Saturday, October 12, 2024
spot_img
More

    Latest Posts

    ಮಂಗಳೂರು: ಲೋನ್ ಆ್ಯಪ್ ನ ಬ್ಲ್ಯಾಕ್ ಮೇಲ್ – ನಗ್ನ ಚಿತ್ರ ವೈರಲ್ ಮಾಡುವುದಾಗಿ ಬೆದರಿಕೆ

    ಮಂಗಳೂರು: ಆ್ಯಪ್ ಮೂಲಕ ಸಾಲ ಪಡೆದ ಯುವತಿಯಿಂದ ಹೆಚ್ಚಿನ ಹಣಕ್ಕೆ ಬೇಡಿಕೆ ಸಲ್ಲಿಸಿ ನಗ್ನ ಚಿತ್ರ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಯುವತಿ ಎ.15ರಂದು ಗೂಗಲ್ ಪ್ಲೇ ಸ್ಟೋರ್‌ನಿಂದ ‘ಕ್ವಿಕ್ ಮನಿ’ ಎಂಬ ಲೋನ್ ಆ್ಯಪ್ ಡೌನ್‌ಲೋಡ್ ಮಾಡಿ 10,000 ರೂ. ಸಾಲಕ್ಕೆ ಅರ್ಜಿ ಹಾಕಿದ್ದಳು . ತಕ್ಷಣ ಆಕೆಯ ಖಾತೆಗೆ 7,500 ರೂ. ಜಮೆಯಾಗಿತ್ತು. ಕೆಲವು ದಿನಗಳ ಬಳಿಕ ಸಾಲ ಮರುಪಾವತಿ ಮಾಡಿದ್ದಳು. ಬಳಿಕ ಹಲವು ವಾಟ್ಸ್‌ಆ್ಯಪ್ ಸಂಖ್ಯೆಗಳಿಂದ ಕರೆ ಮಾಡಿದ ಅಪರಿಚಿತರು ಪುನಃ ಸಾಲ ಪಡೆಯಬೇಕು ಎಂದು ಒತ್ತಾಯಿಸಿದರಲ್ಲದೆ ಆಕೆಯ ಖಾತೆಗೆ 14,000 ರೂ. ಜಮೆ ಮಾಡಿದ್ದರು. ಅದನ್ನು ಕೂಡ ತಾನು ಮರುಪಾವತಿ ಮಾಡಿದ್ದಳು.ಇದಾದ ನಂತರವೂ ಕರೆ ಮಾಡಿದ ಅಪರಿಚಿತರು ಹೆಚ್ಚಿನ ಹಣ ಪಾವತಿ ಮಾಡುವಂತೆ ಒತ್ತಾಯಿಸಿದರಲ್ಲದೆ ಆಕೆಯ ಖಾತೆಯಲ್ಲಿದ್ದ ಖಾತೆಯಿಂದ 51,000 ರೂ. ವರ್ಗಾಯಿಸಿಕೊಂಡರು. ಅಲ್ಲದೆ ಮತ್ತಷ್ಟು ಹಣ ನೀಡುವಂತೆ ಒತ್ತಾಯಿಸಿದರು.ಒಂದು ವೇಳೆ ಹಣ ನೀಡದಿದ್ದರೆ ಆಕೆಯ ಫೋಟೊವನ್ನು ಹುಡುಗನೊಂದಿಗೆ ನಗ್ನವಾಗಿ ಇರುವಂತೆ ಎಡಿಟ್ ಮಾಡಿ ನಿನ್ನ ಸ್ನೇಹಿತರು, ಸಂಬಂಧಿಕರಿಗೆ ಕಳುಹಿಸುವುದಾಗಿ, ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದು ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss