ಬೆಳಗಾವಿ : ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಪರಿಷತ್ತಿನ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.
ಬಸವರಾಜ ಹೊರಟ್ಟಿ ಅವರ ಹಿರಿತನವನ್ನು ಪರಿಗಣಿಸಿ ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳು ಅವರ ವಿರುದ್ಧ ಅಭ್ಯರ್ಥಿಗಳನ್ನು ನಿಲ್ಲಿಸದ ಕಾರಣ ಸುಮಾರು ಮೂರು ದಶಕಗಳ ನಂತರ ಹೊರಟ್ಟಿ ಮೇಲ್ಮನೆ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
ಹೊರಟ್ಟಿ ಅವರು ಜೆಡಿಎಸ್‌ನಿಂದ ಹೊರಬಂದಾಗ ಬಿಜೆಪಿ ಪಕ್ಷವು ಅವರಿಗೆ ಸಭಾಪತಿ ಸ್ಥಾನದ ಭರವಸೆ ನೀಡಿತ್ತು. ಜನತಾ ಪರಿವಾರದಿಂದ ಏಳು ಬಾರಿ ಗೆದ್ದಿರುವ ಅವರು ಅಕ್ಟೋಬರ್ 2022 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮೇಲ್ಮನೆಗೆ ಆಯ್ಕೆಯಾಗಿದ್ದಾರೆ. ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಡಿ.21ರಂದು ಚುನಾವಣೆ ನಡೆಯಲಿದ್ದು, ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿತ್ತು. ಇದರಂತೆ ನಿನ್ನೆ ಮಧ್ಯಾಹ್ನ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ನಾಮಪತ್ರ ಸಲ್ಲಿಕೆ ಮಾಡಿದ್ದರು.
