Author: Tulunada Surya

ಉಡುಪಿ ಜಿಲ್ಲೆಯ ನಗರ ಸಭೆಯಿಂದ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಬರುವ ಸ್ಥಳ ಅಕ್ರಮ ಸಕ್ರಮ ಮಂಜೂರಾತಿ ಗೆ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ , 94 ಸಿ.ಮತ್ತು 94 ಸಿಸಿ, ನಿಯಮದಾಡಿ ಅರ್ಜಿ ಮರು ಸಲ್ಲಿಕೆಗೆ ಅವಕಾಶ ನೀಡಬೇಕು , ಗ್ರಾಮ ಪಂಚಾಯಿತಿ ವ್ಯಾಪ್ತಿಯ 9&11 ಎ ಏಕ ನಿವೇಶನ 25 ಸೆಂಟ್ಸಿನ ಒಳಗಡೆ ಇರುವಂತಹ ಜಾಗಗಳಿಗೆ ಹಿಂದೆ ಇದ್ದ ನಿಯಮಾವಳಿ ಪ್ರಕಾರ ಅನುಮೋದನೆ ನೀಡಬೇಕು , 11.ಬಿ ನಿಯಮಾವಳಿ ಯಿಂದ ಕೂಡ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ ಹಿಂದಿನ ರೀತಿಯಲ್ಲಿ ಕ್ರಮ ಜರುಗಿಸಬೇಕು ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ದಲ್ಲಿ ಏಕ ನಿವೇಶನದ ಸಾವಿರಾರು ಅರ್ಜಿ ಬಾಕಿ ಇರುವುದರಿಂದ ಉಡುಪಿ ಯ ಜನರಿಗೆ ತುಂಬಾ ಸಮಸ್ಯೆ ಉಂಟಾಗಿರುತ್ತದೆ. ಕೂಡಲೇ ಸಮಸ್ಯೆ ಪರಿಹಾರಕ್ಕೆ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ರವರಿಗೆ ತುಳುನಾಡ ರಕ್ಷಣಾ ವೇದಿಕೆ ಮನವಿ ನೀಡಿ ಒತ್ತಾಯಿಸಿದೆ. ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ, ಮಹಿಳಾ ಜಿಲ್ಲಾಧ್ಯಕ್ಷೆ…

Read More

ಜೈ ತುಲುನಾಡ್ (ರಿ) ಕಾಸರಗೋಡು ವಲಯ ಸಮಿತಿಯ ವತಿಯಿಂದ ತಾ.27-07-2025 ರಂದು ಕಾಸರಗೋಡು ಕರಂದಕ್ಕಾಡ್‌ನಲ್ಲಿರುವ ಬಿಲ್ಲವ ಸಮಾಜ ಸೇವಾ ಸಂಘ( ರಿ )ಇಲ್ಲಿ ಮರಪಂದಿ ಆಟಿ ಕಾರ್ಯಕ್ರಮವು ನಡೆಯಿತು. ಶ್ರೀ ನಾರಾಯಣ ಗುರು ಮಂದಿರದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ಬಳಿಕ ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ರಘು ಮೀಪುಗುರಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ನಂತರ ನಡೆದ ಮಕ್ಕಳ ತುಲು ಭಾಷಣ ಸ್ಪರ್ಧೆಯಲ್ಲಿ ಕಿರಿಯರ ವಿಭಾಗದಲ್ಲಿ.ಧ್ಯೇಯ ವರ್ಕಾಡಿ ಪ್ರಥಮ, ಸಂಸ್ಕೃತಿ ಕುಂಬಳೆ ದ್ವಿತೀಯ ಹಾಗೂ ದರ್ಶಿತ್ ಕೆ ಆರ್ ತೃತೀಯ, ಹಿರಿಯರ ವಿಭಾಗದಲ್ಲಿ ನಿಮಿಷಾ ಎಸ್.ಬಟ್ಟಂಪಾರೆ ಪ್ರಥಮ, ದೃಶ್ಯ ಡಿ.ಬಟ್ಟಂಪಾರೆ ದ್ವಿತೀಯ,ವರ್ಷಾ ಎಸ್ ಬಟ್ಟಂಪಾರೆ ತೃತೀಯ ಬಹುಮಾನವನ್ನು ಪಡೆದರು, ನಂತರ ನಡೆದ ಸಮಾರೋಪ ಸಮಾರಂಭವು ಜೈ ತುಲುನಾಡ್ ರಿ ಕಾಸರಗೋಡು ವಲಯ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಕುಶಲಾಕ್ಷಿ.ವಿ.ಕುಲಾಲ್ ಕಣ್ವತೀರ್ಥ ರವರ ಅಧ್ಯಕ್ಷತೆಯಲ್ಲಿ ಜರಗಿತು. ಶ್ರೀಯುತ ರಘು ಕೆ ಮೀಪುಗುರಿಯವರು ಮಾತನಾಡುತ್ತಾ ಜೈ ತುಲುನಾಡ್ ಸಂಘಟನೆಯು ಈ ಕಾರ್ಯಕ್ರಮವನ್ನು ತಮ್ಮ…

