ಮೇ 18ರ ಮಧ್ಯಾಹ್ನ 3.30 ಕ್ಕೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಯಾರಿ ನಡೆಯುತ್ತಿದೆ. ನಾಳೆ ತಪ್ಪಿದರೆ ಶನಿವಾರ ಕಾರ್ಯಕ್ರಮ ನಿಗದಿ ಮಾಡುವ ಬಗ್ಗೆ ಕಾಂಗ್ರೆಸ್ ನಲ್ಲಿ ಚರ್ಚೆಗಳಾಗುತ್ತಿವೆ. ಶುಕ್ರವಾರ ಅಮಾವಾಸ್ಯೆ ಇರುವ ಹಿನ್ನಲೆ ಪ್ರಮಾಣ ವಚನ ಬೇಡ ಎಂಬ ಬಗ್ಗೆ ಕೆಲವರು ಸಲಹೆ ನೀಡಿದ್ದಾರೆ.
ಈಗಾಗಲೇ ತಯಾರಿ ಬಗ್ಗೆ ನಾಯಕರಿಂದ ಸೂಚನೆ ನೀಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.
ರಾಜ್ಯದ ಸಿಎಂ ಸಿದ್ದರಾಮಯ್ಯ ಅವರೇ ಆಗೋದು ಪಕ್ಕಾ ಆಗಿದೆ.ಹೀಗಾಗಿ ನಾಳೆಯೇ ಪ್ರಮಾಣವಚನ ಸ್ವೀಕರಿಸೋಕೆ ಫ್ಲಾನ್ ರೂಪಿಸಿ ದ್ದಾರೆ.. ವಿಧಾನಸೌಧ ಮುಂಭಾಗ ಅಥವಾ ಕಂಠೀರವ ಕ್ರೀಡಾಂಗಣ ದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.ಕಂಠೀರವ ಕ್ರೀಡಾಂಗಣ ದಲ್ಲೇ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.