ನು ಯಶಸ್ವಿಗೊಳಿಸಲು ಅಗತ್ಯವಾದ ಸಿದ್ಧತೆಗಳು, ಕಾರ್ಯಕ್ರಮದ ರೂಪುರೇಷೆ, ವಿವಿಧ ಜವಾಬ್ದಾರಿಗಳ ಹಂಚಿಕೆ ಹಾಗೂ ಸದಸ್ಯರ ಪಾತ್ರದ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಜಿಲ್ಲಾ ಅಧ್ಯಕ್ಷರಾದ ಫ್ರಾಂಕಿ ಡಿಸೋಜಾ ಕೊಳಲಗಿರಿ ಅವರು ಮಾತನಾಡಿ, ತುಳುನಾಡಿನ ಆಚಾರ-ವಿಚಾರ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಟಿಡೊಂಜಿ ದಿನಾಚರಣೆಯಂತಹ ಕಾರ್ಯಕ್ರಮಗಳು ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ಸದಸ್ಯರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ…
ಪುತ್ತೂರು, ಜು. 26: ಬಹು ಚರ್ಚೆಗೆ ಗ್ರಾಸವಾಗಿದ್ದ ಅಕ್ಷಯ್ ಕಾಲೇಜು ಕೂಲೆ ಪ್ರಕರಣದಲ್ಲಿ ಆರೋಪಿ ಮನೀಷ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದು ನ್ಯಾಯಾಂಗದ ಮೇಲಿನ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಿರುವ ಬೆಳವಣಿಗೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ನ ನ್ಯಾಯಮೂರ್ತಿ ಜಸ್ಟಿಸ್ ವಿಶ್ವಜಿತ್ ಶೆಟ್ಟಿ ಅವರು ಎರಡೂ ಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ, ಕಾನೂನಿನ ನಿಯಮಾವಳಿಗಳ ಪ್ರಕಾರ ನಿಗದಿತ ಷರತ್ತುಗಳೊಂದಿಗೆ ಜಾಮೀನು ನೀಡಲು ಆದೇಶಿಸಿದ್ದಾರೆ. ಈ ಆದೇಶವು ಯಾರನ್ನೂ ನಿರ್ದೋಷಿ ಎಂದು ಘೋಷಿಸುವುದಲ್ಲ; ಆದರೆ ಅಂತಿಮ ತೀರ್ಪು ಬರುವವರೆಗೆ ಪ್ರತಿಯೊಬ್ಬ ಆರೋಪಿಗೂ ನ್ಯಾಯಯುತ ಅವಕಾಶ ದೊರಕಬೇಕು ಎಂಬ ಸಂವಿಧಾನಾತ್ಮಕ ತತ್ವವನ್ನು ಪುನರುಚ್ಚರಿಸುತ್ತದೆ. ನ್ಯಾಯಾಲಯದ ಈ ನಿರ್ಧಾರವು ಕಾನೂನಿನ ಪ್ರಕ್ರಿಯೆ ಮತ್ತು ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯುವ ಹೆಜ್ಜೆಯಾಗಿದೆ. ಮನೀಷ್ ಕುಟುಂಬಸ್ಥರು ಹಾಗೂ ಆಪ್ತರು ಹೈಕೋರ್ಟ್ ಆದೇಶವನ್ನು ಸ್ವಾಗತಿಸಿದ್ದು, ಸತ್ಯವು ನ್ಯಾಯಾಲಯದ ಮುಂದೆ ಸಂಪೂರ್ಣವಾಗಿ ಹೊರಬಂದು ಅಂತಿಮವಾಗಿ ನ್ಯಾಯ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹಾಗೂ ನ್ಯಾಯಾಲಯ ವಿಧಿಸಿರುವ…
