ಮಂಗಳೂರು, ಜುಲೈ 7: ಸಮಾಜಮುಖಿ ಚಿಂತನೆ, ಸರಳ ವ್ಯಕ್ತಿತ್ವ ಹಾಗೂ ಮಾನವೀಯ ಮೌಲ್ಯಗಳಿಂದ ಎಲ್ಲರ ಪ್ರೀತಿ ಗಳಿಸಿದ್ದ ದಿವಂಗತ ರತ್ನ ಶೆಟ್ಟಿ ಅವರ ಮೊದಲ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವು ಮಂಗಳೂರಿನ ಮೊರ್ಗನ್ಗೇಟ್ನಲ್ಲಿರುವ ಭಗಿನಿ ಸಮಾಜ ಸಭಾಂಗಣದಲ್ಲಿ ಭಾವಪೂರ್ಣವಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ರತ್ನ ಶೆಟ್ಟಿ ಅವರ ಮಕ್ಕಳು ಸಂತೋಷ್ ಶೆಟ್ಟಿ ಹಾಗೂ ನವೀನ್ ಶೆಟ್ಟಿ, ಸೊಸೆಯರಾದ ಸರಸ್ವತಿ ಮತ್ತು ಗೀತಾ, ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಆಪ್ತ ಮಿತ್ರರು ಭಾಗವಹಿಸಿ, ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ಅವರ ಆತ್ಮಶಾಂತಿಗಾಗಿ ವಿಶೇಷ ಪ್ರಾರ್ಥನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು, ರತ್ನ ಶೆಟ್ಟಿ ಅವರು ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ, ಪ್ರಾಮಾಣಿಕತೆ ಮತ್ತು ಮಾನವೀಯ ಗುಣಗಳಿಂದ ಎಲ್ಲರ ಹೃದಯದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದರು. ಅವರ ಸರಳ ಜೀವನ, ಸಹೃದಯತೆ ಹಾಗೂ ಸಮಾಜದ ಮೇಲಿನ ಕಾಳಜಿ ಸದಾ ಸ್ಮರಣೀಯವಾಗಿರಲಿದೆ. ಅವರ ಆದರ್ಶಗಳು ಮುಂದಿನ ಪೀಳಿಗೆಗೂ ಪ್ರೇರಣೆಯಾಗಲಿ ಹಾಗೂ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ಕುಟುಂಬದ ಸದಸ್ಯರು ರತ್ನ ಶೆಟ್ಟಿ ಅವರೊಂದಿಗಿನ ನೆನಪುಗಳನ್ನು ಹಂಚಿಕೊಂಡು ಭಾವುಕರಾದರು. ಅವರ ಬದುಕಿನ ಮೌಲ್ಯಗಳು, ಕುಟುಂಬದ ಮೇಲಿನ ಪ್ರೀತಿ, ಸ್ನೇಹಿತರೊಂದಿಗೆ ಹೊಂದಿದ್ದ ಆತ್ಮೀಯ ಸಂಬಂಧ ಹಾಗೂ ಸಮಾಜಸೇವೆಯ ಮನೋಭಾವವನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು, ಸಂಬಂಧಿಕರು, ಸ್ನೇಹಿತರು ಹಾಗೂ ಆಹ್ವಾನಿತ ಗಣ್ಯರು ಉಪಸ್ಥಿತರಿದ್ದು, ದಿವಂಗತ ರತ್ನ ಶೆಟ್ಟಿ ಅವರ ಪವಿತ್ರ ಸ್ಮೃತಿಗೆ ಗೌರವ ನಮನ ಸಲ್ಲಿಸಿದರು. ತುಳುನಾಡ ರಕ್ಷಣಾ ವೇದಿಕೆ ಯುವ ಘಟಕ ಅಧ್ಯಕ್ಷ ಹರೀಶ್ ಶೆಟ್ಟಿ ಶಕ್ತಿನಗರ, ಪ್ರಶಾಂತ್ ಭಟ್ ಕಡಬ ಮತ್ತಿತರರು ಉಪಸ್ಥಿತರಿದ್ದರು