Read More

ಮಂಗಳೂರು: ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರುವವರನ್ನು ಜುಮಾದಿಯೆ ನೋಡಲಿ ಎಂದು ದೈವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಸುರತ್ಕಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. “ಪಡ್ರೆ ಶ್ರೀ ಧೂಮಾವತಿ ದೈವಸ್ಥಾನಕ್ಕೆ ಸುಮಾರು 800 ವರ್ಷಗಳಿಗೂ ಮೇಲ್ಪಟ್ಟ ಇತಿಹಾಸವಿದ್ದು ಇತ್ತೀಚೆಗೆ ಗ್ರಾಮದ ಪದ್ಮನಾಭ ಶೆಟ್ಟಿ ಎಂಬವರು ನ್ಯಾಯಾಲಯದಲ್ಲಿ ಸುಮಾರು 13 ಜನರ ಮೇಲೆ ಖಾಸಗಿ ದೂರು ನೀಡಿದ್ದು ಅದರ ಆಧಾರದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ಆಗಿರುತ್ತದೆ. ಆ ದೂರಿನಲ್ಲಿ ಜಾತ್ರೆಯ ಸಮಯ ಭಕ್ತಾದಿಗಳಿಂದ ಸಂಗ್ರಹವಾದ ಸುಮಾರು 6 ಲಕ್ಷ ರೂಪಾಯಿ ಹಣ ಮತ್ತು ಸುಮಾರು 14-15 ಪವನ್ ಚಿನ್ನ, ಬೆಳ್ಳಿ, ಹಿತ್ತಾಳೆ ಸಹಿತ ಇದನ್ನು ಆಡಳಿತ ಸಮಿತಿಗೆ ಹಸ್ತಾಂತರಿಸದೆ ಕೊಂಡು ಹೋಗಿರುತ್ತಾರೆ ಎಂಬುದಾಗಿ ಕಳ್ಳತನ, ವಂಚನೆ ಪ್ರಕರಣ ದಾಖಲಿಸಿರುತ್ತಾರೆ. ಇದು ಸತ್ಯಕ್ಕೆ ದೂರವಾಗಿದ್ದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಮಿತಿಯ ಸದಸ್ಯರ ವಿರುದ್ಧ ನಡೆಸಿರುವ ಅಪಪ್ರಚಾರವಾಗಿದೆ. ಸುಳ್ಳು ಆರೋಪ ಮಾಡಿರುವ ಪದ್ಮನಾಭ ಶೆಟ್ಟಿಯನ್ನು ಗ್ರಾಮದ ದೈವ ಜುಮಾದಿಯೇ ನೋಡಿಕೊಳ್ಳಲಿ“…

