Tuesday, October 22, 2024
spot_img
More

    Latest Posts

    ಮುಂದಿನ 24 ಗಂಟೆಗಳಲ್ಲಿ ಬಿಪೊರ್ ಜಾಯ್ ಚಂಡಮಾರುತ ತೀವ್ರ, ಕರ್ನಾಟಕ ಸೇರಿ 3 ರಾಜ್ಯಗಳಿಗೆ ಕಟ್ಟೆಚ್ಚರ

    ನವದೆಹಲಿ: ‘ಬಿಪೊರ್ಜೋಯ್’ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ.ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ ಮತ್ತು ಪೋರಬಂದರ್ನಿಂದ ನೈಋತ್ಯಕ್ಕೆ 640 ಕಿಮೀ ದೂರದಲ್ಲಿ ನೆಲೆಸಿರುವ ಚಂಡಮಾರುತವು ಗಂಟೆಗೆ 145 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಮೂರು ರಾಜ್ಯಗಳಲ್ಲಿ ಭಾರೀ ಮಳೆ, ಎಚ್ಚರಿಕೆ: ಚಂಡಮಾರುತವು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯನ್ನು ಉಂಟುಮಾಡಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಗುಜರಾತ್, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಕೇರಳದ ಎಂಟು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss