ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಹಾಗೂ ಪರಿಷತ್ ಸದಸ್ಯ ಸ್ಥಾನಕ್ಕೆ ಬಸವರಾಜ ಹೊರಟ್ಟಿಯವರು ( Speaker Basavaraj Horatti ) ರಾಜೀನಾಮೆ ನೀಡಿದ್ದಾರೆ. ಅಲ್ಲದೇ ನಾಳೆ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳೋದಾಗಿ ತಿಳಿಸಿದ್ದಾರೆ.
ಈ ಕುರಿತಂತೆ ಮಾತನಾಡಿದಂತ ಅವರು, ಸಭಾಪತಿ ಹಾಗೂ ಪರಿಷತ್ ಸದಸ್ಯ ಸ್ಥಾನ ಎರಡಕ್ಕೂ ವಿಧಾನ ಪರಿಷತ್ ಕಾರ್ಯದರ್ಶಿಯವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ. ನಾಳೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳೋದಾಗಿ ತಿಳಿಸಿದ್ದಾರೆ. ಇನ್ನೂ ನಿಯಮದ ಪ್ರಕಾರ ಸಭಾಪತಿ ಸ್ಥಾನಕ್ಕೆ ರಾಜೀನಾಮೆಯನ್ನು ಉಪ ಸಭಾಪತಿಗಳಿಗೆ ಸಲ್ಲಿಸಬೇಕು. ಆದ್ರೇ ಉಪ ಸಭಾಪತಿ ಸ್ಥಾನ ಖಾಲಿ ಇದ್ದ ಕಾರಣದಿಂದಾಗಿ, ಸಭಾಪತಿ ಬಸವರಾಜ ಹೊರಟ್ಟಿಯವರು ಪರಿಷತ್ ಕಾರ್ಯದರ್ಶಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಅಂದಹಾಗೇ ಇತ್ತೀಚಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರು ಭೇಟಿಯ ಸಂದರ್ಭದಲ್ಲಿ, ಬಿಜೆಪಿ ಸೇರ್ಪಡೆ ಫೈನಲ್ ಆಗಿತ್ತು. ಇದೀಗ ನಾಳೆ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸಭಾಪತಿ ಬಸವರಾಜ ಹೊರಟ್ಟಿಯವರು ಸೇರ್ಪಡೆಗೊಳ್ಳಲಿದ್ದಾರೆ.