ಮಂಗಳೂರು: ಪಳ್ಳಿ ದರ್ಸ್ ಎಂಬುದು ಇಸ್ಲಾಮಿನ ಪ್ರಾಚೀನ ಪರಂಪರೆಯಿಂದ ಬಂದಿರುವ ಶ್ರೇಷ್ಠ ಜ್ಞಾನ ವ್ಯವಸ್ಥೆಯಾಗಿದ್ದು, ಮಸೀದಿಯಲ್ಲಿ ದರ್ಸ್ ಆರಂಭವಾಗುವುದು ಆ ಊರಿನ ಆತ್ಮಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಹೊಸ ಬೆಳಕು ಮೂಡಿದಂತೆಯೇ ಎಂದು ಕುಂಬ್ರಾ ಮರ್ಕಝುಲ್ ಹುದಾ ಪ್ರಾಂಶುಪಾಲ ಯು.ಕೆ. ಮುಹಮ್ಮದ್ ಸಅದಿ ಅಭಿಪ್ರಾಯಪಟ್ಟರು. ಅವರು ಬದ್ರಿಯ ಜುಮಾ ಮಸೀದಿ, ಮಲ್ಲಾರು–ಮಜೂರಿನಲ್ಲಿ ಆಯೋಜಿಸಲಾದ “ಪಳ್ಳಿ ದರ್ಸ್” ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿದರು. ದರ್ಸ್ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಅವರು ಕರೆ ನೀಡಿದರು. ಸಮಾರಂಭದಲ್ಲಿ ದುಆ ಆಶೀರ್ವಚನ ನೀಡಿದ ಸಯ್ಯಿದ್ ಮುಹಮ್ಮದ್ ಮೌಲಾ ಜಮಲುಲ್ಲೈಲಿ ತಂಙಳ್ ಅವರು, ದರ್ಸ್ ಕೇವಲ ಧಾರ್ಮಿಕ ಶಿಕ್ಷಣ ನೀಡುವ ಕೇಂದ್ರವಲ್ಲ, ಉತ್ತಮ ವ್ಯಕ್ತಿತ್ವ ಮತ್ತು ಮೌಲ್ಯಗಳನ್ನು ರೂಪಿಸುವ ಜ್ಞಾನ ಮಂದಿರವಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಮಾತ್ ಅಧ್ಯಕ್ಷ ಡಾ. ಎಂ. ಫಾರೂಕ್ ಚಂದ್ರನಗರ ಮಾತನಾಡಿ, “ನಮ್ಮ ಊರಿನಲ್ಲಿ ಪಳ್ಳಿ ದರ್ಸ್ ಆರಂಭವಾಗಬೇಕೆಂಬ ಕನಸು ಇಂದು…
ಮಂಗಳೂರು, ಜು. 25: ನಗರದ ಪ್ರತಿಷ್ಠಿತ ರೋಹನ್ ಕಾರ್ಪೊರೇಷನ್ ವತಿಯಿಂದ ‘ದಿ ಗ್ರಾಟಿಟ್ಯೂಡ್ ಗ್ಯಾದರಿಂಗ್ (The Gratitude Gathering)’ ಹೆಸರಿನ ವಿಶೇಷ ಕೃತಜ್ಞತಾ ಸಮಾರಂಭವು ನಗರದ ಬಿಜೈನಲ್ಲಿರುವ ರೋಹನ್ ಸಿಟಿಯಲ್ಲಿ ಅದ್ದೂರಿಯಾಗಿ ನಡೆಯಿತು. ಇತ್ತೀಚೆಗೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದ ಕರಾವಳಿಯ ಪ್ರತಿಭೆಗಳನ್ನು ಗೌರವಿಸುವ ಉದ್ದೇಶದಿಂದ ಆಯೋಜಿಸಲಾದ ಈ ಸಮಾರಂಭದಲ್ಲಿ ಪ್ರಶಸ್ತಿ ವಿಜೇತರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಾದ ರೂಪಶ್ರೀ ವರ್ಕಾಡಿ, ನಿರ್ದೇಶಕ ಶಿವಧ್ವಜ್ ಶೆಟ್ಟಿ, ನಿರ್ಮಾಪಕ ಪ್ರಶಾಂತ್ ರೈ, ಡಾ. ಪ್ರದೀಪ್ ಕೆಂಚನೂರು ಹಾಗೂ ಬಾಲನಟ ಆತೀಶ್ ಎಸ್. ಶೆಟ್ಟಿ ಅವರನ್ನು ರೋಹನ್ ಕಾರ್ಪೊರೇಷನ್ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ದೇಶಕ ಶಿವಧ್ವಜ್ ಶೆಟ್ಟಿ, ಸಿನಿಮಾ ಕ್ಷೇತ್ರಕ್ಕೆ ರೋಹನ್ ಕಾರ್ಪೊರೇಷನ್ ನಿರಂತರವಾಗಿ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾಗಿದೆ ಎಂದು ಹೇಳಿದರು. ಇಂತಹ ಗೌರವಗಳು ಕಲಾವಿದರಿಗೆ ಮತ್ತಷ್ಟು ಸ್ಫೂರ್ತಿ ಹಾಗೂ ಜವಾಬ್ದಾರಿಯನ್ನು ನೀಡುತ್ತವೆ. ಕರ್ನಾಟಕ ಹಾಗೂ ಕರಾವಳಿಯಲ್ಲಿ…
ಮೂಡುಬಿದಿರೆ, ಜು. 24: ಭಾರತ ಸರ್ಕಾರದ ಜ್ಞಾನ ಭಾರತಂ ಮಿಷನ್ ಅಡಿಯಲ್ಲಿ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ದೇಶದ ಅಮೂಲ್ಯ ಪ್ರಾಚೀನ ಹಸ್ತಪ್ರತಿಗಳನ್ನು ಗುರುತಿಸಿ ಸಂರಕ್ಷಿಸುವ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿ ಕರ್ನಾಟಕ ರಾಜ್ಯದಲ್ಲಿ 2026ರ ಮಾರ್ಚ್ನಿಂದ ಮೇ ತಿಂಗಳವರೆಗೆ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷಾ ಅಭಿಯಾನ ಕೈಗೊಳ್ಳಲಾಗಿತ್ತು.ಈ ಅಭಿಯಾನದ ಮುಂದುವರಿದ ಭಾಗವಾಗಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಸ್ತಪ್ರತಿಗಳ ಸಮೀಕ್ಷೆ ಹಾಗೂ ಡಿಜಿಟಲೀಕರಣ ಕಾರ್ಯಕ್ರಮಕ್ಕೆ ಜುಲೈ 24ರಂದು ಸಂಜೆ 6.30ಕ್ಕೆ ಮೂಡುಬಿದಿರೆಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳು ಅಧಿಕೃತ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಹಾಸ್ವಾಮೀಜಿಗಳು, ನಮ್ಮ ದೇಶದ ಇತಿಹಾಸ, ಧರ್ಮ, ತತ್ವಶಾಸ್ತ್ರ, ಸಾಹಿತ್ಯ, ವೈದ್ಯಶಾಸ್ತ್ರ, ಗಣಿತ, ಖಗೋಳಶಾಸ್ತ್ರ ಸೇರಿದಂತೆ ಅನೇಕ ಅಮೂಲ್ಯ ಜ್ಞಾನಸಂಪತ್ತನ್ನು ಒಳಗೊಂಡಿರುವ ಪ್ರಾಚೀನ ಹಸ್ತಪ್ರತಿಗಳು ನಮ್ಮ ಸಾಂಸ್ಕೃತಿಕ ಪರಂಪರೆಯ ಅಮೂಲ್ಯ ನಿಧಿಯಾಗಿವೆ. ಇಂತಹ ಗ್ರಂಥಗಳನ್ನು ಗುರುತಿಸಿ ವೈಜ್ಞಾನಿಕವಾಗಿ ಸಂರಕ್ಷಿಸುವುದು ಇಂದಿನ ಅಗತ್ಯವಾಗಿದೆ. ಜಿಲ್ಲೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಮನೆ, ಮಠ, ದೇವಸ್ಥಾನ, ಖಾಸಗಿ ಗ್ರಂಥಾಲಯ ಹಾಗೂ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
