ಉಡುಪಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ.28ರ ಶನಿವಾರ ಉಡುಪಿಗೆ ಆಗಮಿಸಿ ನಾಲ್ಕನೇ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಶನಿವಾರ ಬೆಳಗ್ಗೆ 11ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿಗಳು 12ಗಂಟೆಗೆ ಅಲ್ಲಿಂದ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ. ಅಪರಾಹ್ನ 1:00 ಗಂಟೆಗೆ ಉಡುಪಿ ತಲುಪಿ ನೇರವಾಗಿ ಅಜ್ಜರಕಾಡು ಮೈದಾನಕ್ಕೆ ಆಗಮಿಸಿ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಅಲ್ಲಿಯೇ ಜಿಲ್ಲೆಯ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ. ಸಂಜೆ 4ಗಂಟೆಗೆ ಅಜ್ಜರಕಾಡು ಮೈದಾನದಿಂದ ನೇರವಾಗಿ ರಸ್ತೆ ಮೂಲಕ ಮಂಗಳೂರು ವಿಮಾನ ನಿಲ್ದಾಣ ತಲುಪಿ ಅಲ್ಲಿಂದ 5ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.
©2021 Tulunada Surya | Developed by CuriousLabs