- ಹಿರಿಯ ನಟ ನಾನಾ ಪಾಟೇಕರ್ ನಿಧನ ಹೃದಯ ಸ್ತಂಭನದಿಂದ 75ನೇ ವಯಸ್ಸಿನಲ್ಲಿ ಅಂತ್ಯ – ಭಾರತೀಯ ಚಿತ್ರರಂಗಕ್ಕೆ ಅಪಾರ ನಷ್ಟ
- ಸೇವಾ ಸಂಕಲ್ಪ ಅಭಿಯಾನಕ್ಕೆ ಮಾದರಿ ಹೆಜ್ಜೆ ಕುಲಶೇಖರ ಕಲ್ಪನೆ ಪರಿಸರದಲ್ಲಿ ನವೀಕೃತ ಬಸ್ ನಿಲ್ದಾಣ ಉದ್ಘಾಟನೆ
- ಮಾಡೂರು ಶ್ರೀ ಶಿವ ದುರ್ಗಾಂಬಾ ಮಠದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವ ವಿಶೇಷ ಪೂಜೆ, ಗಣಹೋಮ, ಮಹಾ ಚಂಡಿಕಾಯಾಗ, ಅಖಂಡ ಭಜನೆ ಹಾಗೂ ಅನ್ನಸಂತರ್ಪಣೆ
- ಗಾಂಧಿ ಜಯಂತಿ ಅಂಗವಾಗಿ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ವಿಶೇಷ ಕಾರ್ಯಕ್ರಮ ಗಾಂಧೀಜಿ ತತ್ವಗಳನ್ನು ಸ್ಮರಿಸಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ
- ಅ.5ರಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ
- MRPL ಸ್ಫೋಟ ಪ್ರಕರಣ: ನಿರ್ಲಕ್ಷ್ಯದ ಆರೋಪದಡಿ FIR ಗಂಭೀರ ಗಾಯಗೊಂಡ ಕಾರ್ಮಿಕ ಮನೀಶ್ ಕರ್ಕಡ ಸಾವು; ಸುತ್ತಮುತ್ತ 54 ಮನೆಗಳಿಗೆ ಹಾನಿ
- ಎಂಆರ್‌ಪಿಎಲ್ ಸ್ಫೋಟ: ಸ್ಥಳೀಯರ ಸುರಕ್ಷತೆಯೊಂದಿಗೆ ಯಾವುದೇ ರಾಜಿ ಬೇಡ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ, ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಿ ಕೈಗಾರಿಕೆ ಆರಂಭದ ವೇಳೆ ನೀಡಿದ ಭರವಸೆಗಳು ಅನುಷ್ಠಾನವಾಗಲಿ: ಯೋಗಿಶ್ ಶೆಟ್ಟಿ ಜಪ್ಪು
- ಎಂಆರ್ಪಿಎಲ್ನಲ್ಲಿ ಭಾರೀ ಸ್ಫೋಟ: ಎಂಟು ಮಂದಿ ಗಾಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಬೆಂಕಿ; ಓರ್ವನಿಗೆ ಶೇ.35ರಷ್ಟು ಸುಟ್ಟ ಗಾಯ
Author: Tulunada Surya
ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿಪರಾರಿಯಾಗಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿಯನ್ನು ಲಾಠಿ ಏಟು ಕೊಟ್ಟು ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡೆದಿದೆ. ಈ ವೇಳೆ ಗಾಯಗೊಂಡ ಉಡುಪಿ ಮಹಿಳಾ ಠಾಣೆಯ ಪೊಲೀಸ್ ಸಿಬ್ಬಂದಿ ರಿತೇಶ್ ಹಾಗೂ ಪೊಲೀಸರ ಲಾಠಿ ಏಟಿನಿಂದ ಗಾಯಗೊಂಡಿರುವ ಉತ್ತರ ಪ್ರದೇಶ ಮೂಲದ ಮಣಿಪಾಲ ವಿ.ಪಿ.ನಗರದ ನಿವಾಸಿ ಮುಹಮ್ಮದ್ ದಾನೀಶ್(29) ಎಂಬವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಯಡಿ ದಾಖಲಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.12ರಂದು ಆರೋಪಿ ಮುಹಮ್ಮದ್ ದಾನೀಶ್ನನ್ನು ದಸ್ತಗಿರಿ ಮಾಡಿದ್ದು, ಈತನನ್ನು ತನಿಖೆಗೆ ಒಳಪಡಿಸಿ ಜು.13ರಂದು ತನಿಖೆಯ ಬಗ್ಗೆ ಮಣಿಪಾಲ ತಾಂಗೋಡು 2ನೇ ಕ್ರಾಸ್ ಹಾಡಿ ಬಳಿ ಕೃತ್ಯವೆಸಗಿದ ಸ್ಥಳವನ್ನು ಪಂಚನಾಮೆಯನ್ನು ಮಾಡುವ ಕರೆದುಕೊಂಡು ಹೋಗಲಾಗಿತ್ತು. ಈ ಸಮಯದಲ್ಲಿ ಆರೋಪಿ ಆತನಿಗೆ ಕೈಕೊಳ ಹಿಡಿದುಕೊಂಡಿದ್ದ ಸಿಬ್ಬಂದಿ ರಿತೇಶ್ರವರ ಎದೆಗೆ ಎರಡೂ ಕೈಗಳಿಂದ ಗುದ್ದಿ ದೂಡಿ ನೆಲಕ್ಕೆ ಬೀಳಿಸಿ ಅಲ್ಲಿಯೇ ಇದ್ದ ಕಲ್ಲನ್ನು ಎತ್ತಿಹಾಕಲು ಬಂದಿದ್ದನು. ಆಗ…
ಮಂಗಳೂರು:ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ತುಳುವ ಮಹಾಸಭೆಯ ಪ್ರಥಮ ಘಟಕದ ರೂಪಿಕರಣ ಸಭೆ ಮರೋಲಿ ಸೂರ್ಯನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ ಆಡಳಿತ ಮೊಕ್ತೆಸರಾದ ಗಣೇಶ ಶೆಟ್ಟಿ ಗುಡ್ಡೆಗುತ್ತು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ “ಆರಾಧನೆ ಕೇಂದ್ರಗಳು ಕೇವಲ ಭಕ್ತಿಯ ಶ್ರದ್ಧಾ ಕೇಂದ್ರಗಳಾಗದೆ, ಸಾಮಾಜಿಕ, ಸಾಂಸ್ಕೃತಿಕ, ಬೌದ್ಧಿಕ ಹಾಗೂ ಶಾರೀರಿಕ ಬೆಳವಣಿಗೆಯ ಉತ್ಥಾನ ಕೇಂದ್ರಗಳಾಗಬೇಕು” ಎಂಬ ಮಹತ್ವದ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಅಭಿವೃದ್ಧಿ ಸಮಿತಿ ಅಧ್ಯಕ್ಷ ಗೀರಿದರ್ ಶೆಟ್ಟಿ ಅವರು ಮಾತನಾಡಿ ಮಕ್ಕಳಿಗೆ ನಮ್ಮ ಆಚಾರ–ವಿಚಾರಗಳನ್ನು ಅರ್ಥವಾಗುವ ರೀತಿಯಲ್ಲಿ ಹಾಗೂ ಖುಷಿಯಾಗುವ ರೀತಿಯಲ್ಲಿ ಬೋಧನೆ ಮಾಡಬೇಕು ಆವಾಗಲೇ ಮಕ್ಕಳಲ್ಲಿ ಆಸಕ್ತಿಯ ಬೆಳವಣಿಗೆ ಸಾಧ್ಯವಾಗುತ್ತದೆ. ಈ ದೃಷ್ಟಿಯಿಂದ ತುಳುವ ಮಹಾಸಭೆ ಕೈಗೊಂಡಿರುವ ಕೆಲಸ ಶ್ಲಾಘನೀಯವಾಗಿದೆ” ಎಂದು ಅವರು ಹೇಳಿದರು. ತುಳುವ ಮಹಾಸಭೆಯ ಉದ್ದೇಶಗಳು, ಗುರಿಗಳು ಹಾಗೂ ತತ್ವಚಿಂತನೆಗಳ ಬಗ್ಗೆ ಆಧ್ಯಾತ್ಮಗುರು ಹಾಗೂ ತುಳುವ ಮಹಾಸಭೆ ಮಂಗಳೂರು ತಾಲೂಕು ಸಂಚಾಲಕರು ಅರವಿಂದ ಬೆಳ್ಚಾಡ, ಹಾಗೂ ತುಳುವರ್ಲ್ಡ್ ಫೌಂಡೇಶನ್, ಕಟೀಲ್ ಇದರ ನಿರ್ದೇಶಕರಾದ ಡಾ. ರಾಜೇಶ್ ಆಳ್ವ…
ಮೂಡುಬಿದ್ರೆ : ಮೂಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಇರುವೈಲ್ ಗ್ರಾಮದಲ್ಲಿ ಇಸ್ಪೀಟ್ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಹಲವರನ್ನು ಬಂಧಿಸಿದ ಘಟನೆ ಜು. 12ರ ರಾತ್ರಿ ನಡೆದಿದೆ. ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಮೂಡಬಿದ್ರೆ ತಾಲೂಕಿನ ಇರುವೈಲ್ ಗ್ರಾಮದ ಕೋರಿಬೆಟ್ಟು ಬಳಿ ಗುಡ್ಡೆಯಲ್ಲಿ ಕೆಲವು ವ್ಯಕ್ತಿಗಳು ಸೇರಿ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಜುಗಾರಿ ನಡೆಸುತ್ತಿದ್ದಾರೆ ಎಂಬುದಾಗಿ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಅಲ್ಲಿಗೆ ದಾಳಿ ನಡೆಸಿದ ಅವರು, ಅಕ್ಬರ್, ಸಂತೋಷ್, ಪ್ರಶಾಂತ್, ಮಹಾಬಲ ಪೂಜಾರಿ, ಪ್ರಜ್ವಲ್, ಗಿರೀಶ್, ರಾಜೇಶ ಎಂಬವರುಗಳನ್ನು ವಶಕ್ಕೆ ಪಡೆದುಕೊಂಡುಕೊಂಡಿದ್ದಾರೆ. ಗಣೇಶ, ಶ್ರೀನಾಥ್, ದಿನೇಶ್ ಕೆಂಪುಗುಡ್ಡೆ, ಕೇಶವ ಯಾನೆ ಅಪ್ಪು ಹಾಗೂ ಇನ್ನಿತರರು ಅದೇ ಸಂದರ್ಭದಲ್ಲಿ ಘಟನಾ ಸ್ಥಳದಿಂದ ಓಡಿ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ಆಪಾಧಿತರ ವಶದಲ್ಲಿದ್ದ ನಗದು ಹಣ 10,100 ರೂ., 52 ಇಸ್ಪೀಟ್ ಎಲೆಗಳು, 2 ಮೇಣದ ಬತ್ತಿ ಹಾಗೂ KA-09-EP-8948 ಮತ್ತು KA-19-EZ-1077 ದ್ವಿಚಕ್ರ ವಾಹನಗಳನ್ನು ವಶಕ್ಕೆ…
ಬೆಂಗಳೂರು : ತುಳು ಭಾಷೆ, ಸಂಸ್ಕೃತಿ, ಮತ್ತು ಸಮುದಾಯ ಹಕ್ಕುಗಳ ರಕ್ಷಣೆಗೆ ಶತಮಾನಾಂತರದಿಂದ ಶ್ರಮಿಸುತ್ತಿರುವ ತುಳುವ ಮಹಾಸಭೆ, ಬೆಂಗಳೂರು ಮಹಾನಗರದ ಸಂಚಾಲಕರಾಗಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಈ ನೂತನ ನೇಮಕದಿಂದ ಕರ್ನಾಟಕ ರಾಜ್ಯದಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಲಭಿಸಬೇಕಾದ ಹೋರಾಟಕ್ಕೆ ಹೊಸ ಶಕ್ತಿ ತುಂಬಲಿದೆ ಎಂದು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ತುಳು ಸಂಘಟನೆಗಳು ಈ ನೇಮಕಾತಿಯನ್ನು ಸ್ವಾಗತಿಸಿದೆ. ತುಳುವ ಮಹಾಸಭೆ, 1928ರಲ್ಲಿ ಹಿರಿಯ ತಿಲಕವಾದಿ ಎಸ್. ಯು. ಪಣಿಯಾಡಿ ಅವರ ನೇತೃತ್ವದಲ್ಲಿ ಸ್ಥಾಪಿತವಾದ ಈ ಸಂಘಟನೆ, ತುಳು ಭಾಷೆ, ಸಂಸ್ಕೃತಿ, ಸಂಪ್ರದಾಯ ಹಾಗೂ ತುಳುವರ ಹಕ್ಕುಗಳ ಸಂರಕ್ಷಣೆ ಮತ್ತು ಪ್ರಚಾರಕ್ಕಾಗಿ ಶ್ರಮಿಸುತ್ತಿದೆ. ಶತಮಾನೋತ್ಸವದ ಹೆಜ್ಜೆಯಲ್ಲಿ ಈ ಸಂಸ್ಥೆ ತುಳುನಾಡನ್ ಕಳರಿ ತರಬೇತಿ (ಸಮರಕಲೆ, ಮರ್ಮ ಚಿಕಿತ್ಸಾ ಪಾಠ), ನಶಿಸುತ್ತಿರುವ ದೈವ ಆರಾಧನೆಗಳ ಪುನರುಜ್ಜೀವನ, ತುಳುವೇಶ್ವರ ದೇವಾಲಯ ಪುನರ್ ಸ್ಥಾಪನೆ, ಭಾಷಾ–ಮತ–ಜಾತಿ ಸೌಹಾರ್ದತೆ, ಪರಿಸರ ಸಂರಕ್ಷಣೆ ಮುಂತಾದ ಹತ್ತು ಹಾದಿಗಳಲ್ಲಿ ಕಾರ್ಯವ್ಯಾಪ್ತಿ ವಿಸ್ತರಿಸುತ್ತಿದೆ. ತುಳುನಾಡದ…
ಪಚ್ಚನಾಡಿಯಲ್ಲಿ ಹೊಸತಾಗಿ ಕಸ ಸಂಗ್ರಹ ಕ್ಕೆ ಅನುಮತಿ. ವಾರ್ಡ್ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತವಾಗಿದೆ ಪಚ್ಚನಾಡಿ ಮುಖ್ಯ ರಸ್ತೆಗೆ ತಾಗಿಕೊಂಡು ಇರುವ ಸರ್ಕಾರದ ಹೊಸ ಜಾಗದಲ್ಲಿ ಮತ್ತೊಂದು ಕಸದ ಕೇಂದ್ರ ಮಾಡಳು ಮಂಗಳೂರು ಮಹಾನಗರಪಾಲಿಕೆ ಅನುಮತಿ ನೀಡಿದೆ. ಸುಮಾರು 40 ಎಕರೆ ಸ್ಥಳದಲ್ಲಿ ತುಂಬಿರುವ ಕಸ ತೆಗೆಯುತ್ತಿದ್ದಾರೆ. ಅಲ್ಲಿ ಎಕರೆಗಟ್ಟಲೆ ಸ್ಥಳ ಇರುವಾಗ, ಪುನಹ ಹೊಸ ಸ್ಥಳದಲ್ಲಿ ಕಸದ ಕೇಂದ್ರ ಮಾಡುವ ಮಹಾನಗರ ಪಾಲಿಕೆ ನಿರ್ಧಾರವನ್ನು, ಇಂದು ನಡೆದ ಕಾಂಗ್ರೆಸ್ ವಾರ್ಡ್ ಸಮಿತಿ ಸಭೆಯಲ್ಲಿ ತೀವ್ರವಾಗಿ ವಿರೋಧಿಸುವ ನಿರ್ಣಯ ಕೈಗೊಳ್ಳಲಾಯಿತು. ಸಾರ್ವಜನಿಕರ ಸಹಿಯೊಂದಿಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದು, ಮತ್ತು, ಜಿಲ್ಲೆಯ ಹಿರಿಯ ಹೋರಾಟಗಾರ ಎಂ ಜಿ ಹೆಗಡೆ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲು ನಿರ್ಧಾರ ಮಾಡಲಾಯಿತು.