ಮಂಗಳೂರು: ಎಸ್ ಡಿಪಿಐ, ನಿಷೇಧಿತ ಪಿಎಫ್ಐ ಸಂಘಟನೆಗಳ ಕಾರ್ಯಕರ್ತರು, ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಮಂಗಳೂರು ನಗರದ ಪಣಂಬೂರು, ಸುರತ್ಕಲ್, ಉಳ್ಳಾಲ, ಮಂಗಳೂರು ಗ್ರಾಮಾಂತರ ಸೇರಿ ಏಳೆಂಟು ಕಡೆಗಳಲ್ಲಿ ದಾಳಿ ನಡೆದಿದೆ. ಈ ದಾಳಿಯಲ್ಲಿ ಐವರು ಪಿಎಫ್ಐ ಕಾರ್ಯಕರ್ತರ ಬಂಧನವಾಗಿದೆ. ಇವರ ಮೇಲೆ UAPA Act, sec121 ಸೇರಿ ವಿವಿಧ ಐಪಿಸಿ ಸಕ್ಷೆನ್ ಅಡಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ರಾಜ್ಯಾದ್ಯಂತ ನಡೆದ ಎನ್ಐಎ, ರಾಜ್ಯ ಪೊಲೀಸ್ ತಂಡ ನಡೆಸಿರುವ ದಾಳಿಯಲ್ಲಿ ಹಲವಾರು ಪಿಎಫ್ಐ ಕಾರ್ಯಕರ್ತರು, ಮುಖಂಡರನ್ನು ಬಂಧಿಸಲಾಗಿತ್ತು. ಅಲ್ಲದೆ ಭಯೋತ್ಪಾದನಾ ಚಟುವಟಿಕೆಗಳಿಗೆ ಸಹಕಾರ ನೀಡುತ್ತಿದ್ದ ಕೃತ್ಯದ ಹಿನ್ನೆಲೆಯಲ್ಲಿ ಪಿಎಫ್ಐ ಹಾಗೂ ಅದರ ಸಹ ಸಂಘಟನೆಗಳ ಮೇಲೆ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆ ನಿಷೇಧಿತ ಸಂಘಟನೆ ಪಿಎಫ್ಐನ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
