ಮಂಗಳೂರು : ಕಂಬಳ ಕ್ಷೇತ್ರದ ಸಾಧಕ ಕೋಣಗಳ ಯಜಮಾನರಾದ ಇರುವೈಲು ಪಾಣಿಲ ಬಾಡ ಪೂಜಾರಿ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ಕಂಬಳ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದಿರುವ ಇವರ ನೇತೃತ್ವದಲ್ಲಿ ಕೋಣಗಳು ವಿಶೇಷ ಸಾಧನೆ ಮಾಡಿದ್ದವು. ಅಲ್ಲದೇ ಬಾಡ ಪೂಜಾರಿ ಅವರ ನೇತೃತ್ವದಲ್ಲಿ ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಅಶ್ವಥ್ ಪುರ ಶ್ರೀನಿವಾಸ ಗೌಡ ಕಂಬಳದಲ್ಲಿ ವಿಶ್ವದಾಖಲೆ ಮಾಡಿದ್ದರು. ಇವರ ಕೋಣಗಳು ಅನೇಕ ಪದಕಗಳನ್ನು ಪಡೆದು ಕಂಬಳದ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದ್ದವು.