ಈಗಾಗಲೇ ಇರುವ 40 ಎಕ್ರೆ ಸ್ಥಳದಲ್ಲೇ ಕಸ ವಿಲೇವಾರಿ ಆಗಬೇಕು, ನೂತನವಾಗಿ ಗುರುತಿಸಿದ ಸ್ಥಳದಲ್ಲಿ, ಮಿನಿ ಮಾರುಕಟ್ಟೆ, ನಾಡ ಕಛೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಡಬೇಕು ಎಂಬ ಬೇಡಿಕೆ ಇಡಲಾಗಿದೆ.ಕಾಂಗ್ರೆಸ್ ರಾಜ್ಯ ವಕ್ತಾರ ಎಂ…
ಮಂಗಳೂರು: ಕಿನ್ನಿಗೋಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಿನ್ನಿಗೋಳಿಯ ಪಿಂಟೋ ಗಾರ್ಡನ್ ಮಾಲೀಕ ಉದ್ಯಮಿ ರಾಕೀ ಪಿಂಟೋ (68) ಎಂಬಾತನ ಮೇಲೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆ ಕೆಲಸ ಮಾಡಿಕೊಂಡಿದ್ದ ಬಾಲಕಿಯ ತಾಯಿ ಈ ಬಗ್ಗೆ ದೂರು ನೀಡಿದ್ದು, ಬಾಲಕಿಯನ್ನು ಶಾಲೆಗೆ ಬಿಡುವ ನೆಪದಲ್ಲಿ ಕಾರಿನಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸೆಗಿದ್ದಾರೆ ಎಂದು ತಾಯಿ ದೂರು ನೀಡಿದ ಹಿನ್ನಲೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಂತೆ ಕಾರು ಸಹಿತ ರಾಕಿ ಪಿಂಟೋ ಅವರನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ರಕ್ತದೊತ್ತಡ ಹೆಚ್ಚಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣದ ಸತ್ಯ ಸತ್ಯತೆ ಹೆಚ್ಚಿನ ಪೋಲಿಸ್ ತನಿಖೆಯಿಂದ ತಿಳಿದು ಬರಲಿದೆ.
ಮಂಗಳೂರು ; ದ.ಕ ಜಿಲ್ಲಾ ಪಂಚಾಯತ್ ಮಂಗಳೂರು ,ತಾಲೂಕು ಪಂಚಾಯತ್ ಮಂಗಳೂರು ನೀರುಮಾರ್ಗ ಗ್ರಾಮ ಪಂಚಾಯತ್ ಮತ್ತು ಹಸಿರು ದಳ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಗ್ರಾಮಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ಇಂದು ಮಂಗಳೂರಿನ ನೀರುಮಾರ್ಗದಲ್ಲಿ ನಡೆಯಿತು. ನಾಡಗೀತೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ಬಳಿಕ ಎಸ್.ಎಸ್.ಎಲ್.ಸಿ ಯ ಕೆ.ರೂಪಾಲಿರಾವ್,ಇಜಾರ ಸಾಹಿಲ್,ಲಿಜಾ ರೂಜ್ ಮೊಂತೆರೊ ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು. ಬಳಿಕ ವಿಕಲಚೇತರಿಗೆ ಹಾಗೂ ಕ್ರೀಡಾ ಸಾಧಕರಿಗೆ ಚೆಕ್ ವಿತರಣೆ ನಡೆಯಿತು. ವಿಧಾನ ಸಭಾಸ್ಪೀಕರ್ ಯು.ಟಿ ಖಾದರ್ ರವರು ವಿವಿಧ ಕಾಮಗಾರಿಯ ಉದ್ಘಾಟನೆ ಹಾಗೂ ಶಂಕು ಸ್ಥಾಪನೆಯನ್ನು ನೆರೆವೆರಿದಿದರು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉಧ್ಘಾಟನೆಯನ್ನು ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್ ರವರು ಉದ್ಘಾಟಿಸಿದರು.ಬಳಿಕ ನೀರ್ ಮಾರ್ಗ ಗ್ರಾಮ ಪಂಚಾಯತ್ – ಹಸಿರು ದಳ ಮಂಗಳೂರು ವತಿಯಿಂದ ಸನ್ಮಾನಿಸಿದರು. ಬಳಿಕ ಮಾತನಾಡಿದ ಯು.ಟಿ ಖಾದರ್ ಅವರು ಗ್ರಾಮ ಪಂಚಾಯತ್ ಎಂದರೆ ಅದು…
ಮಂಗಳೂರು: ವಿಷಾನಿಲ ಸೋರಿಕೆಯಿಂದ ಮಂಗಳೂರು ಹೊರವಲಯದ ಸುರತ್ಕಲ್‌ನ ಎಂಆರ್‌ಪಿಎಲ್ ಘಟಕದ ಇಬ್ಬರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಮೃತ ಸಿಬ್ಬಂದಿಗಳು ದೀಪ ಚಂದ್ರ ಭಾರ್ತಿಯಾ ಮತ್ತು ಬಿಜಿಲ್ ಪ್ರಸಾದ್ ಎಂದು ಗುರುತಿಸಲಾಗಿದೆ. ಮಂಗಳೂರು ತೈಲ ಶುದ್ಧೀಕರಣ ಘಟಕದ ಆಯಿಲ್ ಮೂವ್‌ಮೆಂಟ್ ವಿಭಾಗದಲ್ಲಿ ಘಟನೆ ನಡೆದಿದೆ. ಆಯಿಲ್ ಮೂವ್‌ಮೆಂಟ್ ವಿಭಾಗದಲ್ಲಿ ದೋಷ ಕಂಡು ಬಂದ ಹಿನ್ನೆಲೆ ಪರಿಶೀಲನೆಗೆಂದು ಸಿಬ್ಬಂದಿ ತೆರಳಿದ್ದರು. ಟ್ಯಾಂಕ್ ಮೇಲ್ಛಾವಣಿಗೆ ಹೋದ ಬೆನ್ನಲ್ಲೇ ಇಬ್ಬರೂ ಅಸ್ವಸ್ಥಗೊಂಡಿದ್ದಾರೆ. ತಕ್ಷಣದ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಿದರೂ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರ ರಕ್ಷಣೆಗೆ ಮುಂದಾಗಿದ್ದ ಮತ್ತೊಬ್ಬ ಸಿಬ್ಬಂದಿ ವಿನಾಯಕ ಮಯಗೇರಿ ಎಂಬವರ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಂಆರ್‌ಪಿಎಲ್ ಆಡಳಿತ ಘಟನೆಯ ತನಿಖೆಗೆ ಸಮಿತಿ ರಚಿಸಿದೆ. ಗ್ರೂಪ್ ಜನರಲ್ ಮ್ಯಾನೇಜರ್‌ಗಳನ್ನೊಳಗೊಂಡ ಉನ್ನತ ಮಟ್ಟದ ತನಿಖಾ ಸಮಿತಿ ರಚನೆ ಮಾಡಲಾಗಿದೆ.
