ಉಡುಪಿ: ಬಿಜೆಪಿ ಮುಖಂಡ ಮತ್ತು ಕರಾವಳಿ ಬೈಪಾಸ್ ರೋಡ್ ನ ಶಾರದಾ ಇಂಟರ್ನ್ಯಾಶನಲ್ ಹೋಟೆಲ್ ಮಾಲೀಕ ಬಿ ಸುಧಾಕರ ಶೆಟ್ಟಿ ಅವರು ಜ.04 ರ ಗುರುವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸುಧಾಕರ ಶೆಟ್ಟಿ 2013ರಲ್ಲಿ ಬಿಜೆಪಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತಿದ್ದರು. ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.ಪ್ರಗತಿಪರ ಕೃಷಿಕ ಹಾಗೂ ಹೋಟೆಲ್ ಉದ್ಯಮಿಯಾಗಿದ್ದ ಸುಧಾಕರ ಶೆಟ್ಟಿ , ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಮತ್ತು ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
Trending
- ಉಡುಪಿ: ವಕೀಲರ ಸಂಘದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ರೆನಾಲ್ಡ್ ಪ್ರವೀಣ್ ಕುಮಾರ್’ಗೆ ಸತತ ಎರಡನೇ ಬಾರಿ ಗೆಲುವು
- ಸಹಕಾರ ಸಪ್ತಾಹ–2025 : ತೌಳವ ಸಹಕಾರಿ ಮಾಣಿಕ್ಯ ಮತ್ತು ತೌಳವ ಸಹಕಾರಿ ರತ್ನ ಪ್ರಶಸ್ತಿ ಪ್ರದಾನ
- ಕೋಟ: ಶಿರಿಯಾರ ಸೇವಾ ಸಹಕಾರಿ ಸಂಘ ವಂಚನೆ ಪ್ರಕರಣ – ಪ್ರಮುಖ ಆರೋಪಿ ಬಂಧನ
- ಬ್ರಹ್ಮಾವರ: ಶಿರಿಯಾರ ಸೇವಾ ಸಹಕಾರಿ ಸಂಘಕ್ಕೆ ಕೋಟ್ಯಾಂತರ ರೂ. ವಂಚನೆ: ಶಾಖಾ ವ್ಯವಸ್ಥಾಪಕ ಸಹಿತ ಇಬ್ಬರ ವಿರುದ್ಧ ಪ್ರಕರಣ ದಾಖಲು
- ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನಿಧನ
- ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾನ್ಯ ಅಧ್ಯಕ್ಷರಾದ ಎನ್ ರಮೇಶ್ ಶೆಟ್ಟಿ ರವರಿಗೆ ಸಹಕಾರ ರತ್ನ ಪ್ರಶಸ್ತಿ
- ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ ನಿಯಮಿತ : ಅಧ್ಯಕ್ಷರಾಗಿ ಅಶೋಕ್ ಶೆಟ್ಟಿ ಮೈರ್ಮಾಡಿ
- ಮಣಿಪಾಲ ಪಬ್ ಬಳಿ ಮಧ್ಯರಾತ್ರಿ ಗಲಾಟೆ : ಇಬ್ಬರು ಯುವಕ ತಂಡಗಳ ನಡುವೆ ಘರ್ಷಣೆ – ನಾಲ್ವರು ಬಂಧನ
