ವಿಟ್ಲ : ಆಟೋ ರಿಕ್ಷಾಕ್ಕೆ ದನವೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ತಪ್ಪಿದ ಆಟೋ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಜಗನ್ನಾಥ ಪೈಸಾರಿ (57) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಊಟ ಮುಗಿಸಿದ ಬಳಿಕ ಪುಣಚದ ಅಟೋರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಬರುತ್ತಿದ್ದ ಸಂದರ್ಭ ಮಣಿಲ ಎಂಬಲ್ಲಿ ದುರ್ಘಟನೆ ಸಂಭವಿಸಿದ್ದು, ಅಟೋರಿಕ್ಷಾ ರಸ್ತೆಗೆ ಪಲ್ಟಿಯಾಗಿ ಬಿದ್ದ ಕಾರಣ, ಅವರ ತಲೆಗೆ ಗಂಭೀರ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರೆನ್ನಲಾಗಿದೆ. ತುಳು ನಾಟಕ ರಂಗದಲ್ಲಿ ಹಾಸ್ಯ ಅಭಿನಯದ ಮೂಲಕ ಮಿಂಚಿದ್ದ ಅವರು, ಕಳೆದ ಮೂವತ್ತು ವರ್ಷಗಳಿಂದ ಆಟೋರಿಕ್ಷಾ ಚಾಲಕರಾಗಿ ‘ರಿಕ್ಷಾ ಜಗ್ಗಣ್ಣ’ ಎಂದೇ ಗುರುತಿಸಲ್ಪಟ್ಟಿದ್ದರು.
©2021 Tulunada Surya | Developed by CuriousLabs