Saturday, July 27, 2024
spot_img
More

    Latest Posts

    ಖಾಸಗಿ ಆಸ್ಪತ್ರೆಗಳು ಕೋವಿಡ್‌ ರೋಗಿಗಳನ್ನು ನಿರಾಕರಿಸಿದರೆ ಕಠಿಣ ಕ್ರಮ: ಡಾ.ಕೆ.ಸುಧಾಕರ್‌

    ಬೆಂಗಳೂರು : ರಾಜ್ಯದಲ್ಲಿ ಕೋವಿಡ್‌ ಮೂರನೇ ಡೋಸ್‌ ಲಸಿಕೆಯನ್ನು 17% ರಷ್ಟು ಮಂದಿ ಮಾತ್ರ ಪಡೆದಿದ್ದಾರೆ. ಉಚಿತವಾಗಿ ನೀಡುತ್ತಿದ್ದರೂ ಲಸಿಕೆ ಪಡೆಯದಿರುವುದು ತೀವ್ರ ಬೇಸರದ ಸಂಗತಿ. ಉತ್ತಮ ಆರೋಗ್ಯಕ್ಕಾಗಿ ಅರ್ಹರೆಲ್ಲರೂ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಮನವಿ ಮಾಡಿದ್ದಾರೆ.

    ವಿಧಾನಸೌಧದಲ್ಲಿ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿ, ಮೊದಲ ಹಾಗೂ ಎರಡನೇ ಡೋಸ್‌ ಲಸಿಕಾಕರಣ ಪ್ರಮಾಣ 100% ದಾಟಿದ್ದರೂ, ಮೂರನೇ ಡೋಸ್‌ನ ಲಸಿಕಾಕರಣ 17% ರಷ್ಟು ಮಾತ್ರ ಆಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಡೋಸ್‌ ಕೂಡ ಉಚಿತವಾಗಿ ನೀಡಲು ಕ್ರಮ ವಹಿಸಿದ್ದಾರೆ. ಆದರೂ ಈ ಡೋಸ್‌ ಪಡೆದವರ ಪ್ರಮಾಣ ಕಡಿಮೆ ಇದೆ. ಲಕ್ಷಾಂತರ ಲಸಿಕೆ ಡೋಸ್‌ ಲಭ್ಯವಿದ್ದರೂ ಜನರು ಮುಂದೆ ಬಾರದಿರುವುದು ಬೇಸರ ತಂದಿದೆ. ಲಸಿಕೆ ಪಡೆದವರಲ್ಲಿ 6-7 ತಿಂಗಳ ನಂತರ ರೋಗ ನಿರೋಧಕ ಶಕ್ತಿ ಕ್ಷೀಣಿಸುವುದರಿಂದ ಮೂರನೇ ಡೋಸ್‌ ನೀಡಲಾಗುತ್ತಿದೆ. ಮೂರನೇ ಡೋಸ್‌ ಪಡೆದರೆ ಕೋವಿಡ್‌ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತದೆ. ಆಸ್ಪತ್ರೆಗೆ ದಾಖಲಾದರೂ ಸಾವು ಸಂಭವಿಸುವ ಸ್ಥಿತಿ ಸೃಷ್ಟಿಯಾಗುವುದಿಲ್ಲ ಎಂದು ತಿಳಿಸಿದರು.

    ರಾಜ್ಯದಲ್ಲಿ ಈ ತಿಂಗಳ 10 ರವರೆಗೂ 24 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು 60 ವರ್ಷ ವಯಸ್ಸು ಮೇಲ್ಪಟ್ಟವರಾಗಿದ್ದಾರೆ. ಯುವಜನರು ಲಸಿಕೆ ಪಡೆಯುವುದರೊಂದಿಗೆ ತಮ್ಮ ಮನೆಯ ಹಿರಿಯರಿಗೂ ಕೊಡಿಸಬೇಕು ಎಂದು ಮನವಿ ಮಾಡಿದರು.

    ರಾಜ್ಯದಲ್ಲಿ 7.2% ಕೋವಿಡ್‌ ಪಾಸಿಟಿವಿಟಿ ದರ ಇದೆ. ಆದರೆ ಕೆಲ ಜಿಲ್ಲೆಗಳಲ್ಲಿ ರಾಜ್ಯದ ಪಾಸಿಟಿವಿಟಿ ದರಕ್ಕಿಂತ ಹೆಚ್ಚು ದರ ದಾಖಲಾಗಿದೆ. ಧಾರವಾಡದಲ್ಲಿ ಅತಿ ಹೆಚ್ಚು ದಾಖಲಾಗಿದೆ. ರಾಜ್ಯದಲ್ಲಿ ಪ್ರತಿ ದಿನ 30 ಸಾವಿರ ಮಾದರಿಗಳನ್ನು ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಕೇಂದ್ರದ ಮಾರ್ಗಸೂಚಿಯಂತೆ, ರೋಗ ಲಕ್ಷಣ ಇರುವವರಿಗೆ ಪರೀಕ್ಷೆ ಮಾಡಲಾಗುತ್ತಿದೆ ಎಂದು ವಿವರಿಸಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss