ಪುತ್ತೂರು: ಖಾಸಗಿ ಪ್ಯಾರಾಮೆಡಿಕಲ್ ಶಿಕ್ಷಣ ಸಂಸ್ಥೆಯೊಂದರ ಹಿಂದು ಮತ್ತು ಮುಸ್ಲಿಂ ವಿದ್ಯಾರ್ಥಿಯ ಬರ್ತ್ ಡೇ ಪಾರ್ಟಿಯಲ್ಲಿ ಹಿಂದು ವಿದ್ಯಾರ್ಥಿನಿಯರು ಇರುವ ವಿಡಿಯೋ ಟ್ರೊಲ್ ಪೇಜ್ ನಲ್ಲಿ ವೈರಲ್ ಆಗಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯರು ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.
ಬರ್ತ್ ಡೇ ಪಾರ್ಟಿ ವಾರದ ಹಿಂದೆ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿತ್ತು. ಈ ಕುರಿತು ಹಿಂದು ಸಂಘಟನೆ ಆಕ್ರೋಶ ವ್ಯಕ್ತಪಡಿಸಿ ಶಿಕ್ಷಣ ಸಂಸ್ಥೆಗೆ ಮಾಹಿತಿ ನೀಡಿದ್ದರು. ಬಳಿಕ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಯಿಂದ ಎಚ್ಚರಿಕೆ ನೀಡಲಾಗಿತ್ತು. ಆದರೆ ಇದೀಗ ಬರ್ತಡೇ ಪಾರ್ಟಿ ಯ ವಿಡಿಯೋ ವೈರಲ್ ಆಗಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯರು ದೂರು ನೀಡಿರುವುದಾಗಿ ತಿಳಿದು ಬಂದಿದೆ.