- ಹಿರಿಯ ನಟ ನಾನಾ ಪಾಟೇಕರ್ ನಿಧನ ಹೃದಯ ಸ್ತಂಭನದಿಂದ 75ನೇ ವಯಸ್ಸಿನಲ್ಲಿ ಅಂತ್ಯ – ಭಾರತೀಯ ಚಿತ್ರರಂಗಕ್ಕೆ ಅಪಾರ ನಷ್ಟ
- ಸೇವಾ ಸಂಕಲ್ಪ ಅಭಿಯಾನಕ್ಕೆ ಮಾದರಿ ಹೆಜ್ಜೆ ಕುಲಶೇಖರ ಕಲ್ಪನೆ ಪರಿಸರದಲ್ಲಿ ನವೀಕೃತ ಬಸ್ ನಿಲ್ದಾಣ ಉದ್ಘಾಟನೆ
- ಮಾಡೂರು ಶ್ರೀ ಶಿವ ದುರ್ಗಾಂಬಾ ಮಠದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವ ವಿಶೇಷ ಪೂಜೆ, ಗಣಹೋಮ, ಮಹಾ ಚಂಡಿಕಾಯಾಗ, ಅಖಂಡ ಭಜನೆ ಹಾಗೂ ಅನ್ನಸಂತರ್ಪಣೆ
- ಗಾಂಧಿ ಜಯಂತಿ ಅಂಗವಾಗಿ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ವಿಶೇಷ ಕಾರ್ಯಕ್ರಮ ಗಾಂಧೀಜಿ ತತ್ವಗಳನ್ನು ಸ್ಮರಿಸಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ
- ಅ.5ರಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ
- MRPL ಸ್ಫೋಟ ಪ್ರಕರಣ: ನಿರ್ಲಕ್ಷ್ಯದ ಆರೋಪದಡಿ FIR ಗಂಭೀರ ಗಾಯಗೊಂಡ ಕಾರ್ಮಿಕ ಮನೀಶ್ ಕರ್ಕಡ ಸಾವು; ಸುತ್ತಮುತ್ತ 54 ಮನೆಗಳಿಗೆ ಹಾನಿ
- ಎಂಆರ್ಪಿಎಲ್ ಸ್ಫೋಟ: ಸ್ಥಳೀಯರ ಸುರಕ್ಷತೆಯೊಂದಿಗೆ ಯಾವುದೇ ರಾಜಿ ಬೇಡ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ, ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಿ ಕೈಗಾರಿಕೆ ಆರಂಭದ ವೇಳೆ ನೀಡಿದ ಭರವಸೆಗಳು ಅನುಷ್ಠಾನವಾಗಲಿ: ಯೋಗಿಶ್ ಶೆಟ್ಟಿ ಜಪ್ಪು
- ಎಂಆರ್ಪಿಎಲ್ನಲ್ಲಿ ಭಾರೀ ಸ್ಫೋಟ: ಎಂಟು ಮಂದಿ ಗಾಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಬೆಂಕಿ; ಓರ್ವನಿಗೆ ಶೇ.35ರಷ್ಟು ಸುಟ್ಟ ಗಾಯ
Author: Tulunada Surya
ಬಂಟ್ವಾಳ, ಜುಲೈ ೨೩, ೨೦೨೫: ತುಳು ರಂಗಭೂಮಿಯ ಖ್ಯಾತ ಕಲಾವಿದ ಹಾಗೂ ಚಿತ್ರನಟ ರಮೇಶ್ ಕಲ್ಲಡ್ಕ (೬೮) ಅವರು ಬುಧವಾರ ಬೆಳಿಗ್ಗೆ ತಮ್ಮ ಕಲ್ಲಡ್ಕದ ಕೊಲಕೀರು ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರು ಒಬ್ಬ ಮಗ ಹಾಗೂ ಮಗಳನ್ನು ಅಗಲಿದ್ದಾರೆ.