Read More

ಮಂಗಳೂರು ; ದಕ್ಷಿಣ ಕನ್ನಡ ಫ್ಲವರ್ ಡೆಕೋರೇಟರ್ಸ್ ಮಾಲಕರ ಸಂಘ, ಮಂಗಳೂರು ಇದರ ವತಿಯಿಂದ ನಡೆದ ಮೂರನೇ ವರ್ಷದ ಪುರ್ಪದ ಗೆಲ್ಮೆನ ಆಟಿನ ಕಮ್ಮೆನ ಕಾರ್ಯಕ್ರಮ ಸ್ಕೇಟ್ ಸಿಟಿ ಹೊಯ್ಗೆಬೈಲು ಅಶೋಕನಗರದಲ್ಲಿ ವಿಜೃಂಭಣೆಯಿಂದ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಮಾತನಾಡಿದ ಕೆ.ಕೆ ಪೆಜಾವರ ತುಳುನಾಡಿನಲ್ಲಿ ಆಟಿ ತಿಂಗಳಿನಲ್ಲಿ ಆಚರಿಸಲಾಗುವ ಒಂದು ದಿನವೆಂದರೆ ಆಟಿಡೊಂಜಿ ದಿನ. ಈ ದಿನವನ್ನು ಆಟಿ ಅಮವಾಸ್ಯೆಯಂದು ಆಚರಿಸುತ್ತಾರೆ. ಈ ದಿನ ತುಳುನಾಡಿನ ಜನರು “ಪಾಲೆದ ಕಷಾಯ” (ಹಾಲೆ ಮರದ ತೊಗಟೆಯಿಂದ ತಯಾರಿಸಿದ ಕಷಾಯ) ಕುಡಿಯುವ ಸಂಪ್ರದಾಯವಿದೆ. ಈ ಕಷಾಯವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ನಂಬಲಾಗಿದೆ. ಆಟಿ ತಿಂಗಳು ತುಳುನಾಡಿನಲ್ಲಿ ಕಷ್ಟದ ತಿಂಗಳೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಮಳೆ ಹೆಚ್ಚಾಗಿರುತ್ತದೆ ಮತ್ತು ಕೃಷಿ ಚಟುವಟಿಕೆಗಳು ಸ್ಥಗಿತಗೊಳ್ಳುತ್ತವೆ. ಹಾಗಾಗಿ, ಈ ಸಮಯದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಆಟಿಡೊಂಜಿ ದಿನದಂದು ಆಚರಿಸಲಾಗುವ ಈ ಕಷಾಯ ಸೇವನೆಯು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ನಂಬಲಾಗಿದೆ. ಆಟಿ ಅಮಾವಾಸ್ಯೆಯಂದು…

Read More

ದಿನಾಂಕ 27/07/2025 ರಂದು ಭಾನುವಾರದಂದು ಮುಂಡಾಲ ಸಮಾಜ(ರಿ) ಗುರುಪುರ ಕೈಕಂಬ ಇದರ ವತಿಯಿಂದ ಡಾ . ಬಿ.ಆರ್‌ ಅಂಬೇಡ್ಕರ್‌ ಭವನ ಕಂದಾವರ ಪದವು ಇಲ್ಲಿ ಮುಂಡಾಲ ಟ್ರೋಪಿ 2025 , ಪುರುಷರ ವಾಲಿಬಾಲ್‌ ,ಹಾಗೂ ಮಹಿಳೆಯರ ತ್ರೋಬಾಲ್‌ ಪಂದ್ಯಾಟಾದ ಕ್ರೀಡಾಕೂಟ ನಡೆಯಿತು. ಪಂದ್ಯಾಟದ ಉದ್ಗಾಟನೆಯನ್ನು ದಯಾನಂದ ಮಾಸ್ಟರ್‌ ಪಡು ಖ್ಯಾತ ಕ್ರಿಕೆಟ್‌ ಆಟಗಾರರು ನೇರವೆರಿಸಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ಮುಂಡಾಲ ಯುವ ವೇದಿಕೆ ಅಧ್ಯಕ್ಷರಾದ ಶ್ರೀ ಪ್ರದೀಪ್‌ ಕಾಫಿಕಾಡ್‌,ಹೆಲ್ಪ್‌ ಲೈನ್‌ ಸೇವಾ ತಂಡದ ಸ್ಥಾಪಕ ಅಧ್ಯಕ್ಷರಾದ ಶ್ರೀ ಮಹೇಶ್‌ ಅಮೀನ್‌ ,ನಿವೃತ್ತ ಬ್ಯಾಂಕ್‌ ಉದ್ಯೋಗಿ ಶ್ರೀ ಕೃಷ್ಣ ಕುಳಾಯಿ, ಮುಂಡಾಲ ಸಮಾಜ (ರಿ) ಗುರುಪುರ ಕೈಕಂಬ ಇದರ ಅಧ್ಯಕ್ಷರಾದ ಶ್ರೀ ಜಯಂತ ಕೊಳಂಬೆ, ವಿವಿದ ತಂಡಗಳ ಸದಸ್ಯರು ,ಹಾಗೂ ಮುಂಡಾಲ ಸಮಾಜ ಭಾಂದವರು ಉಪಸ್ಥಿತರಿದ್ದರು. ಪುರುಷರ ವಾಲಿಬಾಲ್‌ ಪಂದ್ಯಾಟದಲ್ಲಿ ಒಟ್ಟು 11 ತಂಡಗಳು ಭಾಗವಹಿಸಿತು,ಮಹಿಳೆಯರ ತ್ರೋಬಾಲ್‌ ಪಂದ್ಯಾಟದಲ್ಲಿ4 ತಂಡಗಳು ಭಾಗವಹಿಸಿತು. ಪುರುಷರ ವಾಲಿಬಾಲ್‌ ಪಂದ್ಯಾಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು…

Read More

ಮಂಗಳೂರು:ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್ ಭಾತ್ರ, ಜಸ್ವಿಂದರ್ ಸಿಂಗ್, ಮನೋಜ್ ಕುಮಾರ್ ಪಾಂಡೆಯರಂತಹ 527 ವೀರಕಲಿಗಳನ್ನು ಕಳೆದುಕೊಂಡಿದ್ದೇವೆ. ಈ ದಿನ ಅಂತಹ ಎಲ್ಲಾ ವೀರ ಯೋಧರ ಧೈರ್ಯವನ್ನು, ಅವರ ಕುಟುಂಬಗಳ ತ್ಯಾಗವನ್ನು ಪ್ರತಿಯೊಬ್ಬರೂ ನೆನೆಯಲೇಬೇಕು. ದಯವಿಟ್ಟು ನಾವೆಲ್ಲರೂ ಆಗಾಗ ಮಕ್ಕಳೊಂದಿಗೆ ಯುದ್ಧ ಸ್ಮಾರಕಗಳಿಗೆ ಭೇಟಿ ನೀಡಿ, ಅವರಿಗೆ ಸೈನಿಕರ ಮಹತ್ವವನ್ನು ತಿಳಿಸಬೇಕು. ಇಂದು ನಮ್ಮ ಸೈನ್ಯ ಮತ್ತು ದೇಶದ ಭದ್ರತೆಯ ವಿಷಯ ಬಂದಾಗ ಸೈನ್ಯಕ್ಕೆ ಸಂಪೂರ್ಣ ಅಧಿಕಾರ ಕೊಡುವ ಪ್ರಧಾನಿ ನರೇಂದ್ರ ಮೋದಿಯಿಂದಾಗಿ ಭಾರತವು ಅತ್ಯಂತ ಬಲಿಷ್ಠವಾಗಿದೆ. ಹಾಗಾಗಿಯೇ…

Read More

ತುಳುನಾಡ ರಕ್ಷಣಾ ವೇದಿಕೆಯ ವಾಮದಪದವು ಘಟಕ ವತಿಯಿಂದ ಆಟಿ ಅಮವಾಸ್ಯೆಯ ಅಂಗವಾಗಿ ದಿನಾಂಕ 24-07-2025 ರಂದು ಬೆಳಿಗ್ಗೆ 5.30ಕ್ಕೆ ತುಳುನಾಡು ಸೂಪರ್ ಬಜಾರ್ ಬಸ್ತಿ ಕೋಡಿ ಸಮೀಪ ಬಂಟ್ವಾಳ ತಾಲೂಕು ಅಧ್ಯಕ್ಷ ದೇವಿಪ್ರಸಾದ್ ವಾಮದಪದವು ರವರು ಸಾಂಕೇತಿಕ ವಾಗಿ ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕ ಅಧ್ಯಕ್ಷ ಹರೀಶ್ ಪೂಜಾರಿ ಕುದ್ಕೋಳಿ ರವರ ಪಾಲೆದ ಕೆತ್ತೆ ಕಷಾಯ ಪಾಲೆದ ಕೆತ್ತೆ ಕಷಾಯ ನೀಡುವ ಮೂಲಕ ಚಾಲನೆ ನೀಡಿದರು. ಬಳಿಕ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆ ವರೆಗೆ ವಾಮದ ಪದವು ನೀಲ ಕಂಠೇಶ್ವರ ನೀಲಿ ದೇವಾಸ್ಥಾನ ಮತ್ತು ಕಾರಿಂಜೇಶ್ವರ ಆಟಿ ಅಮಾವಾಸ್ಯೆ ತೀರ್ಥಸ್ನಾನ ಮಾಡುವ ಭಕ್ತರು ಸೇರಿದಂತೆ ಸುಮಾರು 250 ಕ್ಕಿಂತಲೂ ಹೆಚ್ಚು ಜನರು ಪಾಲೆದ ಕಷಾಯ ಮತ್ತು ಮೆಂತೆ ಗಂಜಿ ಸ್ವೀಕರಿಸಿದರು

Read More

ತಮಿಳುನಾಡಿನಲ್ಲಿ ಏಷ್ಯ ಅಂತರಾಷ್ಟ್ರೀಯ ಸಂಸ್ಕೃತಿ ಮತ್ತು ಸಂಶೋಧನೆ ಅಂತರಾಷ್ಟ್ರೀಯ ಮಾನ್ಯತೆ ಪಡೆದ ಸಂಸ್ಥೆ ವಿಶ್ವವಿದ್ಯಾನಿಲಯ ಸನೆಟ್ ಮಂಡಳಿಯು ಸಮಿತಿ ಶಿಫಾರಸಿ ಮೇರೆಗೆ ಸತೀಶ್ ಖಾರ್ವಿ ಪವರ್ ಲಿಫ್ಟಿಂಗ್ ಕ್ರೀಡಾಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಕ್ರೀಡಾ ಸಾಧನೆಯ ಗುರುತಿಸಿ ಗೌರವ ಡಾಕ್ಟರೇಟ್ ಪ್ರಶಸ್ತಿ -2025 ನೀಡಿ ಗೌರವಿಸಿದರು. ಇವರು ಕುಂದಾಪುರ ನ್ಯೂ ಹರ್ಕ್ಯುಲಸ್ ಜೆಮ್ ನ ಮಾಲಕರು, ಹಾಗೂ ತುಳುನಾಡ ರಕ್ಷಣಾ ವೇದಿಕೆ ಕುಂದಾಪುರ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Read More

ಉಡುಪಿ: ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಹಾಗೂ ಪ್ರಥಮ ದರ್ಜೆ ಸಹಾಯಕ ಜಯರಾಮ್ ಅವರು ಇಂದು ಉಡುಪಿ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಇಬ್ಬರು ಆರೋಪಿಗಳು ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ಮಾಡಿ ಕೊಡಲು ತಲಾ ರೂ. 5000ದಂತೆ ಒಟ್ಟು 10,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲಂಚ ನೀಡಲು ಒಪ್ಪದ ಶಾಂತಿನಿಕೇತನ ಸೌಹರ್ದ ಸಹಕಾರಿ ಮುಖ್ಯ ಕಾರ್ಯನಿರ್ವಾಹಕ ನರೇಂದ್ರರವರು ಈ ಕುರಿತು ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ರೇಣುಕಾ ಉಡುಪಿಯಲ್ಲಿರುವ ತನ್ನ ಕಚೇರಿಯಲ್ಲಿ ಲಂಚದ ಹಣ ಪಡೆಯುತ್ತಿರುವ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Read More

ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕ ವತಿಯಿಂದ ಆಟಿ ಅಮವಾಸ್ಯೆಯ ಅಂಗವಾಗಿ ದಿನಾಂಕ 24-07-2025 ರಂದು ಬೆಳಿಗ್ಗೆ 5.30ಕ್ಕೆ ಉಡುಪಿ ಕ್ಲಾಕ್ ಟವರ್ ಸಮೀಪ ಸಾರ್ವಜನಿಕರಿಗೆ ಪಾಲೆದ ಕೆತ್ತೆ ಕಷಾಯ ವಿತರಿಸಲಾಯಿತು.ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿರವರು ತುಳುನಾಡ ರಕ್ಷಣಾ ವೇದಿಕೆ ಮಾಜಿ ಜಿಲ್ಲಾಧ್ಯಕ್ಷ ರೋಹಿತ್ ಕರಂಬಳ್ಳಿ ರವರಿಗೆ ಪಾಲೆದ ಕಷಾಯ ನೀಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸುಮಾರು 500 ಕ್ಕಿಂತಲೂ ಹೆಚ್ಚು ಜನರು ಪಾಲೆದ ಕೆತ್ತೆ ಕಷಾಯ ಸ್ವೀಕರಿಸಿದರು.ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಪೂಜಾರಿ ,ಸುರೇಂದ್ರ ಪೂಜಾರಿ, ವೈದ್ಯರ ಘಟಕ ಜಿಲ್ಲಾಧ್ಯಕ್ಷ ಸಂದೀಪ್ ಸನಿಲ್,ಮಹಿಳಾ ಜಿಲ್ಲಾಧ್ಯಕ್ಷ ಸುನಂದಾ ಕೋಟ್ಯಾನ್,ಜಿಲ್ಲಾ ಜೊತೆ ಕಾರ್ಯದರ್ಶಿ,ಪ್ರೀತಮ್ ದಿಕೋಸ್ತ,ನಿರ್ಮಲಾ ಮೆಂಡನ್,ಬದ್ರುಲ ಅಬ್ದುಲ್ಲಾ, ರಾಜು ಮತ್ತಿತರರು ಉಪಸ್ಥಿತರಿದ್ದರು. ಆಟಿ ಅಮಾವಾಸ್ಯೆ ಪಾಲೆ ಕೆತ್ತೆ ಕಷಾಯ ತಯಾರಿಸುವ ಜವಾಬ್ದಾರಿ ಜಯರಾಮ್ ಪೂಜಾರಿ ಮತ್ತು ಯುವ ಉಪಾಧ್ಯಕ್ಷ ರಾಹುಲ್ ಪೂಜಾರಿರವರು ಸಮರ್ಥವಾಗಿ ನಿಭಾಯಿಸಿದ್ದಾರೆ. ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾ ಹಿರಿಯ ಉಪಾಧ್ಯಕ್ಷ ಜಯರಾಮ್ ಪೂಜಾರಿ ಮಾತನಾಡುತ್ತಾತುಳುನಾಡು ಜನರು ‘ಪಾಲೆ ಮರ’ದ/’ಸಪ್ತಪರ್ಣಿ’ಮರದ…

Read More