ಕಾರ್ಕಳ: ಕಾರ್ಕಳ ತಾಲೂಕು ಯರ್ಲಪಾಡಿ ಗ್ರಾಪಂ ವ್ಯಾಪ್ತಿಯ ಪರಶುರಾಮ ಥೀಂ ಪಾರ್ಕ್‌ನಲ್ಲಿರುವ ಪರಶು ರಾಮ ಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ, ಮೂರ್ತಿಗೆ ತುಕ್ಕು ನಿರೋಧಕ ಲೇಪನ ಸೇರಿದಂತೆ ಇನ್ನಿತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲ ವಾಗುವಂತೆ ಜೂನ್ 26 ರಿಂದ ಸೆಪ್ಟೆಂಬರ್ ಅಂತ್ಯದವರೆಗೆ ಪರಶುರಾಮ ಥೀಂ ಪಾರ್ಕ್‌ಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ ಎಂದು ಕಾರ್ಕಳ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
©2021 Tulunada Surya | Developed by CuriousLabs