ರಮೇಶ್ ಕಲ್ಲಡ್ಕ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದವರು. ಕಳೆದ ೨೦ ವರ್ಷಗಳಿಂದ ವಿಜಯಕುಮಾರ್ ಕೊಡಿಯಾಲ್‌ಬೈಲ್ ನೇತೃತ್ವದ ಕಲಾಸಂಗಮ ತಂಡದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕೊಡಿಯಾಲ್‌ಬೈಲ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದ ರಮೇಶ್, ಸಾಮಾಜಿಕ ಹಾಗೂ ಪೌರಾಣಿಕ ನಾಟಕಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದರು. ಶಿವಧೂತಗುಳಿಗೆ ನಾಟಕದಲ್ಲಿ ಭೀಮರಾವನ ಪಾತ್ರದ ಮೂಲಕ ಅವರು ವ್ಯಾಪಕ ಗುರುತಿಸಿಕೊಂಡರು. ಜೊತೆಗೆ ಶಿವಾಜಿ ನಾಟಕದಲ್ಲಿ ದಾದಾ ಕೊಂಡೆಯಾಗಿ ಅವರ ಅಭಿನಯವೂ ಶ್ಲಾಘನೆಗೆ ಪಾತ್ರವಾಯಿತು.೧೯೫೭ರ ಏಪ್ರಿಲ್‌ನಲ್ಲಿ ಜನಿಸಿದ ರಮೇಶ್, ತಮ್ಮ ಬಾಲ್ಯದಿಂದಲೇ ರಂಗಭೂಮಿಯತ್ತ ಆಕರ್ಷಿತರಾದರು. ಶಾಂತರಾಮ ಕಲ್ಲಡ್ಕ ಅವರ ಮಿತ್ರಬಳಗ ತಂಡದಲ್ಲಿ ತಮ್ಮ ರಂಗಪಯಣ ಆರಂಭಿಸಿದ ಅವರು, ನಂತರ ತುಳುವಾಪ್ಪೆ ಜೊಕುಲು ತಂಡಕ್ಕೆ ಸೇರಿದರು. ಕಾಲಕ್ರಮೇಣ ವೃತ್ತಿಪರ…
ಮಂಗಳೂರು : ಜೂಲೈ 12 ರಂದು ಮಂಗಳೂರು ಜೈಲಿನಲ್ಲಿ ನಾಲ್ಕು ಜನ ಆರೋಪಿಗಳು ಅದೇ ಜೈಲಿನಲ್ಲಿದ್ದಂತಹ ಇನ್ನೊಬ್ಬ ಆರೋಪಿಯ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ಪ್ರಕರಣದ ತನಿಖೆಯ ಸಂದರ್ಭದಲ್ಲಿ ದಾಳಿ ನಡೆಸಿದ ಆರೋಪಿಗೆ ಬೆಂಬಲ ನೀಡಿದವರಿಗೂ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (KCOCA) ಸೆಕ್ಷನ್‌ಗಳನ್ನು ದಾಖಲಿಸಲಾಗಿದೆ.ಯಾರೇ ಆರೋಪಿತರು ಈಗಾಗಲೇ 2 ಪ್ರಕರಣವಿದ್ದು ಮತ್ತೊಂದು ಪ್ರಕರಣದಲ್ಲಿ ಭಾಗಿಯಾಗಿದ್ದರೆ ಅವರ ವಿರುದ್ಧ (KCOCA) ಸೆಕ್ಷನ್ ದಾಖಲಾಗುವುದು ಇದರಲ್ಲಿ ಇವರು ಮಾಡಿದಂತಹ ಕೃತ್ಯಕ್ಕೆ 3 ವರ್ಷ ಶಿಕ್ಷೆ ವಿಧಿಸಿದ್ದು (KCOCA) ಆಕ್ಟ್ ನಲ್ಲಿ 5 ವರ್ಷದಿಂದ ಜೀವಾವಧಿ ಶಿಕ್ಷೆಯಾಗುವ ವರೆಗೆ ನಿಬಂಧನೆ ಇದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಧನುಷ್ ಭಂಡಾರಿ ಅಲಿಯಾಸ್ ಧನು, ದಿಲೇಶ್ ಬಂಗೇರಾ ಅಲಿಯಾಸ್ ದಿಲ್ಲು, ಲಾಯ್ ವೇಗಾಸ್ ಅಲಿಯಾಸ್ ಲಾಯ್ ಮತ್ತು ಸಚಿನ್ ತಲಪಾಡಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) ಸೆಕ್ಷನ್ 308(4) ಮತ್ತು 3(5)…
Dubai resident and Team India’s powerhouse lifter, Gulshan Banu Kazi, 47 years master 1 created history at the Asian, African & Pacific Powerlifting Championship, held in Himeji, Japan, from July 5 to 13, by setting three new Asian records