ಬಂಟ್ವಾಳ: ಜಲ್ಲಿಕಲ್ಲು ಸಾಗಿಸುವ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ.
ಸಜೀಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ ಅವರ ಹಿರಿಯ ಮಗ ರಾಜ್ ಕುಮಾರ್ ಅವರು ಮೃತಪಟ್ಟ ದುರ್ದೈವಿ.ರಾಜ್ ಕುಮಾರ್ ಅವರು ವಾಮದಪದವು ಎಂಬಲ್ಲಿ ಜಾಗ ಖರೀದಿ ಮಾಡಿದ್ದು,ಕೃಷಿ ಮಾಡಿಕೊಂಡಿದ್ದರು. ವಾಮದಪದವಿನ ಮನೆಯಿಂದ ಸಜೀಪ ಮೂಲ ಮನೆಗೆ ಬರುವ ವೇಳೆ ಎದುರಿನಿಂದ ಬಂದ ಪವಿತ್ರ ಕನ್ಸ್ ಟ್ರಕ್ಷನ್ ಗೆ ಸೇರಿದ ಲಾರಿ ಢಿಕ್ಕಿಯಾಗಿದೆ.ಢಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.