Thursday, October 10, 2024
spot_img
More

    Latest Posts

    ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ವಿದ್ಯುತ್‌ ಕಂಬಕ್ಕೆ ಢಿಕ್ಕಿ..! ಯುವತಿ ಸಾವು

    ಮಂಗಳೂರು :  ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರಣ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ.

    ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಮೃತಪಟ್ಟ ಯುವತಿಯಾಗಿದ್ದಾಳೆ ,

    ಅಪಘಾತದಲ್ಲಿ ಪ್ರೀತಿಯವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್‌ (9) ಹಾಗೂ ಆಟೋ ಚಾಲಕ ಪದ್ಮನಾಭ ಗಾಯಗೊಂಡಿದ್ದಾರೆ.

    ಇವರಲ್ಲಿ ಮೀನಾಕ್ಷಿ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದ್ದು,  ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಬಜಪೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss