Thursday, October 10, 2024
spot_img
More

    Latest Posts

    ಉಡುಪಿ: ಮಹಿಷಾ ದಸರಾಗೆ ನಿರ್ಬಂಧ – ಜಿಲ್ಲಾಧಿಕಾರಿ ಆದೇಶ

    ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಹಿಷಾ ದಸರಾ ನಡೆಸಲು ಮುಂದಾಗಿರುವವರಿಗೆ ಉಡುಪಿ ಜಿಲ್ಲಾಧಿಕಾರಿ ಶಾಕ್ ಕೊಟ್ಟಿದ್ದು, ಮಹಿಷಾ ದಸರಾಗೆ ಸಂಬಂಧಿಸಿದಂತೆ ಪರ /ವಿರೋಧ ಯಾವುದೇ ರೀತಿಯ ಪ್ರತಿಭಟನ ಮೆರವಣಿಗೆ, ಮತ್ತು ಬ್ಯಾನರ್, ಬಂಟಿಂಗ್ಸ್, ಪೋಸ್ಟರ್ ಗಳನ್ನು ಅಳವಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

    ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದು, ಆದೇಶದ ಪ್ರಕಾರ ದಿನಾಂಕ:14.10.2023 ಮತ್ತು 15.10.2023 ರಂದು ಉಡುಪಿ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸುಗಮ ಸಂಚಾರಕ್ಕೆ ವ್ಯತ್ಯಯ ಉಂಟಾಗುವುದರಿಂದ ಮಹಿಷ ದಸರ ಪರ /ವಿರೋಧ ಯಾವುದೇ ರೀತಿಯ ಪ್ರತಿಭಟನ ಮೆರವಣಿಗೆ, ಮತ್ತು ಬ್ಯಾನರ್, ಬಂಟಿಂಗ್ಸ್, ಪೋಸ್ಟರ್ ಗಳನ್ನು ಅಳವಡಿಸುವುದನ್ನು ನಿಷೇಧಿಸಿದ್ದಾರೆ. ಅಲ್ಲದೆ ಕೆ.ಪಿ. ಆಕ್ಟ್ 1963ರ ಕಲಂ 35 ರಡಿಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ದಿನಾಂಕ: 14.10.2023 ಬೆಳಿಗ್ಗೆ 6.00 ರಿಂದ ಜಾರಿಗೆ ಬರುವಂತೆ ಹಾಗೂ ದಿನಾಂಕ: 15.10.2023 ರ ಸಂಜೆ 06.00 ಗಂಟೆಯವರೆಗೆ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ. ನಿಷೇಧಾಜ್ಞೆಯನ್ನು ಉಲ್ಲಂಘಿಸುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss