ಉಡುಪಿ: ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಂಟ ಸಮುದಾಯ ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮ ಆರಂಭಿಸಿದ್ದಾರೆ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಬಂಟ ಸಮುದಾಯ ವಿಶಿಷ್ಠ ಸಂಸ್ಕೃತಿ, ಪರಂಪರೆ ಹೊಂದಿದೆ. ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಮುಖಂಡರು ವೇದಿಕೆಯಲ್ಲಿದ್ದರು.
©2021 Tulunada Surya | Developed by CuriousLabs