ಮಂಗಳೂರು, ಆ.11: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಸ್ಮರಣೆಯೊಂದಿಗೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಗೌರವಿಸುವ ಉದ್ದೇಶದಿಂದ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರಾಷ್ಟ್ರೀಯ ಸ್ಮಾರಕ ಸಮಿತಿ (ರಿ.), ಮಂಗಳೂರು.ಮತ್ತು ತುಳುನಾಡ ರಕ್ಷಣಾ ವೇದಿಕೆ (ರಿ.), ಮಂಗಳೂರು ಇವರ ಸಹಯೋಗದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಗುವುದು.
ಆಗಸ್ಟ್ 15ರಂದು ಬಾವುಟ ಗುಡಿಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ ರಾಷ್ಟ್ರೀಯ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಪ್ರತಿಮೆಯ ಆವರಣವನ್ನು ತ್ರಿವರ್ಣ ಧ್ವಜಗಳು ಹಾಗೂ ದೇಶಭಕ್ತಿ ಸಾರುವ ಅಲಂಕಾರಗಳಿಂದ ಸಜ್ಜುಗೊಳಿಸಲಾಗುವುದು.
ಕೆದಂಬಾಡಿ ರಾಮಯ್ಯ ಗೌಡರು ಸೇರಿದಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಯುವಜನತೆ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ದೇಶಾಭಿಮಾನಿಗಳು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯಕರ್ತರು, ಯುವಜನತೆ ಹಾಗೂ ತುಳುನಾಡಿನ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹೆಚ್ಚಿಸಬೇಕು.
“ವೀರರ ತ್ಯಾಗವನ್ನು ಸ್ಮರಿಸೋಣ; ದೇಶಭಕ್ತಿಯೊಂದಿಗೆ ಸ್ವಾತಂತ್ರ್ಯೋತ್ಸವ ಆಚರಿಸೋಣ”
ಸ್ಥಳ: ಬಾವುಟ ಗುಡ್ಡ, ಮಂಗಳೂರು
ದಿನಾಂಕ: 15-08-2026
ಸಮಯ: ಬೆಳಗ್ಗೆ 9.30 ಗಂಟೆಗೆ
ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರಾಷ್ಟ್ರೀಯ ಸ್ಮಾರಕ ಸಮಿತಿ (ರಿ.),ಮಂಗಳೂರು ಹಾಗೂ
– ತುಳುನಾಡ ರಕ್ಷಣಾ ವೇದಿಕೆ (ರಿ.), ಮಂಗಳೂರು

