ದಕ್ಷಿಣಕನ್ನಡ : ಕಳೆದೆರಡು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಸುಳ್ಯ ತಾಲೂಕಿನ ಜಾಲ್ಸೂರು ಜನವಸತಿ ಪ್ರದೇಶದಲ್ಲಿ ಗುಡ್ಡ ಕುಸಿತಗೊಂಡಿದೆ.
ನಗರದ ಕಮರ್ಷಿಯಲ್ ಕಾಂಪ್ಲೆಕ್ಸ್ ಪಕ್ಕದಲ್ಲಿಗುಡ್ಡ ಕುಸಿತಗೊಂಡಿದ್ದು ಭಾರೀ ಆತಂಕಕ್ಕೆ ಕಾರಣವಾಗಿದೆ. ಇನ್ನು ಕಟೀಲು ಸಮೀಪ ನಂದಿನಿ ನದಿಯೂ ಅಪಾಯದ ಮಟ್ಟು ಮೀರಿ ಹರಿಯುತ್ತಿದೆ. ಈಗಾಗಲೇ ಸ್ಥಳೀಯ ಜನರಿಗೆ ಎಚ್ಚರಿಕೆಗಳನ್ನು ನೀಡಲಾಗಿದೆ.