in a performance that stunned the international powerlifting community.Competing in the Under 84 kg category, Gulshan broke records in squat, deadlift, and total, making her one of the most dominant athletes at the championship. With a massive 208 kg deadlift, she not only clinched gold but firmly established herself as one of Asia’s most powerful women in the sport.Her achievement was…
ತುಳುನಾಡ ರಕ್ಷಣಾ ವೇದಿಕೆಗೆ ನನ್ನ ಸಂಪೂರ್ಣ ಬೆಂಬಲ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ ತುಳು ಬಾಷೆ ಮಾನ್ಯತೆ ಗೆ ಪ್ರಯತ್ನ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ 20-07-2025 ರಂದು ರವಿವಾರ ಬೆಳಗ್ಗೆ 10.30 ಕಾಪು ತಾಲೂಕು ಘಟಕದ ವತಿಯಿಂದ ಕಾರ್ಯಕರ್ತರ ಸಮ್ಮೇಳನ ಹಿರಿಯಡ್ಕ ದ ಕೋಟ್ನಕಟ್ಟೆ ಸುರಭಿ ಹಾಲ್ ನಲ್ಲಿ ಲಾವಣ್ಯ ಕುಲಾಲ್ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಶ್ರೀ ವಿನಯ ಕುಮಾರ್ ಸೊರಕೆಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಹೋರಾಟ ಮತ್ತು ತುಳು ಭಾಷೆ ಆಚಾರ ವಿಚಾರ ಸಂಸ್ಕೃತಿ ಆಹಾರ ಪದ್ಧತಿ ಉಳಿಸಿ ಬೆಳೆಸುವ ಪ್ರಯತ್ನ ಮಾಡುತ್ತಿರುವ ತುಳುನಾಡ ರಕ್ಷಣಾ ವೇದಿಕೆಗೆ ನೂರಾರು ನೂತನ ಕಾರ್ಯಕರ್ತರು ಸೇರ್ಪಡೆ ಗೊಳ್ಳುತ್ತಿದ್ದು ಉತ್ತಮ ಬೆಳವಣಿಗೆ ಕಾರ್ಯಕರ್ತರಿಗೆ ಸಂಘಟನೆ ತತ್ವ ಸಿದ್ಧಾಂತ ಮತ್ತು ತುಳು ಭಾಷೆ ರಾಜ್ಯ ದ ಅಧಿಕೃತ ಭಾಷೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ತುಳುನಾಡ ಅಭಿವೃದ್ಧಿ ಬಗ್ಗೆ ಸರ್ಕಾರ ಗಮನ ಹರಿಸುವ ಒತ್ತಾಯಿಸುವ…
ಪ್ರಕರಣವೊಂದರಲ್ಲಿ ದೋಷಿಯಾಗಿರುವ ಆರೋಪಿಗೆ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದರೂ ಶರಣಾಗದ ಹಿನ್ನೆಲೆ ಅಪರಾಧಿ ವಿರುದ್ಧ ಕೋರ್ಟ್ ಜೈಲು ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದೆ. ಮೂಲ್ಕಿ ಗೇರುಕಟ್ಟೆ ಕಿಲ್ಪಾಡಿ ನಿವಾಸಿ ಮಹಮ್ಮದ್ ಇರ್ಫಾನ್ (35) ಎಂಬಾತನಿಗೆ ನ್ಯಾಯಾಲಯವು ಮೂರು ತಿಂಗಳ ಸರಳ ಕಾರಾಗೃಹ ಶಿಕ್ಷೆ ಹಾಗೂ 80,000 ರೂ. ದಂಡ ವಿಧಿಸಿದೆ. ಈ ಪ್ರಕರಣದಲ್ಲಿ ಆರೋಪಿಗೆ ಈಗಾಗಲೇ ತೀರ್ಪು ಪ್ರಕಟವಾಗಿದ್ದು, ಆದರೆ ನ್ಯಾಯಾಲಯದ ಆದೇಶವನ್ನು ಅನುಸರಿಸದೇ ಇರುವ ಹಿನ್ನೆಲೆಯಲ್ಲಿ ವಾರೆಂಟ್ ಹೊರಡಿಸಲಾಗಿತ್ತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ, ನ್ಯಾಯಮೂರ್ತಿಯವರ ಆದೇಶದ ಮೇರೆಗೆ ಆರೋಪಿಯನ್ನು ಮಂಗಳೂರು ಕೇಂದ್ರ ಕಾರಾಗೃಹಕ್ಕೆ ದಾಖಲಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಹೋರಾಟ ಮತ್ತು ತುಳು ಭಾಷೆ ಆಚಾರ ವಿಚಾರ ಸಂಸ್ಕೃತಿ ಉಳಿಸಿ ಬೆಳೆಸುವ ಪ್ರಯತ್ನ ಮಾಡುತ್ತಿರುವ ತುಳುನಾಡ ರಕ್ಷಣಾ ವೇದಿಕೆ ಗೆ ನೂರಾರು ನೂತನ ಕಾರ್ಯಕರ್ತರು ಸೇರ್ಪಡೆ ಗೊಳ್ಳುತ್ತಿದ್ದು. ಕಾರ್ಯಕರ್ತರಿಗೆ ಸಂಘಟನೆ ತತ್ವ ಸಿದ್ಧಾಂತ ಮತ್ತು ತುಳು ಭಾಷೆ ರಾಜ್ಯ ದ ಅಧಿಕೃತ ಭಾಷೆ ಘೋಷಣೆ, ಹೈಕೋರ್ಟ್ ಪೀಠ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ತುಳುನಾಡ ಅಭಿವೃದ್ಧಿ ಬಗ್ಗೆ ಸರ್ಕಾರ ಗಮನ ಹರಿಸುವ ಒತ್ತಾಯಿಸುವ ದೃಷ್ಟಿಯಿಂದ 20-07-2025 ರಂದು ರವಿವಾರ ಬೆಳಗ್ಗೆ 10.30 ಕಾಪು ತಾಲೂಕು ಘಟಕದ ವತಿಯಿಂದ ಕಾರ್ಯಕರ್ತರ ಸಮ್ಮೇಳನ ಹಿರಿಯಡ್ಕ ದ ಕೋಟ್ನಕಟ್ಟೆ ಸುರಭಿ ಹಾಲ್ ನಲ್ಲಿ ನಡೆಯಲಿದೆ. ಸಮ್ಮೇಳನವನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಸುರೇಶ್ ಶೆಟ್ಟಿ ಗುರ್ಮೆ , ಮಾಜಿ ಸಚಿವ ಶ್ರೀ ವಿನಯ ಕುಮಾರ್ ಸೊರಕೆ, ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಲು ಉದಯ ಕುಮಾರ್ ಶೆಟ್ಟಿ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಗುರುವಾರ ತಡರಾತ್ರಿ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿರುವುದು ಮಾಹಿತಿ ತಿಳಿದು ಬಂದಿದೆ. ಬಂಧಿತ ಆರೋಪಿ ಜಪ್ಪಿನಮೊಗರು ನಿವಾಸಿ ರೋಶನ್ ಸಲ್ಡಾನ(45) ಎಂದು ಗುರುತಿಸಲಾಗಿದೆ ಈತನನ್ನು ಗುರುವಾರ ರಾತ್ರಿ ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮತ್ತು ಎಸಿಪಿ ರವೀಶ್ ನಾಯಕ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ ಎಂದು ತಿಳಿಯಲಾಗಿದೆ. ರೋಹನ್ ಸಲ್ಡಾನ ಉದ್ಯಮಿಯೆಂದು ಹೇಳಿಕೊಂಡು ಹೊರರಾಜ್ಯ, ಹೊರಜಿಲ್ಲೆಯ ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿ ಜಾಗದ ವ್ಯವಹಾರದ ಜೊತೆಗೆ ಸಾಲ ನೀಡುವುದಾಗಿ ಹೇಳಿ ನಂಬಿಸುತ್ತಿದ್ದ. ಈ ರೀತಿಯಾಗಿ ಆರೋಪಿ ಕೇವಲ 3 ತಿಂಗಳಲ್ಲೇ 45 ಕೋಟಿ ರೂ. ವ್ಯವಹಾರ ಮಾಡಿರುವುದು ಪತ್ತೆಯಾಗಿದೆ. ಕಳೆದ ಅನೇಕ ವರ್ಷಗಳಿಂದ 200 ಕೋಟಿ ರೂ.