ಬೆಂಗಳೂರು: ಮಾಜಿ ಸಭಾಪತಿ ಬಸವರಾಜ ಹೊರಟ್ಟಿಯವರು ( Basavaraj Horatti ) ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ( BJP Party ) ಅಧಿಕೃತವಾಗಿ ಸೇರ್ಪಡೆಗೊಂಡರು.
ಎರಡು ದಿನಗಳ ಹಿಂದೆ ವಿಧಾನ ಪರಿಷತ್ ಸದಸ್ಯ ಸ್ಥಾನ ಹಾಗೂ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿಯವರು ರಾಜೀನಾಮೆ ನೀಡಿದ್ದರು. ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿ, ಬಿಜೆಪಿ ಸೇರ್ಪಡೆಯಾಗೋದಾಗಿಯೂ ತಿಳಿಸಿದ್ದರು.
ಇಂದು ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿದಂತ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಭಾವುಟವನ್ನು ಹಿಡಿಯುವ ಮೂಲಕ ಸೇರ್ಪಡೆಗೊಂಡರು.
ಈ ವೇಳೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಆರ್ ಅಶೋಕ್, ಗೋವಿಂದ ಕಾರಜೋಳ, ಗೃಹ ಸಚಿವ ಅರಗ ಜ್ಞಾನೇಂದ್ರ, ಶಾಸಕ ಎಂ.ಪಿ ರೇಣುಕಾಚಾರ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