ಮಂಗಳೂರು ನ್ಯಾಯಾಲಯದಲ್ಲಿ ಇಂದು ನಡೆದ ಲೋಕಅದಾಲತ್ ನಲ್ಲಿ ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಲಕ್ಷ್ಮೀನಾರಾಯಣ ಭಟ್ ಕೆ, ಅದಲತ್ ಸದಸ್ಯರಾದ ಶ್ರೀಮತಿ ಕೆ ಎಸ್ ಗೌರಿ ರವರು ಕೌಟುಂಬಿಕ ಸಮಸ್ಯೆಯಿಂದ ಬೇರೆ ಬೇರೆಯಾದ ಗಂಡ ಹೆಂಡತಿಯನ್ನು ಒಟ್ಟುಗೂಡಿಸಿದ ಪ್ರಸಂಗ ನಡೆಯಿತು. ಕಾವೂರು ನಿವಾಸಿ ಹನುಮಂತ ಹೂಗಾರ್ ಮತ್ತು ಬಿಜೈ ನಿವಾಸಿ ಸಾವಿತ್ರಿ ಹೂಗಾರ್ ರವರು ಮದುವೆಯಾಗಿ 16 ವರ್ಷ ಆಗಿದ್ದು ಎರಡು ಮಕ್ಕಳಿರುತ್ತಾರೆ. ಕೆಲವೊಂದು ಕೌಟುಂಬಿಕ ಸಮಸ್ಯೆಯಿಂದ ಇಬ್ಬರು ಬೇರೆಬೇರೆಯಾಗಿ ವಾಸಿಸುತ್ತಿದ್ದರು ಹನುಮಂತ ಹೂಗಾರ್ ಅವರು ನನಗೆ ಹೆಂಡತಿ ಜೊತೆ ಬಾಳಲು ಅವಕಾಶ ಮಾಡಿಕೊಡಬೇಕೆಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಅರ್ಜಿದಾರ ಹನುಮಂತ ಹೂಗಾರ್ ಪರವಾಗಿ ನ್ಯಾಯವಾದಿ ಅನಿಶಾ ಡಿಸೋಜ ಮತ್ತು ಪ್ರತಿವಾದಿ ಸಾವಿತ್ರಿ ಹೂಗಾರ್ ಪರವಾಗಿ ನ್ಯಾಯವಾದಿ ದಿನಕರ್ ಶೆಟ್ಟಿ ಅವರು ವಕಾಲತು ವಹಿಸಿದ್ದರು.ಮತ್ತು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಜೈಬುನ್ನಿಸ್ಸ ಉಪಸ್ಥಿತರಿದ್ದರು. ವೈವಾಹಿಕ ಜೀವನದ ಬಗ್ಗೆ ಸವಿಸ್ತಾರವಾಗಿ ಮತ್ತು ಸಮಸ್ಯೆಗಳನ್ನು ಬಗೆಹರಿಸಿಕೊಂಡು ಮುಂದಿನ ಜೀವನ ನಡೆಸುವ ಬಗ್ಗೆ ತಿಳುವಳಿಕೆ…
ಕರಾವಳಿ ಟೀಮ್ ನ ಅಧ್ಯಕ್ಷರಾದ ನಿಸಾರ್ ಕರಾವಳಿ ಆಜ್ಮಲ್ ಕೊಳಂಬೆ ಹಫೀಜ್ ಕೊಳಂಬೆನೇತೃತ್ವದಲ್ಲಿ ಬಜ್ಪೆ ಸ್ರಷ್ಟಿ ಹೋಟೆಲ್ ಮುಂಭಾಗ ಹದಗೆಟ್ಟ ಮುಖ್ಯ ರಸ್ತೆಯ ಗುಂಡಿ ಮುಚ್ಚುವ ಮೂಲಕ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಂಡರು , ಕರಾವಳಿ ಟೀಮಿನ ಮುಖಂಡರಾದ ಜಲಾಲ್ ಮರವೂರು ಆಸ್ಪಕ್ ಪ್ಯಾರ ನಾಗೇಶ ಬಜ್ಪೆ ಖಾದರ್ ಕಿನ್ನಿಪದವ್ ಜುನೈದ್ ಬಜ್ಪೆ, ಸಹದ್ ಎಲ್ಲಾ ಸದಸ್ಯರುಗಳು ಭಾಗವಹಿಸಿದರು
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