ಗೂ ಅಧಿಕ ವಂಚನೆ ಮಾಡಿದ್ದಾನೆ ಎಂದು ಪೊಲೀಸರಿ ಮಾಹಿತಿ ನೀಡಿದ್ದಾರೆ. ಉದ್ಯಮಿ ಹಾಗೂ ಶ್ರೀಮಂತ ವ್ಯಕ್ತಿಗಳನ್ನು…
ಮಂಗಳೂರು ; ‘ಮಿಸ್ ಡಿವೈನ್ ದಿವಾ’ ರಾಷ್ಟ್ರಮಟ್ಟದ ಫ್ಯಾಷನ್ ಪೇಜೆಂಟ್ ಸೌಂದರ್ಯ ಸ್ಪರ್ಧೆ ಮತ್ತು ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಅವತಾರ್ ಹೋಟೆಲ್‌ನಲ್ಲಿ ಆ.7ರಿಂದ 10 ರವರೆಗೆ ಜರಗಲಿದೆ. ಅಸ್ತ್ರ ಗ್ರೂಫ್ ಅರ್ಪಣೆಯಲ್ಲಿ ಅಜಯ್ ಕುಮಾರ್ ಹಾಗೂ ಸಾಹಿಲ್ ಈವೆಂಟ್ಸ್ ಆಶ್ರಯದಲ್ಲಿ ಸ್ಪರ್ಧೆ ಆಯೋಜನೆಯಾಗಿದೆ ಮಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಯೋಜಕ ಸಾಹಿಲ್ ಅವರು, ‘ಮಿಸ್ ಡಿವೈನ್ ಕರಾವಳಿಗೆ ಹೊಸ ಅವಕಾಶದ ಬಾಗಿಲು. ಜಗತ್ತಿಗೆ ಮಂಗಳೂರಿನ ಸೌಂದರ್ಯವನ್ನು ಪಸರಿಸಲು ಸೂಕ್ತ ವೇದಿಕೆ. ಇದರಲ್ಲಿ ಕಾಶ್ಮೀರದಿಂದ ತೊಡಗಿ ದೇಶದ ವಿವಿಧ ಭಾಗಗಳ ಸ್ಪಽಗಳು ಪಾಲ್ಗೊಳ್ಳಲಿದ್ದಾರೆ. ಕರಾವಳಿಯ ಪ್ರವಾಸೋದ್ಯಮಕ್ಕೆ ಇದೊಂದು ಹೊಸ ಸಾಧ್ಯತೆಯ ದಾರಿ’ ಎಂದರು. ಅಸ್ತ್ರ ಗ್ರೂಪ್ ಸಿಇಒ ಲಂಚುಲಾಲ್ ಕೆ.ಎಸ್. ಮಾತನಾಡಿ, ‘ದೇಶದ ವಿವಿಧ ಭಾಗಗಳಿಂದ ಆಯ್ದ ೫೦ ಮಂದಿ ಸ್ಪಽಗಳು ಪಾಲ್ಗೊಳ್ಳಲಿದ್ದು, ಮಂಗಳೂರಿನ ಹೆಸರು ರಾಷ್ಟ್ರಮಟ್ಟದಲ್ಲಿ ಮಿಂಚಬೇಕು ಮತ್ತು ಇಲ್ಲಿನ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡಿವೈನ್ ದಿವಾ ಸ್ಪರ್ಧೆಗೆ ಅಸ್ತ್ರ ಸಂಸ್ಥೆಯು ಪ್ರಾಯೋಜಕತ್ವ ವಹಿಸಿದೆ. ಇದರಿಂದ ಹೊಸಬರಿಗೆ ಅವಕಾಶ ಸಿಗಲಿದೆ’…
ಶಿಕ್ಷಣ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಗುರುಪುರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದ ಜನಾನುರಾಗಿ ಶಿಕ್ಷಕ, ಸಜ್ಜನ – ಸ್ನೇಹಶೀಲ ವ್ಯಕ್ತಿತ್ವದ ವಿಶ್ವನಾಥ ಜೋಗಿ ಕದ್ರಿ (72) ಅವರು ಜುಲೈ 8ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಮೂರು ದಶಕಗಳಿಂದ ಮಂಗಳೂರು ತಾಲೂಕಿನ ಬಲ್ಮಠ,ಕಾವೂರು,ಮೊಂಟೆಪದವು ಗುರುಪುರ ಮೊದಲಾದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ದುಡಿದ ಅವರು 2014ರಲ್ಲಿ ಪ್ರಾಚಾರ್ಯರಾಗಿ ನಿವೃತ್ತರಾದರು. ತಮ್ಮ ಸೇವಾವಧಿಯಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಸಹೋದ್ಯೋಗಿಗಳೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದರು. ವಿದ್ಯಾರ್ಥಿಗಳ ಹಾಗೂ ಹೆತ್ತವರ ನೆಚ್ಚಿನ ಅಧ್ಯಾಪಕರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ನಿವೃತ್ತರಾದ ಬಳಿಕ ನಗರದ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು. ಕಳೆದ ಆರು ತಿಂಗಳಿಂದ ಅಸ್ವಸ್ಥರಾಗಿದ್ದ ಅವರು ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದರೂ ಇದ್ದಕ್ಕಿದ್ದಂತೆ ಆರೋಗ್ಯದಲ್ಲಿ ಏರುಪೇರಾಗಿ ಕೊನೆಯುಸಿರೆಳೆದರು. ಶಿಕ್ಷಕಿಯಾಗಿದ್ದ ಪತ್ನಿ ಶುಭಾ ವಿಶ್ವನಾಥ್ ಹಾಗೂ ವಿದೇಶದಲ್ಲಿ ಉದ್ಯೋಗದಲ್ಲಿರುವ ಏಕೈಕ ಪುತ್ರಿ – ಅಳಿಯ ಮತ್ತು ಅಪಾರ ಬಂಧು ವರ್ಗವನ್ನವರು ಅಗಲಿದ್ದಾರೆ.…
ಹಿಂದೂ ಯುವ ಸೇನೆ ಭಾರ್ಗವ ಶಾಖೆ ಅಳಪೆ ನೇತೃತ್ವದಲ್ಲಿ 2025 ನೇ ಸಾಲಿನ “ಕೆಸರ್ಡ್ ಡೊಂಜಿ ದಿನ “ತುಳುನಾಡ ಸಂಸ್ಕೃತಿಯನ್ನು ಬಿಂಬಿಸುವ ಕ್ರೀಡೋತ್ಸವವನ್ನು ನಡೆಸಲಾಯಿತು. ಸುಮಾರು 1500 ಮಕ್ಕಳು ಮತ್ತು ಕ್ರೀಡಾಳುಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 55 ವರ್ಷದಿಂದ ಕೃಷಿ ಚಟುವಟಿಕೆಯನ್ನು ಉಳಿಸಿಕೊಂಡು ಬಂದ ಸದಾಶಿವ ಭಂಡಾರಿ ಮತ್ತು ಜಯಲಕ್ಷ್ಮಿ ಭಂಡಾರಿ ಅವರಿಗೆ ಸನ್ಮಾನಿಸಲಾಯಿತು. ಸಮಿತಿ ಅಧ್ಯಕ್ಷರಾದ ನ್ಯಾಯವಾದಿ ದಿನಕರ್ ಶೆಟ್ಟಿ ಪ್ರಾಸ್ತಾವಿಕ ನುಡಿಯನ್ನು ಹೇಳಿದರು, ಸಮರೋಪ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ಹಿಂದು ಯುವ ಸೇನೆ ಕೇಂದ್ರೀಯ ಮಂಡಳಿಯ ಅಧ್ಯಕ್ಷರಾದ ಶ್ರೀ ಯಶೋಧರ ಚೌಟ ವಹಿಸಿದ್ದರು, ಶಾಖೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಯೋಗೀಶ್ ಕುಮಾರ್ ಜೆಪ್ಪು ಅವರು ಮಾತನಾಡಿ ತುಳುನಾಡ ಸಂಸ್ಕೃತಿಯ ಉಳಿವಿಗಾಗಿ ನಾವೆಲ್ಲರೂ ಪ್ರತಿಜ್ಞೆ ಮಾಡಬೇಕೆಂದು ಕರೆ ನೀಡಿದರು, ತುಳುನಾಡ ಇತಿಹಾಸವನ್ನು ಜನರ ಮುಂದೆ ಸವಿಸ್ತಾರವಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡರಾದ ಜನಾರ್ದನ್ ಅರ್ಕುಳ ,…